ಕನ್ನಡ ಸುದ್ದಿ  /  Karnataka  /  Money Laundering Case Karnataka Congress Mla Zameer Ahmed Appears Before Ed

Money laundering case: ಅಕ್ರಮ ಹಣ ವರ್ಗಾವಣೆ ಕೇಸ್;‌ ED ದೆಹಲಿ ಕಚೇರಿಗೆ ಹಾಜರಾದ ಜಮೀರ್‌ ಅಹ್ಮದ್

Money laundering case:‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕದ ಕಾಂಗ್ರೆಸ್ ಶಾಸಕ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಗುರುವಾರ ಜಾರಿ ನಿರ್ದೇಶನಾಲಯ(ಇಡಿ) ದೆಹಲಿ ಕಚೇರಿಗೆ ಹಾಜರಾಗಿದ್ದರು.

ಮಾಜಿ ಸಚಿವ, ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್​ ಶಾಸಕ ಜಮೀರ್‌ ಅಹ್ಮದ್‌ ಖಾನ್​
ಮಾಜಿ ಸಚಿವ, ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್​ ಶಾಸಕ ಜಮೀರ್‌ ಅಹ್ಮದ್‌ ಖಾನ್​

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಕಾಂಗ್ರೆಸ್ ಶಾಸಕ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಗುರುವಾರ ಜಾರಿ ನಿರ್ದೇಶನಾಲಯ(ಇಡಿ) ದೆಹಲಿ ಕಚೇರಿಯಲ್ಲಿ ಹಾಜರಾಗಿದ್ದರು.

ಕಳೆದ ವರ್ಷ, ಕಾಂಗ್ರೆಸ್ ಶಾಸಕರ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದ ಇಡಿ ವರದಿಯ ಆಧಾರದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶಾಸಕರಿಗೆ ಸೇರಿದ ಐದು ಸ್ಥಳಗಳಲ್ಲಿ ಶೋಧ ನಡೆಸಿತ್ತು.

ಬೆಂಗಳೂರು ಚಾಮರಾಜಪೇಟೆ ಕ್ಷೇತ್ರದ ಶಾಸಕರ ಕಂಟೋನ್ಮೆಂಟ್‌ನಲ್ಲಿರುವ ನಿವಾಸ, ಸಿಲ್ವರ್ ಓಕ್ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲ್ಯಾಟ್, ಸದಾಶಿವನಗರದ ಅತಿಥಿಗೃಹ, ಬನಶಂಕರಿಯಲ್ಲಿರುವ ಜಿಕೆ ಅಸೋಸಿಯೇಟ್ಸ್ ಕಚೇರಿ ಮತ್ತು ಕಲಾಸಿಪಾಳ್ಯದ ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಸೇರಿ ಐದು ಸ್ಥಳಗಳಲ್ಲಿ ಎಸಿಬಿ ದಾಳಿ ನಡೆಸಿತ್ತು.

ಜಮೀರ್‌ ಅಹ್ಮದ್‌ ಖಾನ್ ಮಾಜಿ ಸಚಿವರೂ ಆಗಿದ್ದು, ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಆಪ್ತ ಕೂಡ ಆಗಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಮತ್ತು ಐಎಂಎ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಅವರ ಮನೆ ಮೇಲೆ ಇಡಿ ದಾಳಿ ನಡೆಸಿತ್ತು.

ಐಎಂಎ ಹಗರಣದಲ್ಲಿ 40,000 ಹೂಡಿಕೆದಾರರನ್ನು ಕಂಪನಿ ಸಂಸ್ಥಾಪಕ ಮೊಹಮ್ಮದ್ ಮನ್ಸೂರ್ ಖಾನ್ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದೇ ಮನ್ಸೂರ್‌ ಬಳಿ ಜಮೀರ್‌ ಅಕ್ರಮ ಸವಲತ್ತು ಪಡೆದಿದ್ದ ಮತ್ತು ಅಕ್ರಮ ವಹಿವಾಟುಗಳನ್ನು ನಡೆಸಿದ್ದ ಆರೋಪವೂ ಇದೆ.
ಕೆಲವು ರಾಜಕಾರಣಿಗಳು ಮತ್ತು ಗೂಂಡಾಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪ್ರಧಾನ ಆರೋಪಿ ಮನ್ಸೂರ್ ಬೆದರಿಕೆ ಹಾಕಿದ ಆಡಿಯೋ ವೈರಲ್‌ ಆಗಿತ್ತು. ಆತ 2019ರ ಜೂನ್‌ನಲ್ಲಿ ದೇಶ ಬಿಟ್ಟು ಪಲಾಯನ ಮಾಡಿದ್ದ.

ಗಮನಿಸಬಹುದಾದ ಸುದ್ದಿಗಳು

ಗಣಿ ಪರಿಸರ ಪುನರುಜ್ಜೀವನ ನಿಗಮಕ್ಕೆ ಹೆಚ್ಚಿನ ಅಧಿಕಾರ; ಗಣಿಬಾಧಿತ ಪ್ರದೇಶ ಅಭಿವೃದ್ಧಿಗೆ 24000 ಕೋಟಿ ರೂ.

ಗಣಿಬಾಧಿತ ಪ್ರದೇಶಗಳ ಪುನರುಜ್ಜಿವನಕ್ಕಾಗಿ ದಿಟ್ಟ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಪ್ರದೇಶದ ಅಭಿವೃದ್ಧಿಗೆ ಅಂದಾಜು 24,000 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವನೆಯನ್ನು ಸಚಿವ ಸಂಪುಟ ಸಭೆ ಅನುಮೋದಿಸಿದೆ. ಅದೇ ರೀತಿ, ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮ ತಿದ್ದುಪಡಿ-2023ಕ್ಕೆ ಸಂಬಂಧಿಸಿ ಮಹತ್ವದ ನಿರ್ಧಾರವನ್ನೂ ಸಚಿವ ಸಂಪುಟ ತೆಗೆದುಕೊಂಡಿದೆ. ಪೂರ್ಣ ವರದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ಎರಡನೇ ಪತ್ನಿಯೂ ನಿಮ್ಮ ಮೊದಲ ಪತ್ನಿ‌ ಜತೆಗೆ ಒಂದೇ ಮನೆಯಲ್ಲಿದರೆ ಕಷ್ಟ; 2ನೇ ಪತ್ನಿಗೆ ಬೇರೆ ವಸತಿ ವ್ಯವಸ್ಥೆ ಮಾಡಿಕೊಡಿ-ಕೋರ್ಟ್‌

ಎರಡನೇ ಪತ್ನಿಯೂ ನಿಮ್ಮ ಮೊದಲ ಪತ್ನಿಯ ಜತೆಗೆ ಒಂದೇ ಮನೆಯಲ್ಲಿದ್ದರೆ ಕಷ್ಟವಾದೀತು. ಸಿವಿಲ್ ಮತ್ತು ಕ್ರಿಮಿನಲ್ ವ್ಯಾಜ್ಯಕ್ಕೂ ಕಾರಣವಾದೀತು. ಆದ್ದರಿಂದ ಎರಡನೇ ಪತ್ನಿಗೆ ಪ್ರತ್ಯೇಕ ವಸತಿ ವ್ಯವಸ್ಥೆ ಮಾಡಿಕೊಡಬೇಕು. ಅದಕ್ಕಾಗಿ ಆಕೆಗೆ ಪ್ರತಿ ತಿಂಗಳು 5,000 ರೂಪಾಯಿ ನೀಡಬೇಕು ಎಂದು ರಾಜ್ಯ ಹೈಕೋರ್ಟ್‌ ತೀರ್ಪು ನೀಡಿದೆ. ವಿವರ ಓದಿಗೆ ಇಲ್ಲಿ ಕ್ಲಿಕ್‌ ಮಾಡಿ

ಶ್ರೀಕೃಷ್ಣ ಮಠಕ್ಕೆ ಮುಸ್ಲಿಂ ರಾಜ ಭೂಮಿ ಕೊಟ್ಟದ್ದು ನಿಜವಾ? ಯಾರು ಏನು ಹೇಳಿದ್ದಾರೆ?

Explainer Congress sparks row: ಉಡುಪಿ ಕೃಷ್ಣಮಠಕ್ಕೆ ಮುಸ್ಲಿಂ ರಾಜ ಜಮೀನು ಕೊಟ್ಟಿದ್ದ ಎಂಬ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ. ಶ್ರೀಕೃಷ್ಣ ಮಠಕ್ಕೆ ಮುಸ್ಲಿಂ ರಾಜ ಭೂಮಿ ಕೊಟ್ಟದ್ದು ನಿಜವಾ? ಯಾರು ಏನು ಹೇಳಿದ್ದಾರೆ? ಏನಿದು ವಿವಾದ- ಇಲ್ಲಿದೆ ವಿವರ.

IPL_Entry_Point