ಕನ್ನಡ ಸುದ್ದಿ  /  Karnataka  /  No One Can Destroy Regional Parties Says Jds National President Hd Deve Gowda

HD Deve Gowda: ಪ್ರಾದೇಶಿಕ ಪಕ್ಷಗಳೆಂದರೆ ಈ ಪರಿಯ ನಡುಕವೇ?: ರಾಷ್ಟ್ರೀಯ ಪಕ್ಷಗಳ ಕಾಲೆಳೆದ ಹೆಚ್‌ಡಿ ದೇವೇಗೌಡ!

ಪ್ರಾದೇಶಿಕ ಪಕ್ಷಗಳೆಂದರೆ ರಾಷ್ಟ್ರೀಯ ಪಕ್ಷಗಳಿಗೆ ಸದಾ ಭಯ ಕಾಡುತ್ತಿರುತ್ತದೆ. ಪ್ರಾದೇಶಿಕ ಪಕ್ಷಗಳ ಅಸ್ತಿತ್ವ ನಾಶ ಮಾಡಲು ರಾಷ್ಟ್ರೀಯ ಪಕ್ಷಗಳು ಹಾತೋರೆಯುತ್ತಿರುತ್ತವೆ. ಆದರೆ ಪ್ರಾದೇಶಿಕ ಪಕ್ಷಗಳನ್ನು ನಾಶ ಮಾಡುವುದು ಅಷ್ಟು ಸುಲಭವಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಮರುಆಯ್ಕೆಗೊಂಡಿರುವ ಮಾಜಿ ಪ್ರಧಾನಮಂತ್ರಿ ಹೆಚ್‌ಡಿ ದೇವೇಗೌಡ ಗುಡುಗಿದ್ದಾರೆ.

ಹೆಚ್‌ಡಿ ದೇವೇಗೌಡ
ಹೆಚ್‌ಡಿ ದೇವೇಗೌಡ (ANI)

ಬೆಂಗಳೂರು: ಪ್ರಾದೇಶಿಕ ಪಕ್ಷಗಳೆಂದರೆ ರಾಷ್ಟ್ರೀಯ ಪಕ್ಷಗಳಿಗೆ ಈ ಪರಿಯ ಹೆದರಿಕೆ ಏಕೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಜೆಡಿಎಸ್‌ ವರಿಷ್ಠ ಹಾಗೂ ಮಾಜಿ ಪ್ರಧಾನಮಂತ್ರಿ ಹೆಚ್‌ಡಿ ದೇವೇಗೌಡ ಕಿಚಾಯಿಸಿದ್ದಾರೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಮರುಆಯ್ಕೆಗೊಂಡ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪ್ರಾದೇಶಿಕ ಪಕ್ಷಗಳ ಅಸ್ತಿತ್ವವನ್ನು ಯಾರಿಂದಲೂ ನಾಶ ಮಾಡಲು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ.

ಪ್ರಾದೇಶಿಕ ಪಕ್ಷಗಳೆಂದರೆ ರಾಷ್ಟ್ರೀಯ ಪಕ್ಷಗಳಿಗೆ ಸದಾ ಭಯ ಕಾಡುತ್ತಿರುತ್ತದೆ. ಪ್ರಾದೇಶಿಕ ಪಕ್ಷಗಳ ಅಸ್ತಿತ್ವ ನಾಶ ಮಾಡಲು ರಾಷ್ಟ್ರೀಯ ಪಕ್ಷಗಳು ಹಾತೋರೆಯುತ್ತಿರುತ್ತವೆ. ಆದರೆ ಪ್ರಾದೇಶಿಕ ಪಕ್ಷಗಳನ್ನು ನಾಶ ಮಾಡುವುದು ಅಷ್ಟು ಸುಲಭವಲ್ಲ ಎಂದು ಹೆಚ್‌ಡಿ ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ ಮಾತ್ರವಲ್ಲದೇ ದೇಶದ ವಿವಿಧ ರಾಜ್ಯಗಳಲ್ಲಿ ಅಸ್ತಿತ್ವದಲ್ಲಿರುವ ಪ್ರಾದೇಶಿಕ ಪಕ್ಷಗಳು ತಮ್ಮದೇ ಆದ ರಾಜಕೀಯ ಮಹತ್ವವನ್ನು ಹೊಂದಿದ್ದು, ಈ ಪ್ರಾದೇಶಿಕ ಪಕ್ಷಗಳನ್ನು ನಾಶ ಮಾಡಲು ರಾಷ್ಟ್ರೀಯ ಪಕ್ಷಗಳಿಗೆ ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ಹೇಳಿದ್ದಾರೆ.

ಪ್ರಾದೇಶಿಕ ಪಕ್ಷಗಳು ಆಯಾ ರಾಜ್ಯಗಳ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿವೆ. ಆಯಾ ರಾಜ್ಯಗಳ ಹಿತಾಸಕ್ತಿಗೆ ಅನುಗುಣವಾಗಿಯೇ ಅವು ಕಾರ್ಯ ನಿರ್ವಹಿಸುತ್ತವೆ. ಇದೇ ಕಾರಣಕ್ಕೆ ಜನರು ಪ್ರಾದೇಶಿಕ ಪಕ್ಷಗಳಿಗೆ ಮನ್ನಣೆ ನೀಡುತ್ತಾರೆ. ಕರ್ನಾಟಕದಲ್ಲೂ ಜೆಡಿಎಸ್‌ ಪ್ರಾದೇಶಿಕ ಹಿತ ಕಾಪಾಡುವ ರಾಜಕಾರಣವನ್ನು ಮಾಡುತ್ತಿದೆ ಎಂದು ಹೆಚ್‌ಡಿ ದೇವೇಗೌಡ ನುಡಿದರು.

ಕರ್ನಾಟಕದ ನೆಲ, ಜಲ, ಭಾಷೆಯ ರಕ್ಷಣೆಗೆ ಜೆಡಿಎಸ್‌ ಸದಾ ಸಿದ್ಧವಾಗಿದೆ. ಪಕ್ಷವು ಅಧಿಕಾರದಲ್ಲಿದ್ದಾಗ ಇದನ್ನು ಹಲವು ಬಾರಿ ಸಾಬೀತು ಮಾಡಿ ತೋರಿಸಿದೆ. ರಾಷ್ಟ್ರೀಯ ಪಕ್ಷಗಳ ಆಡಳಿತಕ್ಕೂ ಪ್ರಾದೇಶಿಕ ಪಕ್ಷದ ಆಡಳಿತಕ್ಕೂ ಇರುವ ವ್ಯತ್ಯಾಸವನ್ನು ಕರ್ನಾಟಕದ ಜನ ಮನಗಂಡಿದ್ದಾರೆ ಎಂದು ಹೆಚ್‌ಡಿ ದೇವೇಗೌಡ ಹೇಳಿದರು.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದೇ ತಮ್ಮ ಗುರಿ. ಈ ಬಾರಿ ರಾಜ್ಯದಲ್ಲಿ ಜೆಡಿಎಸ್‌ ಪೂರ್ಣಬಹುಮತದ ಸರ್ಕಾರ ರಚಿಸಲಿದೆ. ರಾಜ್ಯದಲ್ಲಿರುವ ಎರಡೂ ರಾಷ್ಟ್ರೀಯ ಪಕ್ಷಗಳ ಆಡಳಿತದಿಂದ ಬೇಸತ್ತಿರುವ ಜನತೆ, ಈ ಬಾರಿ ಜೆಡಿಎಸ್‌ ಪಕ್ಷಕ್ಕೆ ಆಶೀರ್ವಾದ ಮಾಡಲಿದ್ದಾರೆ ಎಂಬ ಭರವಸೆ ಇದೆ ಎಂದು ಹೆಚ್‌ಡಿ ದೇವೇಗೌಡ ಹೇಳಿದರು.

ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಅಧಿಕಾರಾವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು, ಹಾಗೂ ರಾಜ್ಯದ ಹಿತಾಸಕ್ತಿಗಾಗಿ ನಡೆಸಿದ ಸಂಘರ್ಷಗಳು ನಮ್ಮ ಕೈ ಹಿಡಿಯಲಿವೆ. ನೆರೆಯ ತಮಿಳುನಾಡು, ಆಂಧ್ರಪ್ರದೇಶದಂತೆ ಕರ್ನಾಟಕದಲ್ಲೂ ಪ್ರಾದೇಶಿಕ ಪಕ್ಷದ ಆಡಳಿತ ಬರಲಿದೆ ಎಂದು ಜೆಡಿಎಸ್‌ ವರಿಷ್ಠ ಭವಿಷ್ಯ ನುಡಿದರು.

ಇದಕ್ಕೂ ಮೊದಲು ಜೆಡಿಎಸ್‌ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ಹೆಚ್‌ಡಿ ದೇವೇಗೌಡ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಪಕ್ಷಕ್ಕೆ ಹೆಚ್‌ಡಿ ದೇವೇಗೌಡ ಅವೆ ಮಾರ್ಗದರ್ಶನ ಅತ್ಯಂತ ಅವಶ್ಯವಾಗಿದ್ದು, ಅವರನ್ನೇ ಮತ್ತೆ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಚುನಾಯಿಸಲಾಗಿದೆ ಎಂದು ಜೆಡಿಎಸ್ ರಾಷ್ಟ್ರೀಯ ಚುನಾವಣಾ ಅಧಿಕಾರಿ ಹಾಗೂ ಮಾಜಿ ವಿಧಾನಪರಿಷತ್ ಸದಸ್ಯ ಕೆ.ಟಿ‌ ಶ್ರೀಕಂಠೇಗೌಡ ಸ್ಪಷ್ಟಪಡಿಸಿದರು.

ಇನ್ನು ಜೆಡಿಎಸ್ ಕಚೇರಿಯಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಮೂರು ಪ್ರಮುಖ ರಾಜಕೀಯ ನಿರ್ಣಯಗಳನ್ನು ‌ಮಂಡನೆ ಮಾಡಲಾಗಿದೆ. ದೇಶ ಹಾಗೂ ರಾಜ್ಯದಲ್ಲಿ‌ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ವಿರುದ್ಧವಾಗಿ ಕೂಡ ಒಂದು ನಿರ್ಣಯವನ್ನು ಕೈಗೊಳ್ಳಲಾಗಿದೆ.

ಮುಂಬರುವ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಕುರಿತೂ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ರಾಜ್ಯದ ಮತದಾರರ ಮನಗೆಲ್ಲಲು ಕಾರ್ಯತಂತ್ರ ರೂಪಿಸುವ ಕುರಿತು ನಿರ್ಣಯ ಕೈಗೊಳ್ಳಲಾಗಿದೆ ಎಂದು ಪಕ್ಷದ ಮೂಲಗಳು ಖಚಿತಪಡಿಸಿವೆ.

IPL_Entry_Point