PM Modi jungle safari: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ಉಡುಗೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂಚಾರ
ಕನ್ನಡ ಸುದ್ದಿ  /  ಕರ್ನಾಟಕ  /   Pm Modi Jungle Safari: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ಉಡುಗೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂಚಾರ

PM Modi jungle safari: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ಉಡುಗೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂಚಾರ

ಪ್ರಧಾನಿ ನರೇಂದ್ರ ಮೋದಿ (Narendra Modi) ಯವರು ನಿನ್ನೆ ರಾತ್ರಿ ಕರ್ನಾಟಕಕ್ಕೆ ಆಗಮಿಸಿದ್ದು, ಇಂದು ಬೆಳಗ್ಗೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ (Bandipur National Park) ಸಫಾರಿ ನಡೆಸಿದ್ದಾರೆ.

PM Modi jungle safari: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ಉಡುಗೆಯಲ್ಲಿ ಮೋದಿ PTI Photo)
PM Modi jungle safari: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ಉಡುಗೆಯಲ್ಲಿ ಮೋದಿ PTI Photo) (PTI)

ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿಯವರು ನಿನ್ನೆ ರಾತ್ರಿ ಕರ್ನಾಟಕಕ್ಕೆ ಆಗಮಿಸಿದ್ದು, ಇಂದು ಬೆಳಗ್ಗೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ನಡೆಸಿದ್ದಾರೆ. ವಿಶೇಷ ಸಫಾರಿ ಉಡುಗೆಯಲ್ಲಿ ಕಂಗೊಳಿಸುತ್ತಿದ್ದ ನರೇಂದ್ರ ಮೋದಿಯವರು ಎರಡು ಗಂಟೆಗಳ ಕಾಲ ಸುಮಾರು 20 ಕಿ.ಮೀ. ಸಫಾರಿ ನಡೆಸುತ್ತಿದ್ದಾರೆ.

ಮೈಸೂರಿನ ರಾಡಿಸನ್‌ ಬ್ಲೂ ಹೋಟೆಲ್‌ನಲ್ಲಿ ತಂಗಿದ್ದ ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿಂದ ಇಂದು ಬೆಳಗ್ಗೆ ಬಂಡೀಪುರಕ್ಕೆ ತೆರಳಿದರು. ಮುಂಜಾನೆ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಬಂಡೀಪುರಕ್ಕೆ ತೆರಳಿದರು. ರಾಷ್ಟ್ರೀಯ ಹುಲಿ ಸಂರಕ್ಷಿತಾರಣ್ಯವೆಂದು ಬಂಡೀಪುರ ಅರಣ್ಯವೆಂದು ಘೊಷಿಸಿ 50 ವರ್ಷಗಳು ಸಂದ ಹಿನ್ನಲೆಯಲ್ಲಿ ಇವರು ಭೇಟಿ ನೀಡುತ್ತಿದ್ದಾರೆ. ಸುಮಾರು ಎರಡು ಗಂಟೆಗಳ ಕಾಲ ಸಫಾರಿ ನಡೆಸುತ್ತಿದ್ದಾರೆ.

 

ಮೋದಿಯವರು ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿಗೆ ಆಗಮಿಸಿ ರಸ್ತೆ ಮಾರ್ಗದಲ್ಲಿ ಬಂಡೀಪುರ ಕ್ಯಾಂಪ್‌ಗೆ ಆಗಮಿಸಿದ್ದಾರೆ. ಹುತಾತ್ಮರ ಸ್ಮಾರಕಕ್ಕೆ ಭೇಟಿ, ಅಂಚೆ ಚೀಟಿ ಬಿಡುಗಡೆ ಇತ್ಯಾದಿ ಕಾರ್ಯಕ್ರಮಗಳು ನಡೆದಿವೆ. ಬಳಿಕ ಸಫಾರಿ ಆರಂಭಿಸಿದ್ದಾರೆ.

ಪ್ರಧಾನಿ ಮೋದಿಯವರು ಕರ್ನಾಟಕ ವಿಧಾನಸಭೆ ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ನೀಡುವ ಮೊದಲ ಭೇಟಿ ಇದಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ಸಫಾರಿ ಉಡುಗೆಯಲ್ಲಿರುವ ಫೋಟೋವನ್ನು ಸುದ್ದಿಸಂಸ್ಥೆ ಎಎನ್‌ಐ ಟ್ವೀಟ್‌ ಮಾಡಿದೆ.

"ಪ್ರಧಾನಿ ನರೇಂದ್ರ ಮೋದಿಯವರು ಬಂಡಿಪುರ ಮತ್ತು ಮದುಮಲೈ ಟೈಗರ್‌ ರಿಸರ್ವ್‌ಗೆ ಹೋಗುತ್ತಿದ್ದಾರೆ. ಇದು ಈ ವರ್ಷ ಪ್ರಧಾನಿಯವರು ಕರ್ನಾಟಕಕ್ಕೆ ನೀಡುತ್ತಿರುವ ಎಂಟನೇ ಭೇಟಿಯಾಗಿದೆ. ಮೇ 10ಕ್ಕೆ ಚುನಾವಣೆ ನಡೆಯುವುದರಿಂದ ಮೋದಿಯವರು ಇನ್ನೂ ಹಲವು ಬಾರಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ" ಎಂದು ಟ್ವೀಟ್‌ ಮಾಡಲಾಗಿದೆ.

ಬೆಳಗ್ಗೆ 11 ರಿಂದ 12 ಗಂಟೆಯವರಿಗೆ ಹುಲಿ ಯೋಜನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ‘ಪ್ರಾಜೆಕ್ಟ್ ಟೈಗರ್’ (Project Tiger) 50 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಬೃಹತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಇದೇ ವೇಳೆ ಅವರು ಇತ್ತೀಚಿನ ಹುಲಿ ಗಣತಿ ಡೇಟಾವನ್ನ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

'ಅಮೃತ್ ಕಾಲ' ನೀಲ ನಕ್ಷೆಯಲ್ಲಿ ಹುಲಿ ಸಂರಕ್ಷಣೆಗಾಗಿ ಸರ್ಕಾರದ ದೃಷ್ಟಿಕೋನವನ್ನು ಬಿಡುಗಡೆ ಮಾಡುತ್ತಾರೆ. ಜೊತೆಗೆ ಇಂಟರ್ನ್ಯಾಷನಲ್ ಬಿಗ್ ಕ್ಯಾಟ್ಸ್ ಅಲೈಯನ್ಸ್ (ಐಬಿಸಿಎ) ಅನ್ನು ಸಹ ಉದ್ಘಾಟನೆ ಮಾಡಲಿದ್ದಾರೆ.

ಐಬಿಸಿಎ ವಿಶ್ವದ ಏಳು ಪ್ರಮುಖ ದೊಡ್ಡ ಬೆಕ್ಕುಗಳ ರಕ್ಷಣೆ ಮತ್ತು ಸಂರಕ್ಷಣೆಯ ಮೇಲೆ ಕೇಂದ್ರೀಕರಿಸಿದೆ. ಹುಲಿ, ಸಿಂಹ, ಚಿರತೆ, ಹಿಮ ಚಿರತೆ, ಬೆಕ್ಕು ಹಾಗೂೂ ಜಾಗ್ವಾರ್ ಈ ಜಾತಿಗಳ ಪ್ರಾಣಿಗಳಿಗೆ ಆಶ್ರಯ ನೀಡುವ ಶ್ರೇಣಿಯ ದೇಶಗಳ ಸದಸ್ಯತ್ವದೊಂದಿಗೆ ಐಬಿಸಿಎಂ ಅನ್ನು ಆರಂಭಿಸಲಾಗುತ್ತಿದೆ. ಈ ಕುರಿತು ಹೆಚ್ಚಿನ ವಿವರ ಇಲ್ಲಿದೆ ಓದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಕಾರ್ಯಕ್ರಮಗಳ ಬಳಿಕ ತಮಿಳುನಾಡಿನ ಮದುಮಲೈ ಹುಲಿ ಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಕ್ಯಾಂಪ್ ಗೆ ಆಗಮಿಸಲಿದ್ದಾರೆ. ವಿವರ ಇಲ್ಲಿದೆ.

Whats_app_banner