PSI Recruitment Scam: ಪಿಎಸ್‌ಐ ನೇಮಕಾತಿ ಅಕ್ರಮ, ಸಿಐಡಿ ವಿಚಾರಣೆ ಎದುರಿಸಿದ್ದ ಗಣಪತಿ ಭಟ್‌ ಆತ್ಮಹತ್ಯೆ
ಕನ್ನಡ ಸುದ್ದಿ  /  ಕರ್ನಾಟಕ  /  Psi Recruitment Scam: ಪಿಎಸ್‌ಐ ನೇಮಕಾತಿ ಅಕ್ರಮ, ಸಿಐಡಿ ವಿಚಾರಣೆ ಎದುರಿಸಿದ್ದ ಗಣಪತಿ ಭಟ್‌ ಆತ್ಮಹತ್ಯೆ

PSI Recruitment Scam: ಪಿಎಸ್‌ಐ ನೇಮಕಾತಿ ಅಕ್ರಮ, ಸಿಐಡಿ ವಿಚಾರಣೆ ಎದುರಿಸಿದ್ದ ಗಣಪತಿ ಭಟ್‌ ಆತ್ಮಹತ್ಯೆ

ಪಿಎಸ್‌ಐ ಹುದ್ದೆಗೆ ಆಯ್ಕೆಯಾಗಿದ್ದ ಇಬ್ಬರು ಅಭ್ಯರ್ಥಿಗಳು ಗಣಪತಿ ಭಟ್‌ ಹೆಸರನ್ನು ಪ್ರಸ್ತಾಪಿಸಿದ ಹಿನ್ನಲೆಯಲ್ಲಿ ಸಿಐಡಿ ವಿಚಾರಣೆ ನಡೆಸಿತ್ತು.

PSI Recruitment Scam: ಪಿಎಸ್‌ಐ ನೇಮಕಾತಿ ಅಕ್ರಮ, ಸಿಐಡಿ ವಿಚಾರಣೆ ಎದುರಿಸಿದ್ದ ಗಣಪತಿ ಭಟ್‌ ಆತ್ಮಹತ್ಯೆ  (REPRESENTATIVE IMAGE)
PSI Recruitment Scam: ಪಿಎಸ್‌ಐ ನೇಮಕಾತಿ ಅಕ್ರಮ, ಸಿಐಡಿ ವಿಚಾರಣೆ ಎದುರಿಸಿದ್ದ ಗಣಪತಿ ಭಟ್‌ ಆತ್ಮಹತ್ಯೆ (REPRESENTATIVE IMAGE) (HT_PRINT)

ಕಾರವಾರ: ಕರ್ನಾಟಕದಲ್ಲಿ ಸಂಚಲನ ಉಂಟು ಮಾಡಿದ್ದ 545 ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಪಟ್ಟಂತೆ ಕಳೆದ ವರ್ಷ ವಿಚಾರಣೆಗೆ ಹಾಜರಾಗಿದ್ದ ಸಿದ್ದಾಪುರದ ನೆಲೆಮಾಂವ ಗ್ರಾಮದ ಗಣಪತಿ ಭಟ್‌ (63) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವರದಿಗಳ ಪ್ರಕಾರ, ನಿನ್ನೆ ಅವರು ಹೆರೂರು ಗ್ರಾಮದಲ್ಲಿ ಎಂಆರ್‌ ಭಟ್ಟರ ತೋಟದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪಿಎಸ್‌ಐ ಹುದ್ದೆಗೆ ಆಯ್ಕೆಯಾಗಿದ್ದ ಇಬ್ಬರು ಅಭ್ಯರ್ಥಿಗಳು ಗಣಪತಿ ಭಟ್‌ ಹೆಸರನ್ನು ಪ್ರಸ್ತಾಪಿಸಿದ ಹಿನ್ನಲೆಯಲ್ಲಿ ಸಿಐಡಿ ವಿಚಾರಣೆ ನಡೆಸಿತ್ತು. ಆದರೆ, ಇವರ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿರಲಿಲ್ಲ. "ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ತನಿಖೆ ನಡೆಸುತ್ತಿದ್ದೇವೆ" ಎಂದು ಪೊಲೀಸರು ತಿಳಿಸಿದ್ದಾರೆ.

ಪಿಎಸ್‌ಐ ಅಕ್ರಮ ಪರೀಕ್ಷಾ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು, ಸಿರ್ಸಿ ಮೂಲದ, ಗಣಪತಿ ಭಟ್ (62) ಎಂಬುವರನ್ನು ವಿಚಾರಣೆಗೆಂದು ವಶಕ್ಕೆ ಪಡೆದು ಪ್ರಶ್ನಿಸುತ್ತಿದ್ದಾರೆ. ವ್ಯಕ್ತಿಯು ಗೃಹ ಸಚಿವರ ಕಾರ್ಯಾಲಯದ ಸಿಬ್ಬಂದಿಯಲ್ಲ’ ಎಂದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಕಚೇರಿ ಸ್ಪಷ್ಟನೆ ನೀಡಿತ್ತು.

ಣಪತಿ ಭಟ್ ಎಂಬುವವರನ್ನು ವಿಚಾರಣೆಗಾಗಿ ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಶಿರಸಿ ಮೂಲದ ವ್ಯಕ್ತಿ ಗಣಪತಿ ಭಟ್ ಅವರನ್ನು ಎಲ್ಲಾ ಹಂತದಲ್ಲಿ ತನಿಖೆ ಮಾಡಲಾಗುತ್ತಿದೆ. ನನ್ನ ಕಚೇರಿಯಲ್ಲೂಇದೇ ಹೆಸರಿನ ವ್ಯಕ್ತಿ ಇರುವುದರಿಂದ ಊಹಾಪೋಹಗಳು ಹರಿದಾಡಿದ್ದವು. ವಿಚಾರಣೆ ಎದುರಿಸಿದ್ದ ವ್ಯಕ್ತಿಗೂ ನಮ್ಮ ಕಚೇರಿಯಲ್ಲಿರುವ ಅದೇ ಹೆಸರಿನ ವ್ಯಕ್ತಿಗೂ ಯಾವುದೇ ಸಂಬಂಧ ಇಲ್ಲ ಎಂದು ಅರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದರು.

ಸಿದ್ದಾಪುರ ತಾಲೂಕಿನ ನೆಲಮಾವಿನ ಗಣಪತಿ ಭಟ್ ನೆಲಮಾವು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದರು. ಹಲವು ಸಾಮಾಜಿಕ ಕಾರ್ಯಗಳಲ್ಲಿಯೂ ಸಕ್ರಿಯರಾಗಿದ್ದರು. ಹಲವು ರಾಜಕಾರಣಿಗಳ ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಉತ್ತಮ ಸಂಬಂಧ ಹೊಂದಿದ್ದರು. ಅಧಿಕಾರಿಗಳ ವರ್ಗಾವಣೆ ವಿಷಯದಲ್ಲಿ ಬ್ರೊಕರಿಂಗ್‌ ಕೆಲಸ ಮಾಡುತ್ತಿದ್ದರು ಎಂದು ವರದಿಗಳು ತಿಳಿಸಿವೆ.

2021 ರ ಅಕ್ಟೋಬರ್ ತಿಂಗಳಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆದಿತ್ತು. ಆದರೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು ಬೆಳಕಿಗೆ ಬಂದು ಸಂಚಲನವನ್ನೇ ಉಂಟು ಮಾಡಿತ್ತು. ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಿತ್ತು. 2022 ರ ಎಪ್ರಿಲ್ 8 ರಂದು ಕಲಬುರಗಿ ಚೌಕ್ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿತ್ತು.

ಈ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದ ಬಳಿಕ, ಸಿಐಡಿ ತನಿಖೆ ನಡೆಸಿ ಪ್ರಮುಖ ಆರೋಪಿಗಳನ್ನು ಬಂಧಿಸಿದ ಬಳಿಕ ಅಂದರೆ ಏಪ್ರಿಲ್‌ 29ರಂದು ಈ ಪಿಎಸ್‌ಐ ಪ್ರವೇಶ ಪರೀಕ್ಷೆಯನ್ನು ರದ್ದುಗೊಳಿಸಿರುವುದಾಗಿ ಸರಕಾರ ಪ್ರಕಟಿಸಿತ್ತು.

545 ಪಿಎಸ್‌ಐ ಹುದ್ದೆಗಳಿಗೆ ಕಳೆದ ವರ್ಷ ನಡೆಸಿದ ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ. ಈ ಪರೀಕ್ಷೆಯನ್ನು ಮತ್ತೆ ನಡೆಸಲು ಉದ್ದೇಶಿಸಲಾಗಿದೆ ಎಂದು ಆ ಸಂದರ್ಭದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದರು. ಈ ಹಿಂದೆ ನಡೆದ ಪರೀಕ್ಷೆಯನ್ನು ರದ್ದುಗೊಳಿಸಿ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಮರುಪರೀಕ್ಷೆ ನಡೆಸಲಾಗುವುದು ಎಂದು ಅವರು ಆ ಸಂದರ್ಭದಲ್ಲಿ ಹೇಳಿದ್ದರು.

Whats_app_banner