Karnataka Politics: ಸಚಿವರ ನಡೆಗೆ ಕೈ ಶಾಸಕರ ಅಸಮಾಧಾನ: ಸರ್ಕಾರ ಬಂದ ಎರಡೇ ತಿಂಗಳಲ್ಲೇ ಸಿಎಂಗೆ ಪತ್ರ ಬರೆದ ಕಾಂಗ್ರೆಸ್‌ನ ಹಿರಿಯ ಶಾಸಕರು
ಕನ್ನಡ ಸುದ್ದಿ  /  ಕರ್ನಾಟಕ  /  Karnataka Politics: ಸಚಿವರ ನಡೆಗೆ ಕೈ ಶಾಸಕರ ಅಸಮಾಧಾನ: ಸರ್ಕಾರ ಬಂದ ಎರಡೇ ತಿಂಗಳಲ್ಲೇ ಸಿಎಂಗೆ ಪತ್ರ ಬರೆದ ಕಾಂಗ್ರೆಸ್‌ನ ಹಿರಿಯ ಶಾಸಕರು

Karnataka Politics: ಸಚಿವರ ನಡೆಗೆ ಕೈ ಶಾಸಕರ ಅಸಮಾಧಾನ: ಸರ್ಕಾರ ಬಂದ ಎರಡೇ ತಿಂಗಳಲ್ಲೇ ಸಿಎಂಗೆ ಪತ್ರ ಬರೆದ ಕಾಂಗ್ರೆಸ್‌ನ ಹಿರಿಯ ಶಾಸಕರು

Karnataka MLAs Letter ಕರ್ನಾಟಕದಲ್ಲಿ ಕಾಂಗ್ರೆಸ್‌ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿ ಎರಡು ತಿಂಗಳಾಗಿದೆ. ಸಚಿವರು ತಮ್ಮ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ಕಾಂಗ್ರೆಸ್‌ನ ಶಾಸಕರೇ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಏನಿದೆ ಪತ್ರದಲ್ಲಿ..ಇಲ್ಲಿದೆ ವಿವರ..

ಕರ್ನಾಟಕದಲ್ಲಿ ಸರ್ಕಾರ ರಚನೆಯಾಗಿ ಎರಡು ತಿಂಗಳಲ್ಲೇ ಸಚಿವರ ವಿರುದ್ದ ಸ್ವಪಕ್ಷೀಯ ಶಾಸಕರೇ ಸಿಎಂಗೆ ಪತ್ರ ಬರೆದು ಅಸಮಾಧಾನ ಹೊರ ಹಾಕಿರುವುದು ಚರ್ಚೆಗೆ ಗ್ರಾಸವಾಗಿದೆ.
ಕರ್ನಾಟಕದಲ್ಲಿ ಸರ್ಕಾರ ರಚನೆಯಾಗಿ ಎರಡು ತಿಂಗಳಲ್ಲೇ ಸಚಿವರ ವಿರುದ್ದ ಸ್ವಪಕ್ಷೀಯ ಶಾಸಕರೇ ಸಿಎಂಗೆ ಪತ್ರ ಬರೆದು ಅಸಮಾಧಾನ ಹೊರ ಹಾಕಿರುವುದು ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರು: ಅನುದಾನ ಬಿಡುಗಡೆ ಮಾಡುವುದಕ್ಕೂ ಸಚಿವರು ಮೂರನೇ ವ್ಯಕ್ತಿ ಮೂಲಕ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ. ಸಚಿವರು ತಮಗೆ ಬೇಕಾದ ಅಧಿಕಾರಿಗಳಿಗೆ ಮಣೆ ಹಾಕಿ, ಸ್ವಜನಪಕ್ಷಪಾತ ಮಾಡುತ್ತಿದ್ದಾರೆ. ನಮ್ಮ ಯಾವುದೇ ವರ್ಗಾವಣೆ ಶಿಫಾರಸ್ಸು ಪತ್ರಗಳಿಗೆ ಮಾನ್ಯತೆ ಕೊಡುತ್ತಿಲ್ಲ.

ಇದು ಕರ್ನಾಟಕದಲ್ಲಿ ಕಾಂಗ್ರೆಸ್‌ ನೇತೃತ್ವದಲ್ಲಿ ರಚನೆಯಾಗಿರುವ ಸಚಿವರ ವಿರುದ್ದ ಸ್ವಪಕ್ಷೀಯ ಹಿರಿಯ ಶಾಸಕರೇ ಮಾಡಿರುವ ಆರೋಪ.

ಜಿಲ್ಲಾ ಉಸ್ತುವಾರಿ ಸಚಿವರ ಅಸಹಕಾರ ಹಾಗೂ ಇಲಾಖೆಗೆ ಸಂಬಂಧಿಸಿದ ಅನುದಾನದ ಬೇಡಿಕೆ ಕುರಿತು 30 ಕ್ಕೂ ಹೆಚ್ಚು ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಹಿರಿಯ ಶಾಸಕರಾದ ಇವರೆಲ್ಲ ಬರೆದಿರುವ ಪತ್ರದಲ್ಲಿ ಬಹುತೇಕ ಸಚಿವರ ಮೇಲೆ ಆರೋಪಗಳು ಕೇಳಿ ಬಂದಿವೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧವೂ ಆರೋಪ ಕೇಳಿ ಬಂದಿದೆ. ಹಾಸನ, ಮಂಡ್ಯ, ಚಾಮರಾಜ ನಗರ ಜಿಲ್ಲೆಗಳ ಉಸ್ತುವಾರಿ ಸಚಿವರ ವಿರುದ್ಧವೂ ದೂರು ಸಲ್ಲಿಸಲಾಗಿದೆ.

ಸಚಿವರ ವಿರುದ್ದ ಕರ್ನಾಟಕದಲ್ಲಿ ಶಾಸಕರು ಬರೆದಿರುವ ಪತ್ರ.
ಸಚಿವರ ವಿರುದ್ದ ಕರ್ನಾಟಕದಲ್ಲಿ ಶಾಸಕರು ಬರೆದಿರುವ ಪತ್ರ.

ಶಾಸಕರ ಪತ್ರದಲ್ಲೇನಿದೆ?

ಆಳಂದ ಶಾಸಕ ಹಿರಿಯ ಮುಖಂಡ ಬಿ. ಆರ್. ಪಾಟೀಲ್ ಅವರು ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದ ಪ್ರತಿ ಹಿಂದುಸ್ಥಾನ್ ಟೈಮ್ಸ್ ಗೆ ಲಭ್ಯವಾಗಿದೆ.

ವಿವಿಧ ಇಲಾಖೆಗೆ ಸಂಬಂಧಿಸಿದ 20ಕ್ಕೂ ಹೆಚ್ಚು ಸಚಿವರಿಗೆ ನಮ್ಮ ಕ್ಷೇತ್ರಕ್ಕೆ ಅನುದಾನ ನೀಡುವಂತೆ ಮನವಿ ಮಾಡಿದ್ದರೂ ಸ್ಪಂದಿಸುತ್ತಿಲ್ಲ. ಇದರಿಂದ ಜನರ ಆಶೋತ್ತರ ಈಡೇರಿಸುವುದಕ್ಕೆ ಸಾಧ್ಯವಾಗುತ್ತಿಲ್ಲ. ಅಲ್ಲದೆ ಅನುದಾನ ಬಿಡುಗಡೆ ಮಾಡುವುದಕ್ಕೂ ಸಚಿವರು ಮೂರನೇ ವ್ಯಕ್ತಿ ಮೂಲಕ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ. ಸ್ಥಳೀಯ ಶಾಸಕರಾಗಿದ್ದರೂ ಅನುದಾನಕ್ಕಾಗಿ ಮೂರನೇ ವ್ಯಕ್ತಿಯ ಮೊರೆ ಹೋಗಬೇಕಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ಸಚಿವರು ತಮಗೆ ಬೇಕಾದ ಅಧಿಕಾರಿಗಳಿಗೆ ಮಣೆ ಹಾಕಿ, ಸ್ವಜನಪಕ್ಷಪಾತ ಮಾಡುತ್ತಿದ್ದಾರೆ. ನಮ್ಮ ಯಾವುದೇ ವರ್ಗಾವಣೆ ಶಿಫಾರಸ್ಸು ಪತ್ರಗಳಿಗೆ ಮಾನ್ಯತೆ ಕೊಡುತ್ತಿಲ್ಲ. ಇದರಿಂದಾಗಿ ಯಾವ ಅಧಿಕಾರಿಯೂ ನಮ್ಮ ಕೆಲಸಗಳನ್ನು ಮಾಡಿಕೊಡುತ್ತಿಲ್ಲ, ನಮ್ಮ ಮಾತಿಗೆ ಬೆಲೆಯೂ ನೀಡುತ್ತಿಲ್ಲ. ನಮ್ಮನ್ನು ಆರಿಸಿ ಕಳುಹಿಸಿದ ಜನರ ವಿಶ್ವಾಸಕ್ಕೆ ತಕ್ಕಂತೆ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ತಾವು ತಕ್ಷಣವೇ ಮಧ್ಯಪ್ರವೇಶಿಸಿ ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಪಡಿಸಿದ್ದಾರೆ.

ನಿರಾಕರಿಸಿದ ಡಿಕೆಶಿ

ಸಚಿವರ ವಿರುದ್ದ ಯಾವುದೇ ಶಾಸಕರು ಪತ್ರ ಬರೆದಿಲ್ಲ ಎಂದು ಡಿಸಿಎಂ ಶಿವಕುಮಾರ್ ಮಂಗಳವಾರ ಬೆಂಗಳೂರಿನಲ್ಲಿ ಸಮಜಾಯಿಷಿ ನೀಡಿದರು.

ಈ ನಡುವೆ ಜುಲೈ 27ರಂದು ಸಚಿವ ಸಂಪುಟ ಸಭೆ ಕರೆಯಲಾಗಿದ್ದು ಶಾಸಕರ ದೂರಿನ ಕುರಿತು ಸಿಎಂ ಸಿದ್ದರಾಮಯ್ಯ ಅವರು ಸಚಿವರಿಗೆ ಕಿವಿ ಮಾತು ಹೇಳಬಹುದು ಎನ್ನಲಾಗುತ್ತಿದೆ.

ಸಚಿವರು ಮೇಲಿರುವ ಅರೋಪಗಳೇನು?

* ಶಾಸಕರ ವರ್ಗಾವಣೆ ಶಿಫಾರಸ್ಸು ಪತ್ರಗಳಿಗೆ ಮಾನ್ಯತೆ ನೀಡಿಲ್ಲ

* ಕೆಲ ಸಚಿವರು ವರ್ಗಾವಣೆಗೆ ಹಣ ಕೇಳಿದ್ದಾರೆ ಎಂಬ ಆರೋಪ

* ಸಂಬಂಧಿಯೊಬ್ಬರ ವರ್ಗಾವಣೆಗೆ ಶಿಫಾರಸ್ಸು ಪತ್ರ ನೀಡಿದ್ದ ಹಿರಿಯ ಶಾಸಕ

* ಶಿಫಾರಸು ಪತ್ರ ಹಿಡಿದು ವರ್ಗಾವಣೆಗೆಂದು ಸಚಿವರನ್ನು ಭೇಟಿ ಮಾಡಿದ್ದ ಅಧಿಕಾರಿ. ಈ ವೇಳೆ ಅಧಿಕಾರಿ ಬಳಿಯೇ ಸಚಿವರೊಬ್ಬರ ಸಹೋದರ ಹಣ ಕೇಳಿದ್ದಾರೆ ಎಂಬ ಆರೋಪ

* ಶಾಸಕರಿಗೆ ಗೌರವ ಕೊಡುತ್ತಿಲ್ಲ, ಭೇಟಿ ವೇಳೆ ಸರಿಯಾಗಿ ಸ್ಪಂದಿಸುತ್ತಿಲ್ಲ

ಸಿದ್ದರಾಮಯ್ಯಗೆ ಪತ್ರ ಬರೆದಿರುವ ಹಿರಿಯ ಶಾಸಕರು

ಬಿ.ಆರ್ ಪಾಟೀಲ್

ಬಸವರಾಜ್ ರಾಯರೆಡ್ಡಿ

ಯಶವಂತ ರಾಯಗೌಡ ಪಾಟೀಲ್

ಅಪ್ಪಾಜಿ ನಾಡಗೌಡ

ಶಿವಲಿಂಗೇಗೌಡ

ನರೇಂದ್ರಸ್ವಾಮಿ

ಎಂ. ಕೃಷ್ಣಪ್ಪ

ಪ್ರಿಯಾಕೃಷ್ಣ

ವಿನಯ್ ಕುಲಕರ್ಣಿ

ವಿಜಯಾನಂದ ಕಾಶಪ್ಪನವರ್

ಎ.ಆರ್. ಕೃಷ್ಣಮೂರ್ತಿ

ಅಲ್ಲಮ ಪ್ರಭು ಪಾಟೀಲ್

( ವರದಿ: ಎಚ್.ಮಾರುತಿ)

Whats_app_banner