ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಮತ್ತೊಂದು ಭೂ ಹಗರಣ ಆರೋಪ; ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ದೂರು
ಕನ್ನಡ ಸುದ್ದಿ  /  ಕರ್ನಾಟಕ  /  ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಮತ್ತೊಂದು ಭೂ ಹಗರಣ ಆರೋಪ; ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ದೂರು

ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಮತ್ತೊಂದು ಭೂ ಹಗರಣ ಆರೋಪ; ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ದೂರು

ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಮತ್ತೆ ಸಂಕಷ್ಟ ಎದುರಾದಂತಿದೆ. ಮತ್ತೊಂದು ಭೂ ಹಗರಣ ಆರೋಪ ಕೇಳಿಬಂದಿದ್ದು, ಮೈಸೂರಿನಲ್ಲಿ ಲೋಕಾಯುಕ್ತ ಪೊಲೀಸರಿಗೆ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ.

ಸಿದ್ದರಾಮಯ್ಯ ಕುಟುಂಬದ ವಿರುದ್ಧ ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಮತ್ತೊಂದು ದೂರು
ಸಿದ್ದರಾಮಯ್ಯ ಕುಟುಂಬದ ವಿರುದ್ಧ ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಮತ್ತೊಂದು ದೂರು

ಮೈಸೂರು : ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಮತ್ತೊಂದು ಭೂ ಹಗರಣ ಆರೋಪ ಕೇಳಿಬಂದಿದೆ. ಕೆಸರೆ, ಆಲನಹಳ್ಳಿ ಆಗಿ ಇದೀಗ ದಟ್ಟಗಳ್ಳಿ ಬಡಾವಣೆಯಲ್ಲಿ ಅಕ್ರಮ ನಿವೇಶನ ಪಡೆದು ಬೇರೆಯವರಿಗೆ ಮಾರಾಟ ಮಾಡಿದ ಆರೋಪ ವ್ಯಕ್ತವಾಗಿದೆ. ಈ ಸಂಬಂಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತಕ್ಕೆ ಮತ್ತೊಂದು ದೂರು ನೀಡಿದ್ದಾರೆ.

ಮನವಿ ಸಲ್ಲಿಕೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾ 50:50 ಹಗರಣ ವಿಚಾರವಾಗಿ ಲೋಕಾಯುಕ್ತದಲ್ಲಿ ನಾನು ಪ್ರಕರಣ ದಾಖಲಿಸಿದ್ದೆ. ಎಲ್ಲ 50:50 ಅನುಪಾತದ ಸೈಟುಗಳ ಬಗ್ಗೆ ತನಿಖೆ ಮಾಡುವಂತೆ ಮನವಿ ಪತ್ರ ಕೊಟ್ಟಿದ್ದೆ. ಆದರೆ ಲೋಕಾಯುಕ್ತದವರು ಕೇವಲ ಸಿದ್ದರಾಮಯ್ಯ ಕುಟಂಬದ 14 ಸೈಟುಗಳ ಬಗ್ಗೆ ಮಾತ್ರ ತನಿಖೆ ಮಾಡಿದ್ದಾರೆ. ಇತರ ಆರೋಪಿಗಳು ತಪ್ಪಿಸಿಕೊಳ್ಳಲು ಅನುವು ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದರು.

ದಟ್ಟಗಳ್ಳಿ ಗ್ರಾಮದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ 24 ಲಕ್ಷಕ್ಕೆ ಒಂದು ಸೈಟು ಖರೀದಿ ಮಾಡಿ 1 ಕೋಟಿಗೆ ಮಾರಾಟ ಮಾಡಿದ್ದಾರೆ. ಸತ್ಯನಾರಾಯಣ ಎಂಬುವರಿಂದ 2008ರಲ್ಲಿ ಖರೀದಿಸಿ 2014ರಲ್ಲಿ ಮಾರಾಟ ಮಾಡಿದ್ದಾರೆ. 6 ವರ್ಷಗಳಲ್ಲಿ 75 ಲಕ್ಷ ಲಾಭ ಮಾಡಿಕೊಂಡಿದ್ದಾರೆ. 50*80 ವಿಸ್ತೀರ್ಣದ ಸೈಟ್ ಅದು. ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಳ್ಳದ ಸಿಎಂ ಪತ್ನಿ ಪಾರ್ವತಿ ಅವರು ನೋಂದಣಿ ಅಧಿಕಾರಿಗಳನ್ನು ತಾವಿದ್ದ ಕಡೆಗೆ ಕರೆಸಿಕೊಂಡು ಮಾರಾಟ ಮಾಡಿದ್ದಾರೆ. ಹೀಗಾಗಿ ಅವರು ಎಲ್ಲೂ ಕೂಡ ಕಾಣಿಸಿಕೊಳ್ಳುವುದಿಲ್ಲ ಎಂದು ಹೇಳಿದರು.

ಇದೇ ರೀತಿ ಮುಡಾದ ಮಾಜಿ ಆಯುಕ್ತ ನಟೇಶ್ ಅವರು ಸೈಯದ್ ಅಲಿ ಅವರಿಗೆ ಕಾನೂನು ಬಾಹಿರವಾಗಿ ಅನುಕೂಲ ಮಾಡಿಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸೈಯದ್ ಅಲಿ, ನಟೇಶ್ ಹೆಂಡತಿಯ ಸೋದರ ಮಾವ ರಾಜಶೇಖರ್, ಅವರ ಪತ್ನಿ ತಾರಾ ಅವರಿಗೆ ಒಂದು ಸೈಟ್ ಮಂಜೂರು ಮಾಡಿದ್ದಾರೆ. ಈ ಎಲ್ಲವನ್ನೂ ತನಿಖೆ ಮಾಡಿ ಲೋಕಾಯುಕ್ತಕ್ಕೆ ಮತ್ತಷ್ಟು ದಾಖಲೆಯೊಂದಿಗೆ ಮನವಿ ಪತ್ರ ಕೊಟ್ಟಿರುವುದಾಗಿ ಸ್ನೇಹಮಯಿ ಕೃಷ್ಣ ಹೇಳಿಕೆ ನೀಡಿದ್ದಾರೆ.

Jayaraj

TwittereMail
ಜಯರಾಜ್‌ ಅಮಿನ್: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್‌ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಈಟಿವಿ ಭಾರತ್, ಇನ್‌ಶಾರ್ಟ್ಸ್‌ ವಿವಿಧ ವಿಭಾಗಗಳಲ್ಲಿ ಒಟ್ಟು 6 ವರ್ಷಗಳ ಅನುಭವ. ಕಲೆ, ಸಾಹಿತ್ಯ, ಭೂಗೋಳದ ಬಗ್ಗೆ ಹೆಚ್ಚು ಆಸಕ್ತಿ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಹೊಸಮೊಗ್ರು ನಿವಾಸಿ.
Whats_app_banner