ಕನ್ನಡ ಸುದ್ದಿ  /  ಕರ್ನಾಟಕ  /  Shivamogga Isis Conspiracy: ಶಿವಮೊಗ್ಗ ಐಸಿಸ್ ಸಂಚು ಪ್ರಕರಣ: ಮತ್ತಿಬ್ಬರು ಉಗ್ರರನ್ನು ಬಂಧಿಸಿದ ಎನ್‌ಐಎ

Shivamogga ISIS conspiracy: ಶಿವಮೊಗ್ಗ ಐಸಿಸ್ ಸಂಚು ಪ್ರಕರಣ: ಮತ್ತಿಬ್ಬರು ಉಗ್ರರನ್ನು ಬಂಧಿಸಿದ ಎನ್‌ಐಎ

ಶಿವಮೊಗ್ಗ ಐಸಿಸ್ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಉಗ್ರರನ್ನು ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬುಧವಾರ ತಿಳಿಸಿದೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶಿವಮೊಗ್ಗ: ಶಿವಮೊಗ್ಗ ಐಸಿಸ್ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಉಗ್ರರನ್ನು ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬುಧವಾರ ತಿಳಿಸಿದೆ.

ಟ್ರೆಂಡಿಂಗ್​ ಸುದ್ದಿ

ಭಾರತದಲ್ಲಿ ಇಸ್ಲಾಮಿಕ್ ಸ್ಟೇಟ್‌ನ (ಐಎಸ್) ಭಯೋತ್ಪಾದಕ ಚಟುವಟಿಕೆಗಳನ್ನು ಮತ್ತಷ್ಟು ಹೆಚ್ಚಿಸಲು ಆರೋಪಿಗಳು ರೂಪಿಸಿದ ಸಂಚಿಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಮಜಿನ್ ಅಬ್ದುಲ್ ರಹಮಾನ್ ಮತ್ತು ದಾವಣಗೆರೆ ನದೀಮ್ ಅಹ್ಮದ್ ಎಂದು ಗುರುತಿಸಲಾದ ಇಬ್ಬರು ಐಸಿಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಎನ್‌ಐಎ ಮಾಹಿತಿ ನೀಡಿದೆ.

2022ರ ಸೆಪ್ಟೆಂಬರ್ 19 ರಂದು ಶಿವಮೊಗ್ಗದ ತುಂಗಾ ನದಿ ತೀರದಲ್ಲಿ ಪ್ರಾಯೋಗಿಕವಾಗಿ ಬಾಂಬ್ ಸ್ಫೋಟಸಿದ್ದ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನವೆಂಬರ್ 4 ರಂದು ತನಿಖೆಯನ್ನು ಎನ್ಐಎಗೆ ಹಸ್ತಾಂತರಿಸಲಾಗಿತ್ತು. ಪ್ರಕರಣದಲ್ಲಿ ಇತರ ನಾಲ್ವರು ಆರೋಪಿಗಳನ್ನು ಈ ಹಿಂದೆ ಬಂಧಿಸಲಾಗಿತ್ತು.

ಪ್ರಮುಖ ಆರೋಪಿಗಳಾದ ಮಾಜ್ ಮುನೀರ್ ಹಾಗೂ ಸೈಯದ್ ಯಾಸೀನ್ ಎಂಬವರು ಮಜಿನ್ ಅಬ್ದುಲ್ ರಹಮಾನ್ ಮತ್ತು ನದೀಮ್ ಅಹ್ಮದ್​​ರನ್ನು ಭಾರತದಲ್ಲಿ ಇಸ್ಲಾಮಿಕ್ ಸ್ಟೇಟ್‌ನ ಭಯೋತ್ಪಾದಕ ಚಟುವಟಿಕೆಗಳನ್ನು ಹೆಚ್ಚಿಸಲು ಉಗ್ರಗಾಮಿಯಾಗಿ ನೇಮಕ ಮಾಡಿಕೊಂಡಿದ್ದರು ಎಂಬುದು ಎನ್‌ಐಎ ತನಿಖೆಯಿಂದ ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

ಬಂಧಿತರಾಗಿರುವ ಎಲ್ಲಾ ಆರೋಪಿಗಳು ಶಿವಮೊಗ್ಗವನ್ನು ಕೇಂದ್ರ ಸ್ಥಳವನ್ನಾಗಿಸಿಕೊಂಡು ಮಂಗಳೂರು ಸೇರಿದಂತೆ ವಿವಿಧೆಡೆ ಉಗ್ರ ಚಟುವಟಿಕೆ ನಡೆಸಲು ಸಂಚು ರೂಪಿಸಿದ್ದರು ಎನ್ನಲಾಗಿದೆ. ಮೂವರೂ ಬಾಂಬ್‌ ತಯಾರಿಸುವ ಬಗ್ಗೆ ತರಬೇತಿ ಪಡೆದಿದ್ದರು. ವಿದೇಶಿ ಉಗ್ರ ಸಂಘಟನೆಯ ಸದಸ್ಯರ ಜೊತೆ ಇವರು ಸಂವಹನ ನಡೆಸುತ್ತಿದ್ದರು ಎಂಬುದರ ಬಗ್ಗೆ ಸಾಕ್ಷ್ಯಗಳು ಲಭ್ಯವಾಗಿದೆ ಎನ್ನಲಾಗುತ್ತಿದೆ.

ಕಾಂಗ್ರೆಸ್‌ ಕಚೇರಿ ಮೇಲೆ ಎನ್‌ಐಎ ದಾಳಿ

ಮಂಗಳೂರು ಕುಕ್ಕರ್‌ ಬ್ಲಾಸ್ಟ್ ಕೇಸ್‌ಗೆ ಸಂಬಂಧಪಟ್ಟಂತೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿರುವ ಆರೋಪಿ ಶಾರೀಖ್‌​ನ ಅಜ್ಜಿ ಮನೆ ಹಾಗೂ ಕಾಂಗ್ರೆಸ್‌ ಕಚೇರಿ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್‌ ಅವರನ್ನು ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಶಾರೀಖ್‌ ಕುಟುಂಬದ ಆಸ್ತಿಯನ್ನು ಕಾಂಗ್ರೆಸ್‌ ಪಕ್ಷ ಲೀಸ್‌ಗೆ ಪಡೆದಿರುವ ಕುರಿತು ವಿಚಾರಣೆ ನಡೆಸಲಾಗಿದೆ ಎನ್ನಲಾಗಿದೆ.

ತೀರ್ಥಹಳ್ಳಿ ಪಟ್ಟಣದಲ್ಲಿರುವ ಕಾಂಗ್ರೆಸ್ ಕಚೇರಿ ಹಾಗೂ ಅದರ ಮೇಲೆ ಇರುವ ಬಾಡಿಗೆ ಕಟ್ಟಡವು ಶಾರಿಖ್ ಕುಟುಂಬಕ್ಕೆ ಸಂಬಂಧಿಸಿದೆ. ಹೀಗಾಗಿ ಬಾಡಿಗೆದಾರರೊಂದಿಗಿನ ಕರಾರು ಪತ್ರಗಳನ್ನು ಎನ್‌ಐಎ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಿಮ್ಮನೆ ರತ್ನಾಕರ್‌, ನನ್ನ ಮನೆಯ ಮೇಲೆ ಇಡಿ ದಾಳಿಯಾಗಿದೆ ಎಂದು ಬಿಜೆಪಿ ಸುಳ್ಳು ಪ್ರಚಾರ ಮಾಡಿದೆ. ಮನೆ ಪರಿಶೀಲನೆ ನಡೆಸಿದರೆ 10 ಸಾವಿರ ರೂಪಾಯಿ ಕೂಡ ಸಿಗುವುದಿಲ್ಲ. ಬಿಜೆಪಿಯ ಸುಳ್ಳುಗಳಿಗೆ ದೃಶ್ಯಮಾಧ್ಯಮ ಪೂರಕವಾಗಿ ಸುದ್ದಿ ಭಿತ್ತರಿಸಿದೆ. ದೇಶ ಮತ್ತು ನಾಡು ಶಾಂತಿಯಿಂದ ಇರಲಿ. ಕಾಂಗ್ರೆಸ್ ಪಕ್ಷಕ್ಕೂ ಶಾರಿಖ್ ಕುಟುಂಬಕ್ಕೂ ಸಂಬಂಧ ಇಲ್ಲ. ಎನ್‌ಐಎ ಕಚೇರಿ ಬಾಡಿಗೆಯ ಕುರಿತು ಮಾಹಿತಿ ಕೇಳಿದ್ದು, ಅದನ್ನು ಪೂರೈಸಿದ್ದೇನೆ ಎಂದು ಹೇಳಿದ್ದಾರೆ.

IPL_Entry_Point