ಮೈಸೂರು: ಅವಧೂತ ದತ್ತಪೀಠದಿಂದ ಭಾರತೀಯ ಸೇನೆಗೆ 25 ಲಕ್ಷ ರೂಪಾಯಿ ದೇಣಿಗೆ
ಕನ್ನಡ ಸುದ್ದಿ  /  ಕರ್ನಾಟಕ  /  ಮೈಸೂರು: ಅವಧೂತ ದತ್ತಪೀಠದಿಂದ ಭಾರತೀಯ ಸೇನೆಗೆ 25 ಲಕ್ಷ ರೂಪಾಯಿ ದೇಣಿಗೆ

ಮೈಸೂರು: ಅವಧೂತ ದತ್ತಪೀಠದಿಂದ ಭಾರತೀಯ ಸೇನೆಗೆ 25 ಲಕ್ಷ ರೂಪಾಯಿ ದೇಣಿಗೆ

ಮೈಸೂರಿನ ನಂಜನಗೂಡು ರಸ್ತೆಯಲ್ಲಿರುವ ಅವಧೂತ ದತ್ತಪೀಠದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ವತಿಯಿಂದ ಭಾರತೀಯ ಸೇನೆಗೆ 25 ಲಕ್ಷ ರೂಪಾಯಿ ದೇಣಿಗೆ ಸಲ್ಲಿಸಲಾಗಿದೆ.

ಅವಧೂತ ದತ್ತಪೀಠದಿಂದ ಭಾರತೀಯ ಸೇನೆಗೆ 25 ಲಕ್ಷ ರೂಪಾಯಿ ದೇಣಿಗೆ
ಅವಧೂತ ದತ್ತಪೀಠದಿಂದ ಭಾರತೀಯ ಸೇನೆಗೆ 25 ಲಕ್ಷ ರೂಪಾಯಿ ದೇಣಿಗೆ

ಮೈಸೂರು: ಮೈಸೂರಿನ ಅವಧೂತ ದತ್ತಪೀಠದಿಂದ ಭಾರತೀಯ ಸೇನೆಗೆ 25 ಲಕ್ಷ ರೂಪಾಯಿ ದೇಣಿಗೆ ಸಲ್ಲಿಸಲಾಗಿದೆ. ಮೈಸೂರಿನ ನಂಜನಗೂಡು ರಸ್ತೆಯಲ್ಲಿರುವ ಅವಧೂತ ದತ್ತಪೀಠದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ನಡೆದ ಶ್ರೀ ದತ್ತ ವೆಂಕಟೇಶ್ವರ ಕ್ಷೇತ್ರದ 26ನೇ ಬ್ರಹ್ಮೋತ್ಸವ ಸಂದರ್ಭದಲ್ಲಿ ದೇಣಿಗೆ ನೀಡಲಾಗಿದೆ.

ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಕಿರಿಯ ಶ್ರೀ ದತ್ತ ವಿಜಯಾನಂದ ತೀರ್ಥಸ್ವಾಮೀಜಿಯವರ ಸಮ್ಮುಖದಲ್ಲಿ ನಡೆದ ಬ್ರಹ್ಮೋತ್ಸವದ ಸಂದರ್ಭದಲ್ಲಿ ಉಗ್ರರ ವಿರುದ್ಧ ಹೋರಾಡಿದ ಮತ್ತು ದೇಶದ ರಕ್ಷಣೆಗೆ ಪಣ ತೊಟ್ಟಿರುವ ಭಾರತೀಯ ಸೇನೆಗೆ 25 ಲಕ್ಷ ರೂಪಾಯಿ ದೇಣಿಗೆ ಸಲ್ಲಿಸಲಾಗಿದೆ.

ಬ್ರಹ್ಮೋತ್ಸವ ಕಾರ್ಯಕ್ರಮದಲ್ಲಿ ಮೈಸೂರು ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್, ಶಾಸಕ ಶ್ರೀವತ್ಸ ಸೇರಿದಂತೆ ಹಲವು ಮಂದಿ ಗಣ್ಯರು ಭಾಗಿಯಾಗಿದ್ದರು. ಸಂಸದ ಯದುವೀರ್ ಮೂಲಕ ಅವಧೂತ ದತ್ತ ಪೀಠದಿಂದ 25 ಲಕ್ಷ ರೂಪಾಯಿ ಚೆಕ್ ಹಸ್ತಾಂತರ ಮಾಡಲಾಗಿದೆ. 25 ಲಕ್ಷ ದೇಣಿಗೆ ಸ್ವೀಕರಿಸಿ ಶುಭ ಕೋರಿದ ಸಂಸದ ಯದುವೀರ್, ಕಾಣಿಕೆಯನ್ನು ನಮ್ಮ ಭಾರತ ಸರ್ಕಾರಕ್ಕೆ ತಲುಪಿಸುತ್ತೇನೆ. ಶ್ರೀಗಳ ಆಶೀರ್ವಾದವು ಇಡೀ ಭಾರತದ ಜನರ ಮೇಲೆ, ಸೈನಿಕರ ಮೇಲೆ ಇರಲೆಂದು ಪ್ರಾರ್ಥಿಸುತ್ತೇನೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

Kiran Kumar I G

TwittereMail
ಕಿರಣ್ ಐ.ಜಿ.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜನರ ಬದುಕು ಸುಧಾರಿಸಬಲ್ಲ ಟೆಕ್‌ ಮತ್ತು ಗ್ಯಾಜೆಟ್ ಇವರ ಆಸಕ್ತಿಯ ಕ್ಷೇತ್ರ. ಯಾವುದೇ ವಿಷಯವಾದರೂ ಶ್ರದ್ಧೆಯಿಂದ ಕಲಿಯಬಲ್ಲೆ, ಬರೆಯಬಲ್ಲೆ ಎನ್ನುವುದು ಇವರ ವಿಶ್ವಾಸ. ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕ ವೆಬ್ ಹಾಗೂ ಟಿವಿ9 ಕನ್ನಡ ಡಿಜಿಟಲ್‌ನ ವಿವಿಧ ವಿಭಾಗಗಳಲ್ಲಿ ಒಟ್ಟು 10 ವರ್ಷ ಕೆಲಸ ಮಾಡಿದ ಅನುಭವ. ಇಮೇಲ್: kiran.kumar@htdigital.in