Karnataka Election 2023: ಲಜ್ಜೆಗೆಟ್ಟ ಬಿಜೆಪಿ ಧರ್ಮಾಧಾರಿತ ರಾಜಕಾರಣ ಮಾಡುತ್ತಿದೆ; ಎಚ್ ವಿಶ್ವನಾಥ್ ವಾಗ್ದಾಳಿ
H Vishwanath: ʼಪದೇ ಪದೇ ಕರ್ನಾಟಕಕ್ಕೆ ಬರುತ್ತಿರುವ ಪ್ರಧಾನಿ ಮೋದಿ ನಮ್ಮ ರಾಜ್ಯಕ್ಕೆ ನೀಡಿರುವ ಕೊಡುಗೆಯಾದರೂ ಏನು ಎಂದು ಪ್ರಶ್ನಿಸಿರುವ ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ʼಲಜ್ಜೆಗೆಟ್ಟ ಭ್ರಷ್ಟ ಬಿಜೆಪಿ ಮೊದಲು ಆಡಳಿತ ವ್ಯವಸ್ಥೆಯನ್ನು ಸರಿಪಡಿಸಲಿʼ ಎಂದಿದ್ದಾರೆ.
ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಪದೇ ಪದೇ ರಾಜ್ಯಕ್ಕೆ ಬಂದು, ಪ್ರಚಾರ ಕಾರ್ಯಗಳು ಹಾಗೂ ರೋಡ್ ಶೋಗಳಲ್ಲಿ ಭಾಗವಹಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಕಿಡಿಕಾರಿದ್ದಾರೆ.
ʼಪದೇ ಪದೇ ಕರ್ನಾಟಕಕ್ಕೆ ಬರುತ್ತಿರುವ ಪ್ರಧಾನಿ ಮೋದಿ ನಮ್ಮ ರಾಜ್ಯಕ್ಕೆ ನೀಡಿರುವ ಕೊಡುಗೆಯಾದರೂ ಏನು ಎಂದು ಪ್ರಶ್ನಿಸಿರುವ ಅವರು, ಲಜ್ಜೆಗೆಟ್ಟ ಭ್ರಷ್ಟ ಬಿಜೆಪಿ ಮೊದಲು ಆಡಳಿತ ವ್ಯವಸ್ಥೆಯನ್ನು ಸರಿಪಡಿಸಲಿʼ ಎಂದಿದ್ದಾರೆ.
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಹಲವೆಡೆ ತ್ರಿಕೋನ ಸ್ಪರ್ಧೆ ಮತ್ತು ಕೆಲವೆಡೆ ನೇರ ಸ್ಪರ್ಧೆ ಏರ್ಪಡುವ ಲಕ್ಷಣಗಳು ಕಂಡುಬಂದಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಸ್ಪಷ್ಟ ಚಿತ್ರಣ ಗೊತ್ತಾಗಲಿದೆ. ಆಡಳಿತಾರೂಢ ಬಿಜೆಪಿ ಯಾವ ವಿಚಾರ ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತಿದೆ ಎಂಬುದು ಗೊತ್ತಿಲ್ಲ. ಅನ್ನ, ಅಕ್ಷರ, ಆರೋಗ್ಯದ ಬಗ್ಗೆ ಬಿಜೆಪಿ ನಿಲುವು ಏನು ಎಂಬುದನ್ನು ಸ್ಪಷ್ಟಪಡಿಸುತ್ತಿಲ್ಲ. ಅಭಿವೃದ್ಧಿ ವಿಚಾರಗಳನ್ನು ಪ್ರಸ್ತಾಪಿಸುತ್ತಿಲ್ಲ. ಈಗಲೂ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಲು ಬಿಜೆಪಿ ಮುಂದಾಗಿದೆ. ಬಿಜೆಪಿ ಧರ್ಮಾಧಾರಿತ ರಾಜಕಾರಣ ಮಾಡುತ್ತಿದೆʼ ಎಂದು ಗುಡುಗಿದ್ದಾರೆ.
ʼದಕ್ಷಿಣ ಭಾರತದ ಮೇಲೆ ಉತ್ತರ ಭಾರತದವರ ಯಜಮಾನಿಕೆ ಜಾಸ್ತಿಯಾಗುತ್ತಿದೆ. ಕರ್ನಾಟಕದ ಮೇಲೆ ಕೇಂದ್ರದ ಯಜಮಾನಿಕೆ ಹೆಚ್ಚಾಗುತ್ತಿದೆ. ಪ್ರತಿಯೊಂದು ವಿಚಾರಕ್ಕೂ ಜಿಎಸ್‌ಟಿ ಪಾವತಿ ಮಾಡಬೇಕಾಗಿದೆ. ಅಗತ್ಯ ವಸ್ತುಗಳ ಬೆಲೆ ಏರುತ್ತಿದ್ದು ಹೆಣ್ಣುಮಕ್ಕಳು ಶಾಪ ಹಾಕುತ್ತಿದ್ದಾರೆ. ರಾಜ್ಯದ ಜಿಎಸ್‌ಟಿ ಪಾಲು ಸರಿಯಾಗಿ ಸಿಗುತ್ತಿಲ್ಲʼ ಎಂದು ವಿಶ್ವನಾಥ್ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ʼನಮ್ಮಂತಹವರು, ಕುಮಾರಸ್ವಾಮಿ ಅಂತಹವರ ನೆರವಿನಿಂದ ಬಿಜೆಪಿ ಅಧಿಕಾರಕ್ಕೆ ಬಂತು. ಇನ್ನೆಂದಿಗೂ ಕರ್ನಾಟಕ ಮಾತ್ರವಲ್ಲದೆ ಇಡೀ ದಕ್ಷಿಣ ಭಾರತದಲ್ಲೇ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲʼ ಎಂದು ಭವಿಷ್ಯ ನುಡಿದಿರುವ ಅವರು ʼರಾಜಕೀಯ ನಾಯಕರು ತಾತ್ವಿಕ ಟೀಕೆಗಳನ್ನು ಮಾಡಿ, ಆದರೆ ತೀರಾ ವೈಯುಕ್ತಿಕ ಟೀಕೆಗಳನ್ನು ಮಾಡಬೇಡಿʼ ಎಂದೂ ಮನವಿ ಮಾಡಿದ್ದಾರೆ.
ನಿನ್ನ ಬೆತ್ತಲೆ ಪ್ರಪಂಚ ಬಿಡುಗಡೆ ಮಾಡುತ್ತೇನೆ; ಪ್ರತಾಪ್ ಸಿಂಹಗೆ ಟಾಂಗ್
ಇದೇ ವೇಳೆ ಸಂಸದ ಪ್ರತಾಪ್ ಸಿಂಹ ಅವರಿಗೆ ಟಾಂಗ್ ನೀಡಿದ ಎಚ್. ವಿಶ್ವನಾಥ್, ʼಸೋಮಣ್ಣ ಮತ್ತು ಸಿದ್ದರಾಮಯ್ಯ ಕೆಳಹಂತದಿಂದ ರಾಜಕೀಯಕ್ಕೆ ಬಂದವರು. ವರುಣ ಕ್ಷೇತ್ರಕ್ಕೆ ಹೋಗಿ ನಿನ್ನ ಪ್ರತಾಪ ತೋರಿಸಬೇಡ. ನಿನ್ನ ಬೆತ್ತಲೆ ಪ್ರಪಂಚದ ಪ್ರತಾಪ ನಮ್ಮ ಬಳಿ ಇದೆ. ಮುಂದಿನ ದಿನಗಳಲ್ಲಿ ಅದನ್ನು ಬಿಡುಗಡೆ ಮಾಡುತ್ತೇವೆʼ ಎಂದರು.
ವರದಿ: ಧಾತ್ರಿ ಭಾರದ್ವಾಜ್
ಇದನ್ನೂ ಓದಿ
Siddaramaiah: ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ, ಬಿಜೆಪಿ ಎಂದರೆ ಅಮೃತ ಕಾಲ ಎನ್ನುವ ಮೋದಿ ಅವರೇ ಮೊದಲು ನಿಮ್ಮ ಅಂತರಂಗವನ್ನ ಒಮ್ಮೆ ಇಣುಕಿ ನೋಡಿ
ಕಾಂಗ್ರೆಸ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಮೊದಲು ನಿಮ್ಮ ಅಂತರಂಗವನ್ನು ಒಮ್ಮೆ ಇಣುಕಿ ನೋಡಿ ಎಂದಿದ್ದಾರೆ.
ಬೆಂಗಳೂರು: ಕುಡುಚಿ ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿ (Bharatiya Janata Party) ನಿನ್ನೆ (ಏ.29, ಶನಿವಾರ) ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರದ (Election campaign) ಸಾರ್ವಜನಿಕ ಸಭೆಯಲ್ಲಿ (Public Meeting) ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು ಕಾಂಗ್ರೆಸ್ (Congress) ವಿರುದ್ಧ ಭ್ರಷ್ಟಾಚಾರ (Corruption) ಆರೋಪ ಮಾಡಿದ್ದರು.