ಕನ್ನಡ ಸುದ್ದಿ  /  Karnataka  /  Mysuru News Drinking Water Problem In Karnataka Cm Siddaramaiah Native Mysore Water Problem Mgb

Mysuru: ಸಿಎಂ ಸಿದ್ದರಾಮಯ್ಯನವರ ತವರು ಜಿಲ್ಲೆಯಲ್ಲೇ ಕುಡಿಯುವ ನೀರಿಗೆ ಹಾಹಾಕಾರ; ಖಾಲಿ ಕೊಡಗಳೊಂದಿಗೆ ಮಹಿಳೆಯರ ಪ್ರತಿಭಟನೆ

Mysuru Water Problem: ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಕೇತಹಳ್ಳಿ ಗ್ರಾಮದ ಪರಿಶಿಷ್ಟ ಪಂಗಡ ಕಾಲೋನಿಯಲ್ಲಿ ಕುಡಿಯುವ ನೀರು ದೊರಕಿಸಿಕೊಡುವಂತೆ ಆಗ್ರಹಿಸಿ ಖಾಲಿ ಕೊಡಗಳನ್ನು ಹಿಡಿದು ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. (ರಂಗಸ್ವಾಮಿ.ಪಿ)

ಖಾಲಿ ಕೊಡಗಳೊಂದಿಗೆ ಮಹಿಳೆಯರ ಪ್ರತಿಭಟನೆ
ಖಾಲಿ ಕೊಡಗಳೊಂದಿಗೆ ಮಹಿಳೆಯರ ಪ್ರತಿಭಟನೆ

ಮೈಸೂರು: ಬೇಸಿಗೆಯ ಆರಂಭದಲ್ಲೇ ಮೈಸೂರು ಜಿಲ್ಲೆಯ ಹಲವೆಡೆ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಿದೆ. ಕುಡಿಯುವ ನೀರು ದೊರಕಿಸಿಕೊಡುವಂತೆ ಆಗ್ರಹಿಸಿ ಖಾಲಿ ಕೊಡಗಳನ್ನು ಹಿಡಿದು ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಕೇತಹಳ್ಳಿ ಗ್ರಾಮದ ಪರಿಶಿಷ್ಟ ಪಂಗಡ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಕರೋಹಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿರುವ ಗ್ರಾಮ ಇದಾಗಿದೆ.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ಪ್ರತಿನಿಧಿಸುತ್ತಿರುವ ಕ್ಷೇತ್ರದ ವ್ಯಾಪ್ತಿಗೆ ಸೇರಿರುವ ಕೇತಹಳ್ಳಿ ಗ್ರಾಮದಲ್ಲಿ ಇದೀಗ ಕುಡಿಯುವ ನೀರು ಸಿಗದೇ ಪರಿತಪಿಸುವಂತಾಗಿದೆ. ಹಾಗಾಗಿ ಇಂದು ಕರೋಹಟ್ಟಿ ಗ್ರಾಮ ಪಂಚಾಯತಿ ಮುಂಭಾಗ ಜಮಾಯಿಸಿದ ಮಹಿಳೆಯರು ಖಾಲಿ ಕೊಡಗಳೊಂದಿಗೆ ಪ್ರತಿಭಟನೆ ನಡೆಸಿದರು. ಕುಡಿಯುವ ನೀರಿನ ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸುವಂತೆ ಅಧಿಕಾರಿಗಳ ಬಳಿ ಗ್ರಾಮಸ್ಥರು ಮನವಿ ಮಾಡಿದರು.

ಕಾವೇರಿ, ಕಪಿಲ ನದಿಗಳು ಹರಿಯುತ್ತಿರುವ ಟಿ ನರಸಿಪುರ ತಾಲೂಕಿನಲ್ಲೂ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿರುವುದು ಪರಿಸ್ಥಿತಿಯ ಭೀಕರತೆಗೆ ಹಿಡಿದ ಕನ್ನಡಿಯಾಗಿದೆ. ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ 24×7 ಜಲ ನಿಯಂತ್ರಣ ಕೊಠಡಿ ಸ್ಥಾಪಿಸಿದ್ದರೂ ಕೂಡ ಸಮಸ್ಯೆ ಬಗೆಹರಿಯದ ಕಾರಣ ಗ್ರಾಮೀಣ ಪ್ರದೇಶದ ಜನರನ್ನು ಕಂಗಾಲಾಗಿಸಿದೆ.

ವರದಿ: ರಂಗಸ್ವಾಮಿ.ಪಿ, ಮೈಸೂರು

ಬೆಂಗಳೂರಿನಲ್ಲಿ ನೀರಿನ ಅಭಾವ: ನೀರು ಉಳಿಸಲು ಇಲ್ಲಿವೆ 10 ಸರಳ ಮಾರ್ಗಗಳು

ಬೇಸಿಗೆಗೂ ಮುನ್ನವೇ ಬೆಂಗಳೂರಿಗೆ ನೀರು ಪೂರೈಕೆ ಮಾಡುತ್ತಿದ್ದ ನೀರಿನ ಮೂಲಗಳೇ ಬರಿದಾಗುತ್ತಿದೆ. ಬೆಂಗಳೂರಿನ ಹಲವೆಡೆ ವಾಟರ್​ ಟ್ಯಾಂಕರ್​ ಮೂಲಕ ನೀರು ಪೂರೈಸಲಾಗುತ್ತಿದೆಯಾದರೂ ಅದಕ್ಕೆ ದುಪ್ಪಟ್ಟು ಹಣ ನೀಡಬೇಕಾಗಿದೆ. ಹನಿ ಹನಿ ನೀರಿನ ಬೆಲೆಯೂ ಇದೀಗ ಸಿಟಿ ಜನರಿಗೆ ಅರ್ಥವಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಸದ್ಯ ಪೂರೈಕೆಯಾಗುತ್ತಿರುವ ನೀರಿನ ಬಳಕೆಯನ್ನು ಕಡಿಮೆ ಮಾಡುವುದು ಹಾಗೂ ನೀರನ್ನು ಸಂಗ್ರಹಿಸುವುದು ಅನಿವಾರ್ಯವಾಗಿದೆ. ಇದಕ್ಕಾಗಿ ಒಂದಿಷ್ಟು ಸಲಹೆ ಪಡೆಯಲು ಇಲ್ಲಿ ಕ್ಲಿಕ್​ ಮಾಡಿ

IPL_Entry_Point

ವಿಭಾಗ