ಪುತ್ತೂರಿನಲ್ಲಿ ಶ್ರಾದ್ಧ ಕಾರ್ಯಕ್ರಮಕ್ಕೆ ಬರುವಾಗ ಕಾರಿಗೆ ಬಸ್ ಡಿಕ್ಕಿ: ಮೂವರಿಗೆ ಗಂಭೀರ ಗಾಯ
ಕನ್ನಡ ಸುದ್ದಿ  /  ಕರ್ನಾಟಕ  /  ಪುತ್ತೂರಿನಲ್ಲಿ ಶ್ರಾದ್ಧ ಕಾರ್ಯಕ್ರಮಕ್ಕೆ ಬರುವಾಗ ಕಾರಿಗೆ ಬಸ್ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಪುತ್ತೂರಿನಲ್ಲಿ ಶ್ರಾದ್ಧ ಕಾರ್ಯಕ್ರಮಕ್ಕೆ ಬರುವಾಗ ಕಾರಿಗೆ ಬಸ್ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಬೆಂಗಳೂರಿನಿಂದ ಕಾರ್ಯಕ್ರಮಕ್ಕೆಂದು ಬಸ್ಸಿನಲ್ಲಿ ಪುತ್ತೂರಿಗೆ ಬಂದಿದ್ದ ಮಗಳು ಮತ್ತು ಮೊಮ್ಮಗಳನ್ನು ಕರೆ ತರಲು ಅಂಡೆಪುಣಿ ನಿವಾಸಿ ಈಶ್ವರ ಭಟ್ ಕಾರಿನಲ್ಲಿ ಪುತ್ತೂರು ಬಸ್ ನಿಲ್ದಾಣಕ್ಕೆ ಹೋಗಿದ್ದರು. ಮರಳಿ ಮನೆಗೆ ಹೋಗುವಾಗ ಮುರದಲ್ಲಿ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿಯಾಗಿದೆ.

ಕಾರಿಗೆ ಬಸ್ ಡಿಕ್ಕಿ: ಮೂವರಿಗೆ ಗಂಭೀರ ಗಾಯ
ಕಾರಿಗೆ ಬಸ್ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಂಗಳೂರು: ಮನೆಯಲ್ಲಿ ನಡೆಯುವ ಶ್ರಾದ್ಧ ಕಾರ್ಯಕ್ರಮಕ್ಕೆ ಮಗಳು ಮತ್ತು ಮೊಮ್ಮಗಳನ್ನು ಕರೆದುಕೊಂಡು ಬರುವಾಗ ಕಾರಿಗೆ ಹಿಂದಿನಿಂದ ಬಸ್ ಡಿಕ್ಕಿಯಾಗಿ ಮೂವರು ಗಾಯಗೊಂಡ ಘಟನೆ ಮಂಗಳವಾರ ಬೆಳಿಗ್ಗೆ ಪುತ್ತೂರು ಹೊರ ವಲಯದ ಮುರದಲ್ಲಿ ನಡೆದಿದೆ.

ಈಶ್ಚರ ಭಟ್ ಎಂಬವರ ಮನೆಯಲ್ಲಿ ಮಂಗಳವಾರ ಶ್ರಾದ್ಧ ಕಾರ್ಯಕ್ರಮ ನಿಗದಿಯಾಗಿತ್ತು. ಬೆಂಗಳೂರಿನಿಂದ ಕಾರ್ಯಕ್ರಮಕ್ಕೆಂದು ಬಸ್ಸಿನಲ್ಲಿ ಪುತ್ತೂರಿಗೆ ಬಂದಿದ್ದ ಮಗಳು ಮತ್ತು ಮೊಮ್ಮಗಳನ್ನು ಕರೆ ತರಲು ಅಂಡೆಪುಣಿ ನಿವಾಸಿ ಈಶ್ವರ ಭಟ್ ಕಾರಿನಲ್ಲಿ ಪುತ್ತೂರು ಬಸ್ ನಿಲ್ದಾಣಕ್ಕೆ ಹೋಗಿದ್ದರು.

ಮರಳಿ ಮನೆಗೆ ಹೋಗುವಾಗ ಮುರದಲ್ಲಿ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಈ ಸ್ಥಳದಲ್ಲಿ ಅಪಾಯಕಾರಿ ತಿರುವು ಒಂದಿದ್ದು, ಅದನ್ನು ತೆರವುಗೊಳಿಸಲು ಸ್ಥಳೀಯರು ಈ ಹಿಂದೆ ಪ್ರತಿಭಟನೆ ನಡೆಸಿದ್ದರು. ಇದಕ್ಕೂ ಮೊದಲು ಹಲವು ಬಾರಿ ಇದೇ ಸ್ಥಳದಲ್ಲಿ ಅಪಘಾತಗಳು ನಡೆದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ವರದಿ: ಹರೀಶ ಮಾಂಬಾಡಿ

Kiran Kumar I G

TwittereMail
ಕಿರಣ್ ಐ.ಜಿ.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜನರ ಬದುಕು ಸುಧಾರಿಸಬಲ್ಲ ಟೆಕ್‌ ಮತ್ತು ಗ್ಯಾಜೆಟ್ ಇವರ ಆಸಕ್ತಿಯ ಕ್ಷೇತ್ರ. ಯಾವುದೇ ವಿಷಯವಾದರೂ ಶ್ರದ್ಧೆಯಿಂದ ಕಲಿಯಬಲ್ಲೆ, ಬರೆಯಬಲ್ಲೆ ಎನ್ನುವುದು ಇವರ ವಿಶ್ವಾಸ. ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕ ವೆಬ್ ಹಾಗೂ ಟಿವಿ9 ಕನ್ನಡ ಡಿಜಿಟಲ್‌ನ ವಿವಿಧ ವಿಭಾಗಗಳಲ್ಲಿ ಒಟ್ಟು 10 ವರ್ಷ ಕೆಲಸ ಮಾಡಿದ ಅನುಭವ. ಇಮೇಲ್: kiran.kumar@htdigital.in