ಕರ್ನಾಟಕದ ಜೀವ ವೈವಿಧ್ಯ ಮಂಡಳಿಗೆ ಜೀವ ನೀಡಿ ಎಂದು ಆಗ್ರಹಿಸಿದ್ದಾರೆ ವೃಕ್ಷ ಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಅಶೀಸರ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕದ ಜೀವ ವೈವಿಧ್ಯ ಮಂಡಳಿಗೆ ಜೀವ ನೀಡಿ ಎಂದು ಆಗ್ರಹಿಸಿದ್ದಾರೆ ವೃಕ್ಷ ಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಅಶೀಸರ

ಕರ್ನಾಟಕದ ಜೀವ ವೈವಿಧ್ಯ ಮಂಡಳಿಗೆ ಜೀವ ನೀಡಿ ಎಂದು ಆಗ್ರಹಿಸಿದ್ದಾರೆ ವೃಕ್ಷ ಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಅಶೀಸರ

ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಒಟ್ಟು 12 ಜೀವ ವೈವಿಧ್ಯ ತಾಣ ಎಂದು ಘೋಷಿಸಲು ಅಧಿಸೂಚನೆ ಹೊರಡಿಸಬೇಕು. ಜೀವ ವೈವಿಧ್ಯ ಮಂಡಳಿಗೆ ಜೀವ ನೀಡಿ ಎಂದು ವೃಕ್ಷ ಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಆಗ್ರಹಿಸಿದ್ದಾರೆ.

ಕರ್ನಾಟಕದ ಜೀವ ವೈವಿಧ್ಯ ಮಂಡಳಿಗೆ ಜೀವ ನೀಡಿ ಎಂದು ವೃಕ್ಷ ಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಅವರು ಸಚಿವ ಈಶ್ವರ ಖಂಡ್ರೆ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಕರ್ನಾಟಕದ ಜೀವ ವೈವಿಧ್ಯ ಮಂಡಳಿಗೆ ಜೀವ ನೀಡಿ ಎಂದು ವೃಕ್ಷ ಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಅವರು ಸಚಿವ ಈಶ್ವರ ಖಂಡ್ರೆ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಬೆಂಗಳೂರು: ಕರ್ನಾಟಕದಲ್ಲಿ ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಒಟ್ಟು 12 ಜೀವ ವೈವಿಧ್ಯ ತಾಣಗಳನ್ನು ಗುರುತಿಸಲಾಗಿದೆ. ಆದರೆ ಈವರೆಗೆ ಕರ್ನಾಟಕ ಸರ್ಕಾರ ಈ ವಿಚಾರವಾಗಿ ಯಾವುದೇ ಅಧಿಸೂಚನೆ ಹೊರಡಿಸಿಲ್ಲ ಎಂದು ವೃಕ್ಷ ಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಹೇಳಿದರು. ಈ ಕುರಿತು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಪತ್ರ ಬರೆದಿರುವ ಅನಂತ ಹೆಗಡೆ, ಈ ಬಗ್ಗೆ ಗಮನಹರಿಸುವಂತೆ ಆಗ್ರಹಿಸಿದರು.

12 ಜೀವ ವೈವಿಧ್ಯ ತಾಣ ಘೋಷಣೆಗೆ ಅಧಿಸೂಚನೆ ಯಾವಾಗ

ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಒಟ್ಟು 12 ಜೀವ ವೈವಿಧ್ಯ ತಾಣ ಎಂದು ಘೋಷಿಸುವುದಕ್ಕೆ ಈ ಹಿಂದೆ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ, ಸರ್ಕಾರ ಇನ್ನೂ ಮನಸ್ಸು ಮಾಡಿಲ್ಲ.ಈ 12 ಜೀವ ವೈವಿಧ್ಯ ತಾಣಗಳ ಪೈಕಿ ಪ್ರಮುಖವಾದವು ಆದಿನಾರಾಯಣ ಸ್ವಾಮಿ ಬೆಟ್ಟ, ಕೋಲಾರ ಅಂತರಗಂಗೆ ಬೆಟ್ಟ, ಸಾಗರ ಬರೂರು ಸೀತಾ ಅಶೋಕ ವನ, ಜೋಗ ಬಳಿಯ ಕತ್ತಲೆ ಕಾನು ಪ್ರಮುಖವಾದವು ಎಂದು ಅನಂತ ಹೆಗಡೆ ಅಶೀಸರ ತಿಳಿಸಿದ್ದಾರೆ.

ಅಲ್ಲದೇ, ಈ ಹಿಂದೆ ಜೀವ ವೈವಿಧ್ಯ ಮಂಡಳಿಯು ಮೀನುಗಾರಿಕೆ ಇಲಾಖೆ ನೆರವಿನೊಂದಿಗೆ ಕರ್ನಾಟಕದ ಮಟ್ಟದಲ್ಲಿ 11 ಮತ್ಸ್ಯಧಾಮಗಳನ್ನು ಗುರುತಿಸಿದೆ. ಪಶ್ಚಿಮಘಟ್ಟದಲ್ಲಿ 15 ನದಿ ಸ್ಥಳಗಳಲ್ಲಿ ಅಪರೂಪದ ಮೀನುಗಳು ಇರುವುದನ್ನು ಕೂಡ ಗುರುತಿಸಲಾಗಿದೆ. ಇವುಗಳ ರಕ್ಷಣೆಗೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಅನಂತ ಹೆಗಡೆ ಅಶೀಸರ ಒತ್ತಾಯಿಸಿದ್ದಾರೆ.

ಗ್ರಾಮ ಪಂಚಾಯಿತಿಗಳಿಗೆ ನೈಸರ್ಗಿಕ ಸಂಪನ್ಮೂಲಗಳ ನಿರ್ವಹಣೆ ಜವಾಬ್ದಾರಿ

ಕರ್ನಾಟಕದಲ್ಲಿ ಜೀವ ವೈವಿಧ್ಯ ಸಂರಕ್ಷಣಾ ಕಾಯ್ದೆ ಜಾರಿಯಾಗಿರುವ ಕಾರಣ ಅದರ ಮೂಲಕ ಗ್ರಾಮ ಪಂಚಾಯಿತಿಗಳಿಗೆ ನೈಸರ್ಗಿಕ ಸಂಪನ್ಮೂಲಗಳ ನಿರ್ವಹಣೆ ಜವಾಬ್ದಾರಿ ಸಿಕ್ಕಿದೆ. ಸುಮಾರು 6,000 ಜೀವವೈವಿಧ್ಯ ನಿರ್ವಹಣಾ ಸಮಿತಿಗಳು ಹೆಸರಿಗೆ ಮಾತ್ರ ಇವೆ. ಇವುಗಳಿಗೆ ಜೀವ ತುಂಬುವ ಕಾರ್ಯ ಆದಷ್ಟು ಬೇಗ ಮಾಡಬೇಕು. ಅದೇ ರೀತಿ, ಜೀವ ವೈವಿಧ್ಯ ಮಂಡಳಿಗೆ ತಜ್ಞ ಅಧಿಕಾರೇತರ ಸದಸ್ಯರನ್ನೂ ನೇಮಕ ಮಾಡಬೇಕು ಎಂದು ಅನಂತ ಹೆಗಡೆ ಅಶೀಸರ ಆಗ್ರಹಿಸಿದ್ದಾರೆ.

ಜೀವ ವೈವಿಧ್ಯ ಮಂಡಳಿಗೆ ಜೀವವೇ ಇಲ್ಲದ ಪರಿಸ್ಥಿತಿ ಬಂದಿದೆ. ಮಂಡಳಿಯಲ್ಲಿ 25 ತಜ್ಞರು ಇದ್ದಾರೆ. ಆದರೆ, ನಾಡಿನ ಪ್ರಾಕೃತಿಕ ಸಂಪತ್ತಿನ ನಿರ್ವಹಣೆ, ಸಂರಕ್ಷಣೆ ಅಭಿವೃದ್ಧಿಗೆ ಕೊಡುಗೆ ನೀಡಬೇಕಾದ ಜೀವ ವೈವಿಧ್ಯ ಮಂಡಳಿಗೆ ಸದ್ಯ ಜೀವವೇ ಇಲ್ಲ. ಆದ್ದರಿಂದ, ಮಂಡಳಿಯನ್ನು ಚುರುಕುಗೊಳಿಸಲು ಸಚಿವರೇ ಸ್ವತ ವೈದ್ಯರಾಗಿ ‘ಚುಚ್ಚುಮದ್ದು’ ನೀಡಬೇಕಾದ ಅನಿವಾರ್ಯತೆ ಇದೆ ಎಂದು ಅನಂತ ಹೆಗಡೆ ಅಶೀಸರ ಮನವಿ ಮಾಡಿದ್ದಾರೆ.

ಉಮೇಶ್ ಕುಮಾರ್ ಶಿಮ್ಲಡ್ಕ: 'ಹಿಂದೂಸ್ತಾನ್ ಟೈಮ್ಸ್ ಕನ್ನಡ' ಜಾಲತಾಣದ ಸುದ್ದಿ ಸಂಪಾದಕ. ಜೀವನದ ಕಲಿಕಾರ್ಥಿ. ದೇಶ, ವಿದೇಶಗಳ ಪ್ರಸಕ್ತ ವಿದ್ಯಮಾನ, ವಾಣಿಜ್ಯ, ವಿಜ್ಞಾನ ತಂತ್ರಜ್ಞಾನ ಕುರಿತು ಕುತೂಹಲಿ. ಹೊಸ ದಿಗಂತ, ಉದಯವಾಣಿ, ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು. ಏಷ್ಯಾನೆಟ್ ಸುವರ್ಣ, ಸಮಯ ಸುದ್ದಿವಾಹಿನಿಗಳ ವಿವಿಧ ವಿಭಾಗಗಳು ಸೇರಿ 20 ವರ್ಷಗಳಿಗೂ ಹೆಚ್ಚಿನ ಅನುಭವ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಿವಾಸಿ.