Panchayathraj Rules: ಪಂಚಾಯತ್ ಅಧ್ಯಕ್ಷ, ಸದಸ್ಯರ ಅಧಿಕಾರ ಮೊಟಕು ಪ್ರಸ್ತಾಪ; ಗೃಹ ಸಚಿವ ಆರಗ ಜ್ಞಾನೇಂದ್ರ ಏನು ಹೇಳಿದ್ರು
Panchayathraj Rules: ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಅಧಿಕಾರ ಮೊಟಕುಗೊಳ್ಳಲಿದೆ ಎಂಬ ಆತಂಕ ಗ್ರಾಮಪಂಚಾಯತ್ ಮಟ್ಟದಲ್ಲಿ ಹರಡಿದೆ. ಸರ್ಕಾರ ರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಅಧಿನಿಯಮಗಳಿಗೆ ತಿದ್ದುಪಡಿ ಮಾಡಲಿದೆ ಎಂಬ ಸುದ್ದಿ ಇದಕ್ಕೆ ಕಾರಣ. ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟೀಕರಣ ನೀಡಿದ್ದು, ವಿವರ ಇಲ್ಲಿದೆ.
ಬೆಂಗಳೂರು: ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಅಧಿಕಾರ ಮೊಟಕುಗೊಳ್ಳಲಿದೆ ಎಂಬ ಆತಂಕ ಗ್ರಾಮಪಂಚಾಯತ್ ಮಟ್ಟದಲ್ಲಿ ಹರಡಿದೆ. ಸರ್ಕಾರ ರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಅಧಿನಿಯಮಗಳಿಗೆ ತಿದ್ದುಪಡಿ ಮಾಡಲಿದೆ ಎಂಬ ಸುದ್ದಿ ಇದಕ್ಕೆ ಕಾರಣ. ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟೀಕರಣ ನೀಡಿದ್ದಾರೆ.
ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಪ್ರಸ್ತುತ ಇರುವ ಯಾವುದೇ ಅಧಿಕಾರವನ್ನು ಕಡಿತಗೊಳಿಸುವ ವಿಚಾರ ಸರಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಈ ವಿಚಾರವಾಗಿ ಆರಗ ಜ್ಞಾನೇಂದ್ರ ಅವರು, ಸಿಎಂ ಬೊಮ್ಮಾಯಿ ಅವರನ್ನು ಬೇಟಿ ಮಾಡಿ ಮಾತುಕತೆ ನಡೆಸಿದ್ದರು. ಗ್ರಾಮ ಪಂಚಾಯತ್ ಮಟ್ಟದ ಜನಪ್ರತಿನಿಧಿಗಳ ಆತಂಕವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಾಗ ಅಂತಹ ಪ್ರಸ್ತಾವನೆ ಇಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾಗಿ ಆರಗ ಜ್ಞಾನೇಂದ್ರ ಅವರ ಕಚೇರಿ ಮೂಲಗಳು ತಿಳಿಸಿವೆ.
ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಅಧಿನಿಯಮ ಗಳಿಗೆ ತಿದ್ದುಪಡಿಗೆ ಯಾವುದೇ ತರುವ ಪ್ರಸ್ತಾವನೆ ಇಲ್ಲ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಗ್ರಾಮ ಪಂಚಾಯತ್ ಸಂಸ್ಥೆಗಳು, ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದ್ದು, ಗ್ರಾಮೀಣ ಭಾಗದಲ್ಲಿ, ಭವಿಷ್ಯದ ನಾಯಕತ್ವ ರೂಪಿಸುವಲ್ಲಿ ಗಣನೀಯ ಕೊಡುಗೆ, ಸಲ್ಲಿಸುತ್ತಿದೆ ಎಂಬುದನ್ನು ಸಿಎಂ ಬೊಮ್ಮಾಯಿ ಅವರು ನೆನಪಿಸಿಕೊಂಡರು. ಗ್ರಾಮ ಪಂಚಾಯತಿ ವ್ಯವಸ್ಥೆಯನ್ನು ಬಲಪಡಿಸುವ ಹಾಗೂ ಅಧಿಕಾರ ವಿಕೇಂದ್ರಿಕರಣ ಗೊಳಿಸುವ ನಿಟ್ಟಿನಲ್ಲಿ, ರಾಜ್ಯ ಸರಕಾರ ಬದ್ಧತೆಯಿಂದ ಕೂಡಿದೆ, ಎಂದು ಸಚಿವರು ತಿಳಿಸಿದರು.
ಗ್ರಾಮ ಪಂಚಾಯಿತಿಯ ನೌಕರರ ಸೇವಾ ನಿಯಮಾವಳಿಗಳಿಗೆ, ತಿದ್ದುಪಡಿ ತಂದು, ಪಂಚಾಯತ್ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರು ಮತ್ತು ಸದಸ್ಯರ ಅಧಿಕಾರವನ್ನು ಮೊಟಕುಗೊಳಿ ಸುವ, ವರದಿಗಳಿಗೆ, ಅದನ್ನು ತಿರಸ್ಕರಿಸುವ ಮೂಲಕ, ಮುಖ್ಯಮಂತ್ರಿಗಳು ಗ್ರಾಮ ಪಂಚಾಯಿತಿ ಜನನಪ್ರತಿನಿಧಿಗಳ ಆತಂಕಕ್ಕೆ, ಗೊಂದಲಕ್ಕೆ ತೆರೆ ಎಳೆದಿದ್ದಾರೆ ಎಂದೂ ಸಚಿವರು ಹೇಳಿದ್ದಾರೆ.
ದಿನದ ಗಮನಾರ್ಹ ಸುದ್ದಿಗಳು
1) PFI Bhagya poster ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಚರಿಸುತ್ತಿದೆ. ಇದೇ ವೇಳೆ, ಚಿತ್ರದುರ್ಗದ ಚಳ್ಳಕೆರೆ ನಗರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಪಿಎಫ್‌ಐ ಭಾಗ್ಯ ಪೋಸ್ಟರ್ ಅಭಿಯಾನ ಗಮನಸೆಳೆದಿದೆ. PFI Bhagya poster: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಚಿತ್ರದುರ್ಗದಲ್ಲಿ ಪಿಎಫ್‌ಐ ಭಾಗ್ಯ ಪೋಸ್ಟರ್ ಅಭಿಯಾನ
2) Bommai, BSY tour from today: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಮಧ್ಯ ಕರ್ನಾಟಕ ಪ್ರದೇಶದಲ್ಲಿ ಸಂಚರಿಸುತ್ತಿದೆ. ರಾಜ್ಯದಲ್ಲಿ 2023 ರ ವಿಧಾನಸಭಾ ಚುನಾವಣೆಗೆ ಮತದಾರರನ್ನು ಸೆಳೆಯಲು ಬಿಜೆಪಿ ಕೂಡ ಸಜ್ಜಾಗಿದೆ. ಬಿಜೆಪಿ ನಾಯಕರು ಇಂದು ಕಲ್ಯಾಣ-ಕರ್ನಾಟಕದಿಂದ ಸಂಘಟನಾ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಪ್ರವಾಸದ ಹಿನ್ನೆಲೆ ವಿವರ ಇಲ್ಲಿದೆ. Bommai, BSY tour from today: ಬೊಮ್ಮಾಯಿ, ಬಿಎಸ್‌ವೈ ಜನಸಂಕಲ್ಪ ಯಾತ್ರೆ ಇಂದು ಶುರು; ಏಳು ಬೃಹತ್ ಸಮಾವೇಶ ಎಲ್ಲಿ ಏನು? ವಿವರ ಇಲ್ಲಿದೆ
3) RSS Prashiksha Varga: ಸರ್ಕಾರಿ ಶಾಲೆಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಪ್ರಶಿಕ್ಷಾ ವರ್ಗ ಆಯೋಜಿಸುತ್ತಿದೆ. ಇದು ಸರಿಯಲ್ಲ ಎಂದು ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾ (SFI) ತೀವ್ರ ವಿರೋಧ ವ್ಯಕ್ತಪಡಿಸಿದೆ. RSS Prashiksha Varga: ವಸತಿ ಶಾಲೆಯಲ್ಲಿ ಆರೆಸ್ಸೆಸ್ ಪ್ರಶಿಕ್ಷಾ ವರ್ಗ; ಎಸ್‌ಎಫ್‌ಐ ವಿರೋಧ