Kannada News  /  Karnataka  /  Nothing Will Change If Amit Shah Repeatedly Visits Karnataka Says Opposition Leader Siddaramaiah
ಸಿದ್ದರಾಮಯ್ಯ (ಸಂಗ್ರಹ ಚಿತ್ರ)
ಸಿದ್ದರಾಮಯ್ಯ (ಸಂಗ್ರಹ ಚಿತ್ರ) (Verified Twitter)

Siddarmaiah:ಅಮಿತ್‌ ಶಾ ಒಂದಲ್ಲ, ನೂರು ಬಾರಿ ರಾಜ್ಯಕ್ಕೆ ಬಂದರೂ ಅಧಿಕಾರಕ್ಕೆ ಬರೋದು ನಾವೇ: ಸಿದ್ದರಾಮಯ್ಯ ಭರವಸೆ

26 January 2023, 17:40 ISTHT Kannada Desk
26 January 2023, 17:40 IST

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಂದಲ್ಲ, ನೂರು ಬಾರಿ ರಾಜ್ಯಕ್ಕೆ ಬಂದರೂ ಬಿಜೆಪಿಯನ್ನು ಗೆಲ್ಲಿಸಲು ಸಾಧ್ಯವಿಲ್ಲ. ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಯಾಗುವುದು ಶತಸಿದ್ಧ ಎಂದು ಪ್ರತಿಪಕ್ಷ ಸಿದ್ದರಾಮಯ್ಯ ಗುಡುಗಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಮಿತ್‌ ಶಾ ಅವರ ಪುನರಾವರ್ತಿತ ಭೇಟಿಯಿಂದ ಬಿಜೆಪಿಗೆ ಯಾವುದೇ ಲಾಭವಿಲ್ಲ ಎಂದು ಅಭಿಪ್ರಾಯಪಟ್ಟರು.

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಕರ್ನಾಟಕಕ್ಕೆ ಹಲವು ಬಾರಿ ಭೇಟಿ ನೀಡಲಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೇರಿಸುವ ಪಣದೊಂದಿಗೆ, ಅಮಿತ್‌ ಶಾ ಹಲವು ತಂತ್ರಗಳನ್ನು ಹೆಣೆಯಲಿದ್ದಾರೆ. ಅದರೆ ಅಮಿತ್‌ ಶಾ ಅವರ ಭೇಟಿಯಿಂದ ಏನೂ ಪ್ರಯೋಜನವಾಗದು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಅಮಿತ್‌ ಶಾ ಒಂದಲ್ಲ, ನೂರು ಬಾರಿ ರಾಜ್ಯಕ್ಕೆ ಬಂದರೂ ಬಿಜೆಪಿಯನ್ನು ಗೆಲ್ಲಿಸಲು ಸಾಧ್ಯವಿಲ್ಲ. ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಯಾಗುವುದು ಶತಸಿದ್ಧ ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಅಮಿತ್‌ ಶಾ ಅವರ ಪುನರಾವರ್ತಿತ ಭೇಟಿಯಿಂದ ರಾಜ್ಯ ಬಿಜೆಪಿಗೆ ಯಾವ ಪ್ರಯೋಜನವೂ ಆಗದು ಎಂದು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ಕಾಂಗ್ರೆಸ್‌ ಪರ ಅಲೆ ಇದ್ದು, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಯಾಗುವುದು ಖಚಿತ. ಇದನ್ನು ಮನಗಂಡಿರುವ ಬಿಜೆಪಿ ನಾಯಕರು ಅಮಿತ್‌ ಶಾ ಅವರನ್ನು ಕರೆಯಿಸಿ ಪೋಸು ಕೊಡುತ್ತಿದ್ದಾರೆ. ಅಮಿತ್‌ ಶಾ ಅವರನ್ನು ಬಾರಿ ಬಾರಿ ರಾಜ್ಯಕ್ಕೆ ಕರೆಸುವ ಮೂಲಕ, ನಮ್ಮಿಂದ ಈ ಚುನಾವಣೆಯನ್ನು ಗೆಲ್ಲಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ಬಿಜೆಪಿ ನಾಯಕರೇ ರವಾನಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಬಿಜೆಪಿಯ ಎಲ್ಲಾ ನಾಯಕರೂ ಭ್ರಷ್ಟಾಚಾರಿಗಳಾಗಿ ಹೆಸರು ಕೆಡಿಸಿಕೊಂಡಿದ್ದಾರೆ. ಪಾಪ ಅಮಿತ್ ಶಾ ಕೂಡ ಜೈಲಿಗೆ ಹೋಗಿ ಬಂದವರೇ ಆಗಿದ್ದಾರೆ. ಅವರನ್ನು ಕರೆಸಿಕೊಂಡು ಮತ ಕೇಳಿದರೆ ಜನ ಉಗಿಯುತ್ತಾರೆ. ಹೀಗಾಗಿ ನಮಗೆ ಅಮಿತ್‌ ಶಾ ರಾಜ್ಯಕ್ಕೆ ಭೇಟಿ ನೀಡುವುದರಿಂದ ಯಾವುದೇ ವ್ಯತ್ಯಾಸವಾಗುವುದಿಲ್ಲ ಎಂದು ಸಿದ್ದರಾಮಯ್ಯ ಹರಿಹಾಯ್ದರು.

ಕೇವಲ ಅಮಿತ್‌ ಶಾ ಅವರಷ್ಟೇ ಅಲ್ಲ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನೂ ಬಿಜೆಪಿ ಮತ್ತೆ ಮತ್ತೆ ಕರೆಯಿಸಿಕೊಳ್ಳಲಿ. ರಾಜ್ಯದ ಭ್ರಷ್ಟಾಚಾರದ ಪರಿಸ್ಥಿತಿ ಅವರಿಗೂ ಗೊತ್ತಾಗಲಿ. ರಾಜ್ಯದಲ್ಲಿ ಚುನಾವಣಾ ಪರಿಸ್ಥಿತಿ ಹೇಗಿದೆ ಎಂಬುದನ್ನು ಪ್ರಧಾನಿ ಮೋದಿಯೂ ತಿಳಿದುಕೊಳ್ಳಲಿ ಎಂದು ಸಿದ್ದರಾಮಯ್ಯ ಇದೇ ವೇಳೆ ವ್ಯಂಗ್ಯವಾಡಿದರು.

ಬಿಜೆಪಿಯವರ ಮೀತಿ ಮೀರಿದ ಭ್ರಷ್ಟಾಚಾರದಿಂದಾಗಿ, ಇಡೀ ದೇಶದಲ್ಲಿ ಕರ್ನಾಟಕದ ಮಾನ ಹರಾಜಾಗಿದೆ. ಈ ಸತ್ಯ ಪ್ರಧಾನಿ ಮೋದಿ ಹಾಗೂ ಅಮಿತ್‌ ಶಾ ಅವರಿಗೂ ಚೆನ್ನಾಗಿ ಗೊತ್ತಿದೆ. ಆದರೂ ಇಲ್ಲಿ ಬಂದು ಕರ್ನಾಟಕದ ಬಗ್ಗೆ ಉದ್ದುದ್ದ ಭಾಷಣ ಮಾಡುತ್ತಾರೆ. ಪ್ರಧಾನಿ ಮೋದಿ ಹಾಗೂ ಅಮಿತ್‌ ಶಾ ಅವರಿಗೆ ಕರ್ನಾಟಕದ ಬಗ್ಗೆ ನಿಜಕ್ಕೂ ಪ್ರೀತಿ ಇದ್ದರೆ, ತಮ್ಮ ಪಕ್ಷದ ಭ್ರಷ್ಟಾಚಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದರು.

ಇಂದಿನ ಪ್ರಮುಖ ಸುದ್ದಿಗಳು

CM Bommai on Congress: ಕಾಂಗ್ರೆಸ್ ತಿಪ್ಪರಲಾಗ ಹಾಕಿದರೂ ಬಿಜೆಪಿ ಗಟ್ಟಿ ಬೇರುಗಳನ್ನ ಅಲುಗಾಡಿಸಲು ಆಗಲ್ಲ: ಸಿಎಂ ಬೊಮ್ಮಾಯಿ

ನಾವು ಪುನಃ ಲೋಕಾಯುಕ್ತವನ್ನು ಪ್ರಾರಂಭ ಮಾಡಿದ್ದು, 59 ಪ್ರಕರಣಗಳನ್ನು ಲೋಕಾಯುಕ್ತಕ್ಕೆ ನೀಡುತ್ತಿದ್ದೇವೆ. ಕಾಂಗ್ರೆಸ್ ಬಣ್ಣ ಬಯಲಾಗಲಿದೆ. ಇವರ ಭ್ರಷಾಚಾರ ಜನರಿಗೆ ಗೊತ್ತಾಗಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ಕಿಸಿ.

Sudhakar on Siddaramaiah: ಸಿದ್ದರಾಮಯ್ಯನವರು ಕೋಲಾರದಲ್ಲಿ ಗೆಲ್ಲುವುದಿಲ್ಲ, ಕೋಲಾರಕ್ಕೆ ಬಂದು ಖೆಡ್ಡಾಗೆ ಬಿದ್ದಿದ್ದಾರೆ: ಸಚಿವ ಸುಧಾಕರ್‌

ಆರೋಗ್ಯ ಇಲಾಖೆಯ ಮೂರು ವರ್ಷದ ಖರ್ಚಿನ ಪ್ರತಿ ಪೈಸೆಯ ಲೆಕ್ಕ ಕೊಡುತ್ತೇನೆ. ಬೇಕಿದ್ದರೆ ತನಿಖೆ ಮಾಡಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಸಚಿವ ಡಾ.ಕೆ.ಸುಧಾಕರ್‌ ಸವಾಲು ಹಾಕಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ಕಿಸಿ.

ವಿಭಾಗ