ಕನ್ನಡ ಸುದ್ದಿ  /  Karnataka  /  Mysore News Suttur Jss Free School Calls Admission For 2024-25 In Nanjanagud Taluk May 15 Last Date Kub

Suttur Free School: ಸುತ್ತೂರು ಜೆಎಸ್‌ಎಸ್‌ ಉಚಿತ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ, ಪ್ರವೇಶಕ್ಕೆ ಮೇ 15 ಕಡೆಯ ದಿನ

ಸುತ್ತೂರು ಶ್ರೀಕ್ಷೇತ್ರದ ಜೆಎಸ್‌ಎಸ್ ಶಾಲೆ ಹಾಗೂ ಉಚಿತ ವಿದ್ಯಾರ್ಥಿ ನಿಲಯದ 2024-25ನೇ ಸಾಲಿನ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸುತ್ತೂರು ಉಚಿತ ಶಾಲೆಗೆ ಅರ್ಜಿ  ಆಹ್ವಾನಿಸಲಾಗಿದೆ.
ಸುತ್ತೂರು ಉಚಿತ ಶಾಲೆಗೆ ಅರ್ಜಿ ಆಹ್ವಾನಿಸಲಾಗಿದೆ.

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಸುತ್ತೂರಿನಲ್ಲಿರುವ ಉಚಿತ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ. ಮೈಸೂರಿನ ಸುತ್ತೂರು ಮಠದ ಆಶ್ರಯದಲ್ಲಿ ನಡೆಯುತ್ತಿರುವ ಇಲ್ಲಿ ಕರ್ನಾಟಕ ಮಾತ್ರವಲ್ಲದೇ ಹೊರ ರಾಜ್ಯಗಳಿಂದಲೂ ಮಕ್ಕಳು ಶಿಕ್ಷಣ ಪಡೆಯಲು ಬರುತ್ತಾರೆ. ಇಲ್ಲಿ ಶಿಕ್ಷಣ ಸಂಪೂರ್ಣ ಉಚಿತ ಎನ್ನುವುದು ಒಂದು ಕಡೆಯಾದರೂ ಮಕ್ಕಳಿಗೆ ಸಮಗ್ರ ರೀತಿಯಲ್ಲಿ ಕಲಿಸುವುದು ಇಲ್ಲಿನ ವಿಶೇಷ. 2024 -25ನೇ ಶೈಕ್ಷಣಿಕ ವರ್ಷದ ಪ್ರವೇಶಕ್ಕಾಗಿ ಸುತ್ತೂರು ಶಾಲೆಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸುತ್ತೂರು ಶಾಲೆಯಲ್ಲಿಈ ವರ್ಷದ ಪ್ರವೇಶಕ್ಕೆ ಮೇ 15 ಕಡೆಯ ದಿನವಾಗಿದೆ.

ಕನ್ನಡ ಮಾಧ್ಯಮಕ್ಕೆ 1 ರಿಂದ 8ನೇ ತರಗತಿವರೆಗೆ ಮತ್ತು ಇಂಗ್ಲೀಷ್ ಮಾಧ್ಯಮಕ್ಕೆ 1, 5 ಹಾಗೂ 8ನೇ ತರಗತಿಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶವಿದೆ.

ಗ್ರಾಮಾಂತರ ಪ್ರದೇಶದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಬಾಲಕ ಹಾಗೂ ಬಾಲಕಿಯರಿಗೆ ಪ್ರವೇಶ ನೀಡಲಾಗುವುದು.

ಅರ್ಜಿಯನ್ನು ಶಾಲಾ ಕಛೇರಿಯಲ್ಲಿ ಖುದ್ದಾಗಿ ಪಡೆಯಬಹುದು ಅಥವಾ www.jssschoolsuttur.org ಹಾಗೂ www.jssonline.org ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ದೂರವಾಣಿಯಲ್ಲಿ ಸಂಪರ್ಕಿಸಿದರೆ ಮೂಲಕವೂ ಅರ್ಜಿ ನಮೂನೆಯನ್ನು ವಾಟ್ಸ್‌ ಆಪ್‌ ಕಳುಹಿಸಿಕೊಡಲಾಗುವುದು

. ಅಂಚೆ ಮುಖಾಂತರ ಅರ್ಜಿ ಪಡೆಯಲು ಇಚ್ಛಿಸುವವರು, ವಿದ್ಯಾರ್ಥಿಯು ಪ್ರವೇಶ ಬಯಸುವ ತರಗತಿಯ ವಿವರ ಹಾಗೂ ಸ್ವ-ವಿಳಾಸವುಳ್ಳ 5 ರೂ.ಗಳ ಪೋಸ್ಟಲ್ ಸ್ಟಾಂಪ್ ಹಚ್ಚಿದ ಲಕೋಟೆಯನ್ನು ಆಡಳಿತಾಧಿಕಾರಿಗಳು, ಜೆಎಸ್‌ಎಸ್ ಸಂಸ್ಥೆಗಳು, ಸುತ್ತೂರು-571129, ನಂಜನಗೂಡು ತಾಲ್ಲೂಕು, ಮೈಸೂರು ಜಿಲ್ಲೆ. ಈ ವಿಳಾಸಕ್ಕೆ ಕಳುಹಿಸಿ ಪಡೆಯಬಹುದು.

ಕ್ಯೂ.ಆರ್. ಕೋಡ್ ಮೂಲಕವು ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಮೇ 15ರ ಒಳಗಾಗಿ ಸಲ್ಲಿಸಬೇಕು. ಭರ್ತಿ ಮಾಡಿದ ಅರ್ಜಿಯ ಜೊತೆಗೆ ಹಿಂದಿನ ತರಗತಿಯ ಅಂಕಪಟ್ಟಿ, ಭಾವಚಿತ್ರ, ವಿದ್ಯಾರ್ಥಿ ಮತ್ತು ಪೋಷಕರ ಆಧಾರ್‌ಕಾರ್ಡ್, ರೇಷನ್‌ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಅಂಚೆ ಮುಖಾಂತರ ಆಡಳಿತಾಧಿಕಾರಿಗಳು, ಜೆಎಸ್‌ಎಸ್ ಸಂಸ್ಥೆಗಳು, ಸುತ್ತೂರು-571129, ನಂಜನಗೂಡು ತಾಲ್ಲೂಕು, ಮೈಸೂರು ಜಿಲ್ಲೆ ಈ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಪಡೆಯಲು, ಹೆಚ್ಚಿನ ಮಾಹಿತಿ ಪಡೆಯಲು ಅಥವಾ ಪ್ರವೇಶಕ್ಕೆ ಸಂಬಂಧಿಸಿದಂತೆ ಯಾವುದೇ ಸಂದೇಹಗಳು ಅಗತ್ಯವಿದ್ದಲ್ಲಿ ಪೋಷಕರು ಅಥವಾ ಪಾಲಕರು ನೇರವಾಗಿ ಶಾಲಾ ಕಛೇರಿಯಲ್ಲಿ ಸಂಪರ್ಕಿಸಲು ಕೋರಿದೆ. ಯಾವುದೇ ಮಧ್ಯವರ್ತಿಗಳನ್ನು ಅವಲಂಬಿಸಬಾರದು ಹಾಗೂ ಹೆಚ್ಚಿನ ಮಾಹಿತಿಗಾಗಿ 7411486938 ಮೊಬೈಲ್ ದೂರವಾಣಿ ಸಂಖ್ಯೆ ಹಾಗೂ ಹಿರಿಯ ಪ್ರಾಥಮಿಕ ಶಾಲೆಗೆ 08221 232054 ಪ್ರೌಢಶಾಲೆಗೆ 08221 232653, ಬಸವೇಶ್ವರ ವಿದ್ಯಾರ್ಥಿನಿಲಯಕ್ಕೆ 08221 232332 ಸಂಪರ್ಕಿಸುವಂತೆ ಕೋರಲಾಗಿದೆ.