ಕನ್ನಡ ಸುದ್ದಿ / ಕರ್ನಾಟಕ /
ಮುಡಾ ಸೈಟ್ ಹಗರಣ; ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನಾಲ್ಕು ತಂಡಗಳ ರಚನೆ, ಯಾರೆಲ್ಲಾ ಇದ್ದಾರೆ ತಂಡದಲ್ಲಿ?
Muda Site Scam: ಮುಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಸಂಬಂಧಿಸಿ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಪ್ರಸ್ತುತ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿ ನ್ಯಾಯಾಲಯದ ಆದೇಶದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ, ಇದೀಗ ತನಿಖೆಗೆ ನಾಲ್ಕು ತಂಡಗಳನ್ನು ರಚಿಸಿದೆ.
ಲೋಕಾಯುಕ್ತ ಎಸ್ಪಿ ಉದೇಶ್, ಡಿವೈಎಸ್ಪಿ ಎಸ್ ಮಾಲತೀಶ್, ಚಾಮರಾಜನಗರ ಡಿವೈಎಸ್ಪಿ ಮ್ಯಾಥ್ಯೂ ಥಾಮಸ್ ಹಾಗೂ ಇನ್ಸ್‌ಪೆಕ್ಟರ್ ಅವರನ್ನು ಒಳಗೊಂಡ ತನಿಖಾ ತಂಡ ರಚನೆ ಮಾಡಲಾಗಿದೆ. ಎಲ್ಲಾ ಅಧಿಕಾರಿಗಳ ಜೊತೆ ಎಸ್ಪಿ ಸಭೆ ನಡೆಸಿದ್ದಾರೆ. ಅಲ್ಲದೆ, ಈ ಅಧಿಕಾರಿಗಳ ತಂಡಗಳು ದಾಖಲೆಗಳ ಪರಿಶೀಲನೆ ನಡೆಸಿವೆ.
ಇಂದು ಬೆಳಿಗ್ಗೆಯಿಂದ ದೂರಿನಲ್ಲಿ ಅಡಕವಾದ ದಾಖಲೆಗಳನ್ನು ಪರಿಶೀಲಿಸಿದ ಅಧಿಕಾರಿಗಳು, ಇನ್ನೂ ಒಂದೆರಡು ದಿನಗಳ ಕಾಲ ಸಂಪೂರ್ಣ ದಾಖಲೆಗಳ ಪರಿಶೀಲನೆ ನಡೆಸಿ ಅಧ್ಯಯನ ನಡೆಸಲಿದ್ದಾರೆ. ಬಳಿಕ ಪ್ರತಿಯೊಬ್ಬ ಅಧಿಕಾರಿಗಳ ಕೆಲಸವನ್ನು ವಿಂಗಡಣೆ ಮಾಡಿಕೊಳ್ಳಲಿದ್ದಾರೆ.