ರಾಣೆಬೆನ್ನೂರು: ಗೃಹಲಕ್ಷ್ಮಿ ಹಣದಿಂದ ಸರ್ಕಾರಿ ಶಾಲೆಗೆ ಶುದ್ಧ ಕುಡಿಯುವ ನೀರು ಘಟಕ ಕೊಡಿಸಿದ ಆಶಾ ಕಾರ್ಯಕರ್ತೆ ಕೆಲಸಕ್ಕೆ ಬಾರಿ ಮೆಚ್ಚುಗೆ
ಕನ್ನಡ ಸುದ್ದಿ  /  ಕರ್ನಾಟಕ  /  ರಾಣೆಬೆನ್ನೂರು: ಗೃಹಲಕ್ಷ್ಮಿ ಹಣದಿಂದ ಸರ್ಕಾರಿ ಶಾಲೆಗೆ ಶುದ್ಧ ಕುಡಿಯುವ ನೀರು ಘಟಕ ಕೊಡಿಸಿದ ಆಶಾ ಕಾರ್ಯಕರ್ತೆ ಕೆಲಸಕ್ಕೆ ಬಾರಿ ಮೆಚ್ಚುಗೆ

ರಾಣೆಬೆನ್ನೂರು: ಗೃಹಲಕ್ಷ್ಮಿ ಹಣದಿಂದ ಸರ್ಕಾರಿ ಶಾಲೆಗೆ ಶುದ್ಧ ಕುಡಿಯುವ ನೀರು ಘಟಕ ಕೊಡಿಸಿದ ಆಶಾ ಕಾರ್ಯಕರ್ತೆ ಕೆಲಸಕ್ಕೆ ಬಾರಿ ಮೆಚ್ಚುಗೆ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನಲ್ಲಿ ಆಶಾ ಕಾರ್ಯಕರ್ತೆಯೊಬ್ಬರು ತಮ್ಮಗೆ ಬಂದಿದ್ದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಸರ್ಕಾರಿ ಶಾಲೆಗೆ ನೀಡಿದ್ದಾರೆ. ಈ ಹಣದಿಂದ ಶಾಲೆಗೆ ಶುದ್ದ ಕುಡಿಯುವ ನೀರಿನ ಘಟಕ ಖರೀದಿಸಲಾಗಿದೆ. ಆಶಾ ಕಾರ್ಯಕರ್ತೆಯ ಈ ಕಾರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಗೃಹ ಲಕ್ಷ್ಮಿ ಹಣವನ್ನು ಸರ್ಕಾರಿ ಶಾಲೆಗೆ ದೇಣಿಗೆ ನೀಡಿದ ರಾಣೆಬೆನ್ನೂರು ತಾಲೂಕಿನ ಆಶಾ ಕಾರ್ಯಕರ್ತೆ ಗಂಗಮ್ಮ ಮಹೇಶಪ್ಪ ಲಗುಬಿಗಿ ದಂಪತಿಯನ್ನು ಶಾಲೆಯ ಸಿಬ್ಬಂದಿ ಸನ್ಮಾನಿಸಿದ್ದಾರೆ.
ಗೃಹ ಲಕ್ಷ್ಮಿ ಹಣವನ್ನು ಸರ್ಕಾರಿ ಶಾಲೆಗೆ ದೇಣಿಗೆ ನೀಡಿದ ರಾಣೆಬೆನ್ನೂರು ತಾಲೂಕಿನ ಆಶಾ ಕಾರ್ಯಕರ್ತೆ ಗಂಗಮ್ಮ ಮಹೇಶಪ್ಪ ಲಗುಬಿಗಿ ದಂಪತಿಯನ್ನು ಶಾಲೆಯ ಸಿಬ್ಬಂದಿ ಸನ್ಮಾನಿಸಿದ್ದಾರೆ.

ಹಾವೇರಿ: ಅತ್ತೆ, ಸೊಸೆ ಇಬ್ಬರು ಸೇರಿ ಗೃಹ ಲಕ್ಷ್ಮಿ ಯೋಜನೆಯ ಹಣದಿಂದ ಬೋರ್ ವೆಲ್ ಕೊರಿಸಿಕೊಂಡರು, ಗೃಹಲಕ್ಷ್ಮಿ ಹಣದಿಂದ ಮಕ್ಕಳ ಶಾಲಾ-ಕಾಲೇಜು ಶುಲ್ಕ ಕಟ್ಟಲುು ಸಾಧ್ಯವಾಯ್ತು, ಗೃಹಲಕ್ಷ್ಮಿ ಹಣದಿಂದ ಟಿವಿ ಖರೀದಿಸಿದರು, ಗೃಹ ಲಕ್ಷ್ಮಿ ಹಣದಿಂದ ಫ್ರೀಡ್ಜ್ ತಗೊಂಡ್ರು, ಗೃಹಲಕ್ಷ್ಮಿ ಹಣದಿಂದ ವಾಷಿಂಗ್ ಮೆಷಿನ್ ಖರೀದಿಸಿದರು ಹೀಗೆ ಹಲವು ರೀತಿಯಲ್ಲಿ ಮಹಿಳೆಯರು ಕರ್ನಾಟಕ ಸರ್ಕಾರ ಮಹತ್ವಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ಹಣವನ್ನು ಹಲವು ರೀತಿಯಲ್ಲಿ ಸದುಪಯೋಗ ಪಡಿಸಿಕೊಂಡಿದ್ದಾರೆ. ಆದರೆ ಹಾವೇರಿ ಜಿಲ್ಲೆ ರಾಣೆಬೆನ್ನೂರಿನಲ್ಲಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಆಶಾ ಕಾರ್ಯಕರ್ತೆಯೊಬ್ಬರು ಗೃಹಲಕ್ಷ್ಮಿ ಹಣವನ್ನು ಸರ್ಕಾರಿ ಶಾಲೆಗೆ ದೇಣಿಗೆ ನೀಡಿದ್ದಾರೆ. ಇವರು ನೀಡಿರುವ ಹಣದಿಂದ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಖರೀದಿಸಲಾಗಿದೆ. ಆಶಾ ಕಾರ್ಯಕರ್ತೆಯ ಈ ಕಾರ್ಯಕ್ಕೆ ಎಲ್ಲೆಡೆ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಗೃಹಲಕ್ಷ್ಮಿ ಹಣವನ್ನು ಶಾಲೆಗೆ ನೀಡಿದ ಆಶಾ ಕಾರ್ಯಕರ್ತೆ ಐರಣಿ ಗ್ರಾಮದ ಗಂಗಮ್ಮ ಮಹೇಶಪ್ಪ ಲಗುಬಿಗಿ. ಇವರು ಸರ್ಕಾರದ ಗೃಹಲಕ್ಷ್ಮಿ ಯೋಜನೆಯಿಂದ ಬಂದಂತಹ 24,000 ರೂಗಳನ್ನು ತಮ್ಮ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ದೇಣಿಗೆಯಾಗಿ ನೀಡುವ ಮೂಲಕ ಮಾದರಿಯಾಗಿದ್ದಾರೆ. ಸ್ಮಾರ್ಟ್ ಕ್ಲಾಸ್ ಅಥವಾ ಶುದ್ಧ ಕುಡಿಯುವ ನೀರಿನ ಘಟಕ ಖರೀದಿಸಲು ಅನುಕೂಲವಾಗಲಿ ಎಂಬ ಕಾರಣಕ್ಕೆ ಗೃಹಲಕ್ಷ್ಮಿ ಯೋಜನೆಯಿಂದ ಬಂದಂತಹ 24,000 ರೂಪಾಯಿಗಳನ್ನು ಶಾಲೆಗೆ ದೇಣಿಗೆ ನೀಡಿದ್ದಾರೆ. ನಮ್ಮ ಮನೆಯವರು ಇದಕ್ಕೆ ಒಪ್ಪಿಗೆ ನೀಡಿದ್ದರು ಎಂದು ಗಂಗಮ್ಮ ಹೇಳಿದ್ದಾರೆ.

ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಕರಿಯಪ್ಪ ಕಂಬಳಿ, ಸದಸ್ಯರಾದ ಮಂಜುನಾಥ ತಳವಾರ, ಹನುಮಂತಪ್ಪ ಹಂಚಿನಮನಿ, ನಾಗೇಂದ್ರಪ್ಪ ನಡುವಿನಮನಿ, ಹಿರಿಯ ಶಿಕ್ಷಕ ಎಂ ಎನ್ ಬಲ್ಲೂರ, ಪ್ರಭಾರಿ ಮುಖ್ಯೋಪಾಧ್ಯಾಯಿನಿ ಅನ್ನಪೂರ್ಣ ಎನ್ ಬಣಕಾರ ಸೇರಿದಂತೆ ಗ್ರಾಮಸ್ಥರು, ಶಾಲಾ ಸಿಬ್ಬಂದಿ ಗಂಗಮ್ಮ ಮಹೇಶಪ್ಪ ಲಗುಬಿಗಿ ದಂಪತಿಯನ್ನು ಸನ್ಮಾನಿಸಿದ್ದಾರೆ.

Whats_app_banner