ನಂಜನಗೂಡು: ಬೈಕ್‌ನಲ್ಲಿ ತೆರಳುತ್ತಿದ್ದಾಗ ಸಾರಿಗೆ ಬಸ್‌ ಡಿಕ್ಕಿ; ಸವಾರ ಸ್ಥಳದಲ್ಲೇ ದುರ್ಮರಣ
ಕನ್ನಡ ಸುದ್ದಿ  /  ಕರ್ನಾಟಕ  /  ನಂಜನಗೂಡು: ಬೈಕ್‌ನಲ್ಲಿ ತೆರಳುತ್ತಿದ್ದಾಗ ಸಾರಿಗೆ ಬಸ್‌ ಡಿಕ್ಕಿ; ಸವಾರ ಸ್ಥಳದಲ್ಲೇ ದುರ್ಮರಣ

ನಂಜನಗೂಡು: ಬೈಕ್‌ನಲ್ಲಿ ತೆರಳುತ್ತಿದ್ದಾಗ ಸಾರಿಗೆ ಬಸ್‌ ಡಿಕ್ಕಿ; ಸವಾರ ಸ್ಥಳದಲ್ಲೇ ದುರ್ಮರಣ

ಬೈಕ್‌ ಸವಾರರೊಬ್ಬರಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ನಂಜನಗೂಡಿನ ಬಸವೇಶ್ವರ ವೃತ್ತದಲ್ಲಿ ನಡೆದಿದೆ. ಸಿಂಧುವಳ್ಳಿ ಗ್ರಾಮದ ಬೊಮ್ಮೇಗೌಡ (70) ಮೃತ ದುರ್ದೈವಿ

ನಂಜನಗೂಡು: ಬೈಕ್‌ನಲ್ಲಿ ತೆರಳುತ್ತಿದ್ದಾಗ ಸಾರಿಗೆ ಬಸ್‌ ಡಿಕ್ಕಿ; ಸವಾರ ಸ್ಥಳದಲ್ಲೇ ದುರ್ಮರಣ
ನಂಜನಗೂಡು: ಬೈಕ್‌ನಲ್ಲಿ ತೆರಳುತ್ತಿದ್ದಾಗ ಸಾರಿಗೆ ಬಸ್‌ ಡಿಕ್ಕಿ; ಸವಾರ ಸ್ಥಳದಲ್ಲೇ ದುರ್ಮರಣ

ನಂಜನಗೂಡು: ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರಿಗೆ ಹಿಂಬದಿಯಿಂದ ಬಂದ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಂಜನಗೂಡು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ನಡೆದಿದೆ.

ತಾಲ್ಲೂಕಿನ ಸಿಂಧುವಳ್ಳಿ ಗ್ರಾಮದ ಬೊಮ್ಮೇಗೌಡ (70) ಮೃತ ದುರ್ದೈವಿ. ಸಿಂಧುವಳ್ಳಿ ಗ್ರಾಮದಿಂದ ನಂಜನಗೂಡು ಪಟ್ಟಣಕ್ಕೆ ತನ್ನ ಎಕ್ಸೆಲ್ ಸೂಪರ್ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ನಂಜನಗೂಡಿನ ಬಸವೇಶ್ವರ ವೃತ್ತದ ಬಳಿ ಹಿಂಬದಿಯಿಂದ ಬಂದ ಸಾರಿಗೆ ಬಸ್ ಡಿಕ್ಕಿ ಹೊಡೆದು ಕಾಲಿನ ಮೇಲೆ ಚಕ್ರ ಹರಿದಿದೆ. ಪರಿಣಾಮ ಸ್ಥಳದಲ್ಲಿಯೇ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಮತ್ತೋರ್ವ ಸವಾರ ಮಹೇಶ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ . ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಸಿದ್ದರಾಜು, ಪಟ್ಟಣ ಪೊಲೀಸ್ ಠಾಣೆಯ ಪಿಎಸ್ಐ ರವೀಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಾರಿಗೆ ಬಸ್ ಮತ್ತು ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Reshma

TwittereMail
ರೇಷ್ಮಾ ಶೆಟ್ಟಿ: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜೀವನಶೈಲಿ (ಲೈಫ್‌ಸ್ಟೈಲ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಪ್ರಜಾವಾಣಿ ದಿನಪತ್ರಿಕೆಯ ವಿವಿಧ ವಿಭಾಗಗಳಲ್ಲಿ 9 ವರ್ಷಗಳ ಅನುಭವ. ಆರೋಗ್ಯ, ಆಹಾರ, ಸಿನಿಮಾ, ಕಿರುತೆರೆ ಆಸಕ್ತಿಯ ಕ್ಷೇತ್ರಗಳು. ಕುಂದಾಪುರ ತಾಲ್ಲೂಕಿನ ವಕ್ವಾಡಿ ಇವರ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.
Whats_app_banner