Quarrying Lease Rules: ಕಲ್ಲುಗಣಿಗಾರಿಕೆ ಗುತ್ತಿಗೆ ನಿಯಮಗಳ ಪರಿಷ್ಕರಣೆಗೆ ಕ್ರಮ - ಸಚಿವ ಕೋಟಾ ಶ್ರೀನಿವಾಸ ಪೂಜಾರಿ
Quarrying Lease Rules: ಸಚಿವ ಸಂಪುಟ ಉಪ ಸಮಿತಿಯು ಸಭೆ ನಡೆಸಿ ಎಂ. ಸ್ಯಾಂಡ್ ಮತ್ತು ಕಟ್ಟಡ ಕಲ್ಲಿನ ಉತ್ಪಾದನೆ ಮತ್ತು ಪೂರೈಕೆಯನ್ನು ಹೆಚ್ಚಿಸಲು ಕರ್ನಾಟಕ ಉಪಖನಿಜ ರಿಯಾಯತಿ ನಿಯಮಗಳು 1994ಕ್ಕೆ ಅಗತ್ಯ ತಿದ್ದುಪಡಿ ತಂದು ನಿಯಮ ಸರಳೀಕರಣಕ್ಕೆ ಶಿಫಾರಸ್ಸು ಸಲ್ಲಿಸಿದ್ದು, ನಿಯಮ ಸರಳೀಕರಣ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಸಚಿವ ಶ್ರೀನಿವಾಸ ಪೂಜಾರಿ ತಿಳಿಸಿದರು.
ಬೆಂಗಳೂರು: ಕಲ್ಲು ಗಣಿಗಾರಿಕೆ ಗುತ್ತಿಗೆ ನಿಯಮಗಳ ಪರಿಷ್ಕರಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್‌ಗೆ ಮಂಗಳವಾರ ತಿಳಿಸಿದರು.
ಅವರು ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್ತಿನ ಸದಸ್ಯರಾದ ಎಸ್.ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ, ಹಿರಿಯ ನಾಗರೀಕರ ಸಬಲೀಕರಣ ಸಚಿವರ ಪರವಾಗಿ ಉತ್ತರಿಸಿದರು.
ಪ್ರಸ್ತುತ ರಾಜ್ಯದಲ್ಲಿ 2700 ಕಟ್ಟಡ ಕಲ್ಲು ಗಣಿ ಗುತ್ತಿಗೆಗಳನ್ನು 10026-32 ಎಕರೆ ಪ್ರದೇಶದಲ್ಲಿ ಮಂಜೂರು ಮಾಡಿದ್ದು, ಅವುಗಳು ಚಾಲ್ತಿಯಲ್ಲಿವೆ. ಕಲ್ಲು ಗಣಿ ಗುತ್ತಿಗೆಗಳ ಸಂಬಂಧ ರಾಜ್ಯ ಪರಿಸರ ಆಘಾತ ಅಂದಾಜೀಕರಣ ಪ್ರಾಧಿಕಾರದಿಂದ ಜಾರಿ ಮಾಡುವ ಪರಿಸರ ಅನುಮತಿ ಪತ್ರದಲ್ಲಿ ವಾರ್ಷಿಕವಾಗಿ ತೆಗೆಯುವ ಉಪಖನಿಜದ ಪ್ರಮಾಣದ ಮಿತಿಯನ್ನು ನಿಗದಿಪಡಿಸಲಾಗಿದೆ. ಸದರಿ ಕಲ್ಲುಗಣಿ ಗುತ್ತಿಗೆಗಳ ವಾರ್ಷಿಕ ಉಪಖನಿಜದ ಪ್ರಮಾಣದ ಮಿತಿಯು 199 ದಶಲಕ್ಷ ಟನ್. ಸದರಿ ಪ್ರಮಾಣದ ಕಟ್ಟಡ ಕಲ್ಲನ್ನು ಕಲ್ಲುಗಣಿ ಗುತ್ತಿಗೆ ಪ್ರದೇಶಗಳಿಂದ ಪೂರೈಸಲಾಗುತ್ತಿದೆ ಎಂದು ತಿಳಿಸಿದರು.
ಇದಲ್ಲದೆ ಪಕ್ಕದ ರಾಜ್ಯಗಳಾದ ತಮಿಳುನಾಡು, ಆಂದ್ರಪ್ರದೇಶ, ಮಹಾರಾಷ್ಟ್ರದಿಂದ ರಾಜ್ಯಕ್ಕೆ ಜಲ್ಲಿ ಮತ್ತು ಎಂ. ಸ್ಯಾಂಡ್ ಪೂರೈಕೆಯಾಗುತ್ತಿರುತ್ತದೆ. ರಾಜ್ಯದಲ್ಲಿ ಎಂಸ್ಯಾಂಡ್ ಮತ್ತು ಕಟ್ಟಡ ಕಲ್ಲಿನ ಉತ್ಪನ್ನಗಳನ್ನು ಬೇಡಿಕೆಗೆ ಅನುಗುಣವಾಗಿ ಪೂರೈಕೆ ಮಾಡಲು ನಿಯಮಗಳನ್ನು ಸರಳೀಕರಣಗೊಳಿಸುವ ಕುರಿತು ಪರಾಮರ್ಶಿಸಿ ಸಚಿವ ಸಂಪುಟಕ್ಕೆ ಶಿಫಾರಸ್ಸು ಮಾಡಲು ಮಾನ್ಯ ಗಣಿ ಮತ್ತು ಭೂ ವಿಜ್ಞಾನ ಸಚಿವರ ಅಧ್ಯಕ್ಷತೆಯಲ್ಲಿ 2021ರ ನವೆಂಬರ್ 16ರಂದು ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿರುತ್ತದೆ ಎಂದು ತಿಳಿಸಿದರು.
ಸಚಿವ ಸಂಪುಟ ಉಪ ಸಮಿತಿಯು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಎಂ. ಸ್ಯಾಂಡ್ ಮತ್ತು ಕಟ್ಟಡ ಕಲ್ಲಿನ ಉತ್ಪಾದನೆ ಮತ್ತು ಪೂರೈಕೆಯನ್ನು ಹೆಚ್ಚಿಸಲು ಕರ್ನಾಟಕ ಉಪಖನಿಜ ರಿಯಾಯತಿ ನಿಯಮಗಳು 1994ಕ್ಕೆ ಅಗತ್ಯ ತಿದ್ದುಪಡಿ ತಂದು ನಿಯಮಗಳನ್ನು ಸರಳೀಕರಣಗೊಳಿಸಲು ಶಿಫಾರಸ್ಸು ವರದಿಯನ್ನು ಸಲ್ಲಿಸಿದ್ದು, ನಿಯಮಗಳನ್ನು ಸರಳೀಕರಣಗೊಳಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಸಚಿವ ಶ್ರೀನಿವಾಸ ಪೂಜಾರಿ ತಿಳಿಸಿದರು.
ಗಮನಿಸಬಹುದಾದ ವಿಧಾನಮಂಡಲ ಕಲಾಪದ ಸುದ್ದಿಗಳು
ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ; ವಂಚನೆ ಎಸಗಿದವರು ಯಾರು? ಪತ್ತೆ ಕಷ್ಟ ಎಂದ ಸಚಿವರು
Guru Raghavendra sahakara bank scam: ಸತತ ಮೂರು ವರ್ಷ ಸಹಕಾರ ಇಲಾಖೆ, ಸಿಒಡಿ ಮತ್ತು ಜಾರಿ ನಿರ್ದೇಶನಾಲಯವು ಈ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣದ ತನಿಖೆ ನಡೆಸಿವೆ. ಆದರೆ, ವಂಚನೆ ಎಸಗಿದವರು ಯಾರು ಎಂಬುದನ್ನು ಪತ್ತೆ ಹಚ್ಚುವುದು ಸಾಧ್ಯವಾಗಿಲ್ಲ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು. ಪೂರ್ಣ ವರದಿಗೆ ಇಲ್ಲಿ ಕ್ಲಿಕ್ ಮಾಡಿ
Nyaya bele angadi: ಅಗತ್ಯ ಇರುವ ಕಡೆಗೆ ನ್ಯಾಯಬೆಲೆ ಅಂಗಡಿ; ಆಹಾರ ಇಲಾಖೆ ಉಪನಿರ್ದೇಶಕರಿಗೆ ಅಧಿಕಾರ
Nyaya bele angadi: ಪ್ರಸ್ತುತ 500 ಪಡಿತರದಾರರು ಇರುವಂತಹ ಪ್ರದೇಶಗಳಲ್ಲಿ ನ್ಯಾಯಬೆಲೆ ಅಂಗಡಿ ತೆರೆಯುವ ಪದ್ದತಿ ಚಾಲ್ತಿಯಲ್ಲಿದೆ. ಮುಂದಿನ ದಿನಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆದು ಪಡಿತರ ಧಾನ್ಯಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಮಾಧುಸ್ವಾಮಿ ವಿವರಿಸಿದರು. ವಿವರ ವರದಿಗೆ ಇಲ್ಲಿ ಕ್ಲಿಕ್ ಮಾಡಿ