Kannada News  /  Karnataka  /  Pm Narendra Modi Karnataka Visit Today, Launch Projects Worth <Span Class='webrupee'>₹</span>16,000 Crore, 10 Points
Narendra Modi in Karnataka: ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ
Narendra Modi in Karnataka: ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ

Narendra Modi in Karnataka: ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಮಂಡ್ಯ, ಹುಬ್ಬಳ್ಳಿ, ಧಾರವಾಡ ಕೇಸರಿಮಯ | 10 ಅಂಶಗಳು

12 March 2023, 6:48 ISTPraveen Chandra B
12 March 2023, 6:48 IST

Narendra Modi: ಮಂಡ್ಯ, ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳು ಪ್ರಧಾನಿ ಸ್ವಾಗತಕ್ಕೆ ಸಜ್ಜಾಗಿದ್ದು, ಎಲ್ಲೆಲ್ಲೂ ಕೇಸರಿಮಯವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಇಂದು ಸುಮಾರು 16 ಸಾವಿರ ಕೋಟಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ಹೊಸ್ತಿಲಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ನಿರಂತರವಾಗಿ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದು, ಇಂದು ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಮಂಡ್ಯ, ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳು ಪ್ರಧಾನಿ ಸ್ವಾಗತಕ್ಕೆ ಸಜ್ಜಾಗಿದ್ದು, ಎಲ್ಲೆಲ್ಲೂ ಕೇಸರಿಮಯವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಇಂದು ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಹಲವು ಪ್ರಾಜೆಕ್ಟ್‌ಗಳನ್ನು ಉದ್ಘಾಟಿಸಲಿದ್ದಾರೆ. ಮಂಡ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿಯು ಬೃಹತ್‌ ರೋಡ್‌ ಶೋದಲ್ಲಿ ಭಾಗಿಯಾಗಲಿದ್ದಾರೆ.

ಇಂದು ಮೈಸೂರು-ಬೆಂಗಳೂರು ದಶಪಥದಲ್ಲಿ ಸಾರ್ವಜನಿಕರ ಪ್ರಯಾಣಕ್ಕೆ ಅವಕಾಶವಿಲ್ಲ. ಸಾರ್ವಜನಿಕರು ಬದಲಿ ಮಾರ್ಗಗಳ ಮೂಲಕ ಗಮ್ಯ ತಲುಪಬಹುದು. ಇಂದು ಮೊದಲು ಮಂಡ್ಯಕ್ಕೆ ಭೇಟಿ ನೀಡಲಿರುವ ಮೋದಿ ಅವರು 5 ಸಾವಿರ ಕೋಟಿ ರೂ. ವೆಚ್ಚದ ಹಲವು ಪ್ರಾಜೆಕ್ಟ್‌ಗಳಿಗೆ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ ಎರಡು ಗಂಟೆಗೆ ಹುಬ್ಬಳ್ಳಿಗೆ, ಅಪರಾಹ್ನ 3.15ರ ಬಳಿಕ ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ.

 

ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ- ಹತ್ತು ಅಂಶಗಳು

  1. ಇಂದು ಬೆಳಗ್ಗೆ 11.35ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ಮಂಡ್ಯಕ್ಕೆ ಪ್ರಯಾಣಿಸಲಿದ್ದಾರೆ. ಮಂಡ್ಯದ ಪಿಇಎಸ್‌ ಕಾಲೇಜು ಮೈದಾನಕ್ಕೆ ಆಗಮಿಸುವ ಇವರು ಬಳಿಕ ಐಬಿ ವೃತ್ತದಿಂದ ನಂದ ಚಿತ್ರಮಂದಿರದವರೆಗೆ ರೋಡ್‌ ಶೋ ನಡೆಸಲಿದ್ದಾರೆ.
  2. ಈ ಕಾರ್ಯಕ್ರಮದ ಬಳಿಕ ಬೂದನೂರಿಗೆ ಮೋದಿ ತೆರಳುವರು. ಅಲ್ಲಿ ಸುಮಾರು ಐವತ್ತು ಮೀಟರ್‌ ದೂರ ಪ್ರಧಾನಿ ಮೋದಿ ರಸ್ತೆಯಲ್ಲಿ ನಡೆದುಕೊಂಡು ಹೋಗುವರು. ಇಲ್ಲಿ ಮೋದಿ ಸ್ವಾಗತಕ್ಕೆ ಐನ್ನೂರು ಕಲಾವಿದರು ಇರುತ್ತಾರೆ.
  3. ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಮಾಡಲಿದ್ದಾರೆ. ರಾಷ್ಟ್ರೀಯ ಹೆದ್ದಾರಿ 275ರ ಬೆಂಗಳೂರು-ನಿಡಘಟ್ಟ-ಮೈಸೂರು ವಿಭಾಗದ ದಶಪಥವನ್ನು ಮೋದಿ ಉದ್ಘಾಟಿಸಲಿದ್ದಾರೆ. ಈ ದಶಪಥದಿಂದಾಗಿ ಬೆಂಗಳೂರು-ಮೈಸೂರು ನಡುವೆ ಪ್ರಯಾಣದ ಅವಧಿ 75 ನಿಮಿಷಗಳಿಗೆ ತಗ್ಗಲಿದೆ.
  4. ಹುಬ್ಬಳ್ಳಿಯಲ್ಲಿಂದು 166 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಹೈಟೆಕ್‌ ಕ್ರೀಡಾ ಸಂಕೀರ್ಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದೇ ಸಮಯದಲ್ಲಿ ಹುಬ್ಬಳ್ಳಿ ಹೊಸಪೇಟೆ ರೈಲು ಮಾರ್ಗ ವಿದ್ಯುದೀಕರಣ ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಬಳಿಕ ಬೃಹತ್‌ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನರು ಸೇರುವ ನಿರೀಕ್ಷೆಯಿದೆ.
  5. 144 ಗ್ರಾಮಪಂಚಾಯಿತಿಗಳಿಗೆ ನಲ್ಲಿ ನೀರು ಒದಗಿಸುವ 1200 ಕೋಟಿ ರೂ.ಗಳ ಜಲಜೀವನ್‌ ಮಿಷನ್‌ಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಜಯದೇವ ಹೃದ್ರೋಗ ಸಂಸ್ಥೆ, ವಿವೇಕ್‌ ತರಗತಿ ಕೊಠಡಿಗಳನ್ನು ಉದ್ಘಾಟಿಸಲಿದ್ದಾರೆ. ಸ್ಮಾರ್ಟ್‌ಸಿಟಿ ಯೋಜನೆಯ ಹದಿನೈದು ಕಾಮಗಾರಿಗಳನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.
  6. ಮಂಡ್ಯದಲ್ಲಿ ಇಂದು ಪ್ರಧಾನಿ ಮೋದಿ ರೋಡ್‌ ಶೋನಲ್ಲಿ ಭಾಗಿಯಾಗಲಿದ್ದಾರೆ. ಪ್ರವಾಸಿ ಮಂದಿರ ವೃತ್ತದಿಂದ ಜಯಚಾಮರಾಜೇಂದ್ರ ಒಡೆಯರ್‌ ವೃತ್ತದ ಮಾರ್ಗವಾಗಿ ನಂದಾ ವೃತ್ತದ ಮೂಲಕ ರೋಡ್‌ ಶೋ ನಡೆಯಲಿದೆ. ಬಳಿಕ ಮದ್ದೂರಿನ ಗೆಜ್ಜಲಗೆರೆ ಕಾಲೋನಿಯಲ್ಲಿ ಸಮಾವೇಶ ನಡೆಯಲಿದೆ.
  7. ಐಐಟಿ ಧಾರವಾಡ ಕ್ಯಾಂಪಸ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಜಗತ್ತಿನ ಅತಿಉದ್ದದ ರೈಲ್ವೆ ಪ್ಲಾಟ್‌ಫಾರ್ಮ್‌ ಉದ್ಘಾಟಿಸಲಿದ್ದಾರೆ. ಇದಾದ ಬಳಿಕ ತುಪ್ಪರಿಹಳ್ಳ ಏತ ನೀರಾವರಿ ಯೋಜನೆಗೆ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
  8. ಮೈಸೂರು ಕುಶಾಲನಗರ 4 ಲೇನ್‌ ಹೆದ್ದಾರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
  9. ಮಂಡ್ಯದಲ್ಲಿ ಬಿಜೆಪಿಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಸಾಥ್‌ ನೀಡಿದ್ದಾರೆ. ಮಂಡ್ಯಕ್ಕೆ ಆಗಮಿಸುವ ಮೋದಿಗೆ ವಿಶೇಷ ಸಾವಯವ ಬೆಲ್ಲ ನೀಡುತ್ತೇನೆ, ನನ್ನ ಬೆಂಬಲಿಗರೂ ರೋಡ್‌ ಶೋಗೆ ಬೆಂಬಲ ನೀಡಲಿದ್ದಾರೆ ಎಂದು ಸುಮಲತಾ ಅಂಬರೀಶ್‌ ಹೇಳಿದ್ದಾರೆ.
  10. ಮೋದಿಯವರು ಕಳೆದ ಕೆಲವು ತಿಂಗಳಲ್ಲಿ ಹಲವು ಬಾರಿ ಕರ್ನಾಟಕಕ್ಕೆ ಆಗಮಿಸಿದ್ದರು. ಫೆಬ್ರವರಿ 27ರಂದು ಶಿವಮೊಗ್ಗಕ್ಕೆ ಆಗಮಿಸಸಿದ್ದರು. ಅಂದು, ಬೆಳಗಾವಿಗೂ ಭೇಟಿ ನೀಡಿದ್ದರು.