ಪ್ರಜ್ವಲ್ ರೇವಣ್ಣ ಕೇಸ್; ಮೊದಲ ಬಾರಿ ಪ್ರತಿಕ್ರಿಯೆ ನೀಡಿದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ; ಕಾನೂನು ಕ್ರಮಕ್ಕೆ ತಕರಾರು ಇಲ್ಲ
ಪ್ರಜ್ವಲ್ ರೇವಣ್ಣ ಕೇಸ್ ಕುರಿತು ಇದೇ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಪ್ರಜ್ವಲ್ ವಿರುದ್ಧ ಕಾನೂನು ಕ್ರಮಕ್ಕೆ ತಕರಾರು ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಷ್ಟೇ ಅಲ್ಲ, ಈ ಕೇಸ್‌ನ ಹಿಂದೆ ಹಲವರು ಕೆಲಸ ಮಾಡುತ್ತಿದ್ದಾರೆ ಎಂಬ ಅರಿವೂ ನನಗಿದೆ ಎಂದು ಅವರು ಇದೇ ವೇಳೆ ಹೇಳಿದರು.
ಬೆಂಗಳೂರು: ಹಾಸನ ಲೈಂಗಿಕ ಹಗರಣದ ಪ್ರಮುಖ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಕೇಸ್‌ಗೆ ಸಂಬಂಧಿಸಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ( Ex PM HD Deve Gowda) ಅವರು ಇದೇ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಜ್ವಲ್ ವಿರುದ್ಧ ಕಾನೂನು ಕ್ರಮಕ್ಕೆ ತಕರಾರು ಇಲ್ಲ ಎಂದು ಹೇಳಿದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು, ರೇವಣ್ಣ ಪ್ರಕರಣದಲ್ಲಿ ಕೂಡ ಅನೇಕರು ಕೆಲಸ ಮಾಡುತ್ತಿರುವುದು ಅರಿವಿಗೆ ಬಂದಿದೆ ಎಂದು ಒಳಸುಳಿ ಗೊತ್ತಿದೆ ಎಂಬುದನ್ನು ಹೇಳಿದರು.
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿರುವುದು ಇಷ್ಟು -
ರೇವಣ್ಣ ಅವರಿಗೆ ಒಂದು ಪ್ರಕರಣಲ್ಲಿ ಜಾಮೀನು ಸಿಕ್ಕಿದೆ ಮತ್ತೊಂದರ ವಿಚಾರಣೆ ನಡೆಯುತ್ತಿದ್ದು ಸೋಮವಾರದಂದು ಕೋರ್ಟ್ ತನ್ನ ತೀರ್ಪು ನೀಡಲಿದೆ. ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ತಾವು ಅದರ ಬಗ್ಗೆ ಮಾತಾಡಲ್ಲ ಎಂದ ದೇವೇಗೌಡರು, ರೇವಣ್ಣರ ವಿರುದ್ಧ ಸುಳ್ಳು ಪ್ರಕರಣಗಳನ್ನು ಸೃಷ್ಟಿಸಲಾಗುತ್ತಿದೆ ಎಂದು ನೋವು ಮತ್ತು ವಿಷಾದದಿಂದ ಹೇಳಿದರು.
ಪ್ರಜ್ವಲ್ ಬಗ್ಗೆ ಮಾತಾಡಿದ ಮಾಜಿ ಪ್ರಧಾನಿಯವರು, ಅವರೀಗ ಹೊರದೇಶದಲ್ಲಿದ್ದಾರೆ, ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳ ಬಗ್ಗೆ ತಮ್ಮ ಕುಟುಂಬದ ಪರವಾಗಿ ಹೆಚ್ ಡಿ ಕುಮಾರಸ್ವಾಮಿಯವರು ಸ್ಪಷ್ಟವಾದ ಹೇಳಿಕೆಗಳನ್ನು ನೀಡಿದ್ದಾರೆ ಮತ್ತು ಕಾನೂನಿನ ಪ್ರಕಾರ ಶಿಕ್ಷೆಯಾಗಲಿ ಅಂದಿದ್ದಾರೆ. ಆದರೆ, ಇಡೀ ಪ್ರಕರಣದಲ್ಲಿ ಬೇರೆ ಜನ ಸಹ ಶಾಮೀಲಾಗಿದ್ದಾರೆ ಅವರಿಗೂ ಶಿಕ್ಷೆಯಾಗಬೇಕು ಮತ್ತು ಸಂತ್ರಸ್ತೆಯರಿಗೆ ಪರಿಹಾರ ಸಿಗಬೇಕು ಎಂದು ದೇವೇಗೌಡ ಹೇಳಿದರು.
ಎಚ್ ಡಿ ರೇವಣ್ಣ ಕೇಸ್‌ಗಳ ಕುರಿತು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಮೊದಲ ಪ್ರತಿಕ್ರಿಯೆ
ಎಚ್ ಡಿ ರೇವಣ್ಣ ಅವರ ಬಗ್ಗೆ ಜನತೆಗೆ ಗೊತ್ತಿದೆ. ಅವರ ವಿರುದ್ಧ ಯಾವ ರೀತಿ ಕೇಸ್ ದಾಖಲು ಮಾಡಿದ್ದಾರೆ. ಎರಡು ಮೂರು ಕೇಸ್ ದಾಖಲಾಗಿದೆ. ಒಂದು ಕೇಸ್‌ನಲ್ಲಿ ಬೇಲ್ ಸಿಕ್ಕಿದೆ. ಇನ್ನೊಂದರದ್ದು ಸೋಮವಾರ ತೀರ್ಪು ಪ್ರಕಟವಾಗಲಿದೆ. ಇವೆಲ್ಲ ಯಾವ ರೀತಿ ನಡೆಯಿತು ಎಂಬುದನ್ನು ವಿಶ್ಲೇಷಣೆ ಮಾಡಲ್ಲ. ಅದರ ಪಾಡಿಗೆ ಅದು ನಡೆಯಲಿ.
ಆದರೆ ಕುಮಾರಸ್ವಾಮಿ ಎಲ್ಲವನ್ನೂ ಸ್ಪಷ್ಟವಾಗಿ ಅರಿತು ಮುನ್ನಡೆಯುತ್ತಿದ್ದಾರೆ. ಅವರು ಸರಿಯಾದ ರೀತಿಯಲ್ಲಿ ಎಲ್ಲವನ್ನೂ ನಿಭಾಯಿಸುತ್ತಿದ್ದಾರೆ. ನಮ್ಮ ಕುಟುಂಬದ ಅಭಿಪ್ರಾಯ, ನಿಲುವು ಎಲ್ಲವನ್ನೂ ಅವರ ಸ್ಪಷ್ಟಪಡಿಸಿದ್ದಾರೆ. ಈ ಕೇಸ್ ಶುರುವಾಗಿ ಬಹಳ ಸಮಯ ಆಯಿತು. ನಾನು ಇದುವರೆಗೂ ಪ್ರತಿಕ್ರಿಯೆ ನೀಡಿಲ್ಲ. ಮೌನವೇ ಉತ್ತರ ಎಂದು ಸುಮ್ಮನೇ ಇದ್ದೆ. ನಿಮಗೂ ಗೊತ್ತಿದೆ ಎಂದು ಮಾಧ್ಯಮ ಪ್ರತಿನಿಧಿಗಳನ್ನು ಉದ್ಧೇಶಿಸಿ ಮಾಜಿ ಪ್ರಧಾನಿ ದೇವೇಗೌಡ ಅವರು ಹೇಳಿದರು.
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಜನ್ಮದಿನ ಇಂದು. ದೇವೇಗೌಡ ಅವರು 92 ನೇ ಹುಟ್ಟುಹಬ್ಬ ಆಚರಿಸಿದ್ದು, ದೇವಸ್ಥಾನಕ್ಕೆ ಹೋಗಿ ಬರುವಾಗ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದರು.
ಮಾಜಿ ಪ್ರಧಾನಿ ದೇವೇಗೌಡ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಎಕ್ಸ್ ಖಾತೆಯಲ್ಲಿ ಶುಭಹಾರೈಕೆಗಳು ತುಂಬಿಕೊಂಡಿವೆ.
(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)
ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.