ಕರಾವಳಿಯಲ್ಲಿ ಅತಿವೃಷ್ಟಿ; ದಕ್ಷಿಣ ಕನ್ನಡ ಜಿಲ್ಲೆಗೆ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡ
ಕನ್ನಡ ಸುದ್ದಿ  /  ಕರ್ನಾಟಕ  /  ಕರಾವಳಿಯಲ್ಲಿ ಅತಿವೃಷ್ಟಿ; ದಕ್ಷಿಣ ಕನ್ನಡ ಜಿಲ್ಲೆಗೆ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡ

ಕರಾವಳಿಯಲ್ಲಿ ಅತಿವೃಷ್ಟಿ; ದಕ್ಷಿಣ ಕನ್ನಡ ಜಿಲ್ಲೆಗೆ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡ

ಭಾರಿ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ರಾಷ್ಟ್ರೀಯ ವಿಪತ್ತು ದಳ ಹಾಗೂ ರಾಜ್ಯ ವಿಪತ್ತು ದಳದ ತಂಡಗಳು ಎಲ್ಲಾ ರೀತಿಯ ಸಲಕರಣೆ, ಅಗತ್ಯ ಯಂತ್ರೋಪಕರಣಗಳೊಂದಿಗೆ ಬರಲಿವೆ. ಪ್ರಾಕೃತಿಕ ವಿಪತ್ತುಗಳ ಸಂದರ್ಭದಲ್ಲಿ ಕಾರ್ಯಾಚರಿಸಲಿದೆ.

ಕರಾವಳಿಯಲ್ಲಿ ಅತಿವೃಷ್ಟಿ; ದಕ್ಷಿಣ ಕನ್ನಡ ಜಿಲ್ಲೆಗೆ ಎನ್‌ಡಿಆರ್‌ಫ್ ಹಾಗೂ ಎಸ್‌ಡಿಆರ್‌ಎಫ್ ತಂಡ
ಕರಾವಳಿಯಲ್ಲಿ ಅತಿವೃಷ್ಟಿ; ದಕ್ಷಿಣ ಕನ್ನಡ ಜಿಲ್ಲೆಗೆ ಎನ್‌ಡಿಆರ್‌ಫ್ ಹಾಗೂ ಎಸ್‌ಡಿಆರ್‌ಎಫ್ ತಂಡ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣೆಗೆ ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ದಳಗಳು ಜಿಲ್ಲೆಗೆ ಆಗಮಿಸಲಿದೆ ಎಂದು ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ. ಆನಂದ್ ತಿಳಿಸಿದ್ದಾರೆ. ಮೇ 25ರ ಭಾನುವಾರ ಜಿಲ್ಲೆಯ ಮಳೆ ಪರಿಸ್ಥಿತಿ ಬಗ್ಗೆ ಅಧಿಕಾರಿಗಳೊಂದಿಗೆ ಆನ್‌ಲೈನ್ ಸಭೆ ನಡೆಸಿ ಮಾತನಾಡಿದರು. ರಾಷ್ಟ್ರೀಯ ವಿಪತ್ತು ದಳದ(ಎನ್‌ಡಿಆರ್‌ಎಫ್) ಒಂದು ತಂಡವು ಆಗಮಿಸಲಿದ್ದು, ಇದನ್ನು ಪುತ್ತೂರಿನಲ್ಲಿ ಇಡಲಾಗುವುದು. ರಾಜ್ಯ ವಿಪತ್ತು ದಳದ (ಎಸ್‌ಡಿಆರ್‌ಎಫ್) ಎರಡು ತಂಡಗಳನ್ನು ಮಂಗಳೂರು ಹಾಗೂ ಸುಬ್ರಹ್ಮಣ್ಯದಲ್ಲಿ ಇರಿಸಲಾಗಿದೆ ಎಂದರು.

ಈ ದಳಗಳು ಎಲ್ಲಾ ರೀತಿಯ ಸಲಕರಣೆ, ಅಗತ್ಯ ಯಂತ್ರೋಪಕರಣಗಳೊಂದಿಗೆ ಬರಲಿದೆ. ಪ್ರಾಕೃತಿಕ ವಿಪತ್ತುಗಳ ಸಂದರ್ಭದಲ್ಲಿ ಕಾರ್ಯಾಚರಿಸಲಿದೆ. ಎಸ್.ಡಿ.ಆರ್.ಎಫ್. ತಂಡ ಈಗಾಗಲೇ ಆಗಮಿಸಿದೆ ಎಂದು ಅವರು ಹೇಳಿದರು.

ವಿಪತ್ತು ನಿರ್ವಹಣೆಗೆ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಮತ್ತು ಗ್ರಾ.ಪಂ. ಪಿಡಿಒಗಳು ತಮ್ಮ ವ್ಯಾಪ್ತಿಯಲ್ಲಿ ಕಟ್ಟೆಚ್ಚರದಿಂದ ಇರಬೇಕು. ಯಾವುದೇ ಪ್ರಾಕೃತಿಕ ದುರಂತಗಳು ಸಂಭವಿಸಿದರೆ ತಕ್ಷಣವೇ ಸ್ಪಂದಿಸಬೇಕು. ಜೀವ ಹಾನಿ ತಪ್ಪಿಸಲು ಆದ್ಯತೆ ನೀಡಬೇಕು. ತಾಲೂಕು ಆಡಳಿತದೊಂದಿಗೆ ಸಮನ್ವಯದಿಂದ ಕಾರ್ಯಾಚರಿಸಿ, ದುರಂತದ ತೀವ್ರತೆ ತಗ್ಗಿಸಬೇಕು. ಮೆಸ್ಕಾಂ, ಅರಣ್ಯ ಸೇರಿದಂತೆ ಸಂಬಂಧಿಸಿದ ಯಾವುದೇ ಇಲಾಖೆಗಳು ತ್ವರಿತವಾಗಿ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

5 ದಿನ ರೆಡ್ ಅಲರ್ಟ್

ಹವಾಮಾನ ಇಲಾಖೆಯು 5 ದಿನ ರೆಡ್ ಅಲರ್ಟ್ ಘೋಷಿಸಿದೆ. ಈ ಹಿಂದೆ ದುರ್ಘಟನೆ ಆಗಿರುವ ಸ್ಥಳಗಳಲ್ಲಿ ಎಚ್ಚರಿಕೆಯಿಂದ ಇರಬೇಕು. ಜೆಸಿಬಿ, ಬೋಟುಗಳನ್ನು ಸಿದ್ಧವಾಗಿಡಬೇಕು. ಶಾಲೆಗಳು ಶುರು ಆಗುವ ಮೊದಲು ಶಿಥಿಲಗೊಂಡಿರುವ ಅಂಗನವಾಡಿ ಮತ್ತು ಶಾಲಾ ಕೊಠಡಿಗಳನ್ನು ತೆರವುಗೊಳಿಸಲು ಡಾ. ಕೆ. ಆನಂದ್ ಸೂಚಿಸಿದರು.‌

ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳಿಂದ ಕೆಲವು ಜನವಸತಿ ಪ್ರದೇಶಗಳಲ್ಲಿ ತೀವ್ರ ತೊಂದರೆಯಾಗಿರುವ ಬಗ್ಗೆ ದೂರು ಬಂದಿವೆ. ಈ ಬಗ್ಗೆ ಕೂಡಲೇ ಸ್ಪಂದಿಸಿ ಕ್ರಮ ಕೈಗೊಳ್ಳಲು ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಸೂಚಿಸಿದರು.

ಮಳೆಗಾಲ ಶುರು ಆಗುವ ಮೊದಲೇ ಮೀನುಗಾರಿಕೆ ತೆರಳಿದ್ದ ಬೋಟುಗಳು ಹವಾಮಾನ ವೈಪರೀತ್ಯಗಳಿಂದ ಹಿಂದಿರುಗಿ ಬರುತ್ತಿವೆ. ಈ ಬೋಟುಗಳಿಗೆ ಎನ್.ಎಂ.ಪಿ.ಎ. ಬಂದರಿಗೆ ಪ್ರವೇಶಿಸಲು ಅನುಮತಿ ನೀಡಲು ಸೂಚಿಸಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು, ತಹಶೀಲ್ದಾರರು ಉಪಸ್ಥಿತರಿದ್ದರು.

Jayaraj

TwittereMail
ಜಯರಾಜ್‌ ಅಮಿನ್: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಸೀನಿಯರ್ ಕಂಟೆಂಟ್‌ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಈಟಿವಿ ಭಾರತ್, ಇನ್‌ಶಾರ್ಟ್ಸ್‌ ವಿವಿಧ ವಿಭಾಗಗಳಲ್ಲಿ ಒಟ್ಟು 6 ವರ್ಷಗಳ ಅನುಭವ. ಕಲೆ, ಸಾಹಿತ್ಯ, ಭೂಗೋಳದ ಬಗ್ಗೆ ಹೆಚ್ಚು ಆಸಕ್ತಿ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಹೊಸಮೊಗ್ರು ನಿವಾಸಿ.