Rajnath Singh in Udupi: 'ರಾಮನಿಗಿಂತ ರಾವಣ ಜ್ಞಾನಿಯಾಗಿದ್ದ, ಆದ್ರೆ...': ಉಡುಪಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದೇನು?
ಕನ್ನಡ ಸುದ್ದಿ  /  ಕರ್ನಾಟಕ  /  Rajnath Singh In Udupi: 'ರಾಮನಿಗಿಂತ ರಾವಣ ಜ್ಞಾನಿಯಾಗಿದ್ದ, ಆದ್ರೆ...': ಉಡುಪಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದೇನು?

Rajnath Singh in Udupi: 'ರಾಮನಿಗಿಂತ ರಾವಣ ಜ್ಞಾನಿಯಾಗಿದ್ದ, ಆದ್ರೆ...': ಉಡುಪಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದೇನು?

ವಿದ್ಯಾರ್ಥಿಗಳಲ್ಲಿ ಜ್ಞಾನದ ಜೊತೆ ಬುದ್ದಿವಂತಿಕೆಯೂ ಅಗತ್ಯ. ರಾಮನಿಗಿಂತ ರಾವಣ ಜ್ಞಾನಿಯಾಗಿದ್ದ. ವಿವೇಕ ಇರುವುದರಿಂದ ಜನ ರಾಮನನ್ನು ಪೂಜಿಸುತ್ತಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.

ಉಡುಪಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಉಡುಪಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಉಡುಪಿ: ವಿದ್ಯಾರ್ಥಿಗಳಲ್ಲಿ ಜ್ಞಾನದ ಜೊತೆ ಬುದ್ದಿವಂತಿಕೆಯೂ ಅಗತ್ಯ. ರಾಮನಿಗಿಂತ ರಾವಣ ಜ್ಞಾನಿಯಾಗಿದ್ದ. ವಿವೇಕ ಇರುವುದರಿಂದ ಜನ ರಾಮನನ್ನು ಪೂಜಿಸುತ್ತಾರೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.

ಇಂದು ಉಡುಪಿಗೆ ಆದಿ ಹೆಲಿಪ್ಯಾಡ್​​ಗೆ ಬಂದಿಳಿದ ರಾಜನಾಥ್ ಸಿಂಗ್ ಅವರನ್ನು ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ರಘುಪತಿ ಭಟ್, ಹಾಗೂ ಸರಕಾರದ ಹಿರಿಯ ಅಧಿಕಾರಿಗಳು ಪೋಲಿಸ್ ಅಧಿಕಾರಿಗಳು ಬಿಜೆಪಿಯ ಕಾರ್ಯಕರ್ತರು ಸ್ವಾಗತಿಸಿದರು. ಬಳಿಕ ಉಡುಪಿಯ ಮಣಿಪಾಲ ಮಾಹೆ (Manipal Academy of Higher Education -MAHE)ವಿವಿಯ 30ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ರಾಜನಾಥ್ ಸಿಂಗ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ಐದು ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸಿದರು.

ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ. ಕಾಲು ಕೆರೆದುಕೊಂಡು ನಾವು ಯಾರ ಜೊತೆಯೂ ತಗಾದೆ ಶುರು ಮಾಡುವುದಿಲ್ಲ. ಆದರೆ ಭಾರತದ ತಂಟೆಗೆ ಬಂದರೆ ತಕ್ಕ ಉತ್ತರ ನೀಡದೆ ಬಿಡುವುದಿಲ್ಲ ಎಂದು ಹೇಳಿದರು.

ಇಡೀ ಪ್ರಪಂಚ ಭಾರತದ ಮಾತು ಕೇಳುವ ಕಾಲ ಬಂದಿದೆ. ಐದು ವರ್ಷದಲ್ಲಿ ವಿಶ್ವದ ಮೂರನೇ ಆರ್ಥಿಕ ದೇಶವಾಗಿ ಭಾರತ ಸದೃಢವಾಗಿ ನಿಲ್ಲಲಿದೆ. ಭಾರತ 2047ಕ್ಕೆ ಪ್ರಪಂಚ ಮೊದಲ ಸ್ಥಾನದಲ್ಲಿ ನಿಲ್ಲಲಿದೆ.ದೇಶವನ್ನು ಐದು ಟ್ರಿಲಿಯನ್ ಆರ್ಥಿಕ ರಾಷ್ಟ್ರ ಮಾಡುವುದು ಪ್ರಧಾನಿ ಮೋದಿ ಕನಸು. ದೇಶದ ಯುವ ಜನಾಂಗ ಇದಕ್ಕೆ ಕೊಡುಗೆ ನೀಡುತ್ತಿದೆ ಎಂದರು.

ಗ್ಲೋಬಲ್ ಸಿಟಿಜನ್ ನಿರ್ಮಿಸಲು ಎನ್ಇಪಿ ಜಾರಿಗೆ ತಂದಿದ್ದೇವೆ. ಮಾಹೆ ವಿವಿಯ ಸತ್ಯ ನಾಡೆಳ್ಳಾ ಮೈಕೋಸಾಫ್ಟ್ ನ ನೇತೃತ್ವ ವಹಿಸಿದ್ದಾರೆ. ಮೈಕ್ರೋಸಾಫ್ಟ್ ಮೀರಿಸುವಂತಹ ಕಂಪನಿ ಭಾರತದಲ್ಲಿ ಸ್ಥಾಪನೆ ಆಗಬೇಕು. ಅಂತಾರಾಷ್ಟ್ರೀಯ ಕಂಪನಿಗಳ ಸಿಇಒಗಳು ಭಾರತ ಮೂಲದವರು ಎಂಬುದು ನಮ್ಮ ಹೆಗ್ಗಳಿಕೆ ಎಂದು ಹೇಳಿದರು.

ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಭಾರತ ಹಲವಾರು ವರ್ಷಗಳಿಂದ ಸಾಧನೆ ಮಾಡಿಕೊಂಡು ಬಂದಿದೆ. ಈ ಬಗೆಗಿನ ನಮ್ಮ ಅಭಿಮಾನವನ್ನು ಕೆಲವರು ಹೆಚ್ಚುಗಾರಿಕೆ ಎಂದು ಟೀಕಿಸುತ್ರಾರೆ. ಇತಿಹಾಸವನ್ನು ತಿಳಿದುಕೊಳ್ಳದ ವ್ಯಕ್ತಿಗಳು ಇಂತಹ ಟೀಕೆಗಳನ್ನು ಮಾಡುತ್ತಾರೆ. ಭಾರತೀಯರು ಕೊಟ್ಟ ಶೂನ್ಯ ಇರದ ಗಣಿತವನ್ನು ಊಹಿಸಲು ಸಾಧ್ಯವಿಲ್ಲ. ಪೈಥಾಗೋರಸನ ಪ್ರಮೇಯವನ್ನು ಬೋದಾಯನ ಋಷಿ 300 ವರ್ಷಗಳ ಹಿಂದೆಯೇ ಹೇಳಿದ್ದ ಎಂದು ರಕ್ಷಣಾ ಸಚಿವರು ತಿಳಿಸಿದರು.

Whats_app_banner