Mysuru Dasara 2022: ಮೈಸೂರು ದಸರಾ ಸಿದ್ಧತೆ; ಇವತ್ತೇನು ಸುದ್ದಿ?
ಕನ್ನಡ ಸುದ್ದಿ  /  ಕರ್ನಾಟಕ  /  Mysuru Dasara 2022: ಮೈಸೂರು ದಸರಾ ಸಿದ್ಧತೆ; ಇವತ್ತೇನು ಸುದ್ದಿ?

Mysuru Dasara 2022: ಮೈಸೂರು ದಸರಾ ಸಿದ್ಧತೆ; ಇವತ್ತೇನು ಸುದ್ದಿ?

Mysuru Dasara 2022: ನಾಡ ಹಬ್ಬ ದಸರಾಕ್ಕೆ ಇನ್ನು ಕೆಲವೇ ದಿನ ಬಾಕಿ ಇದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌ ಬುಧವಾರ ಗಣ್ಯರಿಗೆ ಆಹ್ವಾನ ಪತ್ರಿಕೆ ನೀಡಿದ ದಸರಾದಲ್ಲಿ ಪಾಲ್ಗೊಳ್ಳುವಂತೆ ಕೋರಿದರು. ಈ ನಡುವೆ, ದಸರಾ ಸಿದ್ಧತೆಯನ್ನು ನಿತ್ಯವೂ ಎಂಬಂತೆ ಪರಿಶೀಲಿಸಲಾಗುತ್ತಿದೆ.

<p>ದಸರಾ ಉದ್ಘಾಟನೆಗೆ ರಾಷ್ಟ್ರಪತಿಗಳು ಆಗಮಿಸುವ ಹಿನ್ನೆಲೆಯಲ್ಲಿ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದರು. ಸಂಸದ ಪ್ರತಾಪ್‌ ಸಿಂಹ ಮತ್ತು ಇತರರು ಜತೆಗಿದ್ದರು.</p>
ದಸರಾ ಉದ್ಘಾಟನೆಗೆ ರಾಷ್ಟ್ರಪತಿಗಳು ಆಗಮಿಸುವ ಹಿನ್ನೆಲೆಯಲ್ಲಿ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದರು. ಸಂಸದ ಪ್ರತಾಪ್‌ ಸಿಂಹ ಮತ್ತು ಇತರರು ಜತೆಗಿದ್ದರು.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022ರ ಕಾರ್ಯಕ್ರಮಕ್ಕೆ ರಾಜ್ಯಪಾಲರು, ಮುಖ್ಯಮಂತ್ರಿ ಸೇರಿ ಗಣ್ಯಾತಿಗಣ್ಯರಿಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಬುಧವಾರ ಆಹ್ವಾನ ನೀಡಿದರು.

ಸೆಪ್ಟೆಂಬರ್ 26ರಿಂದ ಆರಂಭವಾಗಲಿರುವ ನಾಡಹಬ್ಬ ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿದ ಸಚಿವರು, ರಾಜ್ಯಪಾಲರನ್ನು ಸನ್ಮಾನಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ಬಳಿಕ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಫಲಪುಷ್ಪಗಳನ್ನು ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಇದೇ ವೇಳೆ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಅವರನ್ನು ಭೇಟಿ ಮಾಡಿ ಆಹ್ವಾನ ನೀಡಿದರು. ನಂತರ ರಾಜ್ಯ ಹೈಕೋರ್ಟ್ ನ ಹಂಗಾಮಿ ಮುಖ್ಯನ್ಯಾಯಮೂರ್ತಿ ಅಲೋಕ್ ಆರಾಧೆ ಅವರನ್ನು ಭೇಟಿ ಮಾಡಿ, ದಸರಾ ಮಹೋತ್ಸವ -2022ರ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ಮೈಸೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ದಸರಾ ಸ್ವಾಗತ ಉಪಸಮಿತಿ ಕಾರ್ಯಾಧ್ಯಕ್ಷರಾದ ರೂಪ ಎಂ. ಜೆ., ಕಾರ್ಯದರ್ಶಿ ಕೆ. ಕುಬೇರಪ್ಪ, ಸಚಿವರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಗೌಡ, ವಿಶೇಷ ಕರ್ತವ್ಯಾಧಿಕಾರಿ ದೊಡ್ಡನಾಗಯ್ಯ ಮತ್ತಿತರರು ಉಪಸ್ಥಿತರಿದ್ದರು.

ಸೆ.22ರಂದು ರಾಷ್ಟ್ರಪತಿಗಳಿಗೆ ಆಹ್ವಾನ

ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಸೆ.22ರಂದು ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, ದಸರಾ ಮಹೋತ್ಸವ 2022ರ ಉದ್ಘಾಟನೆಗೆ ಆಹ್ವಾನಿಸಲಿದ್ದಾರೆ.

ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಪ್ರಲ್ಹಾದ ಜೋಶಿ, ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಭಗವಂತ ಖೂಬಾ ಅವರನ್ನೂ ದಸರಾ ಮಹೋತ್ಸವಕ್ಕೆ ಆಹ್ವಾನಿಸಲಿದ್ದಾರೆ.

ಸೆ.26ರಂದು ನಾಡದೇವತೆ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ನಾಡಹಬ್ಬ ಮೈಸೂರು ದಸರಾ ಆರಂಭವಾಗಲಿದೆ. ಅಂದು ಬೆಳಗ್ಗೆ 9.45ರಿಂದ 10.05ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ದಸರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದೆ.

ಸಿದ್ಧತೆಯ ಪ್ರಗತಿ ಪರಿಶೀಲನೆ

ನಾಡಹಬ್ಬ ದಸರಾ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಕಾರ್ಯಕ್ರಮದ ವೇದಿಕೆ ಸಿದ್ಧತೆ, ಗಣ್ಯರು, ಸಾರ್ವಜನಿಕರಿಗೆ ಆಸನದ ವ್ಯವಸ್ಥೆ, ಕಾರ್ಯಕ್ರಮ ವೀಕ್ಷಣೆ, ಭದ್ರತೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ರಾಷ್ಟ್ರಪತಿಗಳ ಕಚೇರಿ ಸೂಚನೆಯಂತೆ ಸಿದ್ಧತೆ ಮಾಡಲಾಗುತ್ತಿದೆ. ಸೂಕ್ತ ರೀತಿಯಲ್ಲಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಸ್ಥಳದ ಲಭ್ಯತೆಗೆ ಅನುಗುಣವಾಗಿ ಸಾರ್ವಜನಿಕರಿಗೆ ಆಸನದ ವ್ಯವಸ್ಥೆ ಮಾಡಲಾಗುತ್ತಿದೆ. 1500-2000 ಜನರು ಸೇರುವಷ್ಟು ಸ್ಥಳವಕಾಶವಿದೆ. ದೇವಸ್ಥಾನಕ್ಕೆ ಆಗಮಿಸುವ ಭಕ್ತರೆಲ್ಲರಿಗೂ ಕಾರ್ಯಕ್ರಮ ವೀಕ್ಷಿಸಲು ಅವಕಾಶವಿದೆ ಎಂದು ಹೇಳಿದರು.

ಬಳಿಕ ದೇವಸ್ಥಾನದ ಪಾರ್ಕಿಂಗ್ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಅಂಗಡಿ ಮಳಿಗೆಗಳು, ಫುಡ್ ಕೋರ್ಟ್‌ಗೆ ಭೇಟಿ ಕೊಟ್ಟರು. ಈ ಸಂದರ್ಭದಲ್ಲಿ ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಪೊಲೀಸ್ ಕಮಿಷನರ್ ಚಂದ್ರಗುಪ್ತ, ಅಪರ ಜಿಲ್ಲಾಧಿಕಾರಿ ಮಂಜುನಾಥಸ್ವಾಮಿ ಸೇರಿದಂತೆ ಹಲವಾರು ಅಧಿಕಾರಿಗಳು, ನಿಗಮ ಮಂಡಳಿಗಳ ಅಧ್ಯಕ್ಷರು ಮತ್ತು ಮುಖಂಡರು ಉಪಸ್ಥಿತರಿದ್ದರು.

-------------------------------------------------------------------

Special Trains on Mysuru Dasara: ಮೈಸೂರು ದಸರಾ 2022ಕ್ಕೆ ದಿನಗಣನೆ ಶುರುವಾಗಿದೆ. ಕೋವಿಡ್‌ ಸಂಕಷ್ಟದ ಬಳಿಕ ನಾಡಹಬ್ಬವನ್ನು ಕಣ್ತುಂಬಿಕೊಳ್ಳಲು ದೇಶವಿದೇಶಗಳಿಂದ ಯಾತ್ರಿಕರು ಆಗಮಿಸುತ್ತಿದ್ದು, ಭಾರತೀಯ ರೈಲ್ವೆ ಇಂದು ವಿಶೇಷ ರೈಲು ಸಂಚಾರದ ವೇಳಾಪಟ್ಟಿ (SPECIAL TRAINS ON DUSSEHARA - Train Timetable) ಪ್ರಕಟಿಸಿದೆ. ಅದರ ವಿವರ ಇಲ್ಲಿದೆ ಗಮನಿಸಿ. Mysuru Dasara 2022: ನಾಡಹಬ್ಬಕ್ಕೆ ಹೊರಟ್ರಾ? ವಿಶೇಷ ರೈಲು ಸಂಚಾರದ ವೇಳಾ ಪಟ್ಟಿ ನೋಡೋಕೆ ಮರೆಯಬೇಡಿ!

Yuva Sambhrama Mysuru Dasara: ಮೈಸೂರಿನ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಯುವ ಸಂಭ್ರಮದ ಆಕರ್ಷಣೆಯಾಗಿದ್ದರು ಚಿತ್ರನಟ ಡಾಲಿ ಧನಂಜಯ್‌. ಬಿಳಿ ಪಂಚೆ, ಬಿಳಿ ಶರ್ಟ್‌ ತೊಟ್ಟು ಸಾಂಪ್ರದಾಯಿಕವಾಗಿ ಕಾಣಿಸಿಕೊಂಡ ಡಾಲಿ ಯುವ ಸಮೂಹದ ನಡುವೆ ಸಂಚಲನ ಮೂಡಿಸಿದರು. ಜಿಲ್ಲಾಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌ ಡೊಳ್ಳು ಬಾರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. Mysuru Dasara 2022 Yuva Sambhrama: ಮೈಸೂರು ದಸರಾ ಯುವ ಸಂಭ್ರಮ ಫೋಟೋಗಳಲ್ಲಿ ಸೆರೆ; ಇಲ್ಲಿವೆ ಕೆಲವು ಫೋಟೋಸ್‌

Mysuru Dasara 2022: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ದಸರಾ 2022ಕ್ಕೆ ದಿನಗಣನೆ ಶುರುವಾಗಿದೆ. ತನ್ನಿಮಿತ್ತ ಮೈಸೂರಿನಲ್ಲಿ ಯುವ ಸಂಭ್ರಮಕ್ಕೆ ಸಚಿವ ಎಸ್.ಟಿ.ಸೋಮಶೇಖರ್‌ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ ಯುವಾಕರ್ಷಣೆಯ ಕೇಂದ್ರ ಬಿಂದುವಾದರು. Mysuru Dasara 2022: ಯುವ ಸಂಭ್ರಮಕ್ಕೆ ಚಾಲನೆ, ಯುವಾಕರ್ಷಣೆಯ ಕೇಂದ್ರ ಬಿಂದು ʻಡಾಲಿʼ ಧನಂಜಯ

ಸಾಂಸ್ಕೃತಿಕ ನಗರಿ ಮೈಸೂರಿನ ಅರಮನೆ ಆವರಣ ನಾಡಹಬ್ಬ ದಸರಾಕ್ಕೆ ಸಜ್ಜಾಗುತ್ತಿದೆ. ಅರಮನೆ ಆವರಣದಲ್ಲಿ ಸೆ.26ರಿಂದ ಅ.3ರ ತನಕ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರ ಪ್ರಕಾರ ಎಂಟು ದಿನಗಳ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ ಹೀಗಿದೆ. Mysuru Dasara 2022: ನಾಡಹಬ್ಬದ ಸಾಂಸ್ಕೃತಿಕ ವೈಭವ; ಯಾವ ದಿನ ಏನು ಪ್ರೋಗ್ರಾಂ? - ಇಲ್ಲಿದೆ

Mysuru Dasara 2022: ನಾಡಹಬ್ಬ ಸೆ.26ರಿಂದ ಶುರುವಾಗಲಿದ್ದು, ಪೂರ್ವಭಾವಿ ಕಾರ್ಯಗಳು ಭರದಿಂದ ಸಾಗಿದೆ. ಈವರೆಗೆ ಏನೇನಾಯಿತು? ಇಲ್ಲಿದೆ ಸಚಿತ್ರ ವರದಿ. Mysuru Dasara 2022: ನಾಡಹಬ್ಬದ ಪೂರ್ವಭಾವಿ ಸಿದ್ದತೆ ಹೇಗಿದೆ? ಇಲ್ಲಿವೆ ಕೆಲವು ಫೋಟೋಸ್‌

Whats_app_banner