ಕನ್ನಡ ಸುದ್ದಿ  /  ಕರ್ನಾಟಕ  /  National Youth Festival 2023: ರಾಷ್ಟ್ರೀಯ ಯುವಜನೋತ್ಸವದ ಲೋಗೋ, ಮಸ್ಕಟ್ ಬಿಡುಗಡೆ

National Youth Festival 2023: ರಾಷ್ಟ್ರೀಯ ಯುವಜನೋತ್ಸವದ ಲೋಗೋ, ಮಸ್ಕಟ್ ಬಿಡುಗಡೆ

National Youth Festival 2023: ಹುಬ್ಬಳ್ಳಿ ಧಾರವಾಡದಲ್ಲಿ ಜನವರಿ 12 ರಿಂದ 16ರ ತನಕ ನಡೆಯಲಿರುವ ರಾಷ್ಟ್ರೀಯ ಯುವ ಜನೋತ್ಸವದ ಲೋಗೋ, ಮಸ್ಕಟ್‌ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರೇಷ್ಮೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಬಿಡುಗಡೆ ಮಾಡಿದರು.‌

ರಾಷ್ಟ್ರೀಯ ಯುವ ಜನೋತ್ಸವದ ಲೋಗೋ, ಮಸ್ಕಟ್‌ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಬಿಡುಗಡೆ ಮಾಡಿದರು.‌
ರಾಷ್ಟ್ರೀಯ ಯುವ ಜನೋತ್ಸವದ ಲೋಗೋ, ಮಸ್ಕಟ್‌ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಬಿಡುಗಡೆ ಮಾಡಿದರು.‌

ಬೆಂಗಳೂರು: ಹುಬ್ಬಳ್ಳಿ ಧಾರವಾಡದಲ್ಲಿ ಜನವರಿ 12 ರಿಂದ 16ರ ತನಕ ನಡೆಯಲಿರುವ ರಾಷ್ಟ್ರೀಯ ಯುವ ಜನೋತ್ಸವದ ಲೋಗೋ, ಮಸ್ಕಟ್‌ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರೇಷ್ಮೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಬಿಡುಗಡೆ ಮಾಡಿದರು.‌

ಟ್ರೆಂಡಿಂಗ್​ ಸುದ್ದಿ

ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಲೋಗೋ, ಮಸ್ಕಟ್‌ ಅನ್ನು ಬಿಡುಗಡೆ ಮಾಡಲಾಯಿತು. ಕೇಂದ್ರ ಸರ್ಕಾರದ ಯುವಜನ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ವರ್ಚುವಲ್ ಆಗಿ ಕಾರ್ಯಕ್ರಮದಲ್ಲಿ ಭಾಗಿಯಾದರು. ತಾರಾ ಅನೂರಾಧಾ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಕಾರ್ಯಕ್ರಮದ ಬಳಿಕ ಅನುರಾಗ್ ಸಿಂಗ್ ಠಾಕೂರ್ ನೇತೃತ್ವದಲ್ಲಿ ಸ್ಟೀರಿಂಗ್ ಕಮಿಟಿ ಸಭೆ ನಡೆಯಿತು. ರಾಷ್ಟ್ರೀಯ ಯುವ ಜನೋತ್ಸವದ ಉದ್ಘಾಟನೆ, ಸಿದ್ಧತೆ ಸೇರಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಯಿತು.

ಸ್ವಾಮಿ ವಿವೇಕಾನಂದರ ಜಯಂತಿ ಜನವರಿ 12ರಂದು ಇದ್ದು, ಆ ದಿನವನ್ನು ರಾಷ್ಟ್ರೀಯ ಯುವ ದಿನ ಎಂದು ಆಚರಿಸಲಾಗುತ್ತದೆ. ಅದೇ ದಿನ ರಾಷ್ಟ್ರೀಯ ಯುವಜನೋತ್ಸವಕ್ಕೂ ಚಾಲನೆ ಸಿಗಲಿದೆ.

ಹುಬ್ಬಳ್ಳಿ ಧಾರವಾಡದಲ್ಲಿ ನಡೆಯಲಿರುವ 26ನೇ ರಾಷ್ಟ್ರೀಯ ಯುವ ಜನೋತ್ಸವಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಚಾಲನೆ ನೀಡಲಿದ್ದಾರೆ. ಎಲ್ಲ ರಾಜ್ಯಗಳ ಒಟ್ಟು 7,500ರಷ್ಟು ಪ್ರತಿನಿಧಿಗಳು ಈ ಯುವಜನೋತ್ಸವದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ದೇಶದಲ್ಲಿ ಮೊದಲ ರಾಷ್ಟ್ರೀಯ ಯುವಜನೋತ್ಸವ 1995ರಲ್ಲಿ ಆಯೋಜನೆಯಾಗಿತ್ತು. ಅಂದು ನ್ಯಾಷನಲ್‌ ಇಂಟೆಗ್ರೇಶನ್‌ ಕ್ಯಾಂಪ್‌ನ ಅಧೀನ ಬಹುದೊಡ್ಡ ಚಟುವಟಿಕೆಯಾಗಿ ಇದು ದಾಖಲಾಗಿತ್ತು. ಹುಬ್ಬಳ್ಳಿ -ಧಾರವಾಡದಲ್ಲಿ ನಡೆಯಲಿರುವುದು 26ನೇ ರಾಷ್ಟ್ರೀಯ ಯುವಜನೋತ್ಸವವಾಗಿದೆ. 25ನೇ ರಾಷ್ಟ್ರೀಯ ಯುವಜನೋತ್ಸವದ ಆತಿಥ್ಯವನ್ನು ಪುದುಚೇರಿ ನಿರ್ವಹಿಸಿತ್ತು.

ಗಮನಾರ್ಹ ಸುದ್ದಿಗಳು

SDPI in Karnataka: ಕರ್ನಾಟಕದಲ್ಲಿ ಎಸ್‌ಡಿಪಿಐ ನಿಷೇಧಕ್ಕೆ ಚಿಂತನೆ ಎನ್ನುತ್ತಿವೆ ವರದಿಗಳು

SDPI in Karnataka: ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI)ದ ರಾಜಕೀಯ ಘಟಕವೇ ಸೋಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 2020ರಲ್ಲಿ ನಡೆದ ಗಲಭೆಯಲ್ಲಿ ಎಸ್‌ಡಿಪಿಐ ಕೈವಾಡ ಇರುವುದು ದೃಢಪಟ್ಟ ಕಾರಣ ರಾಜ್ಯ ಬಿಜೆಪಿ ಸರ್ಕಾರ ಈ ಚಿಂತನೆ ನಡೆಸಿದೆ ಎಂದು ವರದಿ ಹೇಳಿದೆ. ವಿವರ ಓದಿಗೆ ಇಲ್ಲಿ ಕ್ಲಿಕ್‌ ಮಾಡಿ

Ediga-Billava Yatra: ಸಮುದಾಯದ ಹಿತಕ್ಕಾಗಿ ಈ ಪಾದಯಾತ್ರೆ; ಸರ್ಕಾರ ಎಚ್ಚೆತ್ತುಕೊಳ್ಳಲಿ ಎಂದ ಡಾ. ಪ್ರಣವಾನಂದ ಸ್ವಾಮೀಜಿ

Ediga-Billava Yatra: ಕಲಬುರ್ಗಿ ಕರದಾಳು ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಡಾ. ಪ್ರಣವಾನಂದ ಸ್ವಾಮೀಜಿ ನೇತೃತ್ವದ ಮಂಗಳೂರಿನಿಂದ ಬೆಂಗಳೂರಿಗೆ ಈಡಿಗ - ಬಿಲ್ಲವ ಮಹಾಪಾದಯಾತ್ರೆ (Ediga-Billava Yatra) ಶುರುವಾಗಿದೆ. ಇದಕ್ಕೆ ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ಶುಕ್ರವಾರ ಚಾಲನೆ ಸಿಕ್ಕಿದೆ. ವಿವರ ಓದಿಗೆ ಇಲ್ಲಿ ಕ್ಲಿಕ್‌ ಮಾಡಿ

Which RTO services are online: ಆರ್‌ಟಿಒದ ಈ 58 ಸೇವೆಗಳನ್ನು ಆನ್‌ಲೈನಲ್ಲೇ ಪಡೆಯಿರಿ; ಆಧಾರ್‌ ದೃಢೀಕರಣ ಇದ್ದರೆ ಸಾಕು

Which RTO services are online: ಸರ್ಕಾರದ ಅಧಿಸೂಚನೆ ಪ್ರಕಾರ, ಯಾವನೇ ವ್ಯಕ್ತಿ ಪರಿವಾಹನ್‌ ಪೋರ್ಟಲ್‌ ಮೂಲಕ ಆನ್‌ಲೈನ್‌ ಸೇವೆ ಪಡೆಯುವುದಾದರೆ, ಆಧಾರ್‌ ದೃಢೀಕರಣ ಪ್ರಕ್ರಿಯೆ ನಡೆಸಬೇಕು. ಆಧಾರ್‌ ಸಂಖ್ಯೆ ಇಲ್ಲದೇ ಇರುವಂಥವರು ಸಮೀಪದ ಆರ್‌ಟಿಒ ಕಚೇರಿಗೆ ತೆರಳಿ ಪರ್ಯಾಯ ಗುರುತು ದಾಖಲೆ ಪತ್ರ ನೀಡಿ ಆ ಸೇವೆಯನ್ನು ಪಡೆಯಬಹುದಾಗಿದೆ. ವಿವರ ಓದಿಗೆ ಇಲ್ಲಿ ಕ್ಲಿಕ್‌ ಮಾಡಿ

ಟಿ20 ವರ್ಲ್ಡ್‌ಕಪ್ 2024