ಕನ್ನಡ ಸುದ್ದಿ  /  Karnataka  /  Rain To Lash Bangalore Yellow Alert In 8 Karnataka Districts

Karnataka Weather Report: ರಾಜ್ಯದಲ್ಲಿ ಮುಂದಿನ 3 ದಿನ ಮಳೆ ; 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ

ರಾಜ್ಯ ರಾಜಧಾನಿ ಬೆಂಗಳೂರು ಹಾಗೂ ಇತರ 8 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ರಾಜ್ಯದ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಹಾಗೂ ಇತರ 8 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಮಳೆಯಾಗುತ್ತಿದೆ. ಆದರೆ, ಉತ್ತರ ಕರ್ನಾಟಕದ ಪ್ರದೇಶದ ಹಲವೆಡೆ ಮಳೆ ನಿಧಾನವಾಗಲಿದೆ ಎಂದು ಐಎಂಡಿ ಹೇಳಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರುವುದರಿಂದ ಶೀತ ವಾತಾವರಣವಿದೆ. ಬೆಂಗಳೂರು, ಕೋಲಾರ ಸುತ್ತಮುತ್ತ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರದಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಮಧ್ಯ ಭಾಗದ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿಯೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಅಕ್ಟೋಬರ್ 8ರವರೆಗೆ ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅತಿ ಮಳೆ ಬೀಳುವ ಪ್ರದೇಶಗಳಲ್ಲಿರುವ ಜನರು ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ. ಇನ್ನು ಮುಂದಿನ ಮೂರು ದಿನ ಒಡಿಶಾ, ಆಂಧ್ರಪ್ರದೇಶದ ಕರಾವಳಿಯಲ್ಲಿ ವರುಣ ಅಬ್ಬರಿಸಲಿದ್ದಾನೆ. ಇದರ ಜೊತೆ ಛತ್ತೀಸ್​​ಗಢ ಮತ್ತು ಮಧ್ಯ ಪ್ರದೇಶದಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆ ಇವೆ.

ಹೆಚ್ಚಿನ ಸುದ್ದಿಗಳಿಗೆ ನಮ್ಮನ್ನು ಫೇಸ್‌ಬುಕ್‌ ಮತ್ತು ಟ್ವಿಟರ್‌ ನಲ್ಲಿ ಫಾಲೋಮಾಡಿ.

IPL_Entry_Point