MUDA Scam: ಸಿಎಂ ಸಿದ್ದರಾಮಯ್ಯಗೆ ಸದ್ಯಕ್ಕೆ ರಿಲೀಫ್‌, ಮುಡಾ ಕೇಸ್ ತನಿಖೆ ಸಿಬಿಐಗೆ ನೀಡಬೇಕೆಂಬ ದಾವೆ ವಿಚಾರಣೆ 27ಕ್ಕೆ ಮುಂದೂಡಿದ ಹೈಕೋರ್ಟ್‌
ಕನ್ನಡ ಸುದ್ದಿ  /  ಕರ್ನಾಟಕ  /  Muda Scam: ಸಿಎಂ ಸಿದ್ದರಾಮಯ್ಯಗೆ ಸದ್ಯಕ್ಕೆ ರಿಲೀಫ್‌, ಮುಡಾ ಕೇಸ್ ತನಿಖೆ ಸಿಬಿಐಗೆ ನೀಡಬೇಕೆಂಬ ದಾವೆ ವಿಚಾರಣೆ 27ಕ್ಕೆ ಮುಂದೂಡಿದ ಹೈಕೋರ್ಟ್‌

MUDA Scam: ಸಿಎಂ ಸಿದ್ದರಾಮಯ್ಯಗೆ ಸದ್ಯಕ್ಕೆ ರಿಲೀಫ್‌, ಮುಡಾ ಕೇಸ್ ತನಿಖೆ ಸಿಬಿಐಗೆ ನೀಡಬೇಕೆಂಬ ದಾವೆ ವಿಚಾರಣೆ 27ಕ್ಕೆ ಮುಂದೂಡಿದ ಹೈಕೋರ್ಟ್‌

MUDA Scam: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜಕೀಯ ಸಂಕಷ್ಟವನ್ನು ತಂದೊಡ್ಡಿರುವ ಮುಡಾ ಸೈಟು ಹಂಚಿಕೆ ಅಕ್ರಮ ಕೇಸ್‌ನಲ್ಲಿ ಇಂದು ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಮುಡಾ ಕೇಸ್ ತನಿಖೆ ಸಿಬಿಐಗೆ ನೀಡಬೇಕೆಂಬ ದಾವೆಯ ವಿಚಾರಣೆಯನ್ನು ಹೈಕೋರ್ಟ್‌ ಜನವರಿ 27ಕ್ಕೆ ಮುಂದೂಡಿದೆ.

ಮುಡಾ ಕೇಸ್ ತನಿಖೆ ಸಿಬಿಐಗೆ ನೀಡಬೇಕೆಂಬ ದಾವೆ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಜನವರಿ 27ಕ್ಕೆ ಮುಂದೂಡಿದೆ. ಇದರಿಂದಾಗಿ, ಸಿಎಂ ಸಿದ್ದರಾಮಯ್ಯಗೆ ಸದ್ಯಕ್ಕೆ ರಿಲೀಫ್‌ ಸಿಕ್ಕಂತಾಗಿದೆ.
ಮುಡಾ ಕೇಸ್ ತನಿಖೆ ಸಿಬಿಐಗೆ ನೀಡಬೇಕೆಂಬ ದಾವೆ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಜನವರಿ 27ಕ್ಕೆ ಮುಂದೂಡಿದೆ. ಇದರಿಂದಾಗಿ, ಸಿಎಂ ಸಿದ್ದರಾಮಯ್ಯಗೆ ಸದ್ಯಕ್ಕೆ ರಿಲೀಫ್‌ ಸಿಕ್ಕಂತಾಗಿದೆ.

MUDA Scam: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟು ಹಂಚಿಕೆ ಅಕ್ರಮಕ್ಕೆ ಸಂಬಂಧಿಸಿದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂಬ ದಾವೆಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಜನವರಿ 27ಕ್ಕೆ ಮುಂದೂಡಿದೆ. ರಾಜ್ಯ ಸರ್ಕಾರದ ಪರ ವಕೀಲ ಕಪಿಲ್ ಸಿಬಲ್ ಅವರು ದಾವೆ ವಿಚಾರಣೆಗೆ ಅಗತ್ಯ ದಾಖಲೆ ಒದಗಿಸುವುದಕ್ಕೆ ಸಮಯಾವಕಾಶ ಕೋರಿ ಜನವರಿ 27ಕ್ಕೆ ವಿಚಾರಣೆ ಮುಂದೂಡುವಂತೆ ಮನವಿ ಮಾಡಿದ್ದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ವಿಚಾರಣೆಯನ್ನು ಜನವರಿ 27ಕ್ಕೆ ಮುಂದೂಡಿದೆ.

ಮುಡಾ ಸೈಟು ಹಂಚಿಕೆ ಅಕ್ರಮಕ್ಕೆ ಸಂಬಂಧಿಸಿದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸುವಂತೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ರಿಟ್ ಅರ್ಜಿ ಸಲ್ಲಿಸಿದ್ದರು. ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕ ಸದಸ್ಯ ಪೀಠ, ಇದರ ವಿಚಾರಣೆ ನಡೆಸಿತು. ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಆರೋಪಿಯಾಗಿದ್ದರೆ, ಅವರ ಪತ್ನಿ ಪಾರ್ವತಿ ಎರಡನೇ ಆರೋಪಿ.

ಕೋರ್ಟ್‌ ವಿಚಾರಣೆಯಲ್ಲಿ ಏನಾಯಿತು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಮತ್ತು ಅಭಿಷೇಕ್‌ ಮನು ಸಿಂಘ್ವಿ, ರಾಜ್ಯ ಸರ್ಕಾರದ ಪರ‌ವಾಗಿ ಕಪಿಲ್‌ ಸಿಬಲ್, ಎಜಿ ಶಶಿಕಿರಣ್ ಶೆಟ್ಟಿ ಮತ್ತು ಹಿಂದಿನ ಭೂ ಮಾಲೀಕ ದೇವರಾಜು ಪರ ದುಷ್ಯಂತ್ ದವೆ ವಾದ ಮಂಡಿಸಿದರು.

ಲೋಕಾಯುಕ್ತ ಪೊಲೀಸ್ ತನಿಖೆಯಲ್ಲಿರುವ ಪ್ರಕರಣದ ಅಂತಿಮ ವರದಿ ಸಲ್ಲಿಸಬೇಕಾದ ಗಡುವನ್ನು ಹೈಕೋರ್ಟ್‌ ಜನವರಿ 28ರ ತನಕ ವಿಸ್ತರಿಸಿದೆ. ಆದಾಗ್ಯೂ, ಇಲ್ಲಿವರೆಗಿನ ವರದಿ ಯಾಕೆ ಸಲ್ಲಿಸಿಲ್ಲ ಎಂದು ನ್ಯಾಯಪೀಠ ಪ್ರಶ್ನಿಸಿದೆ.

ಸಿಬಿಐ ತನಿಖೆ ಯಾಕೆ ಬೇಕು- ಸ್ನೇಹಮಯಿ ಕೃಷ್ಣ ಪರ ವಕೀಲರ ವಾದ

ಸ್ನೇಹಮಯಿ ಕೃಷ್ಣ ಪರವಾಗಿ ವಕೀಲ ಮಣಿಂದರ್ ಸಿಂಗ್‌ ಅವರು​ ವಾದ ಮಂಡಿಸಿದರು. ಸಿಬಿಐ ತನಿಖೆ ಯಾಕೆ ಬೇಕು ಎಂಬ ಬಗ್ಗೆ ವಾದ ಮಂಡಿಸಿದ ಅವರು, ನಿಷ್ಪಕ್ಷಪಾತ ತನಿಖೆ ಯಾಕೆ ಸಾಧ್ಯವಿಲ್ಲ ಎಂಬುದನ್ನು ಪ್ರಸ್ತುತಿ ಮಾಡಿದರು. ಅಲ್ಲಿ ಗಮನಸೆಳದ 5 ಅಂಶಗಳಿವು.

1) ಲೋಕಾಯುಕ್ತ ಪೊಲೀಸರು ಬೇರಾರೂ ಅಲ್ಲ, ರಾಜ್ಯ ಪೊಲೀಸ್ ಇಲಾಖೆಯಿಂದಲೇ ನಿಯೋಜನೆಗೊಂಡ ಸಿಬ್ಬಂದಿ.

2) ಲೋಕಾಯುಕ್ತ ಪೊಲೀಸರು ನೇರವಾಗಿ ಸರ್ಕಾರ ಅಧೀನ ಇರುವ ಸಿಬ್ಬಂದಿ. ಹೀಗಾಗಿ ನಿಷ್ಪಕ್ಷಪಾತ ತನಿಖೆ ಹೇಗೆ ಸಾಧ್ಯ.

3) ಜನರಲ್ಲೂ ನ್ಯಾಯ ವ್ಯವಸ್ಥೆ ಮೇಲೆ ವಿಶ್ವಾಸ ಬರಬೇಕು ಎಂದರೆ ತನಿಖೆಯೂ ನಿಷ್ಪಕ್ಷಪಾತವಾಗಿ ನಡೆಯಬೇಕು.

4) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೇಸ್ ಮಾತ್ರವಲ್ಲ, ಮುಡಾ ಸೈಟು ಹಂಚಿಕೆ ಅಕ್ರಮದ ಬಗ್ಗೆ ಪೂರ್ತಿ ತನಿಖೆಯಾಗಲಿ

5) ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಮುಡಾದ 145 ಕಡತಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಆರೋಪ ವ್ಯಕ್ತವಾದ ಕೂಡಲೇ ತರಾತುರಿಯಲ್ಲಿ ಕಡತಗಳನ್ನು ಕೊಂಡೊಯ್ದಿರುವುದು ಯಾಕೆ, ಏನು ಎಂಬುದು ಗೊತ್ತಿಲ್ಲ. ಮೈಸೂರು ಡಿವೈಎಸ್‌ಪಿ ಪತ್ರ ಬರೆದಿರುವುದು ಇದಕ್ಕೆ ದಾಖಲೆ.

6) ಮುಡಾ ಸೈಟು ಅಕ್ರಮಕ್ಕೆ ಸಂಬಂಧಿಸಿ ಲೋಕಾಯುಕ್ತದವರೂ ಈ ಕಡತಗಳ ಬಗ್ಗೆ ವಿಚಾರಿಸಿಲ್ಲ. ಕನಿಷ್ಠ ಪಕ್ಷ ಅದರ ಬಗ್ಗೆ ವಿಚಾರಿಸಬೇಕಾಗಿತ್ತು. ಒಮ್ಮೆ ಪರಿಶೀಲಿಸಬೇಕಾಗಿತ್ತು. ಲೋಕಾಯುಕ್ತ ಪೊಲೀಸರ ಕೆಲಸ ಹೇಗೆ ಎಂಬುದು ಇದರಿಂದ ಮನವರಿಕೆಯಾದೀತು.

ಸಿಬಿಐಗೆ ವಹಿಸಿದ್ರೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾಗುತ್ತದೆ: ಸ್ನೇಹಮಯಿ ಕೃಷ್ಣ

ಮುಡಾ ಸೈಟು ಹಂಚಿಕೆ ಅಕ್ರಮಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕೋರ್ಟ್‌ಗೆ ಒದಗಿಸಲಾಗಿದ್ದು, ಸಿಬಿಐಗೆ ಯಾಕೆ ಒಪ್ಪಿಸಬೇಕು ಎಂಬುದನ್ನು ಆ ಮೂಲಕ ಸಮರ್ಥಿಸಿಕೊಳ್ಳಲಾಗಿದೆ. ಈ ಬಗ್ಗೆ ಕೋರ್ಟ್‌ನಲ್ಲಿ ದಾವೆ ಹೂಡಿದ ಬಳಿಕ ನನ್ನ ಮೇಲೆ ಬೇರೆ ಬೇರೆ ರೀತಿಯ ಒತ್ತಡ ಹೇರಲಾಗಿದೆ. ಆಮಿಷವನ್ನೂ ಒಡ್ಡಿದ್ದರು. ಒತ್ತಡ, ಬೆದರಿಕೆಗಳನ್ನು ಕೂಡ ನ್ಯಾಯಾಲಯದ ಗಮನಕ್ಕೆ ತರಲಾಗಿದೆ. ರಾಜ್ಯ ಸರ್ಕಾರದ ಅಧೀನ ಇರುವ ಲೋಕಾಯುಕ್ತ ಪೊಲೀಸ್ ತನಿಖೆ ಬಗ್ಗೆ ವಿಶ್ವಾಸವಿಲ್ಲ. ಸಿಬಿಐ ತನಿಖೆಯ ಮೂಲಕ ನ್ಯಾಯ ಸಿಗುವ ವಿಶ್ವಾಸವಿದೆ. ಪ್ರಕರಣ ಸಿಬಿಐಗೆ ವಹಿಸಿದ ಕೂಡಲೇ ಸಿಎಂ ಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡಲಿದ್ದಾರೆ ಎಂಬ ವಿಶ್ವಾಸವಿದೆ. ಆಗ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಕೆಲಸವಾಗುತ್ತದೆ. ಅದು ಈಡೇರುವ ತನಕ ಹೋರಾಟ ಮುಂದುವರಿಯಲಿದೆ ಎಂದು ಸ್ನೇಹಮಯಿ ಕೃಷ್ಣ ವಿವರಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಕೇಸ್ ಮಾತ್ರವಲ್ಲ, ಮುಡಾ ಸೈಟು ಹಂಚಿಕೆ ಅಕ್ರಮದ ಪೂರ್ತಿ ತನಿಖೆಯಾಗಲಿ ಎಂದು ಸ್ನೇಹಮಯಿ ಕೃಷ್ಣ ಆಗ್ರಹಿಸಿದ್ದಾರೆ.

ಮುಡಾ ಹಗರಣದ ಬಗ್ಗೆ ಒಂದಿಷ್ಟು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿದ್ದ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿದ್ದ 3.16 ಎಕರೆ ಜಮೀನನ್ನು ದೇವನೂರು ಬಡಾವಣೆ ನಿರ್ಮಾಣಕ್ಕೆ ಎಂದು ಮುಡಾ ಸ್ವಾಧೀನಪಡಿಸಿಕೊಂಡಿತ್ತು. ಪರಿಹಾರವಾಗಿ 2021ರಲ್ಲಿ ಮೈಸೂರಿನ ವಿಜಯನಗರ ಬಡಾವಣೆಯಲ್ಲಿ 38,284 ಚದರ ಅಡಿ ಜಾಗ ಅಂದರೆ 14 ನಿವೇಶನವನ್ನು ಮುಡಾ ಕೊಟ್ಟಿತ್ತು. ಇಷ್ಟು ಸೈಟ್ ಹಂಚಿಕೆಯಾಗಲು ಸಿದ್ದರಾಮಯ್ಯ ತಮ್ಮ ಪ್ರಭಾವ ಬೀರಿದ್ದಾರೆ ಎಂಬುದು ಆರೋಪವಾಗಿತ್ತು. ಇದು ವಿವಾದವಾದ ಬಳಿಕ, ಸದರಿ ಜಾಗವನ್ನು ಪಾರ್ವತಿ ಅವರಿಗೆ ದಾನ ಪತ್ರದ ಮೂಲಕ ಅವರ ಸಹೋದರ ಕೊಟ್ಟಿದ್ದರು ಎಂಬುದನ್ನು ಬಹಿರಂಗಪಡಿಸಿ ದಾಖಲೆ ಬಿಡುಗಡೆ ಮಾಡಿದರು.

Whats_app_banner