ಕನ್ನಡ ಸುದ್ದಿ  /  ಕರ್ನಾಟಕ  /  Mysuru Swamiji Murder: ಮೈಸೂರಿನ ಮಠದ ಆವರಣದಲ್ಲಿಯೇ ಹಿರಿಯ ಸ್ವಾಮೀಜಿಯೊಬ್ಬರ ಭೀಕರ ಕೊಲೆ, ಕಾರಣವೇನು?

Mysuru Swamiji Murder: ಮೈಸೂರಿನ ಮಠದ ಆವರಣದಲ್ಲಿಯೇ ಹಿರಿಯ ಸ್ವಾಮೀಜಿಯೊಬ್ಬರ ಭೀಕರ ಕೊಲೆ, ಕಾರಣವೇನು?

Mysuru crime news ಸ್ವಾಮೀಜಿಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನಲ್ಲಿ ಕೊಲೆಯಾದ ಶಿವಾನಂದ ಸ್ವಾಮೀಜಿ
ಮೈಸೂರಿನಲ್ಲಿ ಕೊಲೆಯಾದ ಶಿವಾನಂದ ಸ್ವಾಮೀಜಿ

ಮೈಸೂರು: ಮಠದ ಆವರಣದಲ್ಲಿಯೇ ಮಲಗಿದ್ದ ಸ್ವಾಮೀಜಿಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ.

ಟ್ರೆಂಡಿಂಗ್​ ಸುದ್ದಿ

ಸಾಂಸ್ಕೃತಿಕ ನಗರಿಯಲ್ಲಿ ಹಿರಿಯ‌ ಸ್ವಾಮೀಜಿಯೊಬ್ಬರನ್ನು ಹತ್ಯೆ ಮಾಡಲಾಗಿದ್ದು ಭಕ್ತರು ಬೆಚ್ಚಿಬಿದ್ದಿದ್ದಾರೆ.

ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ( 90 ) ಅವರನ್ನು ಮಠದ ಅವರ ಕೊಠಡಿಯಲ್ಲೇ ಮಾರಕಾಸ್ತ್ರಗಳಿಂದ ಚುಚ್ಚಿ ಕೊಲೆ ಮಾಡಲಾಗಿದೆ.

ಸ್ವಾಮೀಜಿ ಅವರ ಭದ್ರತಾ ಸಿಬ್ಬಂದಿ ಸಹಾಯಕನಾಗಿದ್ದ ರವಿ(60) ಎಂಬಾತ ಸ್ವಾಮೀಜಿಯವರನ್ನು ಹತ್ಯೆ ಮಾಡಿದ್ದಾನೆಂದು ಮಠದಲ್ಲಿದ್ದ‌ ಕೆಲವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮಠಕ್ಕೆ ನಜರ್‌ಬಾದ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಅಲ್ಲಿದ್ದ ಸಿಬ್ಬಂದಿಗಳು ಮತ್ತು ಮಠದಲ್ಲಿದ್ದವರಿಂದ ಮಾಹಿತಿ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಕೊಲೆಯಾದ ಸ್ವಾಮೀಜಿ ಅತ್ಯಂತ ಹಿರಿಯರು ಈ ಕೊಲೆ ಯಾವ ಕಾರಣಕ್ಕಾಗಿ ನಡೆದಿದೆ ಎಂದು ಗೊತ್ತಿಲ್ಲ. ಆದರೆ ಆಸ್ತಿ ವಿಚಾರದಲ್ಲಿ ಇದ್ದ ಭಿನ್ನಾಭಿಪ್ರಾಯದಿಂದ ಈ ಕೃತ್ಯ ಎಸಗಿರಬಹುದು ಎನ್ನುವ ಶಂಕೆಯಿದೆ.

ವಿಷಯ ತಿಳಿದು ಮೈಸೂರು ಮಾತ್ರವಲ್ಲದೇ ನಾನಾ ಭಾಗಗಳಿಂದ ಭಕ್ತರು ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ಕೊಡಿಸಬೇಕೆಂದು ಮಠದ ಭಕ್ತರು ಆಗ್ರಹಿಸಿದರು.

ಮೈಸೂರಿನ ಹಳೆಯ ಮಠಗಳಲ್ಲಿ ಒಂದಾದ ಅನ್ನದಾನೇಶ್ವರ ಮಠದಲ್ಲಿ ದಾಸೋಹ, ಧಾರ್ಮಿಕ ಚಟುವಟಿಕೆಗಳು ಮೊದಲಿನಿಂದಲೂ ನಡೆಯುತ್ತಿವೆ. ಈಗಲೂ ಚಟುವಟಿಕೆಗಳಿದ್ದು, ಹಿರಿಯರಾದ ಶಿವಾನಂದ ಸ್ವಾಮೀಜಿ ಮುಖ್ಯಸ್ಥರಾಗಿದ್ದರು.

ಟಿ20 ವರ್ಲ್ಡ್‌ಕಪ್ 2024

ವಿಭಾಗ