ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಆರೋಪ ಪ್ರಕರಣ; ಭವಾನಿ ರೇವಣ್ಣ ಕಾರು ಚಾಲಕ ನಾಪತ್ತೆ ಸೇರಿ ಈವರೆಗೆ ಏನೆಲ್ಲಾ ಆಯ್ತು
ಕನ್ನಡ ಸುದ್ದಿ  /  ಕರ್ನಾಟಕ  /  ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಆರೋಪ ಪ್ರಕರಣ; ಭವಾನಿ ರೇವಣ್ಣ ಕಾರು ಚಾಲಕ ನಾಪತ್ತೆ ಸೇರಿ ಈವರೆಗೆ ಏನೆಲ್ಲಾ ಆಯ್ತು

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಆರೋಪ ಪ್ರಕರಣ; ಭವಾನಿ ರೇವಣ್ಣ ಕಾರು ಚಾಲಕ ನಾಪತ್ತೆ ಸೇರಿ ಈವರೆಗೆ ಏನೆಲ್ಲಾ ಆಯ್ತು

ಎಸ್‌ಐಟಿ ತನಿಖೆಗೆ ಹಾಜರಾಗುವಂತೆ 2 ಬಾರಿ ನೋಟಿಸ್ ನೀಡಿದರೂ ವಿಚಾರಣೆಗೆ ಹಾಜರಾಗದೆ ನಾಪತ್ತೆಯಾಗಿರುವ ಭವಾನಿ ರೇವಣ್ಣ ಅವರ ಕಾರು ಚಾಲಕನಿಗಾಗಿ ಎಸ್‌ಐಟಿ ಹುಡುಕಾಟ ನಡೆಸುತ್ತಿದೆ. ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ 10 ಅಂಶಗಳಿವು.

ಪ್ರಜ್ವಲ್ ರೇವಣ್ಣ ವಿರುದ್ಧ ಕರ್ನಾಟಕದ ವಿವಿಧೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಮತ್ತೊಂದೆಡೆ ಲೈಂಗಿಕ ಹಗರಣದ ಸಂತ್ರಸ್ತರನ್ನೇ ಅನುಮಾನಿಸುವ ಪ್ರಶ್ನೆಗಲು ಸಮಾಜದ ಕರಾಳ ಮುಖವನ್ನು ಅನಾವರಣಗೊಳಿಸುತ್ತಿವೆ.
ಪ್ರಜ್ವಲ್ ರೇವಣ್ಣ ವಿರುದ್ಧ ಕರ್ನಾಟಕದ ವಿವಿಧೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಮತ್ತೊಂದೆಡೆ ಲೈಂಗಿಕ ಹಗರಣದ ಸಂತ್ರಸ್ತರನ್ನೇ ಅನುಮಾನಿಸುವ ಪ್ರಶ್ನೆಗಲು ಸಮಾಜದ ಕರಾಳ ಮುಖವನ್ನು ಅನಾವರಣಗೊಳಿಸುತ್ತಿವೆ.

ಬೆಂಗಳೂರು: ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರದ ಇತರೆ ಆರೋಪ ಪ್ರಕರಣಗಳಿಗೆ ಸಂಬಂಧಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ)ಗೆ ಬೇಕಾಗಿರುವ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Sexual Assault Video Case) ಸದ್ಯಕ್ಕೆ ಭಾರತಕ್ಕೆ ವಾಪಸ್ ಬರುವಂತೆ ಕಾಣುತ್ತಿಲ್ಲ. ಅಶ್ಲೀಲ ವಿಡಿಯೊಗಳಿದ್ದ ಪೆನ್‌ಡ್ರೈವ್ ಬೆಳಕಿಗೆ ಬರುತ್ತಿದ್ದಂತೆ ವಿದೇಶಕ್ಕೆ ತೆರಳಿ ಅಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಭಾರತಕ್ಕೆ ವಾಪಸ್ ಬರಲು ಎರಡ್ಮೂರು ಬಾರಿ ವಿಮಾನ ಟಿಕೆಟ್ ಬುಕ್ ಮಾಡಿ ಮತ್ತೆ ರದ್ದು ಮಾಡಿಕೊಂಡಿದ್ದು, ದೇಶಕ್ಕೆ ಹಿಂತಿರುಗಲು ಹಿಂದೇಟು ಹಾಕುತ್ತಿದ್ದಾರೆ. ವಿದೇಶದಿಂದಲೇ ಪ್ರಕರಣಗಳಿಂದ ಬಚ್ಚಾವ್ ಆಗುವುದು ಹೇಗೆ ಎಂಬುದರ ಬಗ್ಗೆ ತಮ್ಮ ಪರವಾದ ರಾಜ್ಯದ ವಕೀಲರ ಸಂಪರ್ಕದಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಇತ್ತೀಚೆಗೆ ಏನೆಲ್ಲಾ ಬೆಳವಣಿಗೆಗಳಾಗಿವೆ ಎಂಬುದರ ಕುರಿತ 10 ಅಂಶಗಳು ಇಲ್ಲಿವೆ

  1. ಪ್ರಜ್ವಲ್ ರೇವಣ್ಣ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ತನಿಖೆ
  2. ಸಂತ್ರಸ್ತೆ ಅಪಹರಣ ಪ್ರಕರಣದ ಸಂಬಂಧ ಪ್ರಜ್ವಲ್ ರೇವಣ್ಣ ತಾಯಿ ಭವಾನಿ ರೇವಣ್ಣ ಕಾರು ಚಾಲಕ ನಾಪತ್ತೆ
  3. ಭವಾನಿ ರೇವಣ್ಣ ಕಾರು ಚಾಲಕನಿಗಾಗಿ ಎಸ್‌ಐಟಿಯಿಂದ ಮೈಸೂರು ಸೇರಿದಂತೆ ಇತರೆ ಕಡೆಗಳಲ್ಲಿ ಹುಡುಕಾಟ
  4. ವಿಚಾರಣೆಗೆ ಹಾಜರಾಗುವಂತೆ 2 ಬಾರಿ ನೋಟಿಸ್ ನೀಡಿದ ಬಳಿಕ ನೋಟಿಸ್‌ಗೆ ಉತ್ತರಿಸದೆ ನಾಪತ್ತೆಯಾಗಿರುವ ಭವಾನಿ ರೇವಣ್ಣ ಕಾರು ಚಾಲಕ
  5. ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಪತ್ರ
  6. ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರೂ ಈವರೆಗೂ ಸ್ಪಂದಿಸಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿಕೆ
  7. ಕೇಂದ್ರ ಸರ್ಕಾರವು ಕಾನೂನಿನ ಚೌಕಟ್ಟಿನಲ್ಲಿ ಸಹಾಯ ಮಾಡಬೇಕು. ಬರೀ ಟೀಕೆ ಮಾಡಿದರೆ ಅರ್ಥವಿಲ್ಲ. ಪ್ರಜ್ವಲ್ ರೇವಣ್ಣ ಅವರ ಮೇಲೆ ವಾರಂಟ್ ಜಾರಿ ಮಾಡಿರುವುದನ್ನು ತಿಳಿಸಲಾಗಿದೆ. ವಾರಂಟ್ ಜಾರಿಯಾದ ನಂತರ ಪಾಸ್‌ಪೋರ್ಟ್ ರದ್ದುಗೊಳಿಸುವುದು ಕೇಂದ್ರ ಸರ್ಕಾರದ ಕರ್ತವ್ಯ ಎಂದು ಪರಮೇಶ್ವರ್
  8. ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡುವ ಪ್ರಕ್ರಿಯೆ ಆರಂಭವಾಗಿದೆ ಎಂದು ವಿದೇಶಾಂಗ ಸಚಿವಾಲಯದ ಮೂಲಗಳಿಂದ ತಿಳಿದುಬಂದಿರುವ ವರದಿ
  9. ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಕೋರಿ ಪ್ರಧಾನಿ ಮೋದಿ ಅವರಿಗೆ ಎರಡು ಬಾರಿ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ
  10. ಕರ್ನಾಟಕ ಸರ್ಕಾರದ ಪತ್ರಕ್ಕೆ ವಿದೇಶಾಂಗ ಸಚಿವಾಲಯ ಸ್ಪಂದಿಸಿದ್ದು, ಶೀಘ್ರವೇ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದಾಗುವ ಸಾಧ್ಯತೆ ಇದೆ.
  11. ಪ್ರಜ್ವಲ್ ರೇವಣ್ಣ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಇತರೆ ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ ವಾಕ್ಸಮರ ಮುಂದುವರಿದೆ.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

Whats_app_banner