Karnataka Reservoirs: ಕೆಆರ್‌ಎಸ್‌, ಹೇಮಾವತಿ ಜಲಾಶಯ ಒಳಹರಿವು ಮತ್ತಷ್ಟು ಹೆಚ್ಚಳ, ಆಲಮಟ್ಟಿಗೂ ಭಾರೀ ನೀರು-reservoir level today august 30 alamatti krs harangi bhadra tungabhadra supa hemavati linganamakki reservoirs levels kub ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  Karnataka Reservoirs: ಕೆಆರ್‌ಎಸ್‌, ಹೇಮಾವತಿ ಜಲಾಶಯ ಒಳಹರಿವು ಮತ್ತಷ್ಟು ಹೆಚ್ಚಳ, ಆಲಮಟ್ಟಿಗೂ ಭಾರೀ ನೀರು

Karnataka Reservoirs: ಕೆಆರ್‌ಎಸ್‌, ಹೇಮಾವತಿ ಜಲಾಶಯ ಒಳಹರಿವು ಮತ್ತಷ್ಟು ಹೆಚ್ಚಳ, ಆಲಮಟ್ಟಿಗೂ ಭಾರೀ ನೀರು

Karnataka Dams Level ಕರ್ನಾಟಕದಲ್ಲಿ ಮಳೆ ಪ್ರಮಾಣ ಏರಿಕೆಯಾಗಿದ್ದು, ಕೆಆರ್‌ ಎಸ್‌, ಹೇಮಾವತಿ, ಆಲಮಟ್ಟಿ ಸಹಿತ ಹಲವು ಜಲಾಶಯಗಳ ಒಳ ಹರಿವಿನಲ್ಲಿ ಹೆಚ್ಚಳ ಕಂಡು ಬಂದಿದೆ.

ಮಂಡ್ಯ ಜಿಲ್ಲೆಯ ಕೆಆರ್‌ಎಸ್‌ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ.
ಮಂಡ್ಯ ಜಿಲ್ಲೆಯ ಕೆಆರ್‌ಎಸ್‌ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ.

ಬೆಂಗಳೂರು: ಕರ್ನಾಟಕದಲ್ಲಿ ನಾಲ್ಕೈದು ದಿನಗಳಿಂದ ಮಳೆ( Karnataka Rains) ವಾತಾವರಣ ಕಂಡು ಬಂದಿದ್ದು, ಇದರ ಪರಿಣಾಮ ಜಲಾಶಯಗಳಲ್ಲಿ ಕಾಣುತ್ತಿದೆ. ಏಕೆಂದರೆ ಮಲೆನಾಡು ಭಾಗದಲ್ಲಿ ಜಲಾಶಯದ ಒಳಹರಿವು( Karnataka dam Levels) ಹೆಚ್ಚಳ ಕಡು ಬಂದ ನಂತರ ಈಗ ಕಾವೇರಿ ಕಣಿವೆಯ ಪ್ರಮುಖ ಜಲಾಶಯಗಳಾದ ಕೃಷ್ಣರಾಜಸಾಗರ( KRS Dam), ಹೇಮಾವತಿ ಗೂ( Hemavati Dam) ಹೆಚ್ಚಿನ ಒಳ ಹರಿವು ಬರುತ್ತಿದೆ. ಇದಲ್ಲದೇ ಕರ್ನಾಟಕದ ಅತಿ ದೊಡ್ಡ ಜಲಾಶಯಗಳಾದ ಶಿವಮೊಗ್ಗದ ಲಿಂಗನಮಕ್ಕಿ( Linganamakki Reservoir) ಹಾಗೂ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೂ( Almati dam) ಹೆಚ್ಚಿನ ನೀರು ಹರಿದು ಬರುತ್ತಿದ್ದು, ಹೊರ ಹರಿವನ್ನೂ ಕೂಡ ಹೆಚ್ಚಿಸಲಾಗಿದೆ. ಪ್ರಮುಖ ಜಲಾಶಯಗಳು ಬಹುತೇಕ ತುಂಬಿದ್ದು, ಎಲ್ಲೆಡೆ ಜಲ ಕಳೆ ಜೋರಾಗಿದೆ.

ಕೆಆರ್‌ಎಸ್‌ ಜಲಾಶಯ

ಕೊಡಗಿನಲ್ಲಿ ನಾಲ್ಕೈದು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಎರಡು ದಿನದಿಂದ ಭಾಗಮಂಡಲ, ನಾಪೊಕ್ಲು ಭಾಗದಲ್ಲಿ ಮಳೆಯಾಗುತ್ತಿರುವುದರಿಂದ ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯಕ್ಕೆ ಒಳ ಹರಿವು ಮತ್ತೆ ಹೆಚ್ಚಾಗಿದೆ. ಜಲಾಶಯಕ್ಕೆ ಶುಕ್ರವಾರ ಬೆಳಿಗ್ಗೆ 14620 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಜಲಾಶಯದಿಂದ 9582 ಕ್ಯೂಸೆಕ್‌ ನೀರನ್ನು ಕಾವೇರಿ ನದಿ ಮೂಲಕ ಹರಿ ಬಿಡಲಾಗುತ್ತಿದೆ. ಜಲಾಶಯದ ನೀರಿನ ಮಟ್ಟವು 124.30 ಅಡಿಯಷ್ಟಿದೆ. ಜಲಾಶಯದಲ್ಲಿ 48.754 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದ ಗರಿಷ್ಠ ಮಟ್ಟವು 124.80 ಅಡಿ ಹಾಗೂ 49.452 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಕೆಆರ್‌ಎಸ್‌ನಲ್ಲಿದೆ.

ಆಲಮಟ್ಟಿ ಜಲಾಶಯ

ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೂ ಭಾರೀ ನೀರು ಹರಿದು ಬರುತ್ತಿದೆ. ಶುಕ್ರವಾರ ಬೆಳಿಗ್ಗೆ ಆಲಮಟ್ಟಿಗೆ 1,66,760 ಕ್ಯುಸೆಕ್ ನೀರು ಹರಿರು ಬರುತ್ತಿದೆ. ಇದರಿಂದಾಗಿ ಜಲಾಶಯದ ಹೊರ ಹರಿವನ್ನೂ ಹೆಚ್ಚಳ ಮಾಡಲಾಗಿದೆ. ಸದ್ಯ ಜಲಾಶಯದ ಹೊರ ಹರಿವು 1,76,540 ಕ್ಯುಸೆಕ್ ಇದೆ. ಜಲಾಶಯದ ನೀರಿನ ಮಟ್ಟವು 519.26 ಮೀಟರ್‌ ಇದ್ದು, 117.207 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದ ಗರಿಷ್ಠ ಮಟ್ಟವು 519.60 ಮೀಟರ್‌ ಹಾಗೂ ಗರಿಷ್ಠ ಟಿಎಂಸಿ 123.081ಯಷ್ಟಿದೆ.

ಹೇಮಾವತಿ ಜಲಾಶಯ

ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಯ ಮಳೆಯಿಂದ ಹಾಸನ ಜಿಲ್ಲೆ ಗೊರೂರಿನ ಹೇಮಾವತಿ ಆಣೆಕಟ್ಟಿಗೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಜಲಾಶಯಕ್ಕೆ ಶುಕ್ರವಾರ 11,861 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಹೊರ ಹರಿವಿನ ಪ್ರಮಾಣವು ಹಾಸನ ಹಾಗೂ ತುಮಕೂರು ಜಿಲ್ಲೆಯ ನಾಲೆಗಳು ಸೇರಿ 12,425 ಕ್ಯೂಸೆಕ್‌ ನೀರು ಹೊರ ಬಿಡಲಾಗುತ್ತಿದೆ. ಜಲಾಶಯದ ನೀರಿನ ಮಟ್ಟವು 2921.9 ಅಡಿ ಇದ್ದು, ಜಲಾಶಯವು ಬಹುತೇಕ ಭರ್ತಿಯಾಗಿದೆ. ಸದ್ಯ 37.006 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದ ಗರಿಷ್ಠ ಮಟ್ಟವು 2922 ಅಡಿ. ಜಲಾಶಯದಲ್ಲಿ 37.10 ಟಿಎಂಸಿ ನೀರು ಸಂಗ್ರಹಿಸುವ ಅವಕಾಶವಿದೆ.

ಭದ್ರಾ ಜಲಾಶಯ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿ ಭದ್ರಾ ಜಲಾಶಯಕ್ಕೆ ಒಳ ಹರಿವು ಏರಿಕೆಯಾಗಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿಯಲ್ಲಿರು ಭದ್ರಾ ಜಲಾಶಯಕ್ಕೆ ಇವತ್ತು 12137 ಕ್ಯೂಸೆಕ್‌ ನೀರು ಹರಿದು ಬರುತ್ತಿದ.ೆ ಜಲಾಶಯದ ನೀರಿನ ಮಟ್ಟ 182.3 ಅಡಿ ಇದ್ದು 3943 ಕ್ಯೂಸೆಕ್‌ ನೀರನ್ನ ನದಿಗೆ ಬಿಡಲಾಗುತ್ತಿದೆ. ಜಲಾಶಯದಲ್ಲಿ 66.88 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದ ಗರಿಷ್ಠ ಮಟ್ಟವು 186 ಅಡಿ ಹಾಗೂ ಸಂಗ್ರಹ ಪ್ರಮಾಣ 71.5 ಟಿಎಂಸಿ.

ತುಂಗಾ ಜಲಾಶಯ

ಶಿವಮೊಗ್ಗದ ಗಾಜನೂರು ಬಳಿ ಇರುವ ತುಂಗಾ ಜಲಾಶಯದಿಂದ ನಿರಂತರವಾಗಿ ನದಿಗೆ ನೀರು ಬಿಡಲಾಗುತ್ತಿದೆ. ಶುಕ್ರವಾರದ ಮಾಹಿತಿ ಪ್ರಕಾರ 21799 ಕ್ಯೂಸೆಕ್ ನೀರು ನದಿಗೆ ಹರಿದು ಬರುತ್ತಿದ್ದು ಅಷ್ಟೆ ಪ್ರಮಾಣದ ನೀರನ್ನ ನದಿಗೆ ಬಿಡಲಾಗುತ್ತಿದೆ. ಜಲಾಶಯವು ಗರಿಷ್ಠ 588.24 ಮೀ ತಲುಪಿದ್ದು,3.24 ಟಿಎಂಸಿ ನೀರು ಸಂಗ್ರಹವಾಗಿದೆ.

ತುಂಗಭದ್ರಾ ಜಲಾಶಯ

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಉತ್ತಮ ಮಳೆಯಾಗಿ ತುಂಗಾ ಹಾಗೂ ಭದ್ರಾ ಜಲಾಶಯಕ್ಕೆ ಹೆಚ್ಚಿನ ನೀರು ಬರುತ್ತಿದೆ. ಅದರಲ್ಲೂ ತುಂಗಾ ಜಲಾಶಯದಿಂದ ಹೆಚ್ಚಿನ ನೀರು ಹರಿ ಬಿಡುತ್ತಿರುವುದರಿಂದ ವಿಜಯನಗರ ಜಿಲ್ಲೆಯ ತುಂಗಭದ್ರಾ ಜಲಾಶಯಕ್ಕೂ ಒಳ ಹರಿವು ಹೆಚ್ಚಾಗಿದೆ. ಜಲಾಶಯಕ್ಕೆ ಸದ್ಯ 34,289 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಜಲಾಶಯದಲ್ಲಿ 92.276 ಟಿಎಂಸಿ ನೀರು ಸಂಗ್ರಹವಾಗಿದೆ.

ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ