ಜೂನ್ 12ರ ವರೆಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ವಿಧಿಸಲ್ಲ; ಹೈಕೋರ್ಟ್‌ಗೆ ಕರ್ನಾಟಕ ಸರ್ಕಾರ ಮಾಹಿತಿ
ರಾಜ್ಯದಲ್ಲಿ ಜೂನ್ 12ರ ವರೆಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಲಿಗೆ ದಂಡ ವಿಧಿಸುವುದಿಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಬೆಂಗಳೂರು: ಅತಿ ಸುರಕ್ಷಿತ ನೋಂದಣಿ ಫಲಕ (High Security Registration Plate) ಅಳವಡಿಸಿದ ವಾಹನಗಳ ವಿರುದ್ಧ 12 ರವರೆಗೆ ಯಾವುದೇ ರೀತಿಯ ದಂಡದ ಕ್ರಮವನ್ನುಕೈಗೊಳ್ಳುವುದಿಲ್ಲ ಎಂದು ಕರ್ನಾಟಕ ಸರ್ಕಾರ (Karnataka Govt) ಹೈಕೋರ್ಟ್‌ಗೆ (Karnataka High Court) ತಿಳಿಸಿದೆ. 2019ರ ಏಪ್ರಿಲ್ 1ಕ್ಕೂ ಮುನ್ನ ಖರೀದಿಸಿರುವ ದ್ವಿಚಕ್ರ ಹಾಗೂ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ (HSRP Number Plate) ಕಡ್ಡಾಯ ಮಾಡಲಾಗಿದೆ.
ಹಳೆ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ಪ್ಲೇಟ್ ನಿಗದಿ ಮಾಡುವ ಕುರಿತು ಎಚ್‌ಎಸ್‌ಆರ್‌ಪಿ ಮ್ಯಾನುಫ್ಯಾಕ್ಚರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಮತ್ತು ಇತರರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌ಆರ್ ಕೃಷ್ಣ ಕುಮಾರ್ ಮತ್ತು ನ್ಯಾಯಮೂರ್ತಿ ರಾಮಚಂದ್ರ ಡಿ ಹುದ್ದಾರ್ ಅವರನ್ನೊಳಗೊಂಡ ರಜಾಕಾಲದ ದ್ವಿಸದಸ್ಯ ಪೀಠಕ್ಕೆ ಸರ್ಕಾರಿ ವಕೀಲರು ಈ ಮಾಹಿತಿಯನ್ನು ನೀಡಿದ್ದಾರೆ.
ಹಳೆ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನೀಡಲಾಗಿರುವ ಕೊನೆಯ ದಿನಾಂಕದ ಅವಧಿ ಮೇ 31ಕ್ಕೆ ಅಂತ್ಯಗೊಳ್ಳಲಿದೆ. ಹೀಗಾಗಿ ಈ ಅವಧಿಯನ್ನು ವಿಸ್ತರಣೆ ಮಾಡಬೇಕೆಂದು ಕೋರಿ ಬಿಎನ್‌ಡಿ ಎನರ್ಜಿ ಲಿಮಿಲೆಡ್ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ. ಹಲವು ರಿಟ್ ಅರ್ಜಿಗಳ ವಿಚಾರಣೆ ಜೂನ್ 11ಕ್ಕೆ ನಿಗದಿಯಾಗಿದೆಯಾಗಿದೆ. ಹೀಗಾಗಿ ಮೇ 31ರ ಕೊನೆಯ ದಿನಾಂಕದ ಬಗ್ಗೆ ಹೈಕೋರ್ಟ್ ಮಹತ್ವದ ತೀರ್ಪು ನೀಡುವ ಸಾಧ್ಯತೆ ಇದೆ.
2019ರ ಏಪ್ರಿಲ್ 1ಕ್ಕೂ ಮುನ್ನ ಖರೀದಿಸಿರುವ ಸುಮಾರು 2 ಕೋಟಿಗೂ ಅಧಿಕ ವಾಹನಗಳು ಕರ್ನಾಟಕದಲ್ಲಿವೆ. ಇದರಲ್ಲಿ ದ್ವಿಚಕ್ರ, ತ್ರಿಚಕ್ರ, ಲಘು ವಾಹನಗಳು, ಪ್ರಯಾಣಿಕ ಕಾರುಗಳು, ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್ ಸೇರಿದಂತೆ ಹಲವು ರೀತಿಯ ವಾಹನಗಳು ಸೇರಿವೆ. ಇವುಗಳಿಗೆ ಅತಿ ಸುರಕ್ಷಿತ ನಂಬರ್ ಪ್ಲೇಟ್ ಅಳವಡಿಸುವುದು ಕಡ್ಡಾಯವಾಗಿದೆ.
(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)