ಮೈಸೂರು ಉದಯಗಿರಿ ಗಲಭೆ ಕೇಸ್‌; ಸೋಷಿಯಲ್ ಮೀಡಿಯಾ ಪೋಸ್ಟ್ ಮಾಡಿದ್ದ ಆರೋಪಿಗೆ ಷರತ್ತು ಬದ್ಧ ಜಾಮೀನು
ಕನ್ನಡ ಸುದ್ದಿ  /  ಕರ್ನಾಟಕ  /  ಮೈಸೂರು ಉದಯಗಿರಿ ಗಲಭೆ ಕೇಸ್‌; ಸೋಷಿಯಲ್ ಮೀಡಿಯಾ ಪೋಸ್ಟ್ ಮಾಡಿದ್ದ ಆರೋಪಿಗೆ ಷರತ್ತು ಬದ್ಧ ಜಾಮೀನು

ಮೈಸೂರು ಉದಯಗಿರಿ ಗಲಭೆ ಕೇಸ್‌; ಸೋಷಿಯಲ್ ಮೀಡಿಯಾ ಪೋಸ್ಟ್ ಮಾಡಿದ್ದ ಆರೋಪಿಗೆ ಷರತ್ತು ಬದ್ಧ ಜಾಮೀನು

ಮೈಸೂರು ಉದಯಗಿರಿ ಗಲಭೆ ಕೇಸ್‌ ಸಂಬಂಧಿಸಿದಂತೆ, ವಿವಾದಾತ್ಮಕ ಸೋಷಿಯಲ್ ಮೀಡಿಯಾ ಪೋಸ್ಟ್ ಮಾಡಿದ್ದ ಆರೋಪಿ ಸತೀಶ್‌ಗೆ ಷರತ್ತು ಬದ್ಧ ಜಾಮೀನನ್ನು ನ್ಯಾಯಾಲಯ ಮಂಜೂರು ಮಾಡಿದೆ ಎಂದು ಆರೋಪಿ ಪರ ವಕೀಲರು ತಿಳಿಸಿದ್ದಾರೆ.

ಮೈಸೂರು ಉದಯಗಿರಿ ಗಲಭೆ ಕೇಸ್‌; ಸೋಷಿಯಲ್ ಮೀಡಿಯಾ ಪೋಸ್ಟ್ ಮಾಡಿದ್ದ ಆರೋಪಿಗೆ ಷರತ್ತು ಬದ್ಧ ಜಾಮೀನು ಸಿಕ್ಕಿದೆ. (ಸಾಂಕೇತಿಕ ಚಿತ್ರ)
ಮೈಸೂರು ಉದಯಗಿರಿ ಗಲಭೆ ಕೇಸ್‌; ಸೋಷಿಯಲ್ ಮೀಡಿಯಾ ಪೋಸ್ಟ್ ಮಾಡಿದ್ದ ಆರೋಪಿಗೆ ಷರತ್ತು ಬದ್ಧ ಜಾಮೀನು ಸಿಕ್ಕಿದೆ. (ಸಾಂಕೇತಿಕ ಚಿತ್ರ)

ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಗಲಭೆಗೆ ಕಾರಣವಾದ ಸೋಷಿಯಲ್ ಮೀಡಿಯಾ ಪೋಸ್ಟ್‌ ಹಾಕಿದ್ದ ಆರೋಪಿ ಸತೀಶ್‌ ಅಲಿಯಾಸ್ ಪಾಂಡುರಂಗಗೆ ನ್ಯಾಯಾಲಯ ಇಂದು (ಫೆ 17) ಷರತ್ತು ಬದ್ಧ ಜಾಮೀನು ನೀಡಿದೆ ಎಂದು ಆರೋಪಿ ಪರ ವಕೀಲ ಅ.ಮ. ಭಾಸ್ಕರ ತಿಳಿಸಿದ್ದಾರೆ.

ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣದಲ್ಲಿ, ಸೋಷಿಯಲ್ ಮೀಡಿಯಾ ಪೋಸ್ಟ್ ಮಾಡಿದ್ದ ಆರೋಪಿ ಸತೀಶ್‌ಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಒಬ್ಬರ ಶೂರಿಟಿ ಪಡೆದುಕೊಂಡು ಬಿಡುಗಡೆ ಮಾಡುವಂತೆ ನ್ಯಾಯಾಲಯವು ಪೊಲೀಸರಿಗೆ ನಿರ್ದೇಶಿಸಿದೆ ಎಂದು ಅ. ಮ. ಭಾಸ್ಕರ ಹೇಳಿದ್ದಾರೆ.

ಉದಯಗಿರಿ ಗಲಭೆ ಕೇಸ್‌; ಆರೋಪಿ ಸತೀಶ್‌ಗೆ ಷರತ್ತುಬದ್ಧ ಜಾಮೀನು

ಆರೋಪಿ ಸತೀಶ್‌ಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, ಈ ರೀತಿಯ ಅಪರಾಧಗಳಲ್ಲಿ ಮತ್ತೆ ಭಾಗಿಯಾಗಬಾರದು. ಪೊಲೀಸ್ ಠಾಣೆಗೆ ಹೋಗಿ ತನಿಖೆಗೆ ಸಹಕರಿಸಬೇಕು ಎಂಬಿತ್ಯಾದಿ ಷರತ್ತುಗಳನ್ನು ವಿಧಿಸಿದೆ.

ಬಿ ಎನ್ ಎಸ್ ಕಾಯ್ದೆಯಡಿ 299 ಅಕ್ರಾಕ್ಟ್ ಆಗಬೇಕು ಅಂದ್ರೆ ಅವಹೇಳನಕಾರಿಯಾಗಿ ಚಿತ್ರ ಪ್ರಕಟವಾಗಬೇಕು. ಈ ಪ್ರಕರಣದಲ್ಲಿ ಪೊಲೀಸರು ಆರೋಪಿಯ ಮೊಬೈಲ್ ಸೀಜ್ ಮಾಡಿರಲಿಲ್ಲ. ಯಾವ ಧರ್ಮಕ್ಕೆ ಅವಮಾನವಾಗಿದೆ ಎಂದು ದೂರು ಕೊಡಬೇಕಿತ್ತು. ಯಾರು ಸಹ ನಮ್ಮ ಧರ್ಮಕ್ಕೆ ಧಕ್ಕೆಯಾಗಿದೆ ಎಂದು ದೂರು ಕೊಟ್ಟಿಲ್ಲ. ಆದಾಗ್ಯೂ, ಪೊಲೀಸರು ಸುಮೋಟೊ ಕೇಸ್ ದಾಖಲಿಸಿಕೊಂಡಿದ್ದರು. ಇದು ಸರಿಯಾದ ಕ್ರಮವಲ್ಲ. ಎಫ್ಐಆರ್‌ನಲ್ಲೂ ಸಹ ಸಾಕಷ್ಟು ದೋಷಗಳು ಇತ್ತು ಎಂದು ಆರೋಪಿ ಪರ ವಕೀಲರು ನ್ಯಾಯಾಲಯದ ಗಮನಸೆಳೆದಿದ್ದರು.

ಸೋಷಿಯಲ್ ಮೀಡಿಯಾ ಪೋಸ್ಟರ್ ಮಾಡಿದ್ದು ಯಾರು ಎಂಬುದರ ಬಗ್ಗೆ ತನಿಖೆ ಆಗಬೇಕು. ಸೂಕ್ತ ಸಾಕ್ಷಿಗಳನ್ನು ಕೂಡ ಪೊಲೀಸರು ಕೊಟ್ಟಿಲ್ಲ. ಈ ಎಲ್ಲ ಅಂಶಗಳನ್ನು ಪರಿಗಣಿಸಿದ ನ್ಯಾಯಾಲಯವು, ಆರೋಪಿ ಸತೀಶ್‌ಗೆ ಜಾಮೀನು ಮಂಜೂರು ಮಾಡಿದೆ ಎಂದು ಅ.ಮ. ಭಾಸ್ಕರ್ ವಿವರಿಸಿದರು.

ಉದಯಗಿರಿ ಗಲಭೆ ಕೇಸ್‌ ಏನಿದು ?

ಮೈಸೂರು ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫೆ 9 ರಂದು ವಿವಾದಾತ್ಮಕ ಸೋಷಿಯಲ್ ಮೀಡಿಯಾ ಪೋಸ್ಟ್ ಹಾಕಿದ್ದ ಕಲ್ಯಾಣಗಿರಿಯ ಪಾಂಡುರಂಗ ಅಲಿಯಾಸ್‌ ಸತೀಶ್‌ ಎಂಬಾತನನ್ನು ಪೊಲೀಸರು ಬಂಧಿಸಿ ಠಾಣೆಯಲ್ಲಿರಿಸಿದ್ದರು. ಮುಸ್ಲಿಂ ಧರ್ಮವನ್ನು ಅವಹೇಳನ ಮಾಡಿದ ಪೋಸ್ಟ್ ಅದಾಗಿತ್ತು ಎಂಬುದು ಆರೋಪ. ಫೆ 10 ರಂದು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಮುಸ್ಲಿಂ ಯುವಕರ ಗುಂಪು, ಠಾಣೆ ಮೇಲೆ ಕಲ್ಲು ತೂರಾಟ ನಡೆಸಿ ವಾಹನಗಳಿಗೆ ಜಖಂ ಮಾಡಿತ್ತು. ಈ ದಾಳಿ ಕಾರಣ ಪೊಲೀಸ್ ಇನ್‌ಸ್ಪೆಕ್ಟರ್ ಸೇಇ 14 ಪೊಲೀಸ್ ಸಿಬ್ಬಂದಿಗೆ ಗಾಯವಾಗಿತ್ತು. 10ಕ್ಕೂ ಹೆಚ್ಚು ಪೊಲೀಸ್ ವಾಹನಗಳು ಹಾನಿಗೀಡಾಗಿದ್ದವು. ಈ ಗಲಭೆ ಕೇಸ್‌ ವಿಚಾರದಲ್ಲಿ ಪೊಲೀಸರು 1000ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಸತೀಶ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು.

Umesh Kumar S

TwittereMail
ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.
Whats_app_banner