ಕನ್ನಡ ಸುದ್ದಿ  /  Karnataka  /  No Board Exam For Class 5 And 8 Karnataka High Court Quashes Govt Circulars

No board Exam for class 5 & 8: ರಾಜ್ಯದಲ್ಲಿ 5, 8ನೇ ತರಗತಿಗಿಲ್ಲ ಬೋರ್ಡ್‌ ಎಕ್ಸಾಂ; ಶಿಕ್ಷಣ ಇಲಾಖೆ ಆದೇಶ ರದ್ದುಗೊಳಿಸಿದ ಹೈಕೋರ್ಟ್‌

No board Exam for class 5 & 8: ರಾಜ್ಯದಲ್ಲಿ ಈ ವರ್ಷ 5 ಮತ್ತು 8ನೇ ತರಗತಿಯ ಬೋರ್ಡ್ ಪರೀಕ್ಷೆ ನಡೆಯುವುದಿಲ್ಲ. ರಾಜ್ಯ ಹೈಕೋರ್ಟ್‌ ಶುಕ್ರವಾರ ಈ ಕುರಿತು ತೀರ್ಪು ನೀಡಿದ್ದು, ಶಿಕ್ಷಣ ಇಲಾಖೆಯ ಆದೇಶವನ್ನು ರದ್ದುಗೊಳಿಸಿದೆ.

ಕರ್ನಾಟಕ ಹೈಕೋರ್ಟ್‌
ಕರ್ನಾಟಕ ಹೈಕೋರ್ಟ್‌

ರಾಜ್ಯದಲ್ಲಿ 5 ಮತ್ತು 8ನೆ ತರಗತಿಗೆ ಬೋರ್ಡ್‌ ಪರೀಕ್ಷೆ ನಡೆಸುವ ಪ್ರಯತ್ನದಲ್ಲಿದ್ದ ಶಿಕ್ಷಣ ಇಲಾಖೆಗೆ ಹಿನ್ನಡೆ ಆಗಿದೆ. 5 ಮತ್ತು 8ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಿ ಹೈಕೋರ್ಟ್‌ನ ಏಕಸದಸ್ಯ ಪೀಠ ಶುಕ್ರವಾರ ತೀರ್ಪು ನೀಡಿದೆ.

ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಏಕಸದಸ್ಯ ಪೀಠ, ರಾಜ್ಯ ಶಿಕ್ಷಣ ಇಲಾಖೆ 2022ರ ಡಿಸೆಂಬರ್‌ 12ರಂದು ಪ್ರಕಟಿಸಿದ್ದ ಸುತ್ತೋಲೆಯನ್ನು ಅನೂರ್ಜಿತಗೊಳಿಸಿದೆ. ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘವು ಶಿಕ್ಷಣ ಇಲಾಖೆಯ ಸುತ್ತೋಲೆ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿತ್ತು.

ಈ ಶೈಕ್ಷಣಿಕ ವರ್ಷದಿಂದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದು ಸರಿಯಲ್ಲ. 2022-23ನೇ ಸಾಲಿನ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ವಿಧಾನವನ್ನು ಬದಲಿಸುವ ಪ್ರಯತ್ನ ಕಾರ್ಯಸಾಧುವಲ್ಲ ಎಂದು ಸಂಘದ ಪರ ವಕೀಲರು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಡುವಲ್ಲಿ ಸಫಲರಾದರು.

ಸಂಘದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠವು, ಸೂಕ್ತ ಉಪಕ್ರಮಗಳೊಂದಿಗೆ ನಿಯಮಗಳಿಗನುಸಾರ ಮುಂದಿನ ಶೈಕ್ಷಣಿಕ ವರ್ಷದಿಂದ ಬೋರ್ಡ್ ಪರೀಕ್ಷೆ ನಡೆಸಬಹುದು ಎಂದು ಅಭಿಪ್ರಾಯ ಪಟ್ಟಿದೆ.

ಮಕ್ಕಳ ಕಲಿಕೆಯನ್ನು ಉತ್ತಮಗೊಳಿಸುವುದಕ್ಕೆ 2022-23ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆ ನಡೆಸುವುದಕ್ಕೆ ವೇಳಾಪಟ್ಟಿಯನ್ನೂ ಪ್ರಕಟಿಸಿತ್ತು. ಮಾ.13ರಿಂದ 18ರವರೆಗೆ ಮೌಲ್ಯಾಂಕನ ಪರೀಕ್ಷೆಗೆ ದಿನ ನಿಗದಿ ಮಾಡಿತ್ತು. ಈಗ ಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಇನ್ನು ಶಾಲಾ ಮಟ್ಟದಲ್ಲೇ ಹೊಸದಾಗಿ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಲಿದೆ.

ನಿನ್ನೆಯಷ್ಟೇ ಪರೀಕ್ಷಾ ಸಿದ್ಧತೆಗೆ ಆದೇಶ ನೀಡಿದ್ದ ಇಲಾಖೆ

ಸ್ಟೇಟ್‌ ಸಿಲೆಬೆಸ್‌ನ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸುತ್ತಿರುವ ಮೌಲ್ಯಾಂಕನ ಪರೀಕ್ಷೆಗೆ ಆಯಾ ಶಾಲೆಗಳನ್ನೇ ಪರೀಕ್ಷಾ ಕೇಂದ್ರಗಳಾಗಿ ಪರಿಗಣಿಸುವಂತೆ ಶಿಕ್ಷಣ ಇಲಾಖೆ ನಿನ್ನೆಯಷ್ಟೆ ಸೂಚನೆ ನೀಡಿತ್ತು.

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಬೋಧನೆ ಮಾಡುತ್ತಿರುವ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮಾ.13ರಿಂದ 18ರ ವರೆಗೆ ಮೌಲ್ಯಾಂಕನ ಪರೀಕ್ಷೆ ನಡೆಸುವುದಾಗಿ ಇಲಾಖೆ ಮತ್ತೊಮ್ಮೆ ನೆನಪಿಸಿತ್ತು. ಈ ಪರೀಕ್ಷೆಗಳನ್ನು ವಿದ್ಯಾರ್ಥಿಗಳ ಸಂಖ್ಯೆ ಆಧರಿಸಿ ಪರೀಕ್ಷಾ ಕೇಂದ್ರಗಳನ್ನು ರಚಿಸುವಂತೆ ಸೂಚಿಸಿತ್ತು.

ಪರೀಕ್ಷೆ ನಡೆಸುವ ಸಂಬಂಧ ಮಾ.3 ರಿಂದಲೇ ಇಲಾಖೆಯ ಸಹಾಯವಾಣಿ ಕಾರ್ಯಾರಂಭ ಮಾಡಿದೆ. ವಿದ್ಯಾರ್ಥಿಗಳು ಪ್ರಸ್ತುತ ಶಾಲೆಯಿಂದ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅನನುಕೂಲ ಆಗುತ್ತಿರುವ ಬಗ್ಗೆ ಹಲವು ಪಾಲಕರು ದೂರವಾಣಿ ಮೂಲಕ ತಿಳಿಸಿದ್ದರು.

ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆಯಾ ಶಾಲೆಗಳನ್ನೇ ಪರೀಕ್ಷಾ ಕೇಂದ್ರಗಳನ್ನಾಗಿ ಪರಿಗಣಿಸಿ ಈಗಾಗಲೆ ನಿಗದಿಪಡಿಸಿದ ದಿನಾಂಕಗಳಂದೇ ಮೌಲ್ಯಾಂಕನ ನಡೆಸಬೇಕೆಂದು ಕರ್ನಾಟಕ ಶಾಲಾ ಗುಣಮಟ್ಟ ಮತ್ತು ಅಂಗೀಕರಣ ಪರಿಷತ್ತು ತಿಳಿಸಿತ್ತು.

ಗಮನಿಸಬಹುದಾದ ಸುದ್ದಿಗಳು

ಬೆಂಗಳೂರಲ್ಲಿ ರೈತರಿಗೆ, ರೈತರ ಮಕ್ಕಳಿಗಾಗಿ 10 ತಿಂಗಳ ತೋಟಗಾರಿಕೆ ತರಬೇತಿ; ಯಾವಾಗ - ಎಲ್ಲಿ? ಅರ್ಹತೆ, ಮಾನದಂಡ ಏನು

Horticulture Training: ತೋಟಗಾರಿಕೆಯಲ್ಲಿ ಆಸಕ್ತಿ ಇದೆಯೇ? ತೋಟಗಾರಿಕಾ ಪ್ರಾಯೋಗಿಕ ತರಬೇತಿ ಪಡೆಯುವುದಕ್ಕೆ ಅವಕಾಶ ಇರುವಂತಹ 10 ತಿಂಗಳ ತೋಟಗಾರಿಕೆ ತರಬೇತಿ ಬೆಂಗಳೂರಿನ ತೋಟಗಾರಿಕಾ ಕೇಂದ್ರದಲ್ಲಿ ಮೇ ತಿಂಗಳಿಂದ ಶುರುವಾಗುತ್ತಿದೆ. ಇದರ ವಿವರ ಇಲ್ಲಿದೆ.

ಏನಿದು ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನಾ?; ಯುವ ಸ್ವಸಹಾಯ ಸಂಘ ರಚನೆಗೆ ಏನು ಮಾನದಂಡ

Swami Vivekananda Yuva Shakti Yojana: ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ ಎರಡು ಸ್ವಾಮಿ ವಿವೇಕಾನಂದ ಸ್ವಸಹಾಯ ಗುಂಪುಗಳಂತೆ 12,000 ಸ್ವಾಮಿ ವಿವೇಕಾನಂದ ಯುವ ಸ್ವಸಹಾಯ ಗುಂಪುಗಳ ರಚನೆಗೆ ಆದೇಶ ಹೊರಡಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ತಿಳಿಸಿದ್ದಾರೆ. ಏನಿದು ಯೋಜನೆ, ಮಾನದಂಡಗಳೇನು? ಇಲ್ಲಿದೆ ವಿವರ.

IPL_Entry_Point