ಕನ್ನಡ ಸುದ್ದಿ  /  Karnataka  /  Praveen Nettaru Murder Case: Nia Announces Prize Money For Accused Information In Dakshina Kannada Bjp Activist Praveen Nettar Murder Case

Praveen Nettaru Murder Case: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ; ಆರೋಪಿಗಳ ಮಾಹಿತಿಗೆ ಬಹುಮಾನ ಘೋಷಿಸಿದ ಎನ್‌ಐಎ

Praveen Nettaru Murder Case: ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಬಂಧನ ಆಗಿಲ್ಲ. ಅವರ ಪತ್ತೆಗಾಗಿ ಶೋಧ ಮುಂದುವರಿದಿದೆ. ಆರೋಪಿಗಳ ಮಾಹಿತಿ ನೀಡಿದವರಿಗೆ ಎನ್‌ಐಎ ಬಹುಮಾನ ಘೋಷಿಸಿರುವುದಾಗಿ ಮಾಧ್ಯಮಗಳು ವರದಿಮಾಡಿವೆ. ಸೋಷಿಯಲ್‌ ಮೀಡಿಯಾದಲ್ಲೂ ಎನ್‌ಐಎ ಪ್ರಕಟಣೆಯೊಂದು ಹರಿದಾಡುತ್ತಿದೆ.

ದಿವಂಗತ ಪ್ರವೀಣ್​ ನೆಟ್ಟಾರು
ದಿವಂಗತ ಪ್ರವೀಣ್​ ನೆಟ್ಟಾರು

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಸಮೀಪದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ದಳ (National Investigation Agency) ಘೋಷಿಸಿದೆ.

ನಾಲ್ವರು ಆರೋಪಿಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿರುವ ಎನ್‌ಐಎ (NIA), ಒಟ್ಟು 14 ಲಕ್ಷ ರೂಪಾಯಿ ಬಹುಮಾನ ಘೋಷಿಸಿ ಪ್ರಕಟಣೆ ಹೊರಡಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಎನ್‌ಐಎ ಬೆಂಗಳೂರು ಕಚೇರಿ ಪ್ರಕಟಣೆ ಎಂಬ ಒಕ್ಕಣೆ ಇರುವ ಇಮೇಜ್‌ ಒಂದು ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದೆ.

ಇದರ ಪ್ರಕಾರ, ಇಬ್ಬರು ಆರೋಪಿಗಳ ಬಗ್ಗೆ ಮಾಹಿತಿ ನೀಡಿದರೆ 5 ಲಕ್ಷ ರೂಪಾಯಿ ಹಾಗೂ ಇನ್ನಿಬ್ಬರ ಬಗ್ಗೆ ಮಾಹಿತಿ ತಿಳಿಸಿದರೆ ತಲಾ 2 ಲಕ್ಷ ಬಹುಮಾನ ನೀಡುವುದಾಗಿ ಎನ್‌ಐಎ ಹೇಳಿದೆ.

ನಾಲ್ವರು ಆರೋಪಿಗಳು ಯಾರು?

ನಾಲ್ವರು ಪ್ರಮುಖ ಆರೋಪಿಗಳ ಮಾಹಿತಿಗಾಗಿ ಒಟ್ಟು 14 ಲಕ್ಷ ರೂಪಾಯಿ ನಗದು ಬಹುಮಾನ ಘೋಷಣೆ ಆಗಿದೆ. ಮೊಹಮ್ಮದ್ ಮುಸ್ತಫಾ ಮತ್ತು ತುಫೈಲ್ ಬಗ್ಗೆ ಮಾಹಿತಿ ನೀಡಿದ್ರೆ ತಲಾ 5 ಲಕ್ಷ ರೂಪಾಯಿ. ಬಹುಮಾನ. ಇನ್ನು ಇಬ್ಬರು ಆರೋಪಿಗಳಾದ ಉಮರ್ ಫಾರೂಕ್‌ ಹಾಗೂ ಅಬೂಬಕರ್ ಸಿದ್ದಿಕ್‌ ಬಗ್ಗೆ ಮಾಹಿತಿ ನೀಡಿದ್ರೆ ತಲಾ 2 ಲಕ್ಷ ಬಹುಮಾನ ರೂಪಾಯಿ ನಗದು ಬಹುಮಾನ ನೀಡುವ ಮಾಹಿತಿ ಎನ್​ಐಎ ಪ್ರಕಟಣೆಯಲ್ಲಿದೆ.

ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿರುವ ಎನ್‌ಐಎ ಪ್ರಕಟಣೆ
ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿರುವ ಎನ್‌ಐಎ ಪ್ರಕಟಣೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳ ಬಂಧನ

ದಕ್ಷಿಣ ಕನ್ನಡ ಬಿಜೆಪಿ ಯುವ ನೇತಾರ ಪ್ರವೀಣ್ ನೆಟ್ಟಾರು ಅವರನ್ನು ಜುಲೈ 26 ರಂದು ಬೆಳ್ಳಾರೆಯ ಅವರ ಕೋಳಿ ಅಂಗಡಿ ಸಮೀಪವೇ ಹಂತಕರು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧವೇ ಬಿಜೆಪಿ ಯುವಮೋರ್ಚಾ ಸಿಡಿದೆದ್ದಿತ್ತು. ಈ ಪ್ರಕರಣವನ್ನು ಎನ್‌ಐಎ ತನಿಖೆಗೆ ನಡೆಸುತ್ತಿದ್ದು, ಇದುವರೆಗೆ ಶಿಯಾಬ್‌, ರಿಯಾಜ್‌ ಮತ್ತು ಬಶೀರ್‌ ಎಂಬ ಮೂವರು ಆರೋಪಿಗಳನ್ನಷ್ಟೇ ಬಂಧಿಸುವಲ್ಲಿ ಪೊಲೀಸರು ಸಫಲರಾಗಿದ್ದಾರೆ. ಉಳಿದ ಆರೋಪಿಗಳಿಗೆ ಶೋಧ ಮುಂದುವರಿದಿದೆ.

ಅಪರಾಧ ಸುದ್ದಿಗಳು

ಹೊನ್ನಾಳಿ ಶಾಸಕ ರೇಣುಕಾಚಾರ್ಯರ ಅಣ್ಣನ ಮಗ ನಾಪತ್ತೆ

Chandrashekhar missing case: ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ (Honnali BJP MLA MP Renukacharya) ಅವರ ಹಿರಿಯ ಸಹೋದರನ ಪುತ್ರ ಚಂದ್ರಶೇಖರ್‌ ಭಾನುವಾರ ನಾಪತ್ತೆಯಾಗಿದ್ದಾರೆ. ಅವರ ಸುಳಿವು ಸಿಗದೆ ಸಂಕಟದಲ್ಲಿದೆ ಕುಟುಂಬ. ಶಾಸಕ ರೇಣುಕಾಚಾರ್ಯ ಕೂಡ ಕಳವಳಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿಮಾಡಿವೆ. ವಿವರ ಓದಿಗೆ ಇಲ್ಲಿ ಕ್ಲಿಕ್ಕಿಸಿ

Fake Raid in Shivamogga: ಸರ್ಕಾರಿ ವಾಹನದಲ್ಲೇ ಬಂದು ವಸೂಲಿಗೆ ಇಳಿದ; ಜನರ ಪ್ರಶ್ನೆಗಳಿಗೆ ಅಂಜಿ ಓಡಿ ಹೋದ!; ಸ್ಕಾರ್ಪಿಯೋ ಈಗ ಪೊಲೀಸ್‌ ವಶ

ಆತ ಬಂದದ್ದು ಸರ್ಕಾರಿ ವಾಹನದಲ್ಲೇ. ವಸೂಲಿಗೂ ಇಳಿದ. ಜನರ ಪ್ರಶ್ನೆಗಳನ್ನು ಎದುರಿಸಲಾಗದೆ ತತ್ತರಿಸಿ ಅಲ್ಲಿಂದ ಕಾಲ್ಕಿತ್ತ. ಸ್ಕಾರ್ಪಿಯೋ ಈಗ ಪೊಲೀಸ್‌ ವಶದಲ್ಲಿದೆ. ಕುತೂಹಲಕಾರಿ ಪ್ರಕರಣ ಹಲವು ಸಂದೇಹಗಳನ್ನು ಹುಟ್ಟುಹಾಕಿದೆ. ವಿವರ ಓದಿಗೆ ಇಲ್ಲಿ ಕ್ಲಿಕ್ಕಿಸಿ

IPL_Entry_Point