Karnataka Reservoirs: ಕೆಆರ್‌ಎಸ್‌ಗೆ ಮತ್ತೆ ಒಳಹರಿವು ಏರಿಕೆ; ಆಲಮಟ್ಟಿ, ಕಬಿನಿ ಹರಿವಿನ ಪ್ರಮಾಣ ಇಳಿಕೆ, ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ
ಕನ್ನಡ ಸುದ್ದಿ  /  ಕರ್ನಾಟಕ  /  Karnataka Reservoirs: ಕೆಆರ್‌ಎಸ್‌ಗೆ ಮತ್ತೆ ಒಳಹರಿವು ಏರಿಕೆ; ಆಲಮಟ್ಟಿ, ಕಬಿನಿ ಹರಿವಿನ ಪ್ರಮಾಣ ಇಳಿಕೆ, ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ

Karnataka Reservoirs: ಕೆಆರ್‌ಎಸ್‌ಗೆ ಮತ್ತೆ ಒಳಹರಿವು ಏರಿಕೆ; ಆಲಮಟ್ಟಿ, ಕಬಿನಿ ಹರಿವಿನ ಪ್ರಮಾಣ ಇಳಿಕೆ, ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ

Karnataka Dam Levels ಕರ್ನಾಟಕದಲ್ಲಿ ಮಳೆ ಪ್ರಮಾಣ ತಗ್ಗಿದ್ದರೂ ಜಲಾಶಯಗಳಿಗೆ ಸಾಕಷ್ಟು ನೀರು ಹರಿದು ಬರುತ್ತಲೇ ಇದೆ.

ಮಂಡ್ಯ ಜಿಲ್ಲೆ ಕೆಆರ್‌ಎಸ್‌ ಜಲಾಶಯಕ್ಕೆ ಒಳ ಹರಿವು ಚೆನ್ನಾಗಿದೆ.
ಮಂಡ್ಯ ಜಿಲ್ಲೆ ಕೆಆರ್‌ಎಸ್‌ ಜಲಾಶಯಕ್ಕೆ ಒಳ ಹರಿವು ಚೆನ್ನಾಗಿದೆ.

ಬೆಂಗಳೂರು: ಕರ್ನಾಟಕದಲ್ಲಿ ಮಳೆ ಪ್ರಮಾಣ ಕೆಲವು ಭಾಗಕ್ಕೆ ಮಾತ್ರ ಸೀಮಿತವಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗ ಹೊರತುಪಡಿಸಿದರೆ ಬೀದರ್‌ ಭಾಗದಲ್ಲಿ ಹೆಚ್ಚಿನ ಮಳೆಯಾಗಿದೆ. ಇದರಿಂದಾಗಿ ಕರ್ನಾಟಕದ ಬಹುತೇಕ ಜಲಾಶಯಗಳ ಒಳ ಹರಿವಿನ ಪ್ರಮಾಣ ಬಹುತೇಕ ಕಡಿಮೆಯಾಗಿದೆ. ಆದರೆ ಕೊಡಗಿನಲ್ಲಿ ಮಳೆಯಾಗಿದ್ದರಿಂದ ಮಂಡ್ಯ ಜಿಲ್ಲೆಯ ಕೆಆರ್‌ಎಸ್‌ ಜಲಾಶಯಕ್ಕೆ ಕೊಂಚ ಒಳ ಹರಿವು ಅಧಿಕವಾಗಿದೆ. ಆದರೆ ಕೆಲವು ದಿನಗಳಿಂದ ಜಲಾಶಯಕ್ಕೆ ನಿರಂತರವಾಗಿ ನೀರು ಹರಿದು ಬರುತ್ತಿದೆ. ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿದ್ದರಿಂದ ಆಲಮಟ್ಟಿ ಜಲಾಶಯದ ಒಳ ಹರಿವಿನ ಪ್ರಮಾಣ ಮತ್ತಷ್ಟು ತಗ್ಗಿದೆ. ಅದೇ ರೀತಿ ಕೇರಳದಲ್ಲಿ ಸಾಧಾರಣ ಮಳೆಯಾಗುತ್ತಿರುವುದರಿಂದ ಮೈಸೂರು ಜಿಲ್ಲೆಯ ಕಬಿನಿ ಜಲಾಶಯಕ್ಕೆ ನೀರಿನ ಹರಿವು ಕಡಿಮೆಯಾಗಿದೆ.

ಕೆಆರ್‌ಎಸ್‌ ಜಲಾಶಯ

ಕೊಡಗು ಜಿಲ್ಲೆಯಲ್ಲಿ ಮಳೆಯಾಗಿರುವ ಪರಿಣಾಮವಾಗಿ ಮಂಡ್ಯದ ಕೆಆರ್‌ಎಸ್‌ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ ಈಗಲೂ ಚೆನ್ನಾಗಿದೆ.

ಜಲಾಶಯಕ್ಕೆ ಗುರುವಾರ ಬೆಳಿಗ್ಗೆ 15597 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಹೊರ ಹರಿವಿನ ಪ್ರಮಾಣವು 15064 ಕ್ಯೂಸೆಕ್‌ ಇದೆ. ಜಲಾಶಯದ ನೀರಿನ ಮಟ್ಟವು 124.46 ಅಡಿ ಇದೆ. ಜಲಾಶಯದಲ್ಲಿ 48.977 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದ ಗರಿಷ್ಠ ಮಟ್ಟವು 124.80 ಅಡಿ ಹಾಗೂ ಗರಿಷ್ಠ ಸಂಗ್ರಹ ಮಟ್ಟ 49.45 ಟಿಎಂಸಿ.

ಆಲಮಟ್ಟಿ ಜಲಾಶಯ

ಮಹಾರಾಷ್ಟ್ರ ಭಾಗದ ಜತೆಗೆ ಬೆಳಗಾವಿ ಜಿಲ್ಲೆಯಲ್ಲೂ ಕಳೆದ ವಾರ ಭಾರೀ ಮಳೆಯಾಗಿದ್ದರಿಂದ ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿನ ನೀರು ಬರುತ್ತಿದ್ದಾರೂ ಈ ವಾರ ಮಳೆ ಕಡಿಮೆಯಾಗಿ ಒಳ ಹರಿವು ತಗ್ಗಿದೆ. ಜಲಾಶಯದಕ್ಕೆ ಗುರುವಾರ 40,822 ಕ್ಯುಸೆಕ್ ಒಳಹರಿವು ಇದೆ. 36,760 ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯದ ನೀರಿನ ಮಟ್ಟವು 519.57 ಮೀಟರ್‌ ಇದೆ. ಜಲಾಶಯದಲ್ಲಿ 122.483 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ519.60 ಮೀಟರ್‌ ಹಾಗೂ ಸಂಗ್ರಹ ಸಾಮರ್ಥ್ಯ 123.081 ಟಿಎಂಸಿ.

ಕಬಿನಿ ಜಲಾಶಯ

ಕೇರಳದಲ್ಲೂ ಮಳೆ ಪ್ರಮಾಣ ಕಡಿಮೆಯಾಗಿ ಮೈಸೂರು ಜಿಲ್ಲೆಯ ಕಬಿನಿ ಜಲಾಶಯಕ್ಕೂ ನೀರು ಒಳ ಹರಿವು ಕಡಿಮೆಯಾಗಿದೆ. ಗುರುವಾರ ಜಲಾಶಯಕ್ಕೆ 6189 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಜಲಾಶಯದಿಂದ 7267 ಕ್ಯೂಸೆಕ್‌ ನೀರನ್ನು ನಾಲೆಗಳು ಹಾಗೂ ನದಿ ಮೂಲಕ ಹರಿ ಬಿಡಲಾಗುತ್ತಿದೆ. ಜಲಾಶಯದ ನೀರಿನ ಮಟ್ಟವು 2283.53 ಅಡಿ ಇದೆ. ಗರಿಷ್ಠ ಮಟ್ಟ2284 ಅಡಿ. ಜಲಾಶಯದಲ್ಲಿ 19.21 ಟಿಎಂಸಿ ನೀರು ಸಂಗ್ರಹವಾಗಿದ್ದು, 19.52 ನೀರನ್ನು ಸಂಗ್ರಹಿಸಲು ಅವಕಾಶವಿದೆ.

ಹೇಮಾವತಿ ಜಲಾಶಯ

ಚಿಕ್ಕಮಗಳೂರು ಹಾಗೂ ಹಾಸನ ಭಾಗದಲ್ಲಿ ಮಳೆಯಾಗುತ್ತಿರುವುದರಿಂದ ಹಾಸನ ಜಿಲ್ಲೆ ಗೊರೂರು ಹೇಮಾವತಿ ಆಣೆಕಟ್ಟಿಗೆ ಒಳ ಹರಿವು ಚೆನ್ನಾಗಿದೆ. ಗುರುವಾರ ಜಲಾಶಯಕ್ಕೆ 11,424 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಹಾಸನ, ತುಮಕೂರು ಹಾಗೂ ಮಂಡ್ಯ ಜಿಲ್ಲೆಯ ಹೇಮಾವತಿ ನಾಲೆಗಳಿಗೆ ಸೇರಿ ನದಿ ಮೂಲಕ ಒಟ್ಟು 11,424 ಕ್ಯೂಸೆಕ್‌ ನೀರನ್ನು ಹೊರಕ್ಕೆ ಹರಿಸಲಾಗುತ್ತಿದೆ. ಜಲಾಶಯದ ನೀರಿನ ಮಟ್ಟವು 2921.95 ಅಡಿ ಇದೆ. ಗರಿಷ್ಠ ಮಟ್ಟ 2922 ಅಡಿ. ಜಲಾಶಯದಲ್ಲಿ ಸದ್ಯ 37.055 ಟಿಎಂಸಿ ನೀರನ್ನು ಸಂಗ್ರಹ ಮಾಡಲಾಗಿದೆ. ಇಲ್ಲಿ 37.10 ಟಿಎಂಸಿ ನೀರು ಸಂಗ್ರಹಿಸಲು ಅವಕಾಶವಿದೆ.

ತುಂಗಭದ್ರಾ ಜಲಾಶಯ

ಮಲೆನಾಡಿನಲ್ಲಿ ಮಳೆಯಾಗಿದ್ದರಿಂದ ತುಂಗಭದ್ರಾ ಜಲಾಶಯ ಮತ್ತೆ ಭರ್ತಿಯಾಗಿ ನೀರನ್ನು ಹೊರ ಹರಿಸಲಾಗುತ್ತಿದೆ. ವಿಜಯನಗರ ಜಿಲ್ಲೆ ಹೊಸಪೇಟೆ ಸಮೀಪದ ತುಂಗಭದ್ರಾ ಜಲಾಶಯಕ್ಕೆ ಗುರುವಾರ ಬೆಳಿಗ್ಗೆ 33,087 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಜಲಾಶಯದಿಂದ 29,994 ಕ್ಯೂಸೆಕ್‌ ನೀರು ಹರಿಸಲಾಗುತ್ತಿದೆ. ಜಲಾಶಯದಲ್ಲಿ ಸದ್ಯ 101.773 ಟಿಎಂಸಿ ನೀರು ಸಂಗ್ರಹವಾಗಿದ. ಜಲಾಶಯದ ನೀರಿನ ಮಟ್ಟವು 1632 ಅಡಿ ಇದೆ.

ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ
Whats_app_banner