ರೇಣುಕಸ್ವಾಮಿ ಕೊಲೆ ಪ್ರಕರಣ: ವಿದೇಶಕ್ಕೆ ತೆರಳಲು ನಟ ದರ್ಶನ್‌ಗೆ ಅವಕಾಶ; ಆದರೆ ಒಂದು ಷರತ್ತು ವಿಧಿಸಿದ ಕೋರ್ಟ್‌, ಏನದು?
ಕನ್ನಡ ಸುದ್ದಿ  /  ಕರ್ನಾಟಕ  /  ರೇಣುಕಸ್ವಾಮಿ ಕೊಲೆ ಪ್ರಕರಣ: ವಿದೇಶಕ್ಕೆ ತೆರಳಲು ನಟ ದರ್ಶನ್‌ಗೆ ಅವಕಾಶ; ಆದರೆ ಒಂದು ಷರತ್ತು ವಿಧಿಸಿದ ಕೋರ್ಟ್‌, ಏನದು?

ರೇಣುಕಸ್ವಾಮಿ ಕೊಲೆ ಪ್ರಕರಣ: ವಿದೇಶಕ್ಕೆ ತೆರಳಲು ನಟ ದರ್ಶನ್‌ಗೆ ಅವಕಾಶ; ಆದರೆ ಒಂದು ಷರತ್ತು ವಿಧಿಸಿದ ಕೋರ್ಟ್‌, ಏನದು?

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ಗೆ ವಿದೇಶಕ್ಕೆ ತೆರಳಲು ನ್ಯಾಯಾಲಯ ಅವಕಾಶ ನೀಡಿದೆ. ಆದರೆ ಒಂದು ಷರತ್ತು ವಿಧಿಸಿದ ಕೋರ್ಟ್‌, ಏನದು? ವರದಿ-ಎಚ್.ಮಾರುತಿ

ರೇಣುಕಸ್ವಾಮಿ ಕೊಲೆ ಪ್ರಕರಣ: ವಿದೇಶಕ್ಕೆ ತೆರಳಲು ನಟ ದರ್ಶನ್‌ಗೆ ಅವಕಾಶ; ಆದರೆ ಒಂದು ಷರತ್ತು ವಿಧಿಸಿದ ಕೋರ್ಟ್‌, ಏನದು?
ರೇಣುಕಸ್ವಾಮಿ ಕೊಲೆ ಪ್ರಕರಣ: ವಿದೇಶಕ್ಕೆ ತೆರಳಲು ನಟ ದರ್ಶನ್‌ಗೆ ಅವಕಾಶ; ಆದರೆ ಒಂದು ಷರತ್ತು ವಿಧಿಸಿದ ಕೋರ್ಟ್‌, ಏನದು?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟು ಷರತ್ತುಬದ್ಧ ಜಾಮೀನಿನ ಮೇಲೆ ಬಳ್ಳಾರಿ ಜೈಲಿನಿಂದ ಬಿಡುಗಡೆ ಆಗಿರುವ ಚಿತ್ರನಟ ದರ್ಶನ್‌ ತೂಗುದೀಪ ಚಿತ್ರೀಕರಣಕ್ಕೆ ಅವರಿಗೆ ವಿದೇಶಕ್ಕೆ ತೆರಳಲು ನ್ಯಾಯಾಲಯ ಅನುಮತಿ ನೀಡಿದೆ. ಜೂನ್ 1 ರಿಂದ ಜುಲೈ 25 ರವರೆಗೆ ವಿದೇಶಕ್ಕೆ ಹೋಗಲು ನ್ಯಾಯಾಲಯ ಅನುಮತಿ ನೀಡಿದೆ. ಆದರೆ, ಜುಲೈ 10 ರಂದು ನಡೆಯುವ ವಿಚಾರಣೆಗೆ ತಪ್ಪದೇ ಹಾಜರಾಗಬೇಕೆಂದು ನ್ಯಾಯಾಲಯ ಷರತ್ತು ವಿಧಿಸಿದೆ.

ಈಗಾಗಲೇ ಶೂಟಿಂಗ್‌ ನಡೆಯುತ್ತಿರುವ ‘ಡೆವಿಲ್’ ಚಿತ್ರದ ಚಿತ್ರೀಕರಣಕ್ಕಾಗಿ ಜೂನ್ 1ರಿಂದ 25ರವರೆಗೆ ದುಬೈ ಹಾಗೂ ಯುರೋಪ್ ದೇಶಗಳಿಗೆ ತೆರಳಲು ಅನುಮತಿ ನೀಡುವಂತೆ ಕೋರಿ ದರ್ಶನ್ ನಗರದ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಜೂನ್ 1 ರಿಂದ 25 ರವರೆಗೆ 25 ದಿನಗಳ ಕಾಲ ಅನುಮತಿ ಕೋರಿ ಸಿಆರ್‌ಪಿಸಿ ಸೆಕ್ಷನ್ 439(1) (b) ಅಡಿ 57 ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿ ಕುರಿತು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು.

ದರ್ಶನ್‌ ಅವರಿಗೆ ವಿದೇಶಕ್ಕೆ ತೆರಳಲು ಅನುಮತಿ ನೀಡಬಾರದು ಎಂದು ಪ್ರಕರಣದ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್ ಅವರು ವಾದಿಸಿದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಅವರು ಎರಡನೇ ಆರೋಪಿಯಾಗಿದ್ದಾರೆ. ಅವರು ವಿದೇಶಕ್ಕೆ ತೆರಳಲು ಅನುಮತಿ ನೀಡಿದರೆ ದೇಶಕ್ಕೆ ಮರಳುವ ಬಗ್ಗೆ ಅನುಮಾನ ಕಾಡುತ್ತಿದೆ ಎಂದು ವಾದಿಸಿದ್ದರು. ದರ್ಶನ್‌ ಪರ ವಕೀಲರು ಕೇವಲ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳುತ್ತಿದ್ದಾರೆ. ಅನ್ಯ ಉದ್ದೇಶಗಳಿಲ್ಲ ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟಿದ್ದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಲಯವು ಮೇ 30ರಂದು ಆದೇಶವನ್ನು ಪ್ರಕಟಿಸುವುದಾಗಿ ಆದೇಶಿಸಿತ್ತು.

ಮತ್ತೊಮ್ಮೆ ಷರತ್ತು ಸಡಿಲಿಸಿದ ನ್ಯಾಯಾಲಯ

ಈ ಹಿಂದೆ ಜಾಮೀನು ಮಂಜೂರು ಮಾಡುವ ಸಂದರ್ಭದಲ್ಲಿ ನ್ಯಾಯಾಲಯವು ಕೆಲವು ಷರತ್ತುಗಳನ್ನು ವಿಧಿಸಿದ್ದು, ಬೆಂಗಳೂರು ಬಿಟ್ಟು ಬಿಟ್ಟು ತೆರಳುವಂತಿಲ್ಲ ಎನ್ನುವುದೂ ಒಂದು ಷರತ್ತಾಗಿತ್ತು. ನಂತರ ಷರತ್ತುಗಳನ್ನು ಸಡಿಲಿಸಿದ ನ್ಯಾಯಾಲಯವು ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಲ್ಲಿ ಸಿನಿಮಾ ಚಿತ್ರೀಕರಣಕ್ಕೆ ತೆರಳಲು ಅವಕಾಶ ನೀಡಿತ್ತು. ಇದೀಗ ಮತ್ತೊಮ್ಮೆ ಷರತ್ತು ಸಡಿಲಿಸಿ ವಿದೇಶಕ್ಕೆ ತೆರಳಲು ಅವಕಾಶ ನೀಡಿದೆ ಎಂದು ದರ್ಶನ್‌ ಪರ ವಕೀಲರು ಹೇಳಿದ್ದಾರೆ.

ದರ್ಶನ್ ಅವರು ಮಿಲನ ಪ್ರಕಾಶ್ ನಿರ್ದೇಶನದ ‘ಡೆವಿಲ್’ ಸಿನಿಮಾ ಶೂಟಿಂಗ್​ನಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚಿತ್ರದ ಒಂದು ಹಾಡಿನ ಶೂಟಿಂಗ್​ಗಾಗಿ ವಿದೇಶಕ್ಕೆ ತೆರಳಬೇಕಿತ್ತು. ಇದೀಗ ಅವರ ಹಾದಿ ಸುಗಮವಾಗಿದೆ. ದರ್ಶನ್ ಅವರ ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ರೇಣುಕಾಸ್ವಾಮಿ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ. ಇದು ದರ್ಶನ್ ಅವರನ್ನು ಕೆರಳಿಸಿತ್ತು. ಜೂನ್ 8 ರಂದು 33 ವರ್ಷದ ರೇಣುಕಾಸ್ವಾಮಿಯನ್ನು ದರ್ಶನ್ ಸಹಚರರು ಚಿತ್ರದುರ್ಗದಿಂದ ಪುಸಲಾಯಿಸಿ ಬೆಂಗಳೂರಿಗೆ ಕರೆ ತಂದಿದ್ದರು.

ಚಿತ್ರದುರ್ಗದ ದರ್ಶನ್‌ ಅಭಿಮಾನಿಗಳ ಸಂಘದ ಅಧ್ಯಕ್ಷ ರಾಘವೇಂದ್ರ, ರೇಣುಕಾಸ್ವಾಮಿಯನ್ನು ಪುಸಲಾಯಿಸಿ ಬೆಂಗಳೂರಿಗೆ ಕರೆದುಕೊಂಡು ಬರುವಲ್ಲಿ ಯಶಸ್ವಿಯಾಗಿದ್ದ. ರಾಜರಾಜೇಶ್ವರಿ ನಗರದ ಪಟ್ಟಣಗೆರೆ ಶೆಡ್ ನಲ್ಲಿ ರೇಣುಕಸ್ವಾಮಿ ಮೇಲೆ ಹಲ್ಲೆ ನಡೆಸಲಾಗಿತ್ತು. ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಹಲವು ಮಂದಿ ಹಲ್ಲೆ ನಡೆಸಿ ಕೊಲೆ ಮಾಡಿದ್ದರು. ಇದರಿಂದ ಆತ ಮೃತಪಟ್ಟಿದ್ದ. ನಂತರ ಶವವನ್ನು ಸುಮನಹಳ್ಳಿಯ ಮೋರಿಗೆ ಎಸೆದಿದ್ದರು. ಮಾಗಡಿ ರಸ್ತೆಯ ಚರಂಡಿಯಲ್ಲಿ ರೇಣುಕಸ್ವಾಮಿ ಶವ ಪತ್ತೆಯಾಗಿತ್ತು. ಪ್ರಕರಣದ ತನಿಖೆ ಆರಂಭಿಸಿದ್ದ ಪೊಲೀಸರಿಗೆ ಇದು ಕೊಲೆ ಎನ್ನುವುದು ಖಚಿತವಾದ ನಂತರ ಪೊಲೀಸರು ಮೈಸೂರಿನಲ್ಲಿ ದರ್ಶನ್ ಅವರನ್ನು ಜೂನ್ 11ರಂದು ಬಂಧಿಸಿದ್ದರು.

Prasanna Kumar PN

TwittereMail
ಪ್ರಸನ್ನಕುಮಾರ್ ಪಿ.ಎನ್.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಕ್ರೀಡಾ (ಕ್ರಿಕೆಟ್) ವಿಭಾಗದಲ್ಲಿ ಕಾರ್ಯನಿರ್ವಹಣೆ. ಸಂಜೆವಾಣಿ, ವಿಶ್ವವಾಣಿ, ಪ್ರಜಾವಾಣಿ, ಈಟಿವಿ ಭಾರತ್, ನ್ಯೂಸ್ ಫಸ್ಟ್​ ಮಾಧ್ಯಮ ಸಂಸ್ಥೆಗಳಲ್ಲಿ ಒಟ್ಟು 7 ವರ್ಷ ಸೇವೆ ಸಲ್ಲಿಸಿದ ಅನುಭವ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಲಿಂಗಯ್ಯನಪಾಳ್ಯ ಇವರ ಊರು. ಸದ್ಯಕ್ಕೆ ಬೆಂಗಳೂರು ನಿವಾಸಿ.