ಸಂವಿಧಾನದ 75ನೇ ವರ್ಷಾಚರಣೆ; ಜ 26 ರಿಂದ 1 ತಿಂಗಳು ಕರ್ನಾಟಕದಾದ್ಯಂತ ಸಂವಿಧಾನ ಜಾಗೃತಿ ಜಾಥಾ
ಫೆಬ್ರವರಿ 24, 25 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂವಿಧಾನ ಜಾಗೃತಿ ಜಾಥಾದ ಸಮಾವೇಶ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರು: ಜಗತ್ತಿನಲ್ಲಿ ಶ್ರೇಷ್ಠವಾಗಿರುವ ಭಾರತದ ಸಂವಿಧಾನ ರಚನೆಯಾಗಿ 75 ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಒಂದು ತಿಂಗಳ ಕಾಲ ಸಂವಿಧಾನ ಜಾಗೃತಿ ಜಾಥಾ ನಡೆಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ.
ಸಂವಿಧಾನದ ಮಹತ್ವ ಹಾಗೂ ಮೌಲ್ಯಗಳ ಕುರಿತು ಜಾಗೃತಿ ಮೂಡಿಸುವುದು ಮತ್ತು ರಾಷ್ಟ್ರೀಯ ಏಕತೆಯನ್ನು ಎತ್ತಿ ಹಿಡಯುವ ಉದ್ದೇಶದಿಂದ ಜಾಗೃತಿ ಜಾಥ ನಡೆಯಲಿದೆ. ಎಲ್ಲಾ ಗ್ರಾಮ ಪಂಚಾಯಿಗಳಲ್ಲಿ ಸಂಚರಿಸಲಿದೆ.
ಬೆಂಗಳೂರಿನಲ್ಲಿ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶದ ಸಂಘಟನಾ ಸಮಿತಿಯ ಪೂರ್ವಭಾವಿ ಸಭೆಯ ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಫೆಬ್ರವರಿ 24 ಮತ್ತು 25 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ವಿದ್ಯಾರ್ಥಿಗಳ ವಿಜ್ಞಾನ ವಸ್ತು ಪ್ರದರ್ಶನ ಆಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಗ್ರಾಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲಿ 'ಸಂವಿಧಾನ ಜಾಗೃತಿ ಜಾಥಾ'ದ ಸ್ಥಬ್ಧಚಿತ್ರ ಮೆರವಣಿಗೆ ನಡೆಯಲಿದೆ ಎಂದು ಹೇಳಿದ್ದಾರೆ. ಜಿಲ್ಲಾ ಕೇಂದ್ರಗಳಿಂದ ಹೊರಡಲಿರುವ ಜಾಥವು ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಮತ್ತು ಇತರೆ ಕಚೇರಿಗಳಿಗೆ ಭೇಟಿ ನೀಡುವ ಮೂಲಕ ಪ್ರತಿ ಜಿಲ್ಲೆಯ ಮೂಲೆ ಮೂಲೆಯಲ್ಲೂ ಸಂಚರಿಸುವಂತೆ, ಜಿಲ್ಲಾಡಳಿತವು ಮಾರ್ಗನಕ್ಷೆ ರೂಪಿಸಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ.
ಸಂವಿಧಾನ ರೂಪಿಸಿ 75 ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇಡೀ ರಾಜ್ಯದ ಬಹುತೇಕ ಗ್ರಾಮಗಳನ್ನು ಒಳಗೊಂಡಂತೆ ಕಾರ್ಯವನ್ನು ರೂಪಿಸಲಾಗಿದೆ. ಸಂವಿಧಾನದ ಮಹತ್ವ ಹಾಗೂ ದೇಶದ ಜನತೆಗೆ ಸಂವಿಧಾನ ನೀಡಿರುವ ಹಕ್ಕುಗಳ ಕುರಿತಂತೆ ರಾಜ್ಯದ ನಾಗರಿಕರು, ಮಹಿಳೆಯರು, ಯುವಜನರಿಗೆ ಬಹು ಮಾಧ್ಯಮಗಳ ಮೂಲಕ ಅರಿವು ಮೂಡಿಸುವ ವಿಭಿನ್ನ ಕಾರ್ಯಕ್ರಮ ಇದಾಗಿದೆ ಎಂದು ವಿವರಿಸಿದ್ದಾರೆ.
ಸಂವಿಧಾನ ಜಾಗೃತಿ ಜಾಥಾದಲ್ಲಿ ಸಂವಿಧಾನ ಪೀಠಿಕೆಯ ಮುದ್ರಿತ ಪ್ರತಿಗಳ ವಿತರಣೆ, ಬಸವಣ್ಣನವರ ಸಂದೇಶ ಹಾಗೂ ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ಅವರ ವಿಚಾರಧಾರೆಗಳ ಬಗ್ಗೆ ತಜ್ಞರಿಂದ ಭಾಷಣ, ಜಾನಪದ ನೃತ್ಯ ಪ್ರದರ್ಶನಗಳನ್ನು ನೀಡಲಾಗುತ್ತದೆ. ಜಾಥದಲ್ಲಿ ಸಂಚರಿಸಲಿರುವ ಎಲ್‌ಇಡಿ ವಾಹನಗಳ ಮೂಲಕ ವಿಡಿಯೊ ಪ್ರದರ್ಶನ ಇರಲಿದ್ದು, ನಮ್ಮ ಪರಂಪರಯನ್ನು ಅನಾವರಣಗೊಳಿಸಲಾಗುತ್ತದೆ ಎಂದು ಹೇಳಿದ್ದಾರೆ.
ಸ್ಥಳೀಯ ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳನ್ನು ಪ್ರದರ್ಶಿಸುವ ಮೂಲಕ ಸ್ತಬ್ಧಚಿತ್ರಗಳನ್ನು ಸೃಜನಶೀಲವಾಗಿಸಲು ಜಿಲ್ಲಾ ಸಮಿತಿಗಳು ಯೋಚಿಸಬೇಕೆಂದು ಸೂಚಿಸಲಾಗಿದೆ. ರಾಜ್ಯದ 7 ಜಿಲ್ಲೆಗಳ 10 ಸ್ಥಳಗಳಲ್ಲಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭೇಟಿ ನೀಡಿದ್ದು, ಆ ಸ್ಥಳಗಳಲ್ಲಿ ವಿಶೇಷ ಕಾರ್ಯಮಗಳನ್ನು ಹಮ್ಮಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು
ಸ್ಥಳೀಯ ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳನ್ನು ಪ್ರದರ್ಶಿಸುವ ಮೂಲಕ ಸ್ತಬ್ಧಚಿತ್ರಗಳನ್ನು ಸೃಜನಶೀಲವಾಗಿಸಲು ಜಿಲ್ಲಾ ಸಮಿತಿಗಳು ಯೋಚಿಸಬೇಕೆಂದು ಸೂಚಿಸಲಾಗಿದೆ. ಇನ್ನು ರಾಜ್ಯದ ಏಳು ಜಿಲ್ಲೆಗಳ ಹತ್ತು ಸ್ಥಳಗಳಿಗೆ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭೇಟಿ ನೀಡಿದ್ದು, ಆ ಸ್ಥಳಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಸಚಿವರ ಸೂಚನೆ ಮೇರೆಗೆ ರಾಜ್ಯದ ಎಲ್ಲಾ ಜಿಲ್ಲಾಡಳಿತಗಳು ಸಂವಿಧಾನ ಜಾಗೃತಿ ಜಾಥಾಗೆ ಅಂತಿಮ ಹಂತದ ಸಿದ್ಧತೆಗಳನ್ನು ಮಾಡಿಕೊಂಡಿವೆ. ಜಿಲ್ಲಾಧಿಕಾರಿಗಳು ವಿವಿಧ ಇಲಾಖೆಗೆ ಸಂಬಂಧಿಸಿದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಿ ಸಿದ್ಧತೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಅಗತ್ಯ ಮಾರ್ಗದರ್ಶನ, ಸಲಹೆ ಸೂಚನೆಗಳನ್ನು ನೀಡಿದ್ದಾರೆ. ತಾಲೂಕು ಮಟ್ಟದಲ್ಲಿ ತಹಶೀಲ್ದಾರ್‌ಗಳ ನೇತೃತ್ವದಲ್ಲಿ ಸಭೆ ನಡೆಸಿ ಜಾಗೃತಿ ಜಾಥಾವನ್ನು ಯಶಸ್ವಿಗೊಳಿಸಲು ಚರ್ಚೆ ನಡೆಸಿದ್ದಾರೆ. (This copy first appeared in Hindustan Times Kannada website. To read more like this please logon to kannada.hindustantime.com )