Bangalore Rain: ಬಿಸಿಲ ಝಳಕ್ಕೆ ತತ್ತರಿಸಿದ್ದ ಬೆಂಗಳೂರಿಗೆ ತಂಪೆರೆದ ಮಳೆ; ನಾಳೆ ವರೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ
ಕನ್ನಡ ಸುದ್ದಿ  /  ಕರ್ನಾಟಕ  /  Bangalore Rain: ಬಿಸಿಲ ಝಳಕ್ಕೆ ತತ್ತರಿಸಿದ್ದ ಬೆಂಗಳೂರಿಗೆ ತಂಪೆರೆದ ಮಳೆ; ನಾಳೆ ವರೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ

Bangalore Rain: ಬಿಸಿಲ ಝಳಕ್ಕೆ ತತ್ತರಿಸಿದ್ದ ಬೆಂಗಳೂರಿಗೆ ತಂಪೆರೆದ ಮಳೆ; ನಾಳೆ ವರೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕಳೆದ ರಾತ್ರಿ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಿದ್ದು, ನಾಳೆಯವರೆಗೆ ನಗರ ಹಾಗೂ ಸುತ್ತ ಮುತ್ತಲಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಇಂದು ಮತ್ತು ನಾಳೆ ಬೆಂಗಳೂರಿನ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಮತ್ತು ನಾಳೆ ಬೆಂಗಳೂರಿನ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು: ಬಿಸಿಲ ಝಳಕ್ಕೆ ತತ್ತರಿಸಿದ್ದ ಬೆಂಗಳೂರು (Bangalore) ಮಂದಿಗೆ ವರುಣ ತಂಪೆರೆದಿದ್ದಾನೆ. ರಾಜ್ಯದ ಹಲವು ಕಡೆಗಳಲ್ಲಿ ಪೂರ್ವ ಮುಂಗಾರು ಮಳೆ ಆರಂಭವಾಗಿದ್ದು, ನಿನ್ನೆ ರಾತ್ರಿ ಬೆಂಗಳೂರಿನ ಕೆಲವು ಕಡೆ ಭಾರಿ ಮಳೆಯಾಗಿದೆ (Bangalore Rain). ಜೊತೆಗೆ ನಗರದ ಸುತ್ತ ಮುತ್ತಲಿನ ಕೆಲವು ಜಿಲ್ಲೆಗಳಲ್ಲೂ ಸಾಧಾರಣ ಮಳೆ ಬಿದ್ದಿದೆ.

ಮುಂದಿನ ಎರಡು ದಿನಗಳಲ್ಲಿ ಬೆಂಗಳೂರು ನಗರದಲ್ಲಿ ಬೇಸಿಗೆಯ ಮಳೆ ಬೀಳುತ್ತೆ ಅಂತ ಭಾರತೀಯ ಹವಾಮಾನ ಇಲಾಖೆ -IMD ಎಚ್ಚರಿಕೆ ನೀಡಿದೆ. ಬೆಂಗಳೂರು ಸೇರಿದಂತೆ ಚಾಮರಾಜನಗರ, ಕೋಲಾರ ಹಾಗೂ ಇತರೆ ಕೆಲವು ಜಿಲ್ಲೆಗಳಲ್ಲಿ ಮಿಂಚು ಸಹಿತ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತನ್ನ ದೈನಂದಿನ ಬುಲೆಟಿನ್‌ನಲ್ಲಿ ತಿಳಿಸಿದೆ.

ರಾಜ್ಯ ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣವಿದ್ದು, ಬುಧವಾರ ಸಂಜೆ ಅಥವಾ ರಾತ್ರಿ ವರೆಗೆ ಸಾಧಾರಣ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ. ನಗರದಲ್ಲಿ ಗರಿಷ್ಠ 33 ಡಿಗ್ಸಿ ಸೆಲ್ಸಿಯಸ್ ಮತ್ತು ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಉಷ್ಟಾಂಶ ಇರಲಿದೆ.

ನಗರದಲ್ಲಿ ಮಳೆಯ ಕುರಿತ ಏಳು ದಿನಗಳ ಮುನ್ಸೂಚನೆ ನೀಡಲಾಗಿದ್ದು, ಇವತ್ತು ಒಂದು ಅಥವಾ ಎರಡು ಸೆಂಟಿ ಮೀಟರ್ ಮಳೆಯಾಗಬಹುದು. ವಾರದ ಅಂತ್ಯದ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.

ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರವು (KSNDMC), ಈ ಮಧ್ಯೆ, ಜನವರಿ 1 ರಿಂದ ಏಪ್ರಿಲ್ 3 ರವರೆಗೆ ಮೂರು ತಿಂಗಳ ಕಾಲ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಂಕಿ ಅಂಶ ಸಹಿತ ಮಳೆಯ ನಕ್ಷೆ ಬಿಡುಗಡೆ ಮಾಡಿದೆ. ಅದರಲ್ಲಿ ಬೆಂಗಳೂರಿನ ಮಳೆಯು 'ಸಾಮಾನ್ಯ' ಎಂದು ತೋರಿಸಿದೆ. ಆದರೆ, ಬೀದರ್, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ‘ಹೆಚ್ಚುವರಿ’ ಮಳೆಯಾಗಿದೆ ಅಂತ ಹೇಳಿದೆ.

ರಾಯಚೂರು ಜಿಲ್ಲೆಯಲ್ಲಿ ಸರಾಸರಿ ಗರಿಷ್ಠ ತಾಪಮಾನ 39.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಸರಾಸರಿ ಕನಿಷ್ಠ ತಾಪಮಾನ 15.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ದೆಹಲಿ-ಎನ್‌ಸಿಆರ್ ಮತ್ತು ಪಕ್ಕದ ಪ್ರದೇಶಗಳಲ್ಲಿ ಮಳೆ, ಗುಡುಗು, ಆಲಿಕಲ್ಲು ಮತ್ತು ಮಿಂಚಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಇದರಿಂದ ಟ್ರಾಫಿಕ್ ದಟ್ಟಣೆ ಉಂಟಾಗಬಹುದು ಎಂದು ಎಚ್ಚರಿಸಿದೆ.

ದಿನನಿತ್ಯದ ವ್ಯಾಪಾರ ಚಟುವಟಿಕೆಗಳು ಪರಿಣಾಮ ಬೀರುವ ಸಾಧ್ಯತೆಯಿದೆ. ಸಡಿಲವಾದ ವಸ್ತುಗಳು ಹಾರಬಹುದು. ಮನೆಯೊಳಗೆ ಇರಿ, ಕಿಟಕಿಗಳು ಮತ್ತು ಬಾಗಿಲುಗಳನ್ನು ಮುಚ್ಚಿ ಮತ್ತು ಸಾಧ್ಯವಾದರೆ ಪ್ರಯಾಣವನ್ನು ತಪ್ಪಿಸಿ, ”ಎಂದು IMD ಹೇಳಿದೆ.

Whats_app_banner