ಕನ್ನಡ ಸುದ್ದಿ / ಕರ್ನಾಟಕ /
ಆಪರೇಷನ್ ಸಿಂಧೂರ: ಕೇಂದ್ರಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದ ಸಿಎಂ ಸಿದ್ದರಾಮಯ್ಯ, ಸುದ್ದಿಗೋಷ್ಠಿಯಲ್ಲಿ ಉಲ್ಲೇಖಿಸಿದ ಪ್ರಮುಖಾಂಶಗಳಿವು
ಪಹಲ್ಗಾಮ್ ದಾಳಿಗೆ ಪ್ರತಿಕಾರವಾಗಿ ಭಾರತವು ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಈ ವೇಳೆ ಕೇಂದ್ರಕ್ಕೆ ಸಂಪೂರ್ಣ ಬೆಂಬಲ ಸೂಚಿಸಿರುವ ಅವರು ಈ ಕೆಲವು ಪ್ರಮುಖಾಂಶಗಳನ್ನು ಉಲ್ಲೇಖಿಸಿದ್ದಾರೆ.

ಅಪರೇಷನ್ ಸಿಂಧೂರ್: ಕೇಂದ್ರಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಕಾರವಾಗಿ ಭಾರತದ ಸೇನೆ ಬುಧವಾರ (ಮೇ 7) ತಡರಾತ್ರಿ ಪಾಕಿಸ್ತಾನ ಹಾಗೂ ಪಿಒಕೆಯಲ್ಲಿರುವ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ. ಉಗ್ರರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ಭಾರತದ ನಡೆಸಿದ ದಾಳಿಗೆ ಆಪರೇಷನ್ ಸಿಂಧೂರ್ ಎಂದು ಹೆಸರು ನೀಡಲಾಗಿದೆ. ಈ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯು ಒಟ್ಟು 9 ಉಗ್ರರ ನೆಲೆಗಳನ್ನು ನಾಶಪಡಿಸಿದೆ.
ಆಪರೇಷನ್ ಸಿಂಧೂರ್ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸುದೀರ್ಘ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಈ ಪತ್ರಿಕಾಗೋಷ್ಠಿ ಕೇಂದ್ರದ ನಡೆಗೆ ಮೆಚ್ಚುಗೆ ಸೂಚಿಸಿದ ಸಿಎಂ ಕೇಂದ್ರಕ್ಕೆ ಕರ್ನಾಟಕ ಸರ್ಕಾರದ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿದ್ದಾರೆ. ಇಂದಿನ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಉಲ್ಲೇಖಿಸಿದ ಪ್ರಮುಖ ಅಂಶಗಳ ಬಗ್ಗೆ ಇಲ್ಲಿದೆ ಮಾಹಿತಿ. ಪತ್ರಿಕಾಗೋಷ್ಠಿ ವೇಳೆ ಸಿಎಂ ಸಿದ್ದರಾಮಯ್ಯ ಅಗಲವಾದ ಕೆಂಪು ತಿಲಕ ಇರಿಸಿಕೊಂಡಿದ್ದು ಗಮನ ಸೆಳೆಯಿತು.
ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಉಲ್ಲೇಖಿಸಿದ ಪ್ರಮುಖಾಂಶಗಳು
- ದೇಶದ ಸೇನಾಪಡೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದ್ದಾರೆ. ದೇಶದ ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ.
- ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಈ ದಾಳಿಯನ್ನು ಎಲ್ಲರೂ ಬೆಂಬಲಿಸಿದ್ದೇವೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ನಮ್ಮ ಸರ್ಕಾರ ನೂರಕ್ಕೆ ನೂರರಷ್ಟು ಸೇನೆ ಕೈಗೊಂಡಿರುವ ಕ್ರಮವನ್ನು ಬೆಂಬಲಿಸುತ್ತದೆ.
ಇದನ್ನೂ ಓದಿ: ಆಪರೇಷನ್ ಸಿಂಧೂರ್; ಮಹಿಳಾ ಅಧಿಕಾರಿಗಳದ್ದೇ ನೇತೃತ್ವ, ಭಾರತೀಯ ಸೇನಾಪಡೆಯ ಅಧಿಕೃತ ಸುದ್ದಿಗೋಷ್ಠಿ ನೇರ ಪ್ರಸಾರ - ಆಪರೇಷನ್ ಸಿಂಧೂರ ಹೆಸರಿನಲ್ಲಿ ಸುಮಾರು 9 ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿದೆ. ಕೇವಲ ಉಗ್ರಗಾಮಿಗಳ ನೆಲೆಗಳ ಮೇಲೆ ಮಾತ್ರ ದಾಳಿ ನಡೆಸಲಾಗಿದೆ. ನಮ್ಮ ಸೈನಿಕರು ಉಗ್ರರ ನೆಲೆಗಳನ್ನು ಪತ್ತೆ ಹಚ್ಚಿ ದಾಳಿ ಮಾಡಿದ್ದು, ಅಮಾಯಕ ಜನರ ಸಾವು ನೋವು ತಪ್ಪಿಸಿದ್ದಾರೆ. ನಮ್ಮ ಸೈನಿಕರ ಕಾರ್ಯದಕ್ಷತೆಗೆ ದೊಡ್ಡ ಸಲಾಂ. ಈ ದಾಳಿಯನ್ನು ನಾವು ಸ್ವಾಗತಿಸುತ್ತೇವೆ.
- ಕಾಶ್ಮೀರದ ಪಹಲ್ಗಾವ್ನಲ್ಲಿ ಅಮಾಯಕ 26 ಜನರ ಹತ್ಯೆ ನಡೆಸಿದ ಉಗ್ರರನ್ನು ಬೆಂಬಲಿಸುವವರು, ಸಾಕುವವರು ಸಹ ಪಾಕಿಸ್ತಾನದವರೇ ಎಂಬುವುದು ಸ್ಪಷ್ಟವಾಗಿದೆ.
- ನಾವು ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದೇವೆ. ರಾಜ್ಯದಲ್ಲಿ ಸುರಕ್ಷತೆಯ ಕುರಿತು ಎಲ್ಲಾ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ.
- ಉಗ್ರರ ಮೇಲಿನ ದಾಳಿ ಹಿನ್ನೆಲೆಯಲ್ಲಿ ಸಂವಿಧಾನ ಉಳಿಸಿ ಅಡಿಯಲ್ಲಿ ರಾಯಚೂರಿನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಕಾರ್ಯಕ್ರಮನ್ನು ರದ್ದುಗೊಳಿಸಲಾಗಿದೆ.
- ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಮೊದಲಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.
ಇದನ್ನೂ ಓದಿ: ಆಪರೇಷನ್ ಸಿಂಧೂರ ಬಗ್ಗೆ ಜಗತ್ತಿಗೆ ಮಾಹಿತಿ ನೀಡಿದ ಮಹಿಳಾ ಅಧಿಕಾರಿ; ಕರ್ನಲ್ ಸೋಫಿಯಾ ಖುರೇಷಿ ಯಾರು? - ಸೇನೆ ನಡೆಸಿರುವ ಈ ದಾಳಿ ಭಾರತದ ಮೇಲೆ ಸತತವಾಗಿ ದಾಳಿ ನಡೆಸಿ ಹತ್ಯಾಕಾಂಡ ನಡೆಸುತ್ತಿದ್ದ ಉಗ್ರಗಾಮಿಗಳಿಗೆ ಕಲಿಸಿದ ಪಾಠ ಮಾತ್ರವಲ್ಲ ಈ ಉಗ್ರರಿಗೆ ಆಶ್ರಯ ಮತ್ತು ನೆರವು ನೀಡಿ ಭಾರತದ ವಿರುದ್ದ ಅವರನ್ನು ಛೂಬಿಡುತ್ತಿದ್ದ ಪಾಕಿಸ್ತಾನಕ್ಕೂ ನೀಡಿರುವ ಎಚ್ಚರಿಕೆ ಆಗಿದೆ.
- ಈ ಸೇನಾದಾಳಿ ನಡೆಸದೆ ಭಾರತದ ಮುಂದೆ ಬೇರೆ ಆಯ್ಕೆಗಳಿರಲಿಲ್ಲ. ಪಹಲ್ಗಾಮ್ನಲ್ಲಿ ಹತ್ಯಾಕಾಂಡ ನಡೆಸಿದ ಉಗ್ರಗಾಮಿಗಳು ಪಾಕಿಸ್ತಾನಕ್ಕೆ ಸೇರಿದವರೆಂದು ಜಗಜ್ಜಾಹೀರಾಗಿದ್ದರೂ ಪಾಕಿಸ್ತಾನ ಇದನ್ನು ಒಪ್ಪಿಕೊಂಡು ಕ್ರಮಕೈಗೊಳ್ಳುವ ಭರವಸೆ ನೀಡದೆ ಹಠಮಾರಿ ಧೋರಣೆ ತಳೆದಿರುವ ಕಾರಣದಿಂದಾಗಿ ಭಾರತಕ್ಕೂ ಈ ದಾಳಿ ನಡೆಸದೆ ಬೇರೆ ಆಯ್ಕೆಗಳಿರಲಿಲ್ಲ.
- ಉಗ್ರಗಾಮಿಗಳ ನೆಲೆಗಳನ್ನು ಧೂಳಿಪಟ ಮಾಡಿ ಉಗ್ರರನ್ನು ಶಿಕ್ಷಿಸಿದ ನಮ್ಮ ಸೈನಿಕರ ಧೀರೋದ್ದಾತ ಪರಾಕ್ರಮದಿಂದ ಪಹಲ್ಗಾಮ್ ಹತ್ಯಾಕಾಂಡದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ತುಸು ನೆಮ್ಮದಿ, ಸಮಾಧಾನ ಸಿಕ್ಕಿರಬಹುದೆಂದು ಭಾವಿಸಿದ್ದೇನೆ.
ಇದನ್ನೂ ಓದಿ: ವಿದೇಶಿ ಮಾಧ್ಯಮಗಳಿಗೆ ಆಪರೇಷನ್ ಸಿಂಧೂರ ಹೇಗೆ ಕಾಣಿಸ್ತು? ಭಾರತ-ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ, ಪಹಲ್ಗಾಮ್ಗೆ ಪ್ರತೀಕಾರ - ಇದು ಪಾಕಿಸ್ಥಾನಕ್ಕೆ ಮಾತ್ರವಲ್ಲ ಭಾರತದ ಜೊತೆ ಈ ರೀತಿಯ ಕಿಡಿಗೇಡಿತನವನ್ನು ನಡೆಸುವ ನೆರೆಯ ಎಲ್ಲ ದೇಶಗಳಿಗೆ ಕೂಡಾ ಇಂದಿನ ಸೇನಾದಾಳಿ ಎಚ್ಚರಿಕೆಯ ಗಂಟೆಯಾಗಿದೆ.
- ಉಗ್ರಗಾಮಿಗಳ ನೆಲೆಯನ್ನೇ ಕೇಂದ್ರವಾಗಿಟ್ಟುಕೊಂಡು ಅಮಾಯಕ ಜನರ ಸಾವು-ನೋವು ನಡೆಯದಂತೆ ದಾಳಿ ನಡೆಸಿರುವ ನಮ್ಮ ಸೈನಿಕರ ಕಾರ್ಯಕ್ಷಮತೆ ಮತ್ತು ಪರಿಣತಿಗೆ ನನ್ನದೊಂದು ದೊಡ್ಡ ಸಲಾಮ್.
- ಭಾರತ ಸರ್ಕಾರ ಕೈಗೊಂಡಿರುವ ಈ ನಿರ್ಧಾರವನ್ನು ನಮ್ಮ ಪಕ್ಷ ಸಂಪೂರ್ಣ ಬೆಂಬಲಿಸಿದೆ. ನಾನು ಕೂಡಾ ನಮ್ಮ ಸರ್ಕಾರ ಮತ್ತು ರಾಜ್ಯದ ಪರವಾಗಿ ಸಂಪೂರ್ಣ ಬೆಂಬಲ ಘೋಷಿಸುತ್ತಿದ್ದೇನೆ.
- ಇದು ನಾವೆಲ್ಲರೂ ಒಗ್ಗಟ್ಟಿನಿಂದ ಮತ್ತು ಅಷ್ಟೇ ಎಚ್ಚರದಿಂದ ಇರುವ ಕಾಲ. ರಾಜ್ಯದ ಭದ್ರತಾ ವ್ಯವಸ್ಥೆ ಮೇಲೆ ನಿಗಾ ಇಡುವಂತೆ ಪೊಲೀಸ್ ವರಿಷ್ಠರಿಗೆ ತಿಳಿಸಿದ್ದೇನೆ. ನಮ್ಮ ಸರ್ಕಾರ ಕೇಂದ್ರ ಸರ್ಕಾರದ ಜೊತೆಯಲ್ಲಿಯೂ ಸಂಪರ್ಕದಲ್ಲಿರುತ್ತದೆ. ಅಲ್ಲಿಂದ ಬರುವ ಸೂಚನೆಗಳನ್ನು ಪಾಲಿಸಲಾಗುತ್ತದೆ.
- ಯಾರೂ ಭಯಭೀತರಾಗುವ ಅವಶ್ಯಕತೆ ಇಲ್ಲ. ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲಾಗುವುದು.