Umesh Katti dies of heart attack : ಸಚಿವ ಉಮೇಶ್ ಕತ್ತಿ ವಿಧಿವಶ; ತೀವ್ರ ಹೃದಯಾಘಾತ ಕಾರಣ
ಕರ್ನಾಟಕ ಅರಣ್ಯ ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ ಕತ್ತಿ ಅವರಿಗೆ ಮಂಗಳವಾರ ರಾತ್ರಿ ತೀವ್ರ ಹೃದಯಾಘಾತವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾದರು. ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಕೊನೆಯ ಕ್ಷಣದ ಚಿಕಿತ್ಸೆಯನ್ನು ನೀಡಲಾಗಿತ್ತು.
ಬೆಂಗಳೂರು: ಸಚಿವ ಉಮೇಶ್ ಕತ್ತಿ ಹೃದಯಾಘಾತಕ್ಕೆ ಒಳಗಾಗಿ ಮಂಗಳವಾರ ರಾತ್ರಿ ವಿಧಿವಶರಾದರು.
ಕರ್ನಾಟಕ ಅರಣ್ಯ ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ ಕತ್ತಿ ಅವರಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಡಾಲರ್ಸ್ ಕಾಲನಿಯ ನಿವಾಸದಲ್ಲಿದ್ದಾಗ ಹೃದಯಾಘಾತ ಸಂಭವಿಸಿದೆ. ರಾತ್ರಿ ಹತ್ತು ಗಂಟೆಗೆ ಎದೆನೋವು ಕಾಣಿಸಿಕೊಂಡು, ಹೃದಯಾಘಾತ ಆಗಿತ್ತು. ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಈ ರೀತಿ ಆಗಿತ್ತು.
ನಿನ್ನೆ ಹುಕ್ಕೇರಿಯಿಂದ ಬಂದಿದ್ದ ಉಮೇಶ್ ಕತ್ತಿ ಅವರು, ಇಂದು ಇಲಾಖೆಯ ವಿವಿಧ ಸಭೆಗಳನ್ನು ಅಟೆಂಡ್ ಮಾಡಿದ್ದರು. ಊಟದ ಬಳಿಕ ಮನೆಯಲ್ಲಿ ಬಾತ್‌ರೂಮ್‌ಗೆ ಹೋಗಿದ್ದ ಉಮೇಶ್ ಕತ್ತಿ ಅವರು ಕೆಲ ಹೊತ್ತಾದರೂ ವಾಪಸ್ ಬಂದಿರಲಿಲ್ಲ. ಸಂದೇಹ ಗೊಂಡು ಬಾತ್ ರೂಮ್ ಪರಿಶೀಲಿಸಿದಾಗ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿರುವುದು ಕಂಡುಬಂದಿತ್ತು. ಕುಸಿದು ಬಿದ್ದ ಸ್ಥಿತಿಯಲ್ಲಿದ್ದ ಅವರನ್ನು ಕೂಡಲೇ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ, ಅವರಿಗೆ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿದ್ದು, ಚಿಕಿತ್ಸೆ ಫಲಕಾರಿ ಆಗದೇ ಅವರು ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ವಿಶ್ವನಾಥ ಕತ್ತಿ ಅವರಿಗೂ ಹೃದಯಾಘಾತವಾಗಿತ್ತು…!
ಉಮೇಶ್ ಕತ್ತಿ ಅವರ ತಂದೆ, ವಿಶ್ವನಾಥ ಕತ್ತಿ ಅವರು ಕೂಡ ವಿಧಾನಸಭಾ ಕಲಾಪ ನಡೆಯುತ್ತಿದ್ದಾಗಲೇ ಹೃದಯಾಘಾತವಾಗಿ ವಿಶ್ವನಾಥ ಕತ್ತಿಯವರೂ ಮೃತಪಟ್ಟಿದ್ದರು. ಅವರಿಂದ ತೆರವಾದ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆಯಲ್ಲಿ ಅತ್ಯಂತ ಕಿರಿಯ ವಯಸ್ಸಿನಲ್ಲಿ ಗೆದ್ದು ವಿಧಾನಸಭೆ ಪ್ರವೇಶಿಸಿದವರು ಉಮೇಶ್ ಕತ್ತಿ. ಒಂದು ಸಲ ಮಾತ್ರ ಹುಕ್ಕೇರಿಯಲ್ಲಿ ಸೋಲನುಭವಿಸಿದ್ದರು. ಎಂಟು ಸಲ ಶಾಸಕರಾಗಿದ್ದ ಉಮೇಶ್ ಕತ್ತಿ ಅವರು, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಬಿ.ಎಸ್.ಯಡಿಯೂರಪ್ಪ ಸಚಿವ ಸಂಪುಟದಲ್ಲೂ ಸಚಿವರಾಗಿದ್ದರು.
ಇದನ್ನೂ ಓದಿ - Minister Umesh Katti: ಕರ್ನಾಟಕ ಅರಣ್ಯ ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ ಕತ್ತಿ ಅವರಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. Heart Attack to Minister Umesh Katti- ಸಚಿವ ಉಮೇಶ್ ಕತ್ತಿಗೆ ಹೃದಯಾಘಾತ; ಆಸ್ಪತ್ರೆಗೆ