Chamundi Betta: ಮೈಸೂರಿನ ಚಾಮುಂಡಿಬೆಟ್ಟಕ್ಕೆ ಪ್ರಾಧಿಕಾರದ ಬಲ, ಮೊದಲ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನೀಡಿದ ಸೂಚನೆ ಏನು-mysore news cm siddaramaiah chaired first meeting of chmundeshwari temple authority instructed to maintain sanctity kub ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  Chamundi Betta: ಮೈಸೂರಿನ ಚಾಮುಂಡಿಬೆಟ್ಟಕ್ಕೆ ಪ್ರಾಧಿಕಾರದ ಬಲ, ಮೊದಲ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನೀಡಿದ ಸೂಚನೆ ಏನು

Chamundi Betta: ಮೈಸೂರಿನ ಚಾಮುಂಡಿಬೆಟ್ಟಕ್ಕೆ ಪ್ರಾಧಿಕಾರದ ಬಲ, ಮೊದಲ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನೀಡಿದ ಸೂಚನೆ ಏನು

Mysore News ಮೈಸೂರು ಚಾಮುಂಡಿಬೆಟ್ಟ ಪ್ರಾಧಿಕಾರದ ಮೊದಲ ಸಭೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಿತು.

ಮೈಸೂರಿನಲ್ಲಿ ನಡೆದ  ಚಾಮುಂಡಿಬೆಟ್ಟ ಪ್ರಾಧಿಕಾರದ ಸಭೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಿತು.
ಮೈಸೂರಿನಲ್ಲಿ ನಡೆದ ಚಾಮುಂಡಿಬೆಟ್ಟ ಪ್ರಾಧಿಕಾರದ ಸಭೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಿತು.

ಮೈಸೂರು: ನಾಡಿನ ಅಧಿದೇವತೆ ಚಾಮುಂಡಿಬೆಟ್ಟದ ಸರ್ವತೋಮುಖ ಅಭಿವೃದ್ದಿ ಹಾಗೂ ಸುಸೂತ್ರ ನಿರ್ವಹಣೆಗಾಗಿ ರಚಿಸಲಾಗಿರುವ ರ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ಮೈಸೂರಿನಲ್ಲಿ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಬೆಟ್ಟದ ಅಭಿವೃದ್ದಿ, ನಿರ್ವಹಣೆ, ಭಕ್ತರಿಗೆ ಸಕಲ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಪ್ರಾಧಿಕಾರ ಕೈಗೊಳ್ಳಬೇಕಾದ ಕ್ರಮಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿ ಕರ್ತವ್ಯ ಸಹಿತ ಹಲವು ವಿಚಾರಗಳ ಕುರಿತು ಸಿದ್ದರಾಮಯ್ಯ ಸೂಚನೆಗಳನ್ನು ನೀಡಿದರು.

ಹಿಂದೆಯೂ ಸಮಿತಿ ಇತ್ತು. ಆದರೆ ಪ್ರಾಧಿಕಾರ ರಚನೆಯಿಂದಾಗಿ ಅಭಿವೃದ್ಧಿಗೆ ಹೆಚ್ಚಿನ ಅಧಿಕಾರ ಮತ್ತು ಅವಕಾಶ ಒದಗಿದಂತಾಗಿದೆ. ಇಲ್ಲಿಗೆ ಬರುವ ಭಕ್ತರಿಗೆ ಹೆಚ್ಚಿನ ಮತ್ತು ಉನ್ನತ ಮಟ್ಟದ ಆರೋಗ್ಯಕರ ಸವಲತ್ತು ಹಾಗೂ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಗುರಿಯಾಗಿದೆ. ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ. ಶ್ರೀ ಕ್ಷೇತ್ರ ಹಾಗೂ ದೇವಸ್ಥಾನದ ಸಂಪ್ರದಾಯ ಮತ್ತು ಚರಿತ್ರೆ, ಘನತೆಯನ್ನು ಕಾಪಾಡುವ ಜೊತೆಗೆ ಉನ್ನತೀಕರಿಸಬೇಕು ಎಂದು ಸಲಹೆ ನೀಡಿದರು.

ಪ್ರಾಧಿಕಾರ ವ್ಯವಸ್ಥಿತವಾಗಿ ನಡೆಯಬೇಕು. ಕಾಲ ಕಾಲಕ್ಕೆ ಸಭೆಗಳು ನಡೆದು ಹೆಚ್ಚಿನ ಶ್ರಮ ಶುಚಿತ್ವಕ್ಕೆ ಹಾಕಬೇಕು. ಕಸವನ್ನು ಆಗ್ಗಿಂದಾಗೇ ತೆರವುಗೊಳಿಸಬೇಕು. ವಾಹನಗಳ ಸಂಖ್ಯೆಯೂ ಹೆಚ್ಚಾಗಿದೆ. ವಾಹನ ನಿಲುಗಡೆಗೆ ಇನ್ನಷ್ಟು ಸುಸಜ್ಜಿತ ವ್ಯವಸ್ಥೆ ಕಲ್ಪಿಸಬೇಕಿದೆ. ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಹಣಕ್ಕೆ ತೊಂದರೆ ಇಲ್ಲ. ಕೇಳಿದಷ್ಟು ಹಣವನ್ನು ಕೇಳಿದಾಗಲೆಲ್ಲಾ ಒದಗಿಸಲಾಗುತ್ತಿದ್ದರೂ ಕೆಲಸಗಳು ಮಾತ್ರ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಇದನ್ನು ನಾನು ಸಹಿಸಲ್ಲ. ಸಮಯಕ್ಕೆ ಸರಿಯಾಗಿ ಕೆಲಸ ಮಾಡದಿದ್ದರೆ ನಾನು ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಎಚ್ಚರಿಸಿದರು.

ತಾಯಿ, ಶಕ್ತಿ ದೇವತೆ ಚಾಮುಂಡಿ ದೇವಿ ಬಗ್ಗೆ ಕೋಟ್ಯಂತರ ಮಂದಿಗೆ ಅಪಾರ ಭಕ್ತಿ, ಶ್ರದ್ಧೆ, ನಂಬಿಕೆ ಇದೆ. ದೇಶದ ಮೂಲೆ ಮೂಲೆಗಳಿಂದ ಭಕ್ತರು ಬರುತ್ತಾರೆ. ಇವರೆಲ್ಲರಿಗೂ ಅಗತ್ಯ ಸವಲತ್ತುಗಳನ್ನು ಒದಗಿಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.

ಕೊಪ್ಪಳ ಹುಲಿಗಮ್ಮ ದೇವಸ್ಥಾನ ಮತ್ತು ಘಾಟಿ ಸುಬ್ರಮಣ್ಯ ದೇವಸ್ಥಾನಗಳ ಹೆಚ್ಚಿನ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಬಗ್ಗೆಯೂ ಹೆಚ್ಚಿನ ಬೇಡಿಕೆ ಇದೆ. ಈ ಬಗ್ಗೆಯೂ ಮುಂದುವರೆಯುವ ಅಗತ್ಯವಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಶಾಸಕರಾದ ಜಿ.ಟಿ.ದೇವೇಗೌಡ, ಯತೀಂದ್ರ ಸಿದ್ದರಾಮಯ್ಯ, ರವಿಶಂಕರ್, ಹರೀಶ್ ಗೌಡ, ಡಾ.ತಿಮ್ಮಯ್ಯ, ವಿವೇಕಾನಂದ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ರಾಜವಂಶಸ್ಥರ ಅಭಿಪ್ರಾಯಕ್ಕೆ ಪ್ರತಿಕ್ರಿಯೆ ಏನು?

ಸರ್ಕಾರ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಿದ್ದು, ಇದಕ್ಕೆ ರಾಜವಂಶಸ್ಥರಾದ ಪ್ರಮೋದಾದೇವಿಯವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ಆಗಸ್ಟ್ 22 ರಂದು ತಡೆಯಾಜ್ಞೆ ತೆರವುಗೊಂಡಿದೆ. ನ್ಯಾಯಾಲಯದ ತೀರ್ಮಾನವಾದಂತೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ನ್ಯಾಯಾಲಯ ತಡೆಯಾಜ್ಞೆ ತೆರವುಗೊಳಿಸಿದ ಬಳಿಕ ಪ್ರಾಧಿಕಾರದ ಮೊದಲ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.

ಪ್ರಮೋದಾದೇವಿಯವರು ಹಾಗೂ ಸಂಸದ ಯದುವೀರ್ ಅವರು ಸಭೆ ನಡೆಸುವುದು ಕಾನೂನುಬಾಹಿರ ಎಂದು ಆಡಳಿತ ಮಂಡಳಿ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಬಗ್ಗೆ ಮಾತನಾಡಿ ಹಿಂದೆಯೂ ಆಡಳಿತ ಮಂಡಳಿ ಇತ್ತು. ಹಿಂದೆ ಸದಸ್ಯರನ್ನು, ಅಧ್ಯಕ್ಷರನ್ನು ಸರ್ಕಾರ ನೇಮಿಸುತ್ತಿತ್ತು. ಸರ್ಕಾರದ ಅಧೀನದಲ್ಲಿಯೇ ಇತ್ತು ಎಂದರು.