ಕನ್ನಡ ಸುದ್ದಿ  /  Karnataka  /  Richest Cms Of India Find Out Where Karnataka Chief Minsiter Bommai S Ranks In The List Uks

Richest CMs of India: ದೇಶದ 30 ಮುಖ್ಯಮಂತ್ರಿಗಳ ಪೈಕಿ ಜಗನ್‌ ನಂ.1 ಶ್ರೀಮಂತ; ಮುಖ್ಯಮಂತ್ರಿ ಬೊಮ್ಮಾಯಿ ಸಂಪತ್ತೆಷ್ಟು- ಇಲ್ಲಿದೆ ಮಾಹಿತಿ

Richest CMs of India: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಗೌಜಿ. ಇದೇ ಸಂದರ್ಭದಲ್ಲಿ ದೇಶದ ಮುಖ್ಯಮಂತ್ರಿಗಳ ಸಂಪತ್ತಿನ ವಿಚಾರ ಇದೇ ವೇಳೆ ಗಮನಸೆಳೆದಿದೆ. ಚುನಾವಣೆ ಎದುರಿಸುತ್ತಿರುವ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪತ್ತು ಎಷ್ಟಿರಬಹುದು? ಗೆಸ್‌ ಮಾಡಿದ್ದೀರಾ? ಇಲ್ಲಿದೆ ನೋಡಿ ಆ ಕುರಿತ ವರದಿ.

ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (PTI)

ರಾಜ್ಯ ವಿಧಾನಸಭಾ ಚುನಾವಣೆ ಪ್ರಕ್ರಿಯೆ ಚಾಲ್ತಿಗೆ ಬಂದಿದೆ. ಇನ್ನು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಶುರುವಾಗುತ್ತಿದ್ದಂತೆ ಸಂಪತ್ತಿನ ವಿಚಾರ ಮುನ್ನೆಲೆಗೆ ಬರುತ್ತದೆ. ಈ ಸಲ ದೇಶದ ಮುಖ್ಯಮಂತ್ರಿಗಳ ಸಂಪತ್ತಿನ ವಿಚಾರ ಇದೇ ವೇಳೆ ಗಮನಸೆಳೆದಿದೆ. ಚುನಾವಣೆ ಎದುರಿಸುತ್ತಿರುವ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪತ್ತು ಎಷ್ಟಿರಬಹುದು? ಗೆಸ್‌ ಮಾಡಿದ್ದೀರಾ? ಇಲ್ಲಿದೆ ನೋಡಿ ಆ ಕುರಿತ ವರದಿ.

ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ನ ಹೊಸ ವರದಿಯ ಪ್ರಕಾರ, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಟ್ಟು 8 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ದೇಶದ 30 ಮುಖ್ಯಮಂತ್ರಿಗಳ ಶ್ರೀಮಂತಿಕೆಯ ಪಟ್ಟಿಯಲ್ಲಿ ಪೈಕಿ 13 ನೇ ಸ್ಥಾನದಲ್ಲಿದ್ದಾರೆ.

ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಅತ್ಯಂತ ಶ್ರೀಮಂತರಾಗಿದ್ದು, ಒಟ್ಟು 510 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದಾರೆ, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ 15 ಲಕ್ಷ ರೂಪಾಯಿ ಮೌಲ್ಯದ ಆಸ್ತಿಯೊಂದಿಗೆ ಕೊನೆಯ ಸ್ಥಾನದಲ್ಲಿದ್ದಾರೆ. 30 ಸಿಎಂಗಳಲ್ಲಿ 29 ಮಂದಿ "ಕೋಟ್ಯಧಿಪತಿಗಳು", ಈ ಪಟ್ಟಿಯಲ್ಲಿ ಸಿಎಂ ಬೊಮ್ಮಾಯಿ ಅವರದ್ದು 13ನೇ ಸ್ಥಾನ.

ದೇಶದ 28 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ (ಯುಟಿಗಳು) ದೆಹಲಿ ಮತ್ತು ಪುದುಚೇರಿ ಸೇರಿ ಎಲ್ಲ 30 ಸಿಎಂಗಳ ಶ್ರೀಮಂತಿಕೆಯನ್ನು ಎಡಿಆರ್‌ ವಿಶ್ಲೇಷಿಸಿದೆ. ಇದಕ್ಕಾಗಿ ಅದು ಇವರು ಸಲ್ಲಿಸಿರುವ ಸ್ವಯಂ-ಪ್ರಮಾಣ ಮಾಡಿದ ಚುನಾವಣಾ ಅಫಿಡವಿಟ್‌ಗಳನ್ನು ವಿಶ್ಲೇಷಿಸಿದೆ. ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಸ್ತುತ ಮುಖ್ಯಮಂತ್ರಿ ಇಲ್ಲ.

ಅರುಣಾಚಲ ಪ್ರದೇಶ ಸಿಎಂ ಪೆಮಾ ಖಂಡು ಮತ್ತು ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರು ಆಂಧ್ರಪ್ರದೇಶದ ಜಗನ್ ಮೋಹನ್ ರೆಡ್ಡಿ ನಂತರ 2 ಮತ್ತು ಮೂರನೇ ಶ್ರೀಮಂತರಾಗಿದ್ದಾರೆ, ಕ್ರಮವಾಗಿ 163 ಕೋಟಿ ರೂಪಾಯಿ ಮತ್ತು 63 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದಾರೆ ಎಂದು ಎಡಿಆರ್ ತಿಳಿಸಿದೆ.

ಏತನ್ಮಧ್ಯೆ, ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ಹರಿಯಾಣ ಸಿಎಂ ಮನೋಹರ್ ಲಾಲ್ ಅವರು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿಗಿಂತ ಮೇಲೆ 1 ಕೋಟಿ ರೂಪಾಯಿಗಿಂತ ಹೆಚ್ಚು ಮೌಲ್ಯದ ಆಸ್ತಿ ಹೊಂದಿದ್ದಾರೆ ಎಂದು ಎಡಿಆರ್ ವರದಿ ಹೇಳಿದೆ.

43 ರಷ್ಟು ಮುಖ್ಯಮಂತ್ರಿಗಳು ಕೊಲೆ, ಕೊಲೆ ಯತ್ನ, ಅಪಹರಣ ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿದ್ದಾರೆ ಎಂದು ಎಡಿಆರ್ ವರದಿ ಸೇರಿಸಲಾಗಿದೆ.

ಕರ್ನಾಟಕದಲ್ಲಿ ಬೊಮ್ಮಾಯಿ ನೇತೃತ್ವದ ಸರ್ಕಾರವು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿದೆ. ಮೇ 10 ರಂದು ನಡೆಯಲಿರುವ ಈ ದಕ್ಷಿಣ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿಯೇ ಪ್ರತಿಪಕ್ಷ ಕಾಂಗ್ರೆಸ್ ಆಡಳಿತ ಪಕ್ಷದ ವಿರುದ್ಧ ದಾಳಿ ಶುರುವಮಾಡಿದೆ. ಮೇ 13 ಇಲ್ಲಿ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ಪಿಟಿಐ ವರದಿ ಹೇಳಿದೆ.

IPL_Entry_Point