ಕಲಬುರಗಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಬ್ಬರದ ಪ್ರಚಾರ; ಕಾಂಗ್ರೆಸ್ ಅಧ್ಯಕ್ಷ ಖರ್ಗೆ ತವರಿನಿಂದಲೇ ಮತಬೇಟೆ -PM Modi Kalaburagi-political news lok sabha election 2024 pm narendra modi campaign in kalaburagi attack against congress rmy ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  ಕಲಬುರಗಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಬ್ಬರದ ಪ್ರಚಾರ; ಕಾಂಗ್ರೆಸ್ ಅಧ್ಯಕ್ಷ ಖರ್ಗೆ ತವರಿನಿಂದಲೇ ಮತಬೇಟೆ -Pm Modi Kalaburagi

ಕಲಬುರಗಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಬ್ಬರದ ಪ್ರಚಾರ; ಕಾಂಗ್ರೆಸ್ ಅಧ್ಯಕ್ಷ ಖರ್ಗೆ ತವರಿನಿಂದಲೇ ಮತಬೇಟೆ -PM Modi Kalaburagi

ಪ್ರಧಾನಿ ನರೇಂದ್ರ ಮೋದಿ ಇಂದು (ಮಾರ್ಚ್ 16, ಶನಿವಾರ) ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕ್ಷೇತ್ರ ಕಲಬುರಗಿಯಲ್ಲಿ ಬಿಜೆಪಿ ಸಂಕಲ್ಪ ಯಾತ್ರೆಗೆ ಚಾಲನೆ ನೀಡುವ ಮಲೂಕ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಇಳಿದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕಲಬುರಗಿಯಲ್ಲಿ ಅಬ್ಬರದ ಪ್ರಚಾರ ನಡೆಸುವ ಮೂಲಕ ಕರ್ನಾಟಕದಲ್ಲಿ ಬಿಜೆಪಿಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕಲಬುರಗಿಯಲ್ಲಿ ಅಬ್ಬರದ ಪ್ರಚಾರ ನಡೆಸುವ ಮೂಲಕ ಕರ್ನಾಟಕದಲ್ಲಿ ಬಿಜೆಪಿಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ್ದಾರೆ.

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಕಲಬುರಗಿಯಲ್ಲಿ ಬಿಜೆಪಿ ಸಂಕಲ್ಪ ಯಾತ್ರೆಯಲ್ಲಿ (BJP Sankalp Yatra) ಭಾಗವಹಿಸುವ ಮೂಲಕ ಲೋಕಸಭೆ ಚುನಾವಣೆಗೆ (Lok Sabha Elections 2024) ಕರ್ನಾಟಕದಲ್ಲಿ ಅದ್ಧೂರಿಯಾಗಿ ಚಾಲನೆ ನೀಡಿದ್ದಾರೆ. ಇಂದು (ಮಾರ್ಚ್ 16, ಶನಿವಾರ) ಮಧ್ಯಾಹ್ನ ಕಲಬುರಗಿ ಜಿಲ್ಲೆಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಪಕ್ಷದ ಹಿರಿಯ ನಾಯಕರಾದ ಪ್ರಹ್ಲಾದ್ ಜೋಶಿ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸ್ವಾಗತಿಸಿದರು. ಈ ಬಾರಿ 400 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಾಗಿ ಪ್ರತಿಜ್ಞೆ ಮಾಡಿದ ಪ್ರಧಾನಿ ಮೋದಿ, ಮುಂಬರುವ ಚುನಾವಣೆಯಲ್ಲಿ ಕೇಸರಿ ಪಕ್ಷವನ್ನು ಗೆಲ್ಲಿಸಲು ದಕ್ಷಿಣ ರಾಜ್ಯ ಕರ್ನಾಟಕ ಈಗಾಗಲೇ ನಿರ್ಧರಿಸಿದೆ ಎಂದು ಹೇಳಿದರು.

ಬಿಜೆಪಿ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ ಬಳಿಕ ಪ್ರಧಾನಿ ಮೋದಿ ಅವರು ಬಸವೇಶ್ವರ ಅವರ ನಾಡು, ಶ್ರೀಶರಣರ ನಾಡು ಕಲಬುರಗಿಯ ಜನತೆಗೆ ನಮಸ್ಕಾರಗಳು ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದರು. "ಕಲಬುರಗಿಯಲ್ಲಿ ಈ ಜನಸಮೂಹ ಮತ್ತು ನಿಮ್ಮೆಲ್ಲರ ಮುಖದಲ್ಲಿರುವ ಈ ಉತ್ಸಾಹವು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದಾಖಲೆ ಸಂಖ್ಯೆಯ ಸ್ಥಾನಗಳನ್ನು ಗೆಲ್ಲುವಂತೆ ಮಾಡಲು ಸಂಕಲ್ಪ ಮಾಡಿದೆ. ಈ ಬಾರಿ ನಾವು 400 ದಾಟುತ್ತೇವೆ ಎಂದು ಇಡೀ ಕರ್ನಾಟಕ ಹೇಳುತ್ತಿದೆ ಎಂದರು.

ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ

ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, "ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ರಾಜ್ಯದಲ್ಲಿ ಸಮಾಜಘಾತುಕ ಶಕ್ತಿಗಳಿಗೆ ರಕ್ಷಣೆ ನೀಡಲಾಗುತ್ತಿದೆ. ನಿಮ್ಮೆಲ್ಲರಿಗೂ ಕಾಂಗ್ರೆಸ್ ವಿರುದ್ಧ ಇರುವ ಕೋಪವನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಇದು ಅಂತಹ ಪಕ್ಷವಾಗಿದ್ದು, ಅವರು ಎಷ್ಟೇ ಬಟ್ಟೆಗಳನ್ನು ಬದಲಾಯಿಸಿದರೂ, ಅವರ ಚಟುವಟಿಕೆಗಳು ಬದಲಾಗುವುದಿಲ್ಲ. ಕಲ್ಲಿದ್ದಲಿನ ಕಪ್ಪುತನವನ್ನು ತೆಗೆದುಹಾಕಬಹುದು ಆದರೆ ಭ್ರಷ್ಟಾಚಾರವನ್ನು ಕಾಂಗ್ರೆಸ್‌ನಿಂದ ಬೇರ್ಪಡಿಸಲು ಸಾಧ್ಯವಿಲ್ಲ. ಈ ರಾಜವಂಶಗಳಿಗೆ ಭ್ರಷ್ಟಾಚಾರವೇ ಆಮ್ಲಜನಕ. ಆದ್ದರಿಂದ, ಕರ್ನಾಟಕದ ಜನರು ಜಾಗೃತರಾಗಿದ್ದಾರೆ. ಜನರು ಕಾಂಗ್ರೆಸ್‌ನ ಸತ್ಯವನ್ನು ತಿಳಿದುಕೊಂಡಿದ್ದಾರೆ ಎಂದು ಕೈ ಪಕ್ಷದ ವಿರುದ್ಧ ಕಿಡಿಕಾರಿದರು.

ಇದಕ್ಕೂ ಮುನ್ನ ವೇದಿಕೆಗೆ ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಬಸವಣ್ಣ ಫೋಟೊ ನೀಡಿದರೆ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಶಾಲು ಹೊದಿಸಿದರು. ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮೈಸೂರು ಪೇಟ ತೊಡಿಸಿ ಸನ್ಮಾನಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಹಿಂದೆ ಎರಡು ಬಾರಿ ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಉಮೇಶ್ ಜಾಧವ್ ವಿರುದ್ಧ ಸೋಲು ಅನುಭವಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಐತಿಹಾಸಿಕ ಪ್ರಾಬಲ್ಯಕ್ಕೆ ಅಡ್ಡಿಪಡಿಸಿದ ಈ ಕ್ಷೇತ್ರದಲ್ಲಿ ಉಮೇಶ್ ಜಾಧವ್ ಅವರನ್ನು ಕಣಕ್ಕಿಳಿಸಲು ಕೇಸರಿ ಪಕ್ಷ ಮತ್ತೊಮ್ಮೆ ನಿರ್ಧರಿಸಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಸೋತ ನಂತರ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರನ್ನು ಇಲ್ಲಿ ಕಣಕ್ಕಿಳಿಸಲು ಕಾಂಗ್ರೆಸ್ ಮಾತುಕತೆ ನಡೆಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಮುಂಬರುವ ದಿನಗಳಲ್ಲಿ ಪ್ರಧಾನಿ ಮೋದಿ ದಕ್ಷಿಣ ಭಾರತದ ಹಲವಾರು ಪ್ರದೇಶಗಳಿಗೆ ಭೇಟಿ ನೀಡಲಿದ್ದು, ಮಾರ್ಚ್ 18 ರಂದು ಪಕ್ಷದ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ.

ಕರ್ನಾಟಕದಲ್ಲಿ 2023ರ ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಸೋತ ಬಿಜೆಪಿ, ದಕ್ಷಿಣದಲ್ಲಿ ತನ್ನ ನೆಲೆಯನ್ನು ಮರಳಿ ಪಡೆಯಲು ಎದುರು ನೋಡುತ್ತಿದೆ. ಇಂದು ಬೆಳಿಗ್ಗೆ ತೆಲಂಗಾಣದ ನಾಗರ್ ಕರ್ನೂಲ್ ನಲ್ಲಿ ಸಾರ್ವಜನಿಕ ರಾಲಿಯನ್ನು ಉದ್ದೇಶಿಸಿ ಮಾತನಾಡಿದ ನಂತರ ಪ್ರಧಾನಿ ಮೋದಿ ಕರ್ನಾಟಕಕ್ಕೆ ಆಗಮಿಸಿದ್ದರು.

mysore-dasara_Entry_Point