ಕನ್ನಡ ಸುದ್ದಿ  /  ಕರ್ನಾಟಕ  /  Prajwal Revanna Scandal: ಸಂತ್ರಸ್ತ ಮಹಿಳೆ ಅಪಹರಣ ಆರೋಪ ಪ್ರಕರಣ; ಜೆಡಿಎಸ್ ನಾಯಕ, ಮಾಜಿ ಸಚಿವ ಎಚ್‌ಡಿ ರೇವಣ್ಣ ಬಂಧನ

Prajwal Revanna Scandal: ಸಂತ್ರಸ್ತ ಮಹಿಳೆ ಅಪಹರಣ ಆರೋಪ ಪ್ರಕರಣ; ಜೆಡಿಎಸ್ ನಾಯಕ, ಮಾಜಿ ಸಚಿವ ಎಚ್‌ಡಿ ರೇವಣ್ಣ ಬಂಧನ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊದಲ್ಲಿ ಇದ್ದರು ಎನ್ನಲಾದ ಮಹಿಳೆಯನ್ನು ಅಪಹರಣ ಮಾಡಿರುವ ಆರೋಪದಲ್ಲಿ ಪ್ರಜ್ವಲ್ ಅವರ ತಂದೆ, ಜೆಡಿಎಸ್ ನಾಯಕ ಎಚ್‌ಡಿ ರೇವಣ್ಣ ಅವರನ್ನು ಎಸ್‌ಐಟಿ ಬಂಧಿಸಿದೆ.

ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೊದಲ್ಲಿದ್ದ ಮಹಿಳೆಯನ್ನು ಅಪಹರಣ ಮಾಡಿಸಿದ ಆರೋಪದಲ್ಲಿ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರನ್ನು ಬಂಧಿಸಲಾಗಿದೆ
ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೊದಲ್ಲಿದ್ದ ಮಹಿಳೆಯನ್ನು ಅಪಹರಣ ಮಾಡಿಸಿದ ಆರೋಪದಲ್ಲಿ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರನ್ನು ಬಂಧಿಸಲಾಗಿದೆ

ಬೆಂಗಳೂರು: ಜೆಡಿಎಸ್‌ನಿಂದ (JDS) ಅಮಾನತುಗೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊದಲ್ಲಿದ್ದಾರೆ ಎನ್ನಲಾದ ಮಹಿಳೆಯನ್ನು ಅಪಹರಣ (Victim Kidnap Case) ಮಾಡಿರುವ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಎಚ್‌ಡಿ ರೇವಣ್ಣ (HD Revanna Arrest) ಅವರನ್ನು ವಿಶೇಷ ತನಿಖಾ ತಂಡದ ಅಧಿಕಾರಿಗಳು ಬಂಧಿಸಿದ್ದಾರೆ. ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರ ಮನೆಯಲ್ಲೇ ರೇವಣ್ಣ ಅವರನ್ನು ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

ಟ್ರೆಂಡಿಂಗ್​ ಸುದ್ದಿ

ಪ್ರಕರಣದಲ್ಲಿ ತನ್ನನ್ನು ಬಂಧಿಸದಂತೆ ರಕ್ಷಣೆ ಕೊಡಬೇಕೆಂದು ರೇವಣ್ಣ ತಮ್ಮ ವಕೀಲರ ಮೂಲಕ ಜನಪ್ರತಿನಿಧಿಗಳ ಕೋರ್ಟ್ ಮೊರೆ ಹೋಗಿದ್ದರು. ಆದರೆ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ ಬಂಧನಕ್ಕೆ ತಡೆ ನೀಡಲು ನಿರಾಕಿಸಿತ್ತು. ಇದರ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರ ಮನೆಯಿಂದಲೇ ರೇವಣ್ಣ ಅವರನ್ನು ಇಂದು (ಮೇ 4, ಶನಿವಾರ) ಸಂಜೆ ಅರೆಸ್ಟ್ ಮಾಡಿದೆ.

ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೊದಲ್ಲಿ ಇದ್ದಾರೆ ಎನ್ನಲಾದ ಮಹಿಳೆಯನ್ನು ಅಪಹರಣ ಮಾಡಲಾಗಿದೆ ಎಂದು ಆಕೆಯ ಪುತ್ರ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ. ಬಳಿಕ ಕಾರ್ಯಾಚರಣೆಗೆ ಇಳಿದ ಎಸ್‌ಐಟಿ ಅಧಿಕಾರಿಗಳು 40 ಕಡೆ ದಾಳಿ ನಡೆಸಿದ್ದರು. ಮಹಿಳೆಯನ್ನು ಮೈಸೂರು ಜಿಲ್ಲೆ ಹುಣಸೂರಿನ ತೋಟದ ಮನೆಯಲ್ಲಿ ಪತ್ತೆ ಹಚ್ಚಿದ್ದರು. ಸದ್ಯ ಎಸ್‌ಐಟಿ ಅಧಿಕಾರಿಗಳು ಸಂತ್ರಸ್ತೆಯನ್ನು ಬೆಂಗಳೂರಿಗೆ ಕರೆ ತಂದಿದ್ದಾರೆ. ಇದೇ ಪ್ರಕಣದಲ್ಲಿ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರ ಸಂಬಂಧಿ ಸತೀಶ್ ಬಾಬು ಅವರನ್ನು ಶುಕ್ರವಾರ (ಮೇ 3) ಅಧಿಕಾರಿಗಳು ಬಂಧಿಸಿದ್ದರು. ಬಳಿಕ ರೇವಣ್ಣ ಅವರಿಗೂ ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದರು.

ನಿರೀಕ್ಷಣಾ ಜಾಮೀನು ಕೋರಿ ಎಚ್‌ಡಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಇವತ್ತು (ಮೇ 4, ಶನಿವಾರ) ರೇವಣ್ಣ ಪರ ವಕೀಲರು ಮಧ್ಯಂತರ ಜಾಮೀನು ನೀಡಬೇಕೆಂದು ಮನವಿ ಮಾಡಿದರು. ಆದರೆ ಕೋರ್ಟ್ ಇದನ್ನು ತಿರಸ್ಕರಿಸಿದೆ. ವಿಚಾರಣೆಯನ್ನು ಮೇ 6ಕ್ಕೆ ಮುಂದೂಡಿದೆ. ಎಚ್‌ಡಿ ರೇವಣ್ಣ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ಹಲವು ಮಹಿಳೆಯರ ಮೇಲೆ ಲೌಂಗಿಕ ದೌರ್ಜನ್ಯವೆಸಗಿರುವ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಎಫ್‌ಐಆರ್‌ ದಾಖಲಾಗಿದೆ. ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರಕರಣವನ್ನು ವಿಶೇಷ ತನಿಖಾ ತಂಡ-ಎಸ್‌ಐಟಿಗೆ ವಹಿಸಿದೆ.

IPL_Entry_Point