CM Bommai on PFI: ಭಾರತದ ಅಸ್ಮಿತೆಗೆ ಧಕ್ಕೆ ತರುವ ಪಿಎಫ್ಐ ಸಂಚು ಬಯಲು - ಸಿಎಂ ಬೊಮ್ಮಾಯಿ
ರಾಮಮಂದಿರ ಸ್ಫೋಟ ಮಾಡುವುದಕ್ಕೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಚು ಮಾಡಿತ್ತು ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಭಾರತದ ಅಸ್ಮಿತೆಗೆ ಧಕ್ಕೆ ತರುವ ಪಿಎಫ್ಐ ಸಂಚು ಬಯಲಾಗಿದೆ ಎಂದು ಹೇಳಿದರು.
ಬೆಂಗಳೂರು: ರಾಮಮಂದಿರ ಸ್ಫೋಟ ಮಾಡುವುದಕ್ಕೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಚು ಮಾಡಿತ್ತು ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಭಾರತದ ಅಸ್ಮಿತೆಗೆ ಧಕ್ಕೆ ತರುವ ಪಿಎಫ್ಐ ಸಂಚು ಬಯಲಾಗಿದೆ ಎಂದು ಹೇಳಿದರು.
ಪಿಎಫ್ಐ ಸಂಘಟನೆ ಒಂದು ದೇಶದ್ರೋಹಿ ಸಂಘಟನೆ. ದೇಶವ್ಯಾಪಿ ವಿಧ್ವಂಸಕ ಹಾಗೂ ಭಯೋತ್ಪಾದನೆ ಕೃತ್ಯಗಳನ್ನು ಮಾಡುತ್ತಿದೆ. ಈ ಹಿಂದೆ ಮುಂಬಯಿಯಲ್ಲಿ ಸರಣಿ ಬಾಂಬ್ ಸ್ಪೋಟ ಸಂಭವಿಸಿದಂತೆ, ಏಕಕಾಲದಲ್ಲಿ ವಿವಿಧ ಕಡೆ ದುಷ್ಕೃತ್ಯಗಳನ್ನು ಮಾಡುವ ಅವರ ಷಡ್ಯಂತ್ರ ಈಗಾಗಲೇ ಬಯಲಾಗಿದೆ. ಭಾರತದ ಅಸ್ಮಿತೆಯನ್ನು ಪ್ರತಿನಿಧಿಸುವಂತಹ ಕಟ್ಟಡಗಳನ್ನು ಧ್ವಂಸ ಮಾಡುವ ಮೂಲಕ ಭಾರತದ ಅಸ್ಮಿತೆಗೆ ಧಕ್ಕೆ ತರುವುದು ಅವರ ಹುನ್ನಾರವಾಗಿದೆ ಎಂದರು.
ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯುತ್ತಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಈ ವಿಚಾರವನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಎಲ್ಲ ಮಾಹಿತಿಗಳನ್ನು ಕಲೆ ಹಾಕಲಾಗುತ್ತಿದೆ ಎಂದರು.
ಅಯೋಧ್ಯೆಯಲ್ಲಿ ರಾಮಮಂದಿರವನ್ನು ಕೆಡವಿ ಅಲ್ಲಿ ಬಾಬರಿ ಮಸೀದಿ ನಿರ್ಮಿಸಲು ನಿಷೇಧಿತ ಭಯೋತ್ಪಾದಕ ಸಂಘಟನೆ ಪಿಎಫ್‌ಐ ಪ್ಲಾನ್ ಮಾಡಿತ್ತು ಎಂಬ ಹೊಸ ವಿಚಾರವೊಂದು ಬಯಲಾಗಿದೆ. ಹೀಗೆಂದು ಮಹಾರಾಷ್ಟ್ರ ಸರ್ಕಾರ ನಾಸಿಕ್ ನ್ಯಾಯಾಲಯಕ್ಕೆ ತಿಳಿಸಿದೆ.
ಮಹಾರಾಷ್ಟ್ರ ಎಟಿಎಸ್ ಬಂಧಿಸಿರುವ ಪಿಎಫ್‌ಐನ 5 ಶಂಕಿತರ ವಿಚಾರಣೆ ಮತ್ತು ತನಿಖೆ ವೇಳೆ ಈ ಆಘಾತಕಾರಿ ಸಂಗತಿ ಬಹಿರಂಗವಾಗಿದೆ. 2047 ರ ವೇಳೆಗೆ ಯಾವುದೇ ಬೆಲೆ ತೆತ್ತಾದರೂ ದೇಶವನ್ನು ಇಸ್ಲಾಮಿಕ್ ರಾಷ್ಟ್ರವಾಗಿ ಪರಿವರ್ತಿಸುವುದು ಅವರ ಗುರಿಯಾಗಿದೆ ಎಂಬುದೂ ಬೆಳಕಿಗೆ ಬಂದಿದೆ. ಅಲ್ಲದೇ ದೇಶದಲ್ಲಿ ಭಯೋತ್ಪಾದಕ ಚಟುವಟಿಕೆ ನಡೆಸಲು ವಿದೇಶದಿಂದ ತರಬೇತಿ ಪಡೆಯುತ್ತಿದ್ದ ವಿಚಾರವೂ ಬಹಿರಂಗಗೊಂಡಿದೆ. ಶಂಕಿತರ ಖಾತೆಗಳ ತನಿಖೆಯಲ್ಲಿ ವಿದೇಶಿ ಹಣವೂ ಪತ್ತೆಯಾಗಿದೆ.
ಅಕ್ಟೋಬರ್ 23 ರಂದು ಪ್ರಧಾನಿ ಮೋದಿ ಅಯೋಧ್ಯೆಯಲ್ಲಿ ದೀಪಾವಳಿ ಆಚರಿಸಲಿದ್ದು, ಇಂತಹ ಸಮಯದಲ್ಲಿ ಈ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ಪಿಎಫ್ ಐ ಸಂಘಟನೆಯ ಶಂಕಿತರು ಸಮಾಜಸೇವೆಯ ಹೆಸರಿನಲ್ಲಿ ದೇಶ-ವಿದೇಶಗಳಿಂದ ಹಣ ಸಂಗ್ರಹಿಸುತ್ತಿದ್ದರು. ಈ ಹಣದ ಮೂಲಕ ದೇಶವಿರೋಧಿ ಚಟುವಟಿಕೆಗಳನ್ನು ನಡೆಸುವುದು ಅವರ ಉದ್ದೇಶವಾಗಿತ್ತು. ಈ ವಿಷಯ ತಿಳಿದ ನಂತರ ಎನ್‌ಐಎ ಜೊತೆಗೆ ಇಡಿ ಕೂಡ ತನಿಖೆ ನಡೆಸುತ್ತಿದೆ.
ವಿಭಾಗ