ಮುಡಾ ಆಯುಕ್ತರ ನಿವಾಸದಲ್ಲಿದ್ದ ಸಿಸಿ ಕ್ಯಾಮೆರಾ-ಡಿವಿಆರ್ ನಾಪತ್ತೆ; ಅಧಿಕಾರಿಗಳಿಂದ ದೂರು, ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ
ಕನ್ನಡ ಸುದ್ದಿ  /  ಕರ್ನಾಟಕ  /  ಮುಡಾ ಆಯುಕ್ತರ ನಿವಾಸದಲ್ಲಿದ್ದ ಸಿಸಿ ಕ್ಯಾಮೆರಾ-ಡಿವಿಆರ್ ನಾಪತ್ತೆ; ಅಧಿಕಾರಿಗಳಿಂದ ದೂರು, ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ

ಮುಡಾ ಆಯುಕ್ತರ ನಿವಾಸದಲ್ಲಿದ್ದ ಸಿಸಿ ಕ್ಯಾಮೆರಾ-ಡಿವಿಆರ್ ನಾಪತ್ತೆ; ಅಧಿಕಾರಿಗಳಿಂದ ದೂರು, ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ

ಮುಡಾ ಆಯುಕ್ತರ ಕಚೇರಿಯಲ್ಲಿ ಸಿಸಿಟಿವಿ ಹಾಗೂ ಡಿವಿಆರ್ ನಾಪತ್ತೆ ವಿಚಾರವಾಗಿ ಮಾತನಾಡಿದ ಸ್ನೇಹಮಯಿ ಕೃಷ್ಣ; ಸಿಸಿಟಿವಿ ಹಾಗೂ ಡಿವಿಆರ್‌ಗಳು ಮುಡಾ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಲಿವೆ. ಇದು ನಾಪತ್ತೆಯಾಗಿರುವುದರ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ ಎಂದಿದ್ದಾರೆ.

ಮುಡಾ ಆಯುಕ್ತರ ನಿವಾಸದಲ್ಲಿದ್ದ ಸಿಸಿ ಕ್ಯಾಮೆರಾ-ಡಿವಿಆರ್ ನಾಪತ್ತೆ; ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ
ಮುಡಾ ಆಯುಕ್ತರ ನಿವಾಸದಲ್ಲಿದ್ದ ಸಿಸಿ ಕ್ಯಾಮೆರಾ-ಡಿವಿಆರ್ ನಾಪತ್ತೆ; ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ

ಮೈಸೂರು: ಅತ್ತ ಮುಡಾದ ಮಾಜಿ ಆಯುಕ್ತ ದಿನೇಶ್ ಕುಮಾರ್ ನಾಪತ್ತೆಯಾದ ಬೆನ್ನಲ್ಲೇ, ಇದೀಗ ಮುಡಾ ಆಯುಕ್ತರ ನಿವಾಸದಲ್ಲಿದ್ದ ಸಿಸಿ ಕ್ಯಾಮೆರಾಗಳು ಕಾಡು ಕಾಣೆಯಾಗಿವೆ. ಸಿಸಿ ಕ್ಯಾಮೆರಾ ಮತ್ತು ಡಿವಿಆರ್ ನಾಪತ್ತೆ ಬಗ್ಗೆ ಮುಡಾ ಅಧಿಕಾರಿಗಳು ದೂರು ನೀಡಿದ್ದಾರೆ. ಮೈಸೂರಿನ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಆದರೆ, ಪೊಲೀಸರು ಎಫ್.ಐ.ಆರ್‌ ದಾಖಲು ಮಾಡಿಕೊಂಡಿಲ್ಲ.

ಮುಡಾದ ಬಹುಕೋಟಿ ಹಗರಣದ ವಿಚಾರವಾಗಿ ಇಷ್ಟೆಲ್ಲಾ ತನಿಖೆ ನಡೆಯುತ್ತಿದ್ದರೂ ಪೊಲೀಸರು ಎಫ್ಐಆರ್ ದಾಖಲಿಸಿಲ್ಲ ಎಂದ ದೂರಲಾಗಿದೆ. ಮುಡಾ ಆಯುಕ್ತರ ಅಧಿಕೃತ ನಿವಾಸದಲ್ಲಿದ್ದ 5 ಸಿಸಿ ಕ್ಯಾಮರಾ ಮತ್ತು ಡಿವಿಆರ್‌ಗಳು ಇತ್ತು. ಈ ಪೈಕಿ 3 ಸಿಸಿ ಕ್ಯಾಮರಾ ಮತ್ತು ಡಿವಿಆರ್ ನಾಪತ್ತೆಯಾಗಿವೆ. ಈ ಬಗ್ಗೆ ಮಾಧ್ಯಮಗಳಲ್ಲೂ ವರದಿ ಪ್ರಸಾರವಾಗಿತ್ತು. ಈ ಬಗ್ಗೆ ಮುಡಾದ ಇಂಜಿನಿಯರ್ ದೂರು ನೀಡಿದ್ದಾರೆ. ಮುಡಾ ಆಯುಕ್ತರ ನಿವಾಸದಲ್ಲೇ ಮುಡಾದ ಅಕ್ರಮ ವ್ಯವಹಾರ ನಡೆಯುತಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ ಡಿವಿಆರ್ ಮತ್ತು ಸಿಸಿ ಕ್ಯಾಮರಾಗಳ ನಾಪತ್ತೆ ಸಾಕಷ್ಟು ಅನುಮಾನ ಮೂಡಿಸಿದೆ.

ಮುಡಾ ಆಯುಕ್ತರ ನಿವಾಸದಲ್ಲಿ ಸಿಸಿಟಿವಿ ಹಾಗೂ ಡಿವಿಆರ್ ನಾಪತ್ತೆ ವಿಚಾರವಾಗಿ ಮಾತನಾಡಿದ ದೂರುದಾರ ಹಾಗೂ ಆರ್ ಟಿ ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ಸಿಸಿಟಿವಿ, ಡಿವಿಆರ್‌ಗಳು ಕೂಡ ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಲಿವೆ. ಈಗಾಗಲೇ ನಾಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಕುವೆಂಪುನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಯಾವ ರೀತಿ ತನಿಖೆ ನಡೆಯುತ್ತದೆ ಎಂಬುದನ್ನು ಕಾದು ನೋಡೋಣ. ಮುಡಾ ಹಗರಣದ‌ ಪ್ರಕರಣದಿಂದ ಹಿಂದೆ ಸರಿಯುವುದಿಲ್ಲ. ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇನೆ ಎಂದರು

ಲೋಕಾಯುಕ್ತ ಅಧಿಕಾರಿಗಳ ನಡೆಗೆ ಖುಷಿ

ಅತ್ತ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಅಧಿಕಾರಿಗಳಿಂದ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮಾತನಾಡಿದ ಅವರು, ಲೋಕಾಯುಕ್ತ ಅಧಿಕಾರಿಗಳ ನಡೆಯನ್ನು ಸ್ವಾಗತ ಮಾಡುತ್ತೇನೆ. ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ಇದಾಗಿರುವುದರಿಂದ ವಿಚಾರಣೆ ಯಾವ ರೀತಿ ಮಾಡುತ್ತಾರೆ ಎಂಬ ಅನುಮಾನವಿತ್ತು.

ಈಗ ವಿಚಾರಣೆಗಾಗಿ ಕಚೇರಿಗೆ ಆಗಮಿಸುವಂತೆ ನೋಟಿಸ್ ನೀಡಿದ್ದಾರೆ. ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮೊದಲಿಂದಲೂ ಒತ್ತಾಯ ಮಾಡುತ್ತಿದ್ದೇನೆ. ಯಾಕೆ ಸಿಬಿಐ ವಹಿಸಬೇಕು ಎಂದು ಉಚ್ಚ ನ್ಯಾಯಾಲಯಕ್ಕೆ ನಮ್ಮ ವಕೀಲರು ಮನವರಿಕೆ ಮಾಡಿಕೊಡುತ್ತಾರೆ. ಪ್ರಕರಣವನ್ನು ಸಿಬಿಐಗೆ ನೀಡುವಂತೆ ಉಚ್ಚ ನ್ಯಾಯಾಲಯದ ಮೊರೆ ಹೋಗಿದ್ದೇವೆ ಎಂದರು.

Whats_app_banner