ಕನ್ನಡ ಸುದ್ದಿ  /  Karnataka  /  Prime Minister Modi Tsunami Has Arisen In Karnataka Says Cm Bommai

PM Modi tsunami: ರಾಜ್ಯದಲ್ಲಿ ಪ್ರಧಾನಿ ಮೋದಿ ಸುನಾಮಿ ಎದ್ದಿದೆ: ಸಿಎಂ ಬೊಮ್ಮಾಯಿ

ಸೋಮಣ್ಣ ಮತ್ತು ನಾನು ಬಹಳ ಹಳೆಯ ಸ್ನೇಹಿತರು. ನಿನ್ನೆ ಹುಬ್ಬಳ್ಳಿಯಲ್ಲಿ ಔಪಚಾರಿಕವಾಗಿ ಭೇಟಿ ಆಗಿದ್ದಷ್ಟೇ. ನಮ್ಮ ಭೇಟಿ ವೇಳೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ವಿ.ಸೋಮಣ್ಣ ಜತೆಗೇ ಇದ್ದಾರೆ. ಮುಂದೆಯೂ ಇರ್ತಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯದಲ್ಲಿ ಮೋದಿ ಸುನಾಮಿ ಎದ್ದಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೋದಿಯವರು ಭಾರತದ ಮಹಾನ್ ನಾಯಕ, ಅತ್ಯಂತ ಕಷ್ಟ ಕಾಲದಲ್ಲಿ ಭಾರತವನ್ನು ಎತ್ತಿಹಿಡಿದು, ಭಾರತದ ಗಡಿ ರಕ್ಷಣೆ ಮಾಡಿ ಆಂತರಿಕ ಸುರಕ್ಷತೆಯನ್ನು ಖಾತ್ರಿಪಡಿಸಿದ್ದಾರೆ. ದೇಶವನ್ನು ಅಭಿವೃದ್ಧಿ ಪಥದಲ್ಲಿ ನಡೆಸಿ ಕೋವಿಡ್ ಸಂದರ್ಭದಲ್ಲಿ ಬಡವರ ಕೈಹಿಡಿದಿದ್ದಾರೆ ಎಂದಿದ್ದಾರೆ.

ಸೋಮಣ್ಣ ಮತ್ತು ನಾನು ಬಹಳ ಹಳೆಯ ಸ್ನೇಹಿತರು. ನಿನ್ನೆ ಹುಬ್ಬಳ್ಳಿಯಲ್ಲಿ ಔಪಚಾರಿಕವಾಗಿ ಭೇಟಿ ಆಗಿದ್ದಷ್ಟೇ. ನಮ್ಮ ಭೇಟಿ ವೇಳೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ವಿ.ಸೋಮಣ್ಣ ಜತೆಗೇ ಇದ್ದಾರೆ. ಮುಂದೆಯೂ ಇರ್ತಾರೆ. ಕೆಪಿಟಿಸಿಎಲ್ ಹಾಗೂ ಎಸ್ಕಾಂ ನವರೊಂದಿಗೆ ನಮ್ಮ ಸಚಿವರು ಸಂಪರ್ಕದಲ್ಲಿದ್ದಾರೆ. ಸಮಸ್ಯೆ ಬಗೆಹರಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಧಾರವಾಡದಲ್ಲಿ ಪ್ರಧಾನಿ ಮೋದಿ ಅಬ್ಬರದ ಪ್ರಚಾರ

ಧಾರವಾಡದ ಚಿಕ್ಕಮಲ್ಲಿಗವಾಡದಲ್ಲಿ ನಿರ್ಮಾಣವಾಗಿರುವ ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿ) ನೂತನ ಕಟ್ಟಡವನ್ನು ನಿನ್ನೆ (ಮಾ.12) ಉದ್ಘಾಟಿಸಿ ಮಾತನಾಡಿದ ಸಿಎಂ, ಉತ್ತಮ ಶಿಕ್ಷಣವು ಪ್ರತಿಯೊಬ್ಬರಿಗೆ ದೊರಕಬೇಕಿದೆ. ಉತ್ತಮ ಶಿಕ್ಷಣ ಸಂಸ್ಥೆ ಆರಂಭಿಸಿದಷ್ಟು ಉತ್ತಮ ಶಿಕ್ಷಣ ದೊರಕುವುದು ಸಾಧ್ಯವಾಗಲಿದೆ ಎಂದು ಹೇಳಿದ್ದರು.

ಉತ್ತಮ ಶಿಕ್ಷಣ ಸಂಸ್ಥೆ ಸ್ಥಾಪನೆಗೆ ಸರ್ಕಾರ ಆದ್ಯತೆ ನೀಡಿದೆ. ದೇಶದಲ್ಲಿ ಕಳೆದ 9 ವರ್ಷಗಳಿಂದ ಆಧುನೀಕರಣಕ್ಕೆ ಒತ್ತು ನೀಡಲಾಗಿದೆ. ಗ್ರಾಮೀಣ ರಸ್ತೆ ಮಾತ್ರವಲ್ಲದೆ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ, ರೈಲು ಮಾರ್ಗಗಳ ವಿಸ್ತರಣೆ ಹಾಗೂ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದಿದ್ದಾರೆ.

ಜಗದ್ಗುರು ಬಸವೇಶ್ವರ ಅವರಿಗೆ ನನ್ನ ನಮಸ್ಕಾರಗಳು. ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯ ಈ ನಾಡಿನ ಸಹೋದರ ಸಹೋದರಿಯರಿಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲಿ ಭಾಷಣ ಮಾಡಿದ್ದ ನಮೋ, ಹುಬ್ಬಳ್ಳಿ, ಬೆಳಗಾವಿ, ಕಲಬುರ್ಗಿ ಮತ್ತಿತರ ಕಡೆಗಳಲ್ಲಿ ರೋಡ್ ಶೋ ಸಂದರ್ಭದಲ್ಲಿ ನೀಡಿದ ಅದ್ಭುತ ಪ್ರೀತಿ. ಮತ್ತು ಆ ಕ್ಷಣ ಮರೆಯಲಾಗದು‌ ಅಂತ ಹೇಳಿದ್ದಾರೆ.

ಜನರು ಪ್ರೀತಿ ಮತ್ತು ಆಶೀರ್ವಾದವು ನನ್ನ ಮೇಲಿನ ದೊಡ್ಡ ಋಣವಾಗಿದೆ‌. ನಿರಂತರ ಸೇವೆಯ ಮೂಲಕ ಕರ್ನಾಟಕ ಜನರ ಈ ಋಣವನ್ನು ತೀರಿಸುತ್ತೇನೆ. ಡಬಲ್ ಎಂಜಿನ್ ಸರ್ಕಾರ ರಾಜ್ಯದ ಹಳ್ಳಿ ಹಳ್ಳಿಗಳ ಸಮಗ್ರ ಪ್ರಗತಿಗೆ ಬದ್ಧವಾಗಿದೆ. ಪ್ರಗತಿಯ ಹೊಸ ಶಕೆಯು ಇಡಿ ರಾಜ್ಯದ ಪ್ರಗತಿಗೆ ಮುನ್ನುಡಿ ಬರೆಯಲಿದೆ.

ಧಾರವಾಡ ಕರ್ನಾಟಕ ಮತ್ತು ಭಾರತದ ಜೀವಂತಿಕೆಯ ಪ್ರತಿಬಿಂಬ

ಮಲೆನಾಡು ಮತ್ತು ಬಯಲುಸೀಮೆಯ ನಡುವಿನ ದ್ವಾರಬಾಗಿಲು ಆಗಿರುವ ಈ ಭಾಗವು ಪ್ರತಿಯೊಬ್ಬರನ್ನು ಪ್ರಿತಿಯಿಂದ ಸ್ವಾಗತಿಸಿದೆ. ಧಾರವಾಡವು ಕರ್ನಾಟಕ ಮತ್ತು ಭಾರತದ ಜೀವಂತಿಕೆಯ ಪ್ರತಿಬಿಂಬವಾಗಿದೆ. ಧಾರವಾಡದ ಪರಿಚಯವು ದ.ರಾ.ಬೇಂದ್ರೆ, ಸಮೃದ್ಧ ಸಂಗೀತ ಭೀಮಸೇನ್ ಜೋಶಿ, ಗಂಗೂಬಾಯಿ ಹಾನಗಲ್, ಕುಮಾರ್ ಗಂಧರ್ವ,ಬಸವರಾಜ ರಾಜಗುರು, ಮಲ್ಲಿಕಾರ್ಜುನ ಮನಸೂರ ಅವರಂತಹ ಸಂಗೀತ ದಿಗ್ಗಜರ ತವರೂರಾಗಿದೆ. ಧಾರವಾಡ ಪೇಢೆಯ ಸ್ವಾದವು ಮರೆಯಲಾರದಂತದು.

ಐಐಟಿಯ ಹೊಸ ಕ್ಯಾಂಪಸ್ ಧಾರವಾಡದ ಪರಿಚಯವನ್ನು ಮತ್ತಷ್ಟು ಬಲಗೊಳಿಸಲಿದೆ. ಕರ್ನಾಟಕದ ವಿಕಾಸದಲ್ಲಿ ಐಐಟಿ ಹೊಸ ಅಧ್ಯಯವಾಗಲಿದೆ. ಇಲ್ಲಿನ ಮೂಲ ಸೌಕರ್ಯಗಳು ಈ ಸಂಸ್ಥೆಯನ್ನು ವಿಶ್ವದ ಮುನ್ನೆಲೆಗೆ ತರಲಿದೆ.

ದೇಶದಲ್ಲಿ ಕೇವಲ 380 ವೈದ್ಯಕೀಯ ಕಾಲೇಜುಗಳಿದ್ದವು 9 ವರ್ಷಗಳಲ್ಲಿ 250 ಕಾಲೇಜು ಸ್ಥಾಪಿಸಲಾಗಿದೆ. ಇದೇ ರೀತಿ ಐಐಟಿ ಗಳನ್ನು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಹುಬ್ಬಳ್ಳಿ-ಧಾರವಾಡ ನಗರಗಳು ಅಭಿವೃದ್ಧಿ ಯ ತುತ್ತತುದಿಗೆ ತಲುಪಲಿವೆ. ಜಯದೇವ ಹೃದ್ರೋಗ ಆಸ್ಪತ್ರೆ ಆರಂಭದಿಂದ ಈ ಭಾಗದ ಜನರಿಗೆ ಉತ್ತಮ ಚಿಕಿತ್ಸೆ ಲಭಿಸಲಿದೆ. ಕರ್ನಾಟಕವು ಹೈಟೆಕ್ ಇಂಡಿಯಾದ ಎಂಜಿನ್ ಆಗಿದೆ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ.

IPL_Entry_Point