ಕನ್ನಡ ಸುದ್ದಿ  /  Karnataka  /  Prime Minister Narendra Modi Visit To Karnataka On March 12 Iit And Jayadeva Hospital Will Inaugurate

PM Narendra Modi: ನಾಡಿದ್ದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ; ಐಐಟಿ, ಜಯದೇವ ಆಸ್ಪತ್ರೆ ಉದ್ಘಾಟನೆ

ಮಾರ್ಚ್ 12 ಕ್ಕೆ ಧಾರವಾಡಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಐಐಟಿ ಹಾಗೂ ಜಯದೇವ ಆಸ್ಪತ್ರೆ ಉದ್ಘಾಟನೆ ಮಾಡಲಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹುಬ್ಬಳ್ಳಿಯ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹುಬ್ಬಳ್ಳಿಯ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದರು.

ಹುಬ್ಬಳ್ಳಿ: ಮಾರ್ಚ್ 12 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಧಾರವಾಡಕ್ಕೆ ಆಗಮಿಸುತ್ತಿದ್ದು, ಐಐಟಿ, ಜಲ್ ಜೀವನ್ ಮಿಷನ್ ಹಾಗೂ ಜಯದೇವ ಹೃದ್ರೋಗ ಸಂಸ್ಥೆಯ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಸಿಎಂ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿ ಬಾರಿ ಮೋದಿಯವರು ಬಂದಾಗ ರಾಜ್ಯದ ಅತ್ಯಂತ ಅವಶ್ಯಕ ವಿರುವ ಮೂಲಭೂತ ಸೌಕರ್ಯಗಳಿಗೆ ಅನುದಾನ ನೀಡಿರುವ ಹಿನ್ನೆಲೆಯಲ್ಲಿ ಹಲವಾರು ಪೂರ್ಣಗೊಂಡಿರುವ ಕಾರ್ಯಕ್ರಮಗಳ ಲೋಕಾರ್ಪಣೆ ಹಾಗೂ ಇನ್ನು ಕೆಲವನ್ನು ಪ್ರಾರಂಭ ಮಾಡುತ್ತಿದ್ದಾರೆ ಎಂದಿದ್ದಾರೆ.

ಮೂಲಭೂತ ಸೌಕರ್ಯಗಳಿಗೆ ದೊಡ್ಡ ಪ್ರಮಾಣದ ಕೊಡುಗೆ

ಕಳೆದ ವರ್ಷಗಳಲ್ಲಿ ಅತಿ ಹೆಚ್ಚು ಹಣ ರಾಷ್ಟ್ರೀಯ ಹೆದ್ದಾರಿ, ರೈಲ್ವೆ, ಬಂದರುಗಳಿಗೆ ಹಾಗೂ ವಿವಿಧ ಸಂಸ್ಥೆಗಳಿಗೆ, ವಿಶೇಷವಾಗಿ ರಾಜ್ಯ ಹಾಗೂ ಅಂತರರಾಜ್ಯಗಳ ಮೂಲಭೂತ ಸೌಕರ್ಯಗಳಿಗೆ ಬಹಳ ದೊಡ್ಡ ಪ್ರಮಾಣದ ಕೊಡುಗೆಯನ್ನು ಪ್ರಧಾನಿಗಳು ನೀಡಿದ್ದಾರೆ. ಅವೆಲ್ಲವೂ ಲೋಕಾರ್ಪಣೆಯಾಗುತ್ತಿದೆ. ಕಳೆದ 5 ವರ್ಷಗಳ ಸಹಾಯದ ಫಲಶ್ರುತಿ ಇಂದು ದೊರೆಯುತ್ತಿದೆ ಎಂದು ಹೇಳಿದ್ದಾರೆ.

ನಂಬರ್ ಒನ್ ಐಐಟಿ ಮಾಡುವ ಉದ್ದೇಶ

ಹಂತ ಹಂತವಾಗಿ ಐಐಟಿಗೆ ಅನುದಾನ ಒದಗಿಸಲಾಗಿದೆ. ಐಐಟಿ ಪ್ರತಿಷ್ಠಿತ ಸಂಸ್ಥೆಯಾಗಿದ್ದು ದೇಶದಲ್ಲಿಯೇ ನಂಬರ್ ಒನ್ ಐಐಟಿ ಮಾಡುವ ಉದ್ದೇಶವಿದೆ. ಧಾರವಾಡ ಸರಸ್ವತಿಯ ನಗರ. ಇಲ್ಲಿ ಐಐಟಿ ಸ್ಥಾಪನೆಯಾಗಿರುವುದು ಕಿರೀಟ ಪ್ರಾಯವಾಗಿದೆ ಎಂದರು.

ಪಿಪಿಪಿ ಮಾದರಿ

ಬೇಲೆಕೇರಿ ಬಂದರು ಅಭಿವೃದ್ಧಿಯನ್ನು ಸಾಗರಮಾಲಾ ಯೋಜನೆಯಡಿ ಕೈಗೆತ್ತಿಕೊಳ್ಳಲಾಗುವುದು. ಕೇಂದ್ರ ಸರ್ಕಾರದ ಯೋಜನೆಯಡಿ 12 ಯೋಜನೆಗಳಿಗೆ ಅನುಮೊದನೆ ಪಡೆದು ಅನುಷ್ಠಾನ ಮಾಡಲಾಗುವುದು. ರಾಜ್ಯದ 2 ಯೋಜನೆಗಳನ್ನು ಪಿಪಿಪಿ ಮಾದರಿಯಲ್ಲಿ ಕೈಗೊಳ್ಳಲು ಏಕ್ಸ್ಪ್ರೆಷನ್ ಆಫ್ ಇಂಟರೆಸ್ಟ್ ಕರೆಯಲಾಗಿದೆ ಎಂದು ಸಿಎಂ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

ಎಲ್ಲ ಧರ್ಮಗಳು ಒಳ್ಳೆಯ ಉದ್ದೇಶಕ್ಕಾಗಿಯೇ ಹುಟ್ಟಿಕೊಂಡಿವೆ

ಎಲ್ಲ ಧರ್ಮಗಳು ಒಳ್ಳೆಯ ಉದ್ದೇಶಕ್ಕೆ ಹುಟ್ಟಿಕೊಂಡಿವೆ. ಆದರೆ ಆಚರಣೆಯಲ್ಲಿ ಬಹಳಷ್ಟು ವ್ಯತ್ಯಾಸವಿದೆ. ಯಾರು ಮೂಲತತ್ವವನ್ನು ಪ್ರಾಮಾಣಿಕವಾಗಿ ಪಾಲಿಸಿಕೊಂಡು ಬರುತ್ತಾರೆ, ಆ ಧರ್ಮ ಸಾರ್ವಕಾಲಿಕವಾಗಿ ಪ್ರಸ್ತುತವಾಗಿರುತ್ತದೆ. ಕಾಲ ಕಳೆದಂತೆ ಮೂಲತತ್ವವನ್ನು ಬಿಟ್ಟು, ಅದಕ್ಕೆ ಬೇರೆ ಬೇರೆ ಅರ್ಥಗಳನ್ನು ಜೋಡಿಸಿ ಧರ್ಮದ ಹೆಸರಿನಲ್ಲಿ ಯಾವುದನ್ನು ಮಾಡಬಾರದು. ಅದನ್ನು ಮಾಡಿದರೆ ಆ ಧರ್ಮ ಬಹಳ ದಿನ ಉಳಿಯಲು ಸಾಧ್ಯವಿಲ್ಲ ಎಂದು ಸಿಎಂ ಬೊಮ್ಮಾಯಿ ನಿನ್ನೆ ಹೇಳಿದ್ದರು.

ಹುಬ್ಬಳ್ಳಿಯ ದಿಗಂಬರ ಜೈನರ ವಸತಿ ನಿಲಯದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ್ದ ಅವರು, ಜೈನ ಧರ್ಮದ ಮೂಲತತ್ವದ ಆಚರಣೆಯೂ ಬಹಳ ಕಷ್ಟ. ಭಗವಾನ್ ಮಹಾವೀರರು ಹಾಗೂ ಎಲ್ಲ ತೀರ್ಥಂಕರರು ಬಹಳ ಕಠಿಣವಾದದ್ದನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ನನಗೆ ಒಂದು ಅಚ್ಚರಿ ಆಗುತ್ತದೆ. ಜೈನ್ ಧರ್ಮವನ್ನು ನಾನು ಬಹಳ ದಿನಗಳಿಂದ ನೋಡಿಕೊಂಡು ಬಂದಿದ್ದೇನೆ. ಎಷ್ಟೇ ಶ್ರೀಮಂತರಿದ್ದರು, ಮಧ್ಯಮ ವರ್ಗದವರಿದ್ದರು, ಬಡವರಿದ್ದರು, ಯಾರೂ ಧರ್ಮದ ಆಚರಣೆಯಲ್ಲಿ ವ್ಯತ್ಯಾಸ ಮಾಡುವುದಿಲ್ಲ. ಧರ್ಮದ ಆಚರಣೆಯಲ್ಲಿ ನೂರಕ್ಕೆ ನೂರರಷ್ಟು ಶುದ್ಧವಾಗಿರುವುದರಿಂದ ಜೈನ ಧರ್ಮಕ್ಕೆ ಪೂಜ್ಯನೀಯ ಸ್ಥಾನ ಸಿಕ್ಕಿದೆ ಎಂದರು.

ಒಂದೊಂದು ಬಾರಿ ನನಗೆ ಅನಿಸುತ್ತದೆ, ಈ ಜೈನ್ ಧರ್ಮ ಎಲ್ಲ ದೇಶಗಳಲ್ಲಿ ಇದ್ದಿದ್ದರೆ ಯಾವ ಮಿಲಿಟರಿ ಮತ್ತು ಬಾಂಬ್ ಬೇಕಾಗಿರಲಿಲ್ಲ. ಎಲ್ಲ ಕಡೆ ಸ್ನೇಹ ಪ್ರೀತಿ, ಹಿಂಸೆ ರಹಿತ ಸಮಾಜ ಇರುತ್ತಿತ್ತು. ಮನುಷ್ಯ ಹುಟ್ಟಿದ ಮೇಲೆ ನಾನು ಎನ್ನುವುದಕ್ಕಾಗಿ ಅಲೆದಾಡುತ್ತಾನೆ. ಎಲ್ಲಿಯವರೆಗೆ ಈ ಸಮಾಜದಲ್ಲಿ ನಾನು ಎನ್ನುವುದ ಇರುತ್ತದೆ ಅಲ್ಲಿಯವರೆಗೆ ನ್ಯಾಯ ಎನ್ನುವುದು ಇರುವುದಿಲ್ಲ. ನಮ್ಮ ಇಡೀ ಬದುಕು ನಮ್ಮ ಅಸ್ತಿತ್ವವನ್ನು ಕಳೆದುಕೊಳ್ಳುವುದು ನಮ್ಮ ಗುರಿಯಾಗಬೇಕು. ಅಸ್ತಿತ್ವವನ್ನು ಕಳೆದುಕೊಂಡವರು ಸಮಾಜದಲ್ಲಿ ಶಾಶ್ವತವಾದ ಅಸ್ತಿತ್ವ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದ್ದರು.

IPL_Entry_Point