ಆರ್‌ಸಿಬಿ ಸಂಭ್ರಮಾಚರಣೆ ಕಾಲ್ತುಳಿತ ಪ್ರಕರಣ, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಸಸ್ಪೆಂಡ್‌, ಸಿಐಡಿ ತನಿಖೆಗೆ ಆದೇಶ
ಕನ್ನಡ ಸುದ್ದಿ  /  ಕರ್ನಾಟಕ  /  ಆರ್‌ಸಿಬಿ ಸಂಭ್ರಮಾಚರಣೆ ಕಾಲ್ತುಳಿತ ಪ್ರಕರಣ, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಸಸ್ಪೆಂಡ್‌, ಸಿಐಡಿ ತನಿಖೆಗೆ ಆದೇಶ

ಆರ್‌ಸಿಬಿ ಸಂಭ್ರಮಾಚರಣೆ ಕಾಲ್ತುಳಿತ ಪ್ರಕರಣ, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಸಸ್ಪೆಂಡ್‌, ಸಿಐಡಿ ತನಿಖೆಗೆ ಆದೇಶ

ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ಸಂಭ್ರಮಾಚರಣೆಯ ಕಾಲ್ತುಳಿತ ಪ್ರಕರಣದಲ್ಲೊ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ ಸಹಿತ ಹಲವು ಅಧಿಕಾರಿಗಳನ್ನು ಅಮಾನತುಪಡಿಸಲಾಗಿದೆ.

ಬೆಂಗಳೂರು ಪೊಲೀಸ್‌ ಆಯುಕ್ತ ದಯಾನಂದ ಅವರನ್ನು ಅಮಾನತುಪಡಿಸಲಾಗಿದೆ.
ಬೆಂಗಳೂರು ಪೊಲೀಸ್‌ ಆಯುಕ್ತ ದಯಾನಂದ ಅವರನ್ನು ಅಮಾನತುಪಡಿಸಲಾಗಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಬುಧವಾರ ನಡೆದಿದ್ದ ಆರ್‌ಸಿಬಿ ತಂಡದ ಸಂಭ್ರಮಾಚರಣೆ ವೇಳೆ ನಡೆದ ದುರಂತ ಪ್ರಕರಣಕ್ಕೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ ಅವರ ತಲೆದಂಡವಾಗಿದೆ. ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ , ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತು ಗೊಳಿಸಲು ತೀರ್ಮಾನಿಸಲಾಗಿದೆ. ಈ ದುರಂತಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಚರ್ಚೆಯ ನಂತರ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ಆರ್ ಸಿ ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾಗಿದ್ದು, ಮೃತಪಟ್ಟವರಿಗೆ ಸಂತಾಪ ಕೋರಲಾಯಿತು. ಇಂದು ಎಂದಿನಂತೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ನಿನ್ನೆ ನಡೆದ ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ.ಆರ್ ಸಿ ಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ. ಇವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ನಡೆದ ಸಭೆ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದ್ದು, ಇವರುಗಳನ್ನು ಅಮಾನತ್ತುಗೊಳಿಸಲು ತೀರ್ಮಾನಿಸಲಾಗಿದೆ.ನಾನು ಶಾಸಕರು, ಸಚಿವ, ಡಿಸಿಎಂ ಹಾಗೂ ಮುಖ್ಯಮಂತ್ರಿಯಾದ ನಂತರ ಇಂತಹ ಘಟನೆ ನಡೆದಿರಲಿಲ್ಲ. ಈ ಘಟನೆ ನಮ್ಮನ್ನು ಘಾಸಿಗೊಳಿಸಿದೆ. ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬದವರ ಜೊತೆ ಸರ್ಕಾರವಿದೆ ಎಂದು ವಿವರಿಸಿದರು.

ನಿನ್ನೆ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳು ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಸಿಎಂ ತಿಳಿಸಿದರು.

Umesha Bhatta P H

TwittereMail
ಕುಂದೂರು ಉಮೇಶಭಟ್ಟ ಪಿ.ಎಚ್.: 'ಹಿಂದೂಸ್ತಾನ್ ಟೈಮ್ಸ್ ಕನ್ನಡ'ದಲ್ಲಿ ಡೆಪ್ಯುಟಿ ಚೀಫ್ ಕಂಟೆಂಟ್ ಪ್ರೊಡ್ಯೂಸರ್. ವಿಜಯ ಕರ್ನಾಟಕದಲ್ಲಿ ವಿಜಯಪುರ ಬ್ಯೂರೊ ಚೀಫ್ ಸೇರಿ ಹಲವು ಮಹತ್ವದ ಹುದ್ದೆಗಳ ನಿರ್ವಹಣೆ. ಮಲೆನಾಡು ಮಿತ್ರ, ಆಂದೋಲನ ಸೇರಿ ವಿವಿಧ ಪತ್ರಿಕೆಗಳಲ್ಲಿ 25 ವರ್ಷಗಳ ಅನುಭವ. ಪರಿಸರ, ಅರಣ್ಯ, ವನ್ಯಜೀವಿ, ಅಭಿವೃದ್ದಿ, ರಾಜಕೀಯ ಆಸಕ್ತಿ ಕ್ಷೇತ್ರಗಳು. 'ಕಾಡಿನ ಕಥೆಗಳು' ಅಂಕಣ ಬರೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಕುಂದೂರು ಸ್ವಂತ ಊರು. ಸದ್ಯಕ್ಕೆ ಮೈಸೂರು ನಿವಾಸಿ.