ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ: ಸಾಧಕರು ಅಥವಾ ಸಂಘ-ಸಂಸ್ಥೆಗಳ ಆಯ್ಕೆಗೆ ನಾಮನಿರ್ದೇಶನ ಆಹ್ವಾನ-nominations invited for selection of persons or organizations for mahatma gandhi seva award 2024 jra ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ: ಸಾಧಕರು ಅಥವಾ ಸಂಘ-ಸಂಸ್ಥೆಗಳ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ: ಸಾಧಕರು ಅಥವಾ ಸಂಘ-ಸಂಸ್ಥೆಗಳ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಅಥವಾ ನಾಮನಿರ್ದೇಶನಕ್ಕೆ ಸೆಪ್ಟೆಂಬರ್ 19ರವರೆಗೆ ಅವಕಾಶವಿದೆ. ಅರ್ಹ ಸಾಧಕರು ಅಥವಾ ಸಂಘ ಸಂಸ್ಥೆಗಳನ್ನು ನಾಮನಿರ್ದೇಶನ ಮಾಡಬಹುದು.

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ: ಸಾಧಕರು ಅಥವಾ ಸಂಘ-ಸಂಸ್ಥೆಗಳ ಆಯ್ಕೆಗೆ ನಾಮನಿರ್ದೇಶನ ಆಹ್ವಾನ (File photo)
ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ: ಸಾಧಕರು ಅಥವಾ ಸಂಘ-ಸಂಸ್ಥೆಗಳ ಆಯ್ಕೆಗೆ ನಾಮನಿರ್ದೇಶನ ಆಹ್ವಾನ (File photo)

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿಗೆ ಅರ್ಹ ಸಾಧಕರು ಅಥವಾ ಸಂಘ ಸಂಸ್ಥೆಗಳ ನಾಮನಿರ್ದೇಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ 'ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ' ಇದರ 2024ನೇ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ನಾಮನಿರ್ದೇಶನಗಳನ್ನು ಆಹ್ವಾನಿಸಿದೆ. ಅರ್ಹ ಸಾಧಕರು ಅಥವಾ ಸಂಘ-ಸಂಸ್ಥೆಗಳನ್ನು ಈ ಪ್ರಶಸ್ತಿಗೆ ನಾಮನಿರ್ದೇಶನ ಮಾಡಬಹುದು.

ಸಾರ್ವಜನಿಕ ಜೀವನದಲ್ಲಿ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ವ್ಯಕ್ತಿಗಳು ಈ ಪ್ರಶಸ್ತಿಗೆ ಅರ್ಹರು. ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ರಚಿಸಲಾಗುತ್ತದೆ. 2024ರ ಅಕ್ಟೋಬರ್ 02 ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಮಹಾತ್ಮ ಗಾಂಧೀಜಿಯವರು ಪ್ರಚುರಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಇದೇ ವೇಳೆ ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ನಾಮನಿರ್ದೇಶನ ಕೂಡ ಮಾಡಬಹುದಾಗಿದೆ.

ಅರ್ಜಿ ಸಲ್ಲಿಕೆ ಅಥವಾ ನಾಮನಿರ್ದೇಶನಕ್ಕೆ ಇನ್ನು ಕೆಲವೇ ದಿನಗಳ ಅವಕಾಶವಿದೆ. ಸೆಪ್ಟೆಂಬರ್ 19ರ ಸಂಜೆ 5.30ರ ಒಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿಳಾಸ

ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ. 17, ಭಗವಾನ್ ಮಹಾವೀರ ರಸ್ತೆ (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು -560 001.

ಇ-ಮೇಲ್ ವಿಳಾಸ : informationdiprawards@gmail.com